Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಡಳಿತ ಕಚೇರಿಗೆ ಬಂದ ಅನಾರೋಗ್ಯ ಪೀಡಿತ ಹಾಗೂ ವಿದ್ಯಾರ್ಥಿ  ಪ್ರೋತ್ಸಾಹ ಧನ ಅರ್ಜಿಗಳಿಗೆ  ಕೊರ್ಗಿ ವಿಠಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಕೊರ್ಗಿ ವಿಠಲ್ ಶೆಟ್ಟಿ ಅವರು ಸ್ಪಂದಿಸಿ ವೈಯಕ್ತಿಕವಾಗಿ ಸುಮಾರು 50 ಸಾವಿರ ಸಹಾಯಧನವನ್ನು ವಿವಿಧ ಫಲಾನುಭವಿಗಳಿಗೆ ಕುಂಭಾಶಿಯಲ್ಲಿ ಆನೆಗುಡ್ಡೆ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ಸೂರ್ಯನಾರಾಯಣ ಉಪಾಧ್ಯಾಯರ  ಮೂಲಕ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ಲೋಕೇಶ್ ಅಡಿಗ, ಕೊರ್ಗಿ ವಿಠಲ್ ಶೆಟ್ಟಿ ಅವರ ಧರ್ಮಪತ್ನಿ ಭವಾನಿ ವಿ ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ, ಬಸ್ರೂರು ಹಾಗೂ ವಿಠಲ್ ಶೆಟ್ಟಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಬೈಂದೂರಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ಕುಂದಾಪ್ರ ಕನ್ನಡ ಭಾಷೆಯ ನಾಟಕ ʼಮಕ್ಕಳ ರಾಮಾಯಣʼ ಬೆಂಗಳೂರಿನಲ್ಲಿ ಪ್ರಥಮ ಭಾರಿಗೆ ಜೂನ್ 9 ಹಾಗೂ 10ರಂದು ಪ್ರದರ್ಶನಗೊಳ್ಳಲಿದೆ. ಬಿ.ಆರ್. ವೆಂಕಟರಮಣ ಐತಾಳ್ ಅವರ ರಚಿಸಿರುವ ನಾಟಕವನ್ನು, ಗಣೇಶ್ ಮಂದರ್ತಿ ಕುಂದಾಪುರ ಕನ್ನಡಕ್ಕೆ ಅನುವಾದಿಸಿ ನಿರ್ದೇಶನ ಮಾಡಿದ್ದಾರೆ. ಸುರಭಿ ಬೈಂದೂರು ಸಂಸ್ಥೆಯ ಬಾಲ ಕಲಾವಿದರು ನಾಟಕದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಪ್ರದರ್ಶನಗಳನ್ನು ಕಂಡಿರುವ ಕುಂದಾಪುರ ಕನ್ನಡದ ಈ ನಾಟಕ ರಂಗಾಸಕ್ತರ ಮೆಚ್ಚುಗೆಗೂ ಪಾತ್ರವಾಗಿದೆ. ರಂಗಾಸ್ಥೆ ರಿ. ಬೆಂಗಳೂರು ನೇತೃತ್ವದಲ್ಲಿ ನಾಗರಬಾವಿಯ ಕಲಾಗ್ರಾಮದಲ್ಲಿ ಜೂನ್ 9 ಹಾಗೂ 10ರ ಸಂಜೆ 7:30ಕ್ಕೆ ನಾಟಕ ಪ್ರದರ್ಶನವಿರಲಿದೆ. ಟಿಕೆಟ್ ದರ ರೂ.200 ನಿಗದಿಪಡಿಲಾಗಿದ್ದು, ಬುಕ್ ಮೈ ಶೋ ಮೂಲಕ ಆನ್ಲೈನ್ನಲ್ಲಿ (click here to book show) ಅಥವಾ ಸಂಘಟಕರನ್ನು ಸಂಪರ್ಕಿಸಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8310775855…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮೇ23: ತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿಗಳು ನಷ್ಟವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿಯಲ್ಲಿ ಮಳೆಯಾಗುತ್ತಿದ್ದು, ನಿನ್ನೆ ಹಾಗೂ ಇಂದು ಬೈಂದೂರು ಭಾಗದಲ್ಲಿ 7 ಮೀ.ಮೀಗೂ ಹೆಚ್ಚಿನ ಮಳೆ ಸಂಜೆ ವೇಳೆಗೆ ಸುರಿದಿದೆ. ಭಾರಿ ಮಳೆಗೆ ಕಳವಾಡಿ ಶ್ರೀ ಮಾರಿಕಾಂಬಾ ದೇಗುಲದ ಎದುರು ಹೊಸತಾಗಿ ನಿರ್ಮಿಸಲಾಗಿದ್ದ ರೂ.15ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಊಟದ ಹಾಲ್ ಮೇಲ್ಚಾವಣಿ ಕುಸಿದು ಬಿದ್ದಿದೆ. ಬೈಂದೂರು ಪೊಲೀಸ್ ಠಾಣೆ ಆವರಣದಲ್ಲಿ ಹಳೆ ವೃತ್ತಿನಿರೀಕ್ಷಕರ ಕಛೇರಿ ಮೇಲೆ ಮರ ಉರುಳಿ ಬಿದ್ದಿದೆ. ಬೈಂದೂರು ರಥಬೀದಿಯ ನವೀನ್ ವೈನ್ಸ್ ಹಿಂಭಾಗದ ಮನೆಯ ಶೌಚಗೃಹದ ಮೇಲ್ಛಾವಣಿ ಹಾರಿ ಹೋಗಿದೆ. ಮನೆ ಮಾಡು ಕುಸಿತ, ಮರ ಉರುಳಿಬಿದ್ದಿರುವುದು, ರಸ್ತೆ ಮೇಲೆ ವಿದ್ಯುತ್ ಕಂಬ ಉರುಳಿರುವುದು ಸೇರಿದಂತೆ ವಿವಿಧ 16ರಕ್ಕೂ ಹೆಚ್ಚಿನ ಘಟನೆ ನಡೆದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಗಾಳಿ ಮಳೆಗೆ ಬೈಂದೂರಿನಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು,…

Read More

ಕುಂದಾಪ್ರ ಡಾಟ್‌ ಕಾಂ ಮಾಹಿತಿಈಗ ಡ್ರೈವಿಂಗ್ ಲೈಸೆನ್ಸ್ (DL) ಪಡೆಯುವುದು ಮೊದಲಿಗಿಂತ ಹೆಚ್ಚು ಸುಲಭವಾಗಲಿದೆ.ಹೊಸ ನಿಯಮದ ಅನುಷ್ಠಾನದ ನಂತರ,ಡಿಎಲ್ ಮಾಡಿಸುವ ದೀರ್ಘ ಮತ್ತು ಸಂಕೀರ್ಣ ಪ್ರಕ್ರಿಯೆಯಿಂದ ಮುಕ್ತಿ ದೊರೆಯಲಿದೆ. ಪ್ರಸ್ತುತ,ಡಿಎಲ್ ಮಾಡಲು, ಕಚೇರಿಗಳಿಗೆ ಭೇಟಿ ನೀಡಿ ಸಾಕಷ್ಟು ಫಾರ್ಮ್‌ಗಳನ್ನು ಭರ್ತಿ ಮಾಡಬೇಕಾಗುತ್ತದೆ.ಈ ಪ್ರಕ್ರಿಯೆಯಲ್ಲಿ ಹಲವಾರು ಬಾರಿ ತಪ್ಪುಗಳಾಗುವುದೂ ಇದೆ. ಡಿಎಲ್ ಪ್ರಕ್ರಿಯೆ ಹೆಚ್ಚು ಸುಲಭವಾಗಲಿದೆ :ಡಿಎಲ್ ಮಾಡಿಸುವಾಗ ಎದುರಾಗುವ ಸಮಸ್ಯೆಗಳನ್ನು ಹೋಗಲಾಡಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಚಾಲನಾ ಪರವಾನಗಿಗೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಬದಲಾವಣೆಗಳನ್ನು ಪ್ರಕಟಿಸಿದೆ.ಹೊಸ ನಿಯಮಗಳ ಅನುಷ್ಠಾನದ ನಂತರ,ಡ್ರೈವಿಂಗ್ ಲೈಸೆನ್ಸ್ ಪಡೆಯುವ ಪ್ರಕ್ರಿಯೆಯು ಹೆಚ್ಚು ಸುಲಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.ಜೂನ್ 1 ರಿಂದ ಡಿಎಲ್ ನಿಯಮಗಳಲ್ಲಿ ಏನು ಬದಲಾವಣೆ ಮತ್ತು ಇಲಾಖೆಯಿಂದ ಯಾವ ಬದಲಾವಣೆಗಳನ್ನು ಮಾಡಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ. ಖಾಸಗಿ ಡ್ರೈವಿಂಗ್ ಸ್ಕೂಲ್‌ʼನಲ್ಲಿಯೂ ಚಾಲನಾ ಪರೀಕ್ಷೆ ನೀಡಬಹುದು:ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಚಾಲನಾ ಪರವಾನಗಿಗೆ ಸಂಬಂಧಿಸಿದ ನಿಯಮಗಳನ್ನು ಬದಲಾಯಿಸಿದೆ. ಜೂನ್ 1 ರಿಂದ ಜಾರಿಗೆ ಬರಲಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಜ್ಯೂನಿಯರ್ ಕಾಲೇಜಿನ ಎಸ್.ಎಸ್.ಎಲ್.ಸಿ ಉತ್ತಿರ್ಣ ವಿದ್ಯಾರ್ಥಿ ನಿತಿನ್ ಆಚಾರ್ ಆತ್ಮಹತ್ಯೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಶಾಲೆಯ ವಿರುದ್ದ ಪೋಷಕರು ತಿರುಗಿ ಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಕೆ ನಡೆಸಿ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಮಂಗಳವಾರ ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ ಬೈಂದೂರು ಆರಕ್ಷಕ ಠಾಣೆಗೆ ಮುತ್ತಿಗೆ ಹಾಕಿದ ಕುಟುಂಬಸ್ಥರು ನ್ಯಾಯ ದೊರಕುವ ತನಕವೂ ಶವ ಸಂಸ್ಕಾರ ಮಾಡುವುದಿಲ್ಲವೆಂದು ಎಂದು ಪಟ್ಟು ಹಿಡಿದ ಘಟನೆ ನಡೆಯಿತು. ಸ್ಥಳಕ್ಕಾಗಮಿಸಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಈ ವೇಳೆ ಪ್ರತಿಕ್ರಿಯಿಸಿ, ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ವಿದ್ಯಾರ್ಥಿಯಾಗಿರುವ ಕಾರಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ನೀಡಲಾಗುವುದು. ತಪ್ಪಿದಸ್ಥರ ವಿರುದ್ದ ಸ್ಪಷ್ಟತೆ ದೊರೆತಲ್ಲಿ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದರು. ಪೊಲೀಸ್ ಠಾಣೆಯ ಬಳಿ ನೆರೆದಿದ್ದ ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳು ಕುಟುಂಬಿಕರಿಗೆ ಮನವರಿಕೆ ಮಾಡಿದ ಬಳಿಕ ವಿದ್ಯಾರ್ಥಿಯ ಶವವನ್ನು ಮರಣೋತ್ತರ ಪರೀಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಲೆಯಲ್ಲಿ ವರ್ಗಾವಣೆ ಪ್ರಮಾಣಪತ್ರ ನೀಡಲು ವಿಳಂಬ ಮಾಡಿದರೆಂಬ ಕಾರಣಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಶಿರೂರು ಮೇಲ್ಪಂಕ್ತಿಯ ನಿತಿನ್ ಆಚಾರಿ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ಎಸ್.ಎಸ್.ಎಲ್.ಸಿ ಪೂರೈಸಿದ್ದು, ಸೋಮವಾರ ಕಾಲೇಜಿಗೆ ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ತೆರಳಿದ್ದ. ಎಸ್.ಎಸ್.ಎಲ್.ಸಿ ತರಗತಿ ಮುಗಿಯುವ ಕೊನೆಯ ದಿನ ಕೆಲವು ವಿದ್ಯಾರ್ಥಿಗಳು ಶಾಲೆಯ ಹೊರಗಿನ ಸಿಸಿ ಕ್ಯಾಮರಾ ಹಾಗೂ ಗೇಟ್ ಬೀಗವನ್ನು ಮುರಿದಿರುವ ಬಗ್ಗೆ ಉಪಪ್ರಾಂಶುಪಾಲರು ನಿತಿನ್ ಬಳಿ ವಿಚಾರಿಸಿದ್ದು, ಪಾಲಕರನ್ನು ಕರೆದುಕೊಂಡು ಬರುವಂತೆ ತಿಳಿಸಿದ್ದಾರೆ. ಅವರ ಮಾತಿಗೆ ಒಪ್ಪಿ ಶಾಲೆಯಿಂದ ಮನೆಗೆ ತೆರಳಿದ್ದ ವಿದ್ಯಾರ್ಥಿ, ಈ ವಿಚಾರ ಮನೆಯವರಿಗೆ ತಿಳಿದರೆ ತೊಂದರೆಯಾಗಬಹುದು ಎಂದು ಹೆದರಿ ಮಧ್ಯಾಹ್ನದ ಬಳಿಕ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ಘಟನೆಯ ಮಾಹಿತಿ ಪಡೆದು ತನಿಕೆ ಕೈಗೆತ್ತಿಕೊಂಡಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಿಶ್ವ ರಾಮಕ್ಷತ್ರಿಯ ಮಹಾಸಂಘದ ನೇತೃತ್ವದಲ್ಲಿ ರಾಮಕ್ಷತ್ರಿಯ ಸಮಾಜದ ಶ್ರೇಯೋಭಿವೃದ್ಧಿಗಾಗಿ ಮೇ.26ರಂದು ಬಾಳೆಕುದ್ರು ಶ್ರೀಮಠದಲ್ಲಿ ಮಹಾಮೃತ್ಯುಂಜಯ ಹೋಮ, ಚಂಡಿಕಾ ಹೋಮ, 108 ಕಾಯಿ ಗಣಹೋಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ಗಂಟೆ 7-00ಕ್ಕೆ ಪ್ರಾರ್ಥನೆ, 11.30ಕ್ಕೆ ಪೂರ್ಣಾಹುತಿ, ಬಳಿಕ ಮುಕ್ಕಾ ಶ್ರೀನಿವಾಸ ಯುನಿವರ್ಸಿಟಿಯ ಸಂಶೋಧನಾ ಮಾರ್ಗದರ್ಶಕ ಡಾ. ಸೋಂದಾ ಭಾಸ್ಕರ ಭಟ್, ಕಟೀಲು ಅವರಿಂದ ಪ್ರವಚನ ಹಾಗೂ ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಅವರಿಂದ ಆಶೀರ್ವಚನ ನಡೆಯಲಿದೆ.ಮಧ್ಯಾಹ್ನ ಅನ್ನಪ್ರಸಾದ ವಿತರಣೆ ಇರಲಿದೆ. ಈ ಎಲ್ಲಾ ಕಾರ್ಯಕ್ರಮಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷ ಎಚ್, ಆರ್. ಶಶಿಧರ ನಾಯ್ಕ್, ಕಾರ್ಯಧ್ಯಕ್ಷ ಕೆ. ನಾಗರಾಜ ಅವರು ತಿಳಿಸಿದ್ದಾರೆ.

Read More

 ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ, ಭಾರತ ಚುನಾವಣಾ ಆಯೋಗವು ಮತದಾನ ಕೇಂದ್ರಗಳ ಪಟ್ಟಿಯನ್ನು ಅನುಮೋದಿಸಿದ್ದು, ಉಡುಪಿ ಜಿಲ್ಲೆಗೆ ಸಂಬಂಧಿಸಿದ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಗಳ ವಿವರವು ಈ ಕೆಳಗಿನಂತಿದೆ. ಕುಂದಾಪುರ ತಾಲೂಕಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರ ಸಂಖ್ಯೆ 68 ರ ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು (ಪೂರ್ವ ಭಾಗ), 69 ರ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು (ಉತ್ತರ ಭಾಗ) ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 68 ರ ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ( ಪಶ್ಚಿಮ ಭಾಗ) ಮತ್ತು 69 ರ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜು (ದಕ್ಷಿಣ ಭಾಗ) ಇಲ್ಲಿ ಮತದಾನ ನಡೆಯಲಿದೆ.  ಬೈಂದೂರು ತಾಲೂಕಿಗೆ ಸಂಬಂಧಿಸಿದಂತೆ ನೈರುತ್ಯ ಪದವೀಧರರರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 67 ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳು ಶಾಲಾ ಪಠ್ಯದ ಜೊತೆ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಾಗ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಚಿತ್ರಕಲಾ ಶಿಕ್ಷಕಿ ಐಶ್ವರ್ಯ ಕೋಟ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮೂರು ದಿನಗಳ ಆರ್ಟ್ ಕ್ಯಾಂಪ್ ಆರಾಧನಾ-2024 (ಬೆರಳುಗಳಲ್ಲಿ ಭಾವಗೀತೆ) ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಿಭಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಶಿಬಿರಾರ್ಥಿಗಳಾದ ಶರಧಿ ಎಸ್, ಮಾನಸ ಜಿ, ಮೇದಿನಿ ಅವರು ಆರ್ಟ್ ಕ್ಯಾಂಪ್ನ ಅನಿಸಿಕೆಯನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಬಣ್ಣಗಳ ಮಿಶ್ರಣದಿಂದ ಹೊಸ ಬಣ್ಣವಾಗುವಂತೆ ನೋವು ನಲಿವುಗಳನ್ನು ಸರಿಸಮವಾಗಿ ಸ್ವೀಕರಿಸಿ ನಮ್ಮ ಗುರಿಯತ್ತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪುತ್ತೂರು ವಿವೇಕಾನಂದ ಸ್ವಾಯತ್ತ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮಾಧ್ಯಮ ಹಬ್ಬ ವಿವೇಕ ಚೇತನದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಒಟ್ಟು 12 ಸ್ಪರ್ಧೆಗಳಲ್ಲಿ ಆಳ್ವಾಸ್ನ ವಿದ್ಯಾರ್ಥಿಗಳು 6 ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ಒಂದು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದರು. ಲೋಗೋ ವಿನ್ಯಾಸದಲ್ಲಿ ಸಚಿನ್ ಆಚಾರ್ಯ ಪ್ರಥಮ, ರೇಡಿಯೋ ನಿರೂಪಣೆ ಪ್ರಖ್ಯಾತ ಬೆಳುವಾಯಿ ಪ್ರಥಮ, ಸರ್ಪ್ರೈಸ್ ಇವೆಂಟ್ ರಂಜಿತ್ ಪ್ರಥಮ, ಬೀದಿ ನಾಟಕ ಪ್ರಥಮ, ರಸಪ್ರಶ್ನೆ ಜಡೇಶ್ ಹಾಗೂ ತಬ್ರೀಸ್ ಪ್ರಥಮ, ಪಿ೨ಸಿ ಚಿದಾನಂದ ರುದ್ರಪುರಮಠ ಪ್ರಥಮ, ರೀಲ್ಸ್ ಮೇಕಿಂಗ್ ವಿನೀತ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.

Read More