ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಹಳೆ ಗೀತಾಂಜಲಿ ಟಾಕೀಸ್ ಸಮೀಪದ ಅಪಾರ್ಟ್ಮೆಂಟಿನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಮುಖ್ಯ ರಸ್ತೆಯ ಗೀತಾಂಜಲಿ ಟಾಕೀಸ್ ಸಮೀಪ ನಡೆದಿದೆ. ಮೃತರನ್ನು ಲಕ್ಷ್ಮೀ ಪ್ರತಾಪ್ ಅವರ ಪತ್ನಿ ಲಕ್ಷ್ಮೀ ಪ್ರತಾಪ್ ನಾಯಕ್( 41) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ 7ಗಂಟೆಯ ಹೊತ್ತಿಗೆ ಪ್ಲಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನ ಕಾಯಿ ತರಲು ಹೋಗಿದ್ದ ಲಕ್ಷ್ಮಿ ಪ್ರತಾಪ್ ಆಕಸ್ಮಿಕವಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ಎರಡನೇ ಫ್ಲೋರಿಗೆ ಅವರು ಬಿದ್ದಿದ್ದಾರೆ ಇದರಿಂದ ತೀವ್ರ ತಲೆಗೆ ಪೆಟ್ಟಾಗಿದೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪ್ರಕರಣ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರತಿಷ್ಠಿತ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಎಸ್. ಹರಿಚಾತ್ರ ಹಳ್ಳಿಹೊಳೆ ಹಾಗೂ ಕಾರ್ಯದರ್ಶಿಯಾಗಿ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭಾ ಚುನಾವಣೆಗೆ ಎದುರಿಸಲು ಪಕ್ಷ ತಯಾರಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ಈ ಭಾರಿ ಹೆಚ್ಚಿನ ಸ್ಥಾನಪಡೆಯುವ ವಿಶ್ವಾಸವಿದೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪನವರು ಪಕ್ಷೇತರರಾಗಿ ಕಣಕ್ಕಿಳಿಯುವ ಬಗ್ಗೆ, ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಸದ್ಯ ನಾನು ದೇವರ ದರ್ಶನಕ್ಕಾಗಿ ಆಗಮಿಸಿದ್ದು, ರಾಜಕೀಯದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು. ದೇವಳದ ಅರ್ಚಕರಾದ ಕೆ.ಎನ್. ನರಸಿಂಹ ಅಡಿಗ ಹಾಗೂ ಕೆ.ವಿ.ಶ್ರೀಧರ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಯು.ಬಿ. ಶೆಟ್ಟಿ, ಅಶೋಕಕುಮಾರ ಕೊಡವೂರು, ಎಸ್. ರಾಜು ಪೂಜಾರಿ, ಮಿಥುನ್ ರೈ, ದಿನೇಶ ಹೆಗ್ಡೆ ಮೊಳಹಳ್ಳಿ, ಪ್ರಸಾದ ಕಾಂಚನ್, ಸುರೇಂದ್ರ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಬಳಿಕ ಧ್ವಜಾರೋಹಣ ನೆರವೇರಿಸಲಾಯಿತು. ತಂತ್ರಿ ನಿತ್ಯಾನಂದ ಅಡಿಗ ಅವರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಕಾರ್ಯನಿರ್ವಾಹಣಧಿಕಾರಿ ಪ್ರಶಾಂತ್ ಶೆಟ್ಟಿ, ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಂಡಬಳ್ಳಿ ಜಯರಾಮ್ ಶೆಟ್ಟಿ, ರತ್ನ ರಮೇಶ್ ಕುಂದರ್, ತಂತ್ರಿಗಳದ ನಿತ್ಯಾನಂದ ಅಡಿಗ, ಗೋವಿಂದ ಅಡಿಗ, ಸುಬ್ರಮಣ್ಯ ಅಡಿಗ ಹಾಗೂ ಅರ್ಚಕರು ಮತ್ತು ದೇವಸ್ಥಾನ ಸಿಬ್ಬಂದಿಗಳು, ಭಕ್ತರು ಉಪಸ್ಥಿತರಿದ್ದರು. ಸಂಜೆ ಮಹ್ಮಾಹಾ ರಥೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಮಾ.25ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಏ.1ರ ಸಂಜೆ 5 ಗಂಟೆಗೆ ಮನ್ಮಹಾ ರಥೋತ್ಸವ ಜರುಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಎಂಬುದು ವಿವಿಧ ಕ್ಷೇತ್ರಗಳ ಪರಿಣತರು, ನಾಯಕರ ದಂಡು. ಇಂತಹ ಸಂಸ್ಥೆಯ ಅಧ್ಯಕ್ಷ – ಕಾರ್ಯದರ್ಶಿ ಆಗುವುದೆಂದರೆ ನಮ್ಮೊಳಗಿನ ನಾಯಕತ್ವವನ್ನು ಇನ್ನೊಂದು ಮಟ್ಟಕ್ಕೆ ಕೊಂಡೊಯ್ಯಲು ಇರುವ ಅವಕಾಶ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಅಭಿನಂದನ್ ಶೆಟ್ಟಿ ಹೇಳಿದರು. ಅವರು ಶನಿವಾರ ಕುಂದಾಪುರ ರೋಟರಿಯ ಕಲೈ ರಾಮಣ್ಣ ರೈ ಮಿನಿ ಹಾಲ್ನಲ್ಲಿ ಜರುಗಿದ ರೋಟರಿ ಜಿಲ್ಲೆ 3182 ಝೋನ್ 1ರ 2024-25ನೇ ಸಾಲಿನ ನಿಯೋಜಿತ ಅಧ್ಯಕ್ಷ ಕಾರ್ಯದರ್ಶಿಗಳಿಗೆ ನಡೆದ ಪೂರ್ವಭಾವಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೋಟರಿಯಲ್ಲಿ ಪದವಿ ಪಡೆಯುವುದೆಂದರೆ ಜನರ ನಡುವೆ ಕೆಲಸ ಮಾಡಲು ಹಾಗೂ ಅವರ ನಿರೀಕ್ಷೆ ತಲುಪಲು ಇರುವ ಅವಕಾಶ. ಅಲ್ಲದೇ ಹೊಸ ಹೊಸ ಅನುಭವಗಳನ್ನು ಪಡೆಯಲು ಇದು ಸಹಕಾರಿ ಎಂದರು. ಕಾರ್ಯಕ್ರಮದಲ್ಲಿ ಸಹಾಯಕ ಗವರ್ನರ್ ಸಂದೀಪ್ ಕುಮಾರ್ ಶೆಟ್ಟಿ, ನಿಯೋಜಿತ ಸಹಾಯಕ ಗವರ್ನರ್ ಡಾ. ಬಿ. ರಾಜೇಂದ್ರ ಶೆಟ್ಟಿ, ಮಾಜಿ ವಲಯ ಸೇನಾನಿಗಳಾದ ಜಯಪ್ರಕಾಶ್ ಶೆಟ್ಟಿ, ಆವರ್ಸೆ ಸುಧಾಕರ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಲೋಕಸಭಾ ಚುನಾವಣೆಯನ್ನು ನ್ಯಾಯ ಸಮತ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ಅವರು ತಿಳಿಸಿದರು. ಅವರು ಉಡುಪಿಯ ರಜತಾದ್ರಿಯ ಕೆಸ್ವನ್ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಉಡುಪಿ ಜಿಲ್ಲಾ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ಧತೆ ಕುರಿತ ಅಂತರ್ ಜಿಲ್ಲಾ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡುತ್ತಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಗರ ವ್ಯಾಪ್ತಿಯಲ್ಲಿ 26 ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 220 ಓಟ್ಟು246 ಮತಗಟ್ಟೆಗಳಿದ್ದು ,11 6310 ಪುರುಷರು,1 21413 ಮಹಿಳೆಯರು 3 ತೃತೀಯ ಲಿಂಗದವರು ಸೇರಿದಂತೆ ಒಟ್ಟು 2,37,726 ಮತದಾರರು ಇದ್ದಾರೆ ಎಂದರು. ಜಿಲ್ಲೆಯಲ್ಲಿ 246 ಮತದಾನ ಕೇಂದ್ರಗಳಿದ್ದು ಅವುಗಳಲ್ಲಿ 42 ಸೂಕ್ಷ್ಮ 12 ಅತಿಸೂಕ್ಷ್ಮ 190 ಸಾಮಾನ್ಯ ಮತದಾನ ಕೇಂದ್ರಗಳಿವೆ ಎಂದ ಅವರು ಎಂ.ಸಿ.ಸಿ ಉಲ್ಲಂಘನೆಯ ದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಮರ್ಪಕ ದಾಖಲೆಗಳಿಲ್ಲದೆ ರೂ.50,000/- ಕ್ಕೂ ಮೀರಿದ ನಗದು ಹಣವನ್ನು ಕೊಂಡೊಯ್ಯುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ತಿಳಿಸಿದ್ದಾರೆ. ಒಂದು ವೇಳೆ ದಾಖಲೆ ರಹಿತ ನಗದು ದೊರೆತಲ್ಲಿ ಸದ್ರಿ ನಗದನ್ನು ಮುಟ್ಟುಗೋಲು ಹಾಕಲಾಗುವುದು, ಹಾಗೂ ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಆದ್ದರಿಂದ ಸಾಧ್ಯವಾದಷ್ಟು ಮಟ್ಟಿಗೆ ನಗದು ಹಣ ಸಾಗಾಣಿಕೆ ಬದಲಿಗೆ ಖಾತೆ ವರ್ಗಾವಣೆ, UPI ಹಾಗೂ ಇತರೆ ಮಾಧ್ಯಮದ ಮೂಲಕ ಹಣವನ್ನು ವರ್ಗಾಯಿಸಲು ಕ್ರಮವಹಿಸುವುದು. ಸಂಶಯಾಸ್ಪದ ವ್ಯವಹಾರಗಳ ಮೇಲೆ ನಿಗಾ ಇಡಲು ಬ್ಯಾಂಕ್ ಮತ್ತು ಆದಾಯ ತೆರಿಗೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಚುನಾವಣಾ ಕೋಶ ಇರುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯ ಪೂರ್ಣ ಪ್ರಮಾಣದ ಅನುಷ್ಟಾನಕ್ಕಾಗಿ ಒಟ್ಟು 15 ಚೆಕ್ಪೋಸ್ಟ್ಗಳನ್ನು ಗುರುತಿಸಿದ್ದು, ಸದರಿ ಚೆಕ್ಪೋಸ್ಟ್ಗಳಲ್ಲಿ 24×7 ಮಾದರಿಯಲ್ಲಿ ಕಾರ್ಯ ನಿರ್ವಹಿಸಲು ಒಟ್ಟು 52 SST ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ. ಸದ್ರಿ ಚೆಕ್ಪೋಸ್ಟ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ…
ಕೇಂದ್ರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ: ಸಂಸದ ಬಿ.ವೈ. ರಾಘವೇಂದ್ರ
ಚುನಾವಣಾ ಅಖಾಡದಲ್ಲಿ ನಟ ಶಿವರಾಜ್ಕುಮಾರ್ | ಪತ್ನಿ ಗೀತಾ ಪರ ಬೈಂದೂರಿನಲ್ಲಿ ಪ್ರಚಾರ ಶುರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಯಾವತ್ತೂ ಜಾತಿ ಧರ್ಮಗಳ ಆಧಾರದಲ್ಲಿ ಚುನಾವಣೆ ಎದುರಿಸಿಲ್ಲ. ಬದಲಾಗಿ ಜನರ ಭಾವನೆಗಳನ್ನು ಅರಿತುಕೊಂಡು ಅವರ ಹೊಟ್ಟೆ ಹಸಿವನ್ನು ನೀಗಿಸುವಲ್ಲಿ ಪ್ರಯತ್ನಿಸುತ್ತದೆ. ಹಾಗಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಶೇ.91ರಷ್ಟು ಜನರನ್ನು ಗ್ಯಾರೆಂಟಿಗಳ ಮೂಲಕ ತಲುಪಿರುವ ಹೆಮ್ಮೆ ಇದೆ. ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದ ಕಾಂಗ್ರೆಸ್ ಸರಕಾರದ ಸಾಧನೆಗಳ ಮೂಲಕವೇ ಮತ ಯಾಚಿಸುತ್ತೇವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕುಂದಾಪುರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿ, ರಾಜಕಾರಣಿಗಳು ಜಾತಿ ಧರ್ಮಗಳ ಆಧಾರದಲ್ಲಿ ಹಾಗೂ ಭಾವನಾತ್ಮಕವಾಗಿ ಚುನಾವಣೆ ಎದುರಿಸುತ್ತಾರೆ. ನಾವು ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರೆಂಟಿಗಳನ್ನೂ ಪೂರೈಸುವ ಮೂಲಕ ರಾಜಕಾರಣದಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಂಡಿದೆ ಎಂದರು. ಶಿವಮೊಗ್ಗ ಸಂಸದರ ಸಾಧನೆ ಶೂನ್ಯ:ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಅವರ ಸಾಧನೆಗಳು ಬ್ಯಾನರುಗಳಿಗಷ್ಟೇ ಸೀಮಿತವಾಗಿದೆ. ಅದನ್ನು ಮೀರಿ ಏನೂ ಸಾಧನೆ ಮಾಡಿಲ್ಲ.…
