Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶು ಮಂದಿರ ಇದರ 41ನೇ ವರ್ಷದ ವಾರ್ಷಿಕ ಸಂಭ್ರಮಕ್ಕಾಗಿ ಶಿಶು ಮಂದಿರದ ಪುಟಾಣಿಗಳಿಂದ ಸಾಂಸ್ಕೃತಿಕ ವೈವಿಧ್ಯ ಜನಮನಸೂರೆಗೊಂಡಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಶು ಮಂದಿರದ ಅಧ್ಯಕ್ಷ ಮಂಜುನಾಥ ಶೆಟ್ಟಿ ಮಾತನಾಡಿ, ಪ್ರಸ್ತುತ ಭಾರತೀಯ ಹಿಂದೂ ಸನಾತನ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಅವಶ್ಯಕತೆಯ ಬಗ್ಗೆ ತಿಳಿಸಿದರು. ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಯಾನಂದ ಹೋಬಳಿದಾ‌ರ್, ಚಿಣ್ಣರೆ ಸಾಂಸ್ಕೃತಿಕ ವೈವಿಧ್ಯವನ್ನು ಕಳೆದ 41 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಕಾರ್ಯಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಿಶುಮಂದಿರದಲ್ಲಿ ಕಲಿತಂತಹ ದಿ.ಸ್ಪಂದನ ಜಯಾನಂದ ಹೋಬಳಿದಾರ್ ಸವಿನೆನಪಿಗಾಗಿ ಒಂದು ಲಕ್ಷ ರೂ. ಕೊಡುಗೆಯನ್ನು ತನ್ನ ಪುತ್ರಿಯ ಸವಿನೆನಪಿಗಾಗಿ ಘೋಷಣೆ ಮಾಡಿದರು. ಜಯಾನಂದ ಹೋಬಳಿದಾರ್ ಅವರನ್ನು ಸಾಮಾಜಿಕ ಸೇವೆಗಾಗಿ ಗೌರವಸಲಾ ಯಿತು. ಬೈಂದೂರು ಸೇನೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಹಾಗೂ ಕುಂದಗನ್ನಡ ಸಂಘದ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೇವಿಯ ಮೂರ್ತಿಗೆ ಬಣ್ಣ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಕುಂದಗನ್ನಡ ಸಂಘದ ಸಂಯೋಜಕರಾದ ಮಹೇಶ್ ನಾಯ್ಕ್ ಮತ್ತು ರೇಷ್ಮಾ ಶೆಟ್ಟಿ, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೋಳಿ ಸಂಭ್ರಮದಲ್ಲಿ ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 117ನೇ ತಿಂಗಳ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಗೊಂಬೆ ಮನೆಯಲ್ಲಿ ಆಚರಿಸಲಾಯಿತು. ಉಪ್ಪಿನಕುದ್ರು ಗ್ರಾಮದಲ್ಲಿ ಸುಮಾರು 25 ವರ್ಷಗಳ ಕಾಲ ಆರೋಗ್ಯ ಸಹಾಯಕಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಕುಸುಮಾ ಟಿ. ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು. ರೇವತಿ ಉಮೇಶ್ ಸುವರ್ಣ, ಶ್ರೀಕಲಾ ವಿ. ಪ್ರಭು, ವಸಂತಿ ಆರ್. ಪಂಡಿತ್, ಸುಜಾತಾ ಕೆ. ಐತಾಳ್, ಪ್ರೆಸಿಲ್ಲಾ ಮೆನೇಜಸ್, ಜಯಶ್ರೀ ಪೈ, ಕಲ್ಪನಾ ಸುರೇಶ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಯಶೋದಾ ಮತ್ತು ತಂಡದವರು ಪ್ರಾರ್ಥಿಸಿದರು. ಶೈಲಜಾ ಅವರು ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಜ್ಯೋತಿ ಪೂಜಾರಿ ಮತ್ತು ಇನ್ಫೋಸಿಸ್ ಉದ್ಯೋಗಿ ಪ್ರತೀಕ್ಷಾ ಕಾಮತ್ ಅವರು ನಿರೂಪಿಸಿದರು. ಅಂಗನವಾಡಿ ಶಿಕ್ಷಕಿ ಸಂಗೀತಾ ಅವರು ಧನ್ಯವಾದ ಸಮರ್ಪಿಸಿದರು. ನಂತರ ಉಪ್ಪಿನಕುದ್ರು ಗ್ರಾಮದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ರ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕುಂದಾಪುರ ಇಲ್ಲಿಯ ಶಿಕ್ಷಣ ಸಂಯೋಜಕರಾದ ರಾಜಾ ಖಾರ್ವಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ.8೦ ಮತ್ತು ಶೇ.90 ಕ್ಕಿಂತಲೂ  ಅಧಿಕ ಅಂಕ ಗಳಿಸಿದ  ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಸ್ವಾಗತಿಸಿ, ಸಹಶಿಕ್ಷಕಿ ಶುಬ್ರತಾ ನಿರೂಪಿಸಿದರು, ವಿದ್ಯಾರ್ಥಿನಿ ಶ್ರಾವಣಿ ಎಮ್. ನಾಯಕ್ ವಂದಿಸಿದಳು. ಸಂಗೀತ ಶಿಕ್ಷಕಿ ರಮಣಿಯವರು ಪ್ರಾರ್ಥನೆಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗದು ಕಳವು ಮಾಡಿರುವ ಘಟನೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾನದ ಗೆಂಡೋತ್ಸವ ಕಾರ್ಯಕ್ರಮಕ್ಕೆ ಹೆಂಡತಿ ಹಾಗೂ ಮಗಳೊಂದಿಗೆ ಮನೆಗೆ ಬೀಗ ಹಾಕಿ ಹೋಗಿದ್ದು ಪೂಜೆ ಮುಗಿಸಿ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಮುಖ್ಯ ದ್ವಾರದ ಬೀಗವನ್ನು ಕತ್ತಿಯಿಂದ ಮುರಿದು, ಒಳನುಗ್ಗಿದ ಕಳ್ಳರು, ಕೋಣೆಯ ಕಾಪಾಟಿಲ್ಲಿದ್ದ 2,35,000 ರೂ. ನಗದು ಮತ್ತು ಚಿನ್ನದ ಬ್ರಾಸ್ ಲೈಟ್ ಹಾಗೂ ಕಿವಿಯ ಬೆಂಡೋಲೆಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ 5,35,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆಸಿದ ದಾಳಿಯಲ್ಲಿ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಸೇರಿದ 400 ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾಹಿತಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ, ಆರೋಪಿಗಳಾದ ಅಬ್ದುಲ್ ಮಜೀದ್ ಮತ್ತು ಆಯಿಷಾ ವಾಸಿಂ ಎಂಬುವವರು ಮೂರು ಚಕ್ರದ ಗೂಡ್ಸ್ ವಾಹನದಲ್ಲಿ ಅಕ್ಕಿಯನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಆಹಾರ ನಿರೀಕ್ಷಕ ವಿನಯ್ ಕುಮಾರ್ ಅವರು ನೀಡಿದ ದೂರಿನಂತೆ, ಬಿಜೂರಿನಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಸರ್ಕಾರದ ಯೋಜನೆಯಡಿ ಉಚಿತವಾಗಿ ವಿತರಿಸಬೇಕಾದ ಈ ಅಕ್ಕಿಯನ್ನು ಅಪರಿಚಿತ ಮೂಲಗಳಿಂದ ಪಡೆದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿತ್ತು ಎಂದು ಆರೋಪಿಸಲಾಗಿದೆ. ಒಟ್ಟು 9,200 ರೂ. ಮೌಲ್ಯದ 15 ಚೀಲಗಳಲ್ಲಿದ್ದ 400 ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಅಕ್ಕಿಯನ್ನು ತಲ್ಲೂರು ಟಿಎಎಂಪಿಎಂಸಿ ಗೋದಾಮಿನಲ್ಲಿ ಇರಿಸಲಾಗಿದೆ. ಆಹಾರ ನಿರೀಕ್ಷಕರ ದೂರಿನ ಆಧಾರದ ಮೇಲೆ ಬೈಂದೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಬೈಲೂರು ನಿವಾಸಿ, ನಿವೃತ್ತ ಶಿಕ್ಷಕ ಹಳ್ಳಾಡು ವಿಶ್ವನಾಥ ಶೆಟ್ಟಿ (90) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಪುತ್ರರಾದ ಯುವ ಮೆರಿಡಿಯನ್ ಗ್ರೂಪ್ ಆಫ್ ಕಂಪೆನಿಯ ಪಾಲುದಾರರಾದ ಬೈಲೂರು ಉದಯ್ ಕುಮಾರ್ ಶೆಟ್ಟಿ ಹಾಗೂ ಬೈಲೂರು ವಿನಯ್ ಕುಮಾರ್ ಶೆಟ್ಟಿ ಇದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಟೀಂ ಯುವಶಕ್ತಿ ಟ್ರಸ್ಟ್ʼ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು ಈ ಕಾರ್ಯ ನಿಜಕ್ಕೂ ಅಭಿನಂದನೀಯ. ಅವರುಗಳು ಈ ಕಾರ್ಯ ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಮಾತನಾಡಿ, ವಿದ್ಯಾರ್ಥಿಗಳ ಈ ಕೆಲಸ ಕಾಲೇಜಿನ ಹೆಮ್ಮೆ. ಇನ್ನಷ್ಟು ವಿದ್ಯಾರ್ಥಿಗಳು ಇಂತಹ ಒಳ್ಳೆಯ ಕೆಲಸದಲ್ಲಿ ತೊಡಗಿಕೊಳ್ಳಿ. ವಿದ್ಯಾರ್ಥಿಗಳು ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾಗಮಂಗಲೋತ್ಸವದ ಯಶಸ್ಸು ಶ್ರೀ ದೇವರ ಇಚ್ಛೆಯಂತೆ ನೆರವೇರಿದೆ ಎಂದು ಕೋಟದ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಕೋಟ ಅಮೃತೇಶ್ವರೀ ಸಭಾಂಗಣದಲ್ಲಿ ಹಮ್ಮಿಕೊಂಡ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು. ನಾಗಮಂಡಲದಲ್ಲಿ ಸ್ವಯಂಸೇವಕರ ಹಾಗೂ ಹದಿನಾಲ್ಕು ಗ್ರಾಮದ ಗ್ರಾಮಸ್ಥರ ಪಾತ್ರದ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ ಅವರು ದೇಗುಲದ ಆಡಳಿತ ಮಂಡಳಿ ಅವಿರತವಾಗಿ ಶ್ರಮಿಸಿದನ್ನು ಸ್ಮರಿಸಿದರು. ಈ ಹಿನ್ನಲ್ಲೆಯಲ್ಲಿ ಮಿತ್ರ ಭೋಜನಕೂಟವನ್ನು ಹಮ್ಮಿಕೊಂಡಿದ್ದು ಯಶಸ್ಸಿಗೆ ಶ್ರಮಿಸಿದ ಸಂಘಸಂಸ್ಥೆ, ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ ಈ ಹಿನ್ನಲ್ಲೆಯಲ್ಲಿ ಆಗಮಿಸಿದ ಪ್ರತಿಯೊರ್ವರಿಗೂ ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಹಸಿರು ಗಿಡಗಳಾದ ಮಾವು, ಹಲಸು, ಹೂವಿನ 3000 ಅಧಿಕ ಗಿಡಗಳನ್ನು ನೀಡಿದರು. ಸಭೆಯಲ್ಲಿ ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಸುಭಾಷ್ ಶೆಟ್ಟಿ ಗಿಳಿಯಾರು, ಸುಬ್ರಾಯ ಜೋಗಿ, ಜ್ಯೋತಿ ಡಿ. ಕಾಂಚನ್ ಉಪಸ್ಥಿತರಿದ್ದರು. ಟ್ರಸ್ಟಿ ಚಂದ್ರ ಆಚಾರ್ ಸ್ವಾಗತಿಸಿ, ಪ್ರಾಸ್ತಾವನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್‌ಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ 2026 ಜನವರಿ 18ರಂದು ನಡೆದ ಯು.ಸಿ.ಇ.ಇ.ಡಿ (UCEED)ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ ಜನರಲ್ ವಿಭಾಗದಲ್ಲಿ 518 ರ‍್ಯಾಂಕ್ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಭೂಮಿಕಾ ವೈ OBC- NCL ವಿಭಾಗದಲ್ಲಿ 1378 ನೇ ರ‍್ಯಾಂಕ್, ಸಂಕೀರ್ತ್ ರಾಜ್ ಕೆ. ಜಿ. 1381ನೇ ರ‍್ಯಾಂಕ್ , ಚಿರಂತ್ ಕೆ.ಎನ್.OBC-NCL ವಿಭಾಗದಲ್ಲಿ 1507ನೇ ರ‍್ಯಾಂಕ್ ಪಡೆದುಕೊಂಡು ಮುಂದಿನ ಹಂತದ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ, ಉಪನ್ಯಾಸಕ ವರ್ಗದವರು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Read More