ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ದಾರ್ಥ ನಡುರಾತ್ರಿಯಲ್ಲಿ ತನ್ನ ಕಂದ ರಾಹುಲ ಪತ್ನಿ ಯಶೋಧರೆಯನ್ನು ತೊರೆದು ಯಾರಿಗೂ ಹೇಳದೆ ಅರಮನೆಯನ್ನು ತೊರೆದು ಹೋದ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿ ಇದೆ. ಆದರೆ ಸಿದ್ಧಾರ್ಥ ದೇಶಾಂತರ ಹೋಗಲು ಕಾರಣವಾದ ಅಂಶವೆಂದರೆ, ರೋಹಿಣಿ ನದಿಯ ವಿವಾದದಲ್ಲಿ ಶಾಕ್ಯ ಸಂಘದ ನಿಯಮದಂತೆ ದೇಶಾಂತರ ಹೋಗುವ ಶಿಕ್ಷೆಯನ್ನು ಆಯ್ದುಕೊಂಡದ್ದು. ಸಿದ್ದಾರ್ಥ ತನ್ನ ಹೆಂಡತಿ ಮತ್ತು ಕುಟುಂಬದ ಸದಸ್ಯರೆಲ್ಲರ ಗಮನಕ್ಕೂ ತಂದು ಎಲ್ಲರನ್ನು ಒಪ್ಪಿಸಿ ಹಾಡು ಹಗಲಿನಲ್ಲೇ ದೇಶಾಂತರ ಹೊರಡುವ ತೀರ್ಮಾನ ಕೈಗೊಳ್ಳುತ್ತಾನೆ. ಇಂತಹ ಸತ್ಯಕ್ಕೆ ವಿರುದ್ಧವಾಗಿ ಕನ್ನಡ ಸಾಹಿತ್ಯದಲ್ಲಿ ಅನೇಕ ತಪ್ಪು ಸಂದೇಶ ನೀಡುವ ಸಂಕಥನಗಳು ಹುಟ್ಟಿಕೊಂಡಿವೆ. ಅದೇ ಸತ್ಯವೆಂದು ನಂಬಿದವರು ಹಾಗೆ ನಂಬುವವರು ಈಗಲೂ ಇದ್ದಾರೆ. ಎಂದು ಉಡುಪಿಯ ವಕೀಲರು ಹಾಗೂ ಸಂಬುದ್ಧ ಟ್ರಸ್ಟ್ ನ ಕಾರ್ಯದರ್ಶಿಯಾಗಿರುವ ಮಂಜುನಾಥ್ ವಿ ಅವರು ಹೇಳಿದರು. ಅವರು ಸಮುದಾಯ ಕುಂದಾಪುರ ಕಳೆದ ಐದು ವರ್ಷಗಳಿಂದ ಪ್ರತಿ ತಿಂಗಳೂ ಆಯೋಜಿಸುತ್ತಿರುವ ಮೇ “ತಿಂಗಳ ಓದು ” ಬುದ್ಧ ಪೂರ್ಣಿಮೆ ಪ್ರಯುಕ್ತ…
Author: ನ್ಯೂಸ್ ಬ್ಯೂರೋ
ಕುಂದಾಪುರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿಗೆ ಸಮೀಪದ ಸಿದ್ದಾಪುರ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿದ್ದಾಪುರ ಗ್ರಾಮದ ಪ್ರವೀಣ್ (26) ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ. ಪೋಲೀಸರು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು ಗಾಂಜಾ ಸೇವನೆ ಮಾಡಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕಟಣೆ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಳೆದ ಎರಡು ಚುನಾವಣೆಯಲ್ಲಿ ಸ್ಫರ್ಧೆ ಮಾಡಿದ್ದು, ಈ ಭಾರಿ ಕಾಂಗ್ರೆಸ್ ಟಿಕೆಟ್ ದೊರೆಯದ ಕಾರಣ ಸ್ವತಂತ್ರವಾಗಿ ಸ್ಪರ್ಧೆಗಿಳಿದಿದ್ದೇನೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ ದಿನೇಶ್ ಹೇಳಿದರು. ಅವರು ಕುಂದಾಪುರ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 10 ತಿಂಗಳ ಹಿಂದೆ ಪಕ್ಷದ ವರಿಷ್ಠರು ನನಗೆ ಟಿಕೆಟು ನೀಡುವುದಾಗಿ ತಿಳಿಸಿದ್ದರು. ಅಂತೆಯೇ ನಾನು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಕೊನೆಯ ಗಳಿಗೆಯಲ್ಲಿ ನನ್ನ ಹೆಸರನ್ನು ಕೈಬಿಟ್ಟು ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗೆ ಅವಕಾಶ ಕಲ್ಪಿಸಿದರು. ಸಂವಿಧಾನದ 4 ಮನೆ, 4 ಪಕ್ಷವನ್ನು ನೋಡಿರುವ ವ್ಯಕ್ತಿಗೆ ಈಗ ಪಕ್ಷ ಟಿಕೇಟು ನೀಡಲಾಗಿದೆ. ರಾಹುಲ್ ಗಾಂಧಿ, ಸಿದ್ಧರಾಮಯ್ಯ ಅವರಿಗೆ ನಿಂದಿಸಿರುವ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ಮುಜುಗರವಾಗುತ್ತದೆ ಎಂದರು. ನಾನು 2012 ಮತ್ತು 2018ರಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಮತಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆಯಲ್ಲಿ ನಡೆದ ಸಂಗೀತ ಸ್ಪರ್ಧೆಗಳಾದ ಚಿತ್ರಗೀತೆಯಲ್ಲಿ ಶ್ರೇಯಾ ಖಾರ್ವಿ ಪ್ರಥಮ, ಜಾನಪದ ಸಮೂಹ ಗೀತೆ ಪ್ರಥಮ ಹಾಗೂ ಪೂಜಾ ಆಚಾರ್ ಭಾಗವತಿಕೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಮುಖೇನ ಸಮಗ್ರ ಪುರಸ್ಕಾರವನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಗುಜ್ಜಾಡಿ ರಕ್ಷಿತ್ ರಾವ್, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ. ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೊಲೀಸ್ ಇಲಾಖೆಯ ಜೀಪು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು, ಜೀಪುನಲ್ಲಿದ್ದ ಎಸ್‌ಐ ಹಾಗೂ ಚಾಲಕ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಜೀಪು ಚಾಲಕ ರಾಮ ಅವರನ್ನು ಸಾಕ್ಷ್ಯಾಧಾರ ಕೊರತೆಯಿಂದ ನಿರ್ದೋಷಿಯೆಂದು ತೀರ್ಪು ನೀಡಲಾಗಿದೆ. 2013ರ ಮಾ.29 ರಂದು ಕುಂದಾಪುರದ ಗಾಂಧಿ ಮೈದಾನ ಬಳಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ರೋಹಿಣಿ ಡಿ. ಅವರು ಈ ತೀರ್ಪು ನೀಡಿದ್ದಾರೆ. ಅಂದು ಪೊಲೀಸ್ ಜೀಪಿನಲ್ಲಿ ಸಂಚರಿಸುತ್ತಿದ್ದ ಆಗಿನ ಕುಂದಾಪುರ ನಗರ ಠಾಣಾ ಎಸ್‌ಐ ರೇವತಿ ಅವರು ಜೀಪು ಚಾಲಕ, ಪೊಲೀಸ್ ಸಿಬ್ಬಂದಿ ರಾಮ ವಿರುದ್ಧವೇ ದೂರು ನೀಡಿದ್ದರು. ಕುಂದಾಪುರ ನಗರ ಠಾಣಾ ಎಸ್‌ಐ ಆಗಿದ್ದ ರೇವತಿ ಅವರು 2013ರ ಮಾ. 28 ರ ರಾತ್ರಿ ಇಲಾಖೆ ಜೀಪಿನಲ್ಲಿ ಕುಂದಾಪುರ, ಕೋಟೇಶ್ವರ, ಕುಂಭಾಶಿ ಕಡೆ ರೌಂಡ್ಸ್ ಮುಗಿಸಿ, ಮಾ. 29 ರ ಬೆಳಗ್ಗಿನ ಜಾವ 2.20 ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜೆಸಿಐ ಸಿಟಿ ಕುಂದಾಪುರ ಆಯೋಜನೆಯ ಥಿಂಕಿಂಗ್ ಬಿಗ್ ಗ್ರೋ ಬಿಗ್ ಶೀರ್ಷಿಕೆ ಅಡಿಯಲ್ಲಿ ವೃತ್ತಿ ಕೌಶಲ್ಯ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಕ್ಯೂನಿ ಡಿಕೊಸ್ಟಾ ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯದ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದರು. ಸಮಾರಂಭದಲ್ಲಿ ಜೆಸಿಐ ಸಿಟಿ ಕುಂದಾಪುರದ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್, ಜೆಸಿಐ ನಿಕಟಪೂರ್ವ ಅಧ್ಯಕ್ಷರುಗಳಾದ ಹುಸೆನ್ ಹೈಕಾಡಿ, ವಿಜಯ ಕುಮಾರ್ ಹಾಗೂ ಜನತಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಹರ್ಷ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಅಭಿಜಿತ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು, ಮೇ 28: ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಕಾಲು ಜಾರಿ ಸೌಪರ್ಣಿಕ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಬಡಾಕೆರೆ ಗ್ರಾಮದ ಕುದ್ರುವಿನ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ತೊಪ್ಲು ನಿವಾಸಿ ಮುಡೂರ ಎಂಬುವರ ಮಗ ಮಂಜು ಮೊಗವೀರ (57) ಎಂದು ಗುರುತಿಸಲಾಗಿದೆ. ಮಂಜು ಮೊಗವೀರ ಸಮುದ್ರ ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದು, ತೂಫಾನ್ ಇದ್ದ ಕಾರಣ ಮೀನುಗಾರಿಕೆಗೆ ತೆರಳಿರಲಿಲ್ಲ. ಸೋಮವಾರ ಸಂಜೆ ಬಿಡುವಿದ್ದರಿಂದ ಸೌಪರ್ಣಿಕಾ ನದಿಗೆ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದರು ಎನ್ನಲಾಗಿದೆ. ಕುದ್ರುವಿನ ಬಳಿಯ ಸೌಪರ್ಣಿಕ ನದಿಯಲ್ಲಿ ಗಾಳ ಹಾಕಲು ತೆರಳಿದ್ದ ಮಂಜು ಮೊಗವೀರ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ನಾಪತ್ತೆಯಾಗಿದ್ದ ಮಂಜು ಮೊಗವೀರರನ್ನು ಹುಡುಕಾಡಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ,ಮೇ.27: ಭಿನ್ನ ಮಾದರಿಯ ರಕ್ತದ ಗುಂಪಿಗೆ ಸೇರಿದ ಮೂತ್ರ ಪಿಂಡಗಳನ್ನು (kidney) ಜೋಡಿಸುವ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡುವುದರ ಮೂಲಕ ಕುಂದಾಪುರ ಮೂಲದ ವೈದ್ಯ ಡಾ| ಎ.ಕೆ. ಇಸ್ತಿಯಾಕ್ ಅಹ್ಮದ್ ಮತ್ತು ಅವರ ತಂಡವು ಮಹಿಳೆಯೊಬ್ಬರ ಪ್ರಾಣ ಉಳಿಸಿದೆ. ವೈದ್ಯ ಲೋಕಕ್ಕೆ ಸವಾಲಾಗಿರುವ ಈ ಪ್ರಕರಣವನ್ನು ಕೈಗೆತ್ತಿಕೊಂಡ ಅಬುಧಾಬಿ ಬುರ್ಜಿಲ್ ಮೆಡಿಕಲ್ ಸಿಟಿಯಲ್ಲಿ ನೆಫ್ರಾಲಜಿಸ್ಟ್ ಮತ್ತು ಟ್ರಾನ್ಸ್‌ಪ್ಲಾಂಟ್ ತಜ್ಞರಾಗಿರುವ ಡಾ| ಎ.ಕೆ. ಇಸ್ತಿಯಾಕ್ ಅವರು ಅನಿವಾಸಿ ಭಾರತೀಯ ಮಹಿಳೆಯೊಬ್ಬರಿಗೆ ಅವರ ಪತಿಯ ಭಿನ್ನ ರಕ್ತ ಮಾದರಿಯ ಮೂತ್ರಪಿಂಡಗಳನ್ನು ಜೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನಿವಾಸಿ ಭಾರತೀಯರಾದ ರೇವತಿ ಕಾರ್ತಿಕೇಯನ್ ದಂಪತಿ ತಮ್ಮ ಎರಡು ಪುಟ್ಟ ಹಾಗೂ ಮಕ್ಕಳೊಂದಿಗೆ ಅಬುಧಾಬಿಯಲ್ಲಿದ್ದಾರೆ. 32 ವರ್ಷ ಹರೆಯದ ರೇವತಿ ಅವರು ಮೂತ್ರಪಿಂಡಗಳಲ್ಲಿ 2018ರಿಂದ ಸೋಂಕು ಕಂಡು ಬಂದಿತ್ತು. 2022ರ ಅನಂತರ ಹಿಮೋ ಡಯಾಲಿಸಿಸ್‌ನಂತಹ ಹಲವು ಚಿಕಿತ್ಸೆಗಳ ಅನಂತರವೂ ಹೃದಯ ಸ್ತಂಭನದಿಂದ ನಿಷ್ಕ್ರಿಯಗೊಂಡ ಅವರ ಮೂತ್ರ ಪಿಂಡಗಳನ್ನು ಬದಲಾಯಿಸಲೇಬೇಕಾದ ಅನಿವಾರ್ಯ ಬಂದಿತು. ಹಾಗಾಗಿ ದಂಪತಿ ಮೃತ ದೇಹಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ದಿನಗಳ ತೋಟಗಾರಿಕೆ ತರಬೇತಿ ಪಡೆಯಲು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನ. ಅರ್ಜಿ ನಮೂನೆಯನ್ನು ಇಲಾಖೆಯ https://horticulturedir.karnataka.gov.in ವೆಬ್‌ಸೈಟ್ ಅಥವಾ ತೋಟಗಾರಿಕೆ ಉಪನಿರ್ದೇಶಕರು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ಉಡುಪಿ ಇವರಿಂದ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2 ವರ್ಷದ ಎಲೆಕ್ಟಿçಷಿಯನ್ ಹಾಗೂ ಫಿಟ್ಟರ್ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಇಲಾಖೆಯ www.cite.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಕ್ಕರ್ಣೆ, ಮೊ.ನಂ: 9483593148 ಅಥವಾ ಮೊ.ನಂ:8277558812 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
