ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೃಹ ಚೇತನ ಯೋಜನೆಯಡಿ ಆಯ್ಕೆಯಾದ ಕುಟುಂಬಗಳಿಗೆ ಇತ್ತಿಚಿಗೆ ಸಂಘದ ಕಛೇರಿಯಲ್ಲಿ ಚೆಕ್ ವಿತರಣೆ ಮಾಡಲಾಯಿತು. ಕುಂದಾಪುರ ತಾಲೂಕು ಕಮಲಶಿಲೆ ಗ್ರಾಮದ ಸ್ವಾತಿ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಮಹಾಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿ ಎಚ್. ಚಂದ್ರ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 50,000 ರೂಪಾಯಿ ಹಣವನ್ನು ಹಾಗೂ ಕುಂದಾಪುರ ತಾಲೂಕು ಕೊರ್ಗಿ ಗ್ರಾಮದ ದಬ್ಬೆಕಟ್ಟೆ ನಿವಾಸಿ ಕುಸುಮ ಶೆಟ್ಟಿ ಅವರಿಗೆ ಸಂಘದ ದಶಮ ಸಂಭ್ರಮದ ಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿಗಳಾದ ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಘದ ವತಿಯಿಂದ 30,000 ರೂಪಾಯಿ ಹಣವನ್ನು ಚೆಕ್ ಮೂಲಕ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ, ದಶಮ ಸಂಭ್ರಮದ ಮಹಾ ಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿಗಳಾದ ಹೆಚ್. ಚಂದ್ರ ಶೆಟ್ಟಿ, ಪೋಷಕರಾದ ಅಲ್ತಾರು ಸುಧಾಕರ ಶೆಟ್ಟಿ, ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮೇ.27: ರಾಣಿಬಲೆ ಮೀನುಗಾರರ ಒಕ್ಕೂಟ ರಿ. ಉಪ್ಪುಂದ ಇದರ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇಂದು ಸಂಘದ ವಠಾರದಲ್ಲಿ ನಡೆಯಿತು. ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಆರ್ಥಿಕವಾಗಿ ಸಹಕಾರಿಯಾಗಲು ಹಾಗೂ ಕಲಿಕೆಗೆ ಉತ್ತೇಜ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಲಾಗಿದೆ. ಇದರ ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರುವಂತಾಗಬೇಕು ಎಂದರು. ಸಂಘದ ಸದಸ್ಯರ ಎಲ್.ಕೆ.ಜಿ.ಯಿಂದ ಎಸ್.ಎಸ್.ಎಲ್.ಸಿ ವರೆಗಿನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಮಾರು 6 ಸಾವಿರ ಪುಸ್ತಕ ಕೊಡುಗೆಯಾಗಿ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಖಾರ್ವಿ, ಕೋಶಾಧಿಕಾರಿ ನಾಗೇಶ ಖಾರ್ವಿ, ಜೊತೆ ಕಾರ್ಯದರ್ಶಿ ಸೋಮಶೇಖರ ಖಾರ್ವಿ, ಹಾಗೂ ಕಾರ್ಯಕಾರಿ ಸದಸ್ಯರಾದ ಎ. ಶ್ರೀನಿವಾಸ ಖಾರ್ವಿ, ಎಸ್.ಕೃಷ್ಣ ಖಾರ್ವಿ, ರಾಜೇಂದ್ರ ಖಾರ್ವಿ, ಶಂಕರ ಖಾರ್ವಿ, ನವೀನ ಖಾರ್ವಿ, ಶರತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣದಲ್ಲಿ ರೌಪಿಯ ಸಭಾಂಗಣದಲ್ಲಿ ಕಿಂಡರ್ಗಾಟನ್, ಪೂರ್ವಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿ ಶಿಕ್ಷಕರಿಗೆ ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನಾ ಕೌಶಲ್ಯ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಪರಿಸರತಜ್ಞೆ, ರಾಷ್ಟ್ರಮಟ್ಟದ ವಿಶೇಷ ಸಂಪನ್ಮೂಲ ವ್ಯಕ್ತಿ ಎಸ್. ಪಲ್ಲವಿ ಅವರು ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನೇ ಮತ್ತು ಗುಣಾತ್ಮಕ ಶಿಕ್ಷಣದ ಕುರಿತು ತರಬೇತಿ ನೀಡಿದರು. ಜೊತೆಯಲ್ಲಿ ಇಂದಿನ ತಾಂತ್ರಿಕ ಯುಗದಲ್ಲಿ ಶಿಕ್ಷಣಕ್ಷೇತ್ರವು ಪೈಪೋಟಿಯಿಂದ ಕೂಡಿದ್ದು ಶಿಕ್ಷಕರು ವಿದ್ಯಾರ್ಥಿಗಳಿಂದ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ ಆದ್ದರಿಂದ ವಿದ್ಯಾರ್ಥಿಸ್ನೇಹಿ ಶಿಕ್ಷಣ ಅತ್ಯಗತ್ಯ ಮತ್ತು ಈ ದಿಶೆಯತ್ತ ಶಿಕ್ಷಕರು ಸಂಯಮದಿಂದ ಸದಾ ಕ್ರಿಯಾಶೀಲರಾಗಿರಬೇಕು ಎಂದು ಶಿಕ್ಷಕರಿಗೆ ಪ್ರಾಯೋಗಿಕವಾಗಿ ಉದಾಹರಣೆಗಳ ಮೂಲಕ ಸೂಕ್ತ ಮಾರ್ಗದರ್ಶನ ನೀಡಿದರು. ಎಲ್ಲಾ ಶಿಕ್ಷಕರು ಅತ್ಯಂತ ಉತ್ಸಾಹದಿಂದ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಸಭೆಯಲ್ಲಿ ಆಡಳಿತ ಮಂಡಳಿಯ ಅಧಿಕಾರಿಗಳಾದ ಶಮಿತಾ ರಾವ್, ರೆನಿಟಾ ಲೋಬೊ ಮತ್ತು ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಧುನಿಕ ಜೀವನ ಶೈಲಿಯ ನಡುವೆ ಆರೋಗ್ಯವಂತರಾಗಿ ಬದುಕುವುದು ದೊಡ್ಡ ಸವಾಲು. ಮನುಷ್ಯ ಜೀವನದ ಎಲ್ಲಾ ಸವಾಲುಗಳನ್ನು ಎದುರಿಸುವ ಜಾಣ್ಮೆಯನ್ನು ಕಲಿಯುವುದು ಮುಖ್ಯ ಎಂದು ನಿಮ್ಹಾನ್ಸ್ ಮನೋವೈದ್ಯಕೀಯ ವಿಭಾಗದ ನಿವೃತ್ತ ಉಪನ್ಯಾಸಕ, ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ್ ಹೇಳಿದರು. ಅವರು ಸೋಮವಾರ ಇಲ್ಲಿನ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಒತ್ತಡ ರಹಿತ ಜೀವನ ವಿಷಯವಾಗಿ ಮಾತನಾಡಿದರು. ಯಾರಿಗೆ ಹೃದಯ ಕೊಡೋಣ ಅಂತ ಯೋಚಿಸುವ 25 ವರ್ಷ ವಯಸ್ಸಿನವರಿಗೆ ಹೆಚ್ಚು ಹೃದಯಾಘಾತ ಆಗುತ್ತಿರುವುದು ಗಂಭೀರ ಸಂಗತಿ. ಭಾರತವು ಸಕ್ಕರೆ ಕಾಯಿಲೆಯ ರಾಜಧಾನಿಯಾಗಿದೆ. ಸರಿಯಾದ ಆಹಾರ ಅಭ್ಯಾಸಗಳು, ನಿಯಮಿತ ವ್ಯಾಯಾಮ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ ಎಂದರು. ಭಂಡರ್‌ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯ ಶಾಂತಾರಾಮ ಪ್ರಭು ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿಎ ಡಾ. ನಾಗರಾಜ ಆಚಾರ್ಯ ಯಶಸ್ವಿ ಜೀವನದ ಸೂತ್ರಗಳು ವಿಷಯದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮಹಾಲಿಂಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಸುರತ್ಕಲ್‌ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ’ದಲ್ಲಿ 2 ಪ್ರಥಮ ಹಾಗೂ 5 ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ. ವಿಜೇತರಾದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ. ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ಮಾರಿಕಾಂಬಾ ಮಹಿಳಾ ಸಹಕಾರಿ ಸಂಘ ಕೊಡಪಾಡಿ ಗುಜ್ಜಾಡಿ ಸಹಕಾರದೊಂದಿಗೆ 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಯುವ ಮುಖಂಡ ದಿನೇಶ ಬಿಲ್ಲವ ವಹಿಸಿದ್ದರು. 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿನಿಯರಾದ ಸಿಂಚನಾ, ಸ್ಫೂರ್ತಿ, ನಿಷ್ಕಲ ಇವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಶುಭಾಶಂಸನೆಗೈದರು. ಮುಖ್ಯ ಅತಿಥಿಯಾಗಿ ಪತ್ರಕರ್ತ ಬಿ.ರಾಘವೇಂದ್ರ ಪೈ, ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ನಿವೃತ್ತ ಶಿಕ್ಷಕ ದೇವು ಮಾಸ್ಟರ್, ಇಂದುಧರ ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಅಧ್ಯಕ್ಷೆ ಸುಮಿತ್ರಾ, ಸುರೇಶ ಜಿ., ನರಸಿಂಹ ಎಂ.ಜಿ., ನಾಗರಾಜ ಜಿ.ಎಂ., ಶ್ರೀಕಾಂತ ಎನ್., ಜಿ.ಈಶ್ವರ ಉಪಸ್ಥಿತರಿದ್ದರು. ಗೌರವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖ್ಯಾತ ಮನೋವೈದ್ಯ ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ್ ಅವರು. ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮೇ.27ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ಒತ್ತಡರಹಿತ ಜೀವನ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ವಿಶ್ವಸ್ಥಮಂಡಳಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಲಿದ್ದಾರೆ. ಇನ್ನೋರ್ವ ಅತಿಥಿಗಳಾಗಿ ಲೆಕ್ಕಪರಿಶೋಧಕ ಮತ್ತು ಕಾನೂನು ಸಲಹೆಗಾರರಾದ ಡಾ.ನಾಗರಾಜ ಆಚಾರ್ ಬೆಂಗಳೂರು ಇವರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಮ್. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸತ್ಯನಾರಾಯಣ ಉಪಸ್ಥಿತರಿವರು. ಆಸಕ್ತ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ರಾಮಕ್ಷತ್ರಿಯ ಮಹಾಸಂಘದ ನೇತೃತ್ವದಲ್ಲಿ ಬಾಳೆಕುದ್ರು ಶ್ರೀ ಮಠದಲ್ಲಿ ಮೇ.26 ರಂದು ನಡೆಯಲಿರುವ ಮಹಾಮೃತ್ಯುಂಜಯ ಯಾಗ, ಚಂಡಿಕಾಹೋಮ ಹಾಗೂ ಗಣಹೋಮದ ಅಂಗವಾಗಿ ವಿವಿಧೆಡೆಗಳಿಂದ ಬಂದಿದ್ದ ಹೊರೆಕಾಣಿಕೆಯನ್ನು ಶ್ರೀ ಮಠದ ಯಾಗ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಮೆರವಣಿಗೆಗೆ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದ ಸಭಾಂಗಣದಲ್ಲಿ ಅಧ್ಯಕ್ಷರಾದ ಹೆಚ್.ಎಸ್. ಶಶಿಧರ್ ನಾಯ್ಕ್ ಅವರು ಚಾಲನೆ ನೀಡಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ ಒಂದು ವಿಶಾಲವಾದ ವಿಷಯ. ಎಲ್ಲಾ ಕಲೆಯ ಮೂಲ ಉದ್ದೇಶ ಆ ಕಲೆಯ ರಸೋತ್ಪಾದನೆ. ಕಲೆಯ ಅಭಿರುಚಿ ಎಲ್ಲರಲ್ಲೂ ಇರಬೇಕು. ಕಲೆ ಹೃದಯ ಸಂಸ್ಕಾರವನ್ನು ನೀಡುತ್ತದೆ, ಸಮಾಜವನ್ನು ಸುಸಂಸ್ಕೃತವನ್ನಾಗಿಸಲು ಮತ್ತು ಜ್ಞಾನ ಸಂಪಾದನೆಗೆ ಸಹಕಾರಿಯಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಬಿಜೂರು ವಿಶ್ವೇಶ್ವರ ಅಡಿಗ ಹೇಳಿದರು. ಲಾವಣ್ಯ ಬೈಂದೂರು ಇದರ ಅಂಗ ಸಂಸ್ಥೆಯಾದ ರಿದಂ ನೃತ್ಯ ಮತ್ತು ಕಲಾ ಶಾಲೆಯ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಹಾಗೂ ಲಾವಣ್ಯ ಹಿರಿಯ ನಿರ್ದೇಶಕ ಬಿ. ಗಣೇಶ್ ಕಾರಂತ್ ಅವರು ಅಧ್ಯಕ್ಷತೆ ವಹಿಸಿದ್ದರು. ವೈಯಕ್ತಿಕ ವಿಚಾರಗಳನ್ನು ಮೀರಿದ ಸಂಬಂಧವೇರ್ಪಡಿಸಿ ನಮ್ಮನ್ನು ಒಂದುಗೂಡಿಸುವ ಶಕ್ತಿ ಕಲೆ ಮತ್ತು ಸಾಹಿತ್ಯಕ್ಕಿದೆ. ತಾಯಿಯಂತಹ ಕರುಣೆ ಮತ್ತು ಮಗುವಿನಂತಹ ನಿಷ್ಕಪಟ ದೃಷ್ಠಿಯಿಂದ ನೋಡಿದರೆ ನಮಗೆ ಜಗತ್ತು ಸುಂದರ ಹಾಗೂ ಸನಿಹವಾಗುತ್ತದೆ. ಜಾತಿ, ಮತ, ಅಂತಸ್ತುಗಳ ನರಕದಿಂದ ಮೇಲೆತ್ತುವ ಸಾಮರ್ಥ್ಯ ಕೂಡ ಕಲೆಗೆ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಳ್ವಾಸ್ ಶಿಕ್ಷಣ ಪತಿಷ್ಠಾನದವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳದ14ನೇ ಆವೃತ್ತಿ, ಜೂನ್ 7 ಹಾಗೂ 8ರಂದು ಮೂಡುಬಿದಿರೆಯ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ. 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಲಿರುವ ಉದ್ಯೋಗಮೇಳದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ನೊಂದಣಿ ಇರಲಿದ್ದು, ವಿವಿಧ ಉದ್ಯೋಗ ವಲಯದ ಸಂದರ್ಶನವನ್ನು ಎದುರಿಸಬಹುದಾಗಿದೆ ಎಂದು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಕುಂದಾಪುರದ ಪ್ರೆಸ್ ಕ್ಲಬ್’ನಲ್ಲಿ ಶುಕ್ರವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶೈಕ್ಷಣಿಕ ಕ್ಷೇತ್ರದ ಉತ್ಕೃಷ್ಟ ಉದಾಹರಣೆಯಾಗಿ, ಇಡೀ ದೇಶದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಾಧನೆಗಳಿಂದ ಹೆಗ್ಗುರುತಾಗಿ ಬೆಳೆಯುತ್ತಿದೆ. `ಆಳ್ವಾಸ್ ಪ್ರಗತಿ’ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2007ರಿಂದ ನಡೆಸಿಕೊಂಡು ಬರುತ್ತಿರುವ ಬೃಹತ್ ಉದ್ಯೋಗ ಮೇಳವಾಗಿದ್ದು, ಸಂಸ್ಥೆಯ ಸಿಎಸ್‌ಆರ್ ಚಟುವಟಿಕೆಯ ಭಾಗವಾಗಿ ಗ್ರಾಮೀಣ ಭಾಗದ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ಉಚಿತವಾಗಿ ವಿಶೇಷ ಔದ್ಯೋಗಿಕ ನೆರವು ನೀಡುವ ಉದ್ದೇಶವನ್ನು ವ್ಯವಸ್ಥಿತವಾಗಿ ಪೂರೈಸುತ್ತಾ ಬಂದಿದೆ. ಸಂಸ್ಥೆಯು ಈವರೆಗೆ 20 ಬೃಹತ್…
