ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟೇಶ್ವರ: ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗ, ಕೋಟೇಶ್ವರ ಇಲ್ಲಿನ ಪ್ರತಿಭಾವಂತ ವಿದ್ಯಾರ್ಥಿನಿ ಮಹಾಲಕ್ಷ್ಮಿ ಸಿ.ಜೆ. ಅವರು ದೆಹಲಿಯ ಮಹತ್ವದ ಸಂಸತ್ ಭವನದಲ್ಲಿ ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಶಾಲೆಗೆ ಹಾಗೂ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಕೇವಲ 11 ವಿದ್ಯಾರ್ಥಿಗಳಲ್ಲಿ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಏಕೈಕ ವಿದ್ಯಾರ್ಥಿನಿಯಾಗಿ ಮಹಾಲಕ್ಷ್ಮಿ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದೆ. ಇವಳು ಎ.13ರಂದು ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ. ಇವರ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಸಾಧಿಸಲಿ ಎಂದು ಹಾರೈಸಿದ್ದಾರೆ. ಸಮಾಜ ಸೇವಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು, ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರೇರಣೆಯಾಗಿ ಈ ಅವಕಾಶ ಪರಿಣಮಿಸಲಿ ಎಂದು ಆಶಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಾಜದ ಋಣ ತಿರಿಸಲು ಜೈ ಕುಂದಾಪ್ರ ಎಂಬ ಸಂಘಟನೆಗಳು ರಕ್ತದಾನದಂತಹ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿವೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟದಲ್ಲಿ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ದಶಮಾನೋತ್ಸವ ಕಾರ್ಯಕ್ರಮ ʼಜೈ ಕುಂದಾಪ್ರ ಸಂಭ್ರಮ-2026’ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಸದಾ ಸ್ಪಂದಿಸುವ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕಿದೆ,ದಶಮಾನೋತ್ಸವಕ್ಕೆ ಅರ್ಥಗರ್ಭಿತವಾಗಿ ಕಾರ್ಯಕ್ರಮ ಆಯೋಜಿಸಿ ಪಂಚವರ್ಣದಂತಹ ಸಂಘಟನೆಗಳನ್ನು ಗುರುತಿಸುವ ಕಾಯಕ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ಇದೇ ವೇಳೆ ಕೋಟದ ಪಂಚವರ್ಣ ಸಂಘಟನೆಗೆ ಜೈ ಕುಂದಾಪ್ರ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಧಾರ್ಮಿಕ ಕ್ಷೇತ್ರದ ಭಾಸ್ಕರ ಸ್ವಾಮೀ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅಶಕ್ತರಿಗೆ ನೆರವು,ವಿ ಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿಯ ವಿಶಿಷ್ಟ ಭಕ್ತಿ ಪರಂಪರೆಯಾದ ಕುಣಿತ ಭಜನೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಮತ್ತು ಕಲೆಯನ್ನು ಉಳಿಸುವ ಉದ್ದೇಶದಿಂದ ಇದೇ ಏಪ್ರಿಲ್ 26 ರಂದು ಟೀಮ್ ಸಂಕೀರ್ತನಾ ಸಾಲಿಗ್ರಾಮ ಇವರ ನೇತೃತ್ವದಲ್ಲಿ ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಆಡಳಿತ ಮಂಡಳಿ ಇವರ ಸಹಕಾರದೊಂದಿಗೆ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನದ ಆವರಣದಲ್ಲಿ ಅದ್ದೂರಿ ಕುಣಿತ ಭಜನಾ ಸ್ಪರ್ಧೆಯನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದಲ್ಲಿ ಗುರುವಂದನೆ, ಭಜನಾ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇರ್ವರು ಹಿರಿಯ ಭಜನಾ ಗುರುಗಳನ್ನು ಗುರುತಿಸಿ ಅವರಿಗೆ ನಗದು ಪುರಸ್ಕಾರದೊಂದಿಗೆ ಸನ್ಮಾನ, ಸೇವೆಯ ಸಂಕಲ್ಪ ಈ ಕಾರ್ಯಕ್ರಮದ ಮೂಲಕ ಸಂಗ್ರಹವಾಗುವ ನಿಧಿಯ ಒಂದು ಭಾಗವನ್ನು ಸ್ಥಳೀಯ ನಿರಾಶ್ರಿತರ ಆಶ್ರಮಕ್ಕೆ ಸಹಾಯ ಹಸ್ತವಾಗಿ ನೀಡಲಿದೆ. ಪೋಸ್ಟರ್ ಬಿಡುಗಡೆ ತೆಕ್ಕಟ್ಟೆ ಶ್ರೀ ಗುರುರಾಘವೇಂದ್ರ ಮಂದಿರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಮಂದಿರದ ಅರ್ಚಕರು, ಸಂಘಟಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿರುವ ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ (IMJ Institutions) ಆವರಣದಲ್ಲಿ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ರಿಸರ್ಚ್ (IMJIR) ನ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ಜರುಗಿತು. ಈ ಐತಿಹಾಸಿಕ ಸಂದರ್ಭದ ಅಂಗವಾಗಿ “ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಶನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್ಸ್” (Q-PIER 2026) ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ ಶೃಂಗಸಭೆಯನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಟಿಐಎಫ್ಆರ್ (TIFR) ಹೈದರಾಬಾದ್ ಇದರ ನಿರ್ದೇಶಕರಾದ ಎಂ. ಕೃಷ್ಣಮೂರ್ತಿ ಅವರು ಕ್ವಾಂಟಮ್ ಕಂಪ್ಯೂಟೇಶನ್ ಈ ಒಂದು ಕ್ಷೇತ್ರದ ಪ್ರಾಮುಖ್ಯತೆಯನ್ನು ತಿಳಿಸಿದಲ್ಲದೆ ಪ್ರಸಕ್ತ ಅನ್ವೇಷಣಾ ವಲಯದಲ್ಲಿ ಇದರ ಕ್ರಾಂತಿಯ ಬಗ್ಗೆ ಒತ್ತಿ ಹೇಳಿದರು ಮತ್ತು ಮೂಡ್ಲಕಟ್ಟೆಯಲ್ಲಿ ಈ ಸಂಶೋಧನಾ ಕ್ಷೇತ್ರ ಸ್ಥಾಪಿಸಿರುವುದು ನಿಜವಾಗಿಯೂ ಶ್ಲಾಘನೀಯ ಎಂದು ಅಬಿನಂದಿಸಿದರು. ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ಪ್ರೊಪೆಸರ್ ಸಪ್ತರ್ಷಿ ಚೌಧರಿ ಅವರು ಮಾತನಾಡಿ, ನ್ಯಾಷನಲ್ ಕ್ವಾಂಟಮ್ ಮಿಶನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದ ಸಿಂಧು ಖಾರ್ವಿ ಮತ್ತು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದ ಪ್ರತೀಕ್ ಕೊಠಾರಿ ಅವರನ್ನು ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ವತಿಯಿಂದ ಅವರ ಸ್ವಗೃಹದಲ್ಲಿ ಪ್ರತ್ಯೇಕವಾಗಿ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಖಜಾಂಚಿ ಎನ್. ಅಶ್ವಿನ್ ನಾಯಕ್, ಕಾಲೇಜಿನ ಸಂಚಾಲಕ ಎನ್. ಸದಾಶಿವ ನಾಯಕ್ ಮತ್ತು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅವರು ರ್ಯಾಂಕ್ ವಿಜೇತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರ ಮೇಳದ ಉದ್ಘಾಟನೆ ಭಾನುವಾರ ಕನ್ನಡ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, ಜೀವನದಲ್ಲಿ ಲವಲವಿಕೆ ಮತ್ತು ಸಮಯಪ್ರಜ್ಞೆ ಅತ್ಯಂತ ಮುಖ್ಯವೆಂದು ತಿಳಿಸಿದರು. ಡಾ. ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ನಡೆಯುತ್ತಿರುವ ಈ ರೀತಿಯ ಶಿಬಿರಗಳು ಮಕ್ಕಳ ಸಮಗ್ರ ಅಭಿವೃದ್ಧಿಗೆ ಬಹಳ ಉಪಯೋಗಕಾರಿಯಾಗಿವೆ ಎಂದು ಹೇಳಿದರು. ತಮ್ಮ ಬಾಲ್ಯದ ಅನುಭವವನ್ನು ಹಂಚಿಕೊಂಡ ಅವರು, “ನಾನು ಚಿಕ್ಕವನಾಗಿದ್ದಾಗ ನನ್ನ ತಂದೆ-ತಾಯಿಗೆ ಇಂತಹ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಇರಲಿಲ್ಲ. ನಾಲ್ಕನೇ ತರಗತಿಯಿಂದಲೇ ಹಾಸ್ಟೆಲ್ ಜೀವನ ಆರಂಭಿಸಿ ಸ್ವತಂತ್ರವಾಗಿ ಬೆಳೆಯುವ ಅವಕಾಶ ನನಗೆ ದೊರಕಿತು. ಸಾಂಸ್ಕೃತಿಕ ವೇದಿಕೆಗಳ ಮೂಲಕ ಫಿಲಿಫೈನ್ಸ್, ಜಪಾನ್, ಇಂಗ್ಲೆಂಡ್ ಸೇರಿದಂತೆ ಹಲವು ದೇಶಗಳಿಗೆ ತೆರಳಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಆದರೆ ನನ್ನ ತಂದೆ-ತಾಯಂದಿರು ನನ್ನ ಕಾರ್ಯಕ್ರಮಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಹಾಗೂ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು ಇವುಗಳು ಅಪೂರ್ವ ಪುಣ್ಯಕ್ಷಣಕ್ಕೆ ಸಾಕ್ಷಿಯಾದವು. ಜಗದ್ಗುರುಗಳಾದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ತಮ್ಮ ಪವಿತ್ರ ಪಾದಾರವಿಂದಗಳಿಂದ ಶಾಲೆಯನ್ನು ಪಾವನಗೊಳಿಸಿ, ಸಂಪೂರ್ಣ ಸಂಸ್ಥೆಗೆ ದೈವಿಕ ಆಶೀರ್ವಾದವನ್ನು ನೀಡಿದರು. ಈ ಮಹತ್ವದ ಕಾರ್ಯಕ್ರಮವನ್ನು ವೇದಮೂರ್ತಿ ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು ಹಾಲಾಡಿ ಅವರ ಮಾರ್ಗದರ್ಶನದಲ್ಲಿ ಅತ್ಯಂತ ಭಕ್ತಿಭಾವದಿಂದ ಆಯೋಜಿಸಲಾಯಿತು. ಶ್ರೀ ಗುರುಗಳನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿ ನವೀನ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಷ್ಚಂದ್ರ ಶೆಟ್ಟಿ, ಟ್ರಸ್ಟ್ ನ ನಿರ್ದೇಶಕರಾದ ಅಂಪಾರು ಕಿರಣ್ ಹೆಗ್ಡೆ ಹಾಗೂ ಉಮೇಶ್ ಕೊಠಾರಿ ಅವರು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಕೊಡ್ಲಾಡಿ ಕೃಷ್ಣ ಮೂರ್ತಿ ಅಡಿಗ ಬಳಗದವರಿಂದ ವೇಧಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶ್ರೀಗಳ ಸಮ್ಮುಖದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿ ಎಲ್ಲರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜು ಶೇ.93 ಫಲಿತಾಂಶವನ್ನು ದಾಖಲಿಸಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶವನ್ನು ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಮನ್ವಿತಾ (557) ಅಂಕಗಳನ್ನು ಪಡೆದು ಪ್ರಥಮ ಸ್ಥಾನಗಳಿಸಿದ್ದಾರೆ. ಶಾಂಭವಿ (517), ಸಂಕೇತ್ ನಾರಾಯಣ ಪೂಜಾರಿ (512) ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಪ್ರೀತಿ (586) ಅಂಕಗಳನ್ನು ಪಡೆಯುವ ಮೂಲಕ ಬೈಂದೂರು ತಾಲೂಕಿಗೆ ಮತ್ತು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾರೆ. ವೈಷ್ಣವಿ (578), ಶಕುಂತಲಾ (565), ನಾಗಶ್ರೀ (533), ಧೀರಜ್ (520), ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಕೀಲರ ಸಂಘದ ಪದಗ್ರಹಣ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ಮಾನ್ಯ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಗಂಗಣ್ಣನವರ್ ಅವರು ಹಾಗೂ ಮಾನ್ಯ ಸಿವಿಲ್ ನ್ಯಾಯಾಧೀಶರಾದ ಕೆ. ಯು. ವಿದ್ಯಾ ಎ. ಎಸ್. ಅವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು. ಮಾನ್ಯ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ‘ವಕಾಲತ್ತಿನ ಪ್ರಮುಖ ಕೌಶಲ್ಯಗಳು’ಕುರಿತು ಉಪನ್ಯಾಸ ನೀಡಿ, ಎಲ್ಲಾ ವಕೀಲರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಉಪಾಧ್ಯಕ್ಷರು ಸ್ವಾಗತ ಕೋರಿದರು. ಗಣೇಶ್ ಮೆಸ್ತ ಅವರು ಪ್ರಸ್ತಾವಿಕ ನುಡಿ ಮಂಡಿಸಿದರು. ಈ ಸಂದರ್ಭದಲ್ಲಿ ಮಾನ್ಯ ನ್ಯಾಯಮೂರ್ತಿ ಇ. ಎಸ್. ಇಂದಿರೇಶ್ ಅವರನ್ನು ಬಾರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು. ಅವರ ಅಮೂಲ್ಯ ಮಾರ್ಗದರ್ಶನ ಮತ್ತು ಗೌರವಾನ್ವಿತ ಹಾಜರಾತಿಗೆ ಕೃತಜ್ಞತೆ ಸೂಚಿಸಲಾಯಿತು. ಕಾರ್ಯದರ್ಶಿ ಲಿಂಗಪ್ಪ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿವೃತ್ತ ಅಧ್ಯಾಪಕ, ಪ್ರಗತಿಪರ ಕೃಷಿಕ ಶಿರಿಯಾರ ಮೇಲ್ಮನೆ ಶಿವರಾಮ ಶೆಟ್ಟಿ (97) ಅಲ್ಪಕಾಲದ ಅನಾರೋಗ್ಯದಿಂದ ಆದಿತ್ಯವಾರ ಮಧ್ಯಾಹ್ನ 1 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ. ಕರ್ಕುಂಜೆ, ಸಾಬರಕಟ್ಟೆ, ಕಾರ್ಕಳ, ಹಕ್ಲಾಡಿ, ರಾಗಿಹಕ್ಲು ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಅಕ್ರಮ-ಸಕ್ರಮ ಸಮಿತಿ ಸದಸ್ಯರಾಗಿ, ಮೇಕೋಡು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿ, ಮೇಕೋಡು ದುರ್ಗಾಪರಮೇಶ್ವರಿ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
