ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮದ ಖಾರ್ವಿಕೇರಿಯಲ್ಲಿ ಸುಸಜ್ಜಿತವಾದ ನಿರ್ಮಾಣಗೊಂಡಿರುವ ಶ್ರೀ ಮಹಾಂಕಾಳಿ ಹಿಂದು ರುದ್ರಭೂಮಿ ಲೋಕಾರ್ಪಣೆಗೆಗೊಂಡಿತು. ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಿ.ಲಕ್ಷ್ಮೀನಾರಾಯಣ ಭಟ್ ಅವರು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿಸಿ, ರುದ್ರಭೂಮಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ಶಿವನ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಶ್ರೀ ಮಹಾಂಕಾಳಿ ಹಿಂದು ರುದ್ರಭೂಮಿಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಶ್ರೀ ಮಹಾಂಕಾಳಿ ಹಿಂದು ರುದ್ರಭೂಮಿಯ ಪ್ರಮುಖ ರವಿಶಂಕರ ಖಾರ್ವಿ, ಗಂಗೊಳ್ಳಿಯ ಖಾರ್ವಿಕೇರಿಯಲ್ಲಿ ಹಿಂದು ರುದ್ರ ಭೂಮಿ ನಿರ್ಮಾಣವಾಗಬೇಕೆಂದು ಈ ಭಾಗದ ಜನರ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಸರಕಾರ ಖಾರ್ವಿಕೇರಿಯಲ್ಲಿ ಸುಮಾರು ೨೦ ಸೆಂಟ್ಸ್ ಜಾಗವನ್ನು ಮಂಜೂರು ಮಾಡಿದ್ದಲ್ಲದೆ ಸುಮಾರು ೧೫ ಲಕ್ಷ ರೂ. ಅನುದಾನವನ್ನು ನೀಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಶವ ದಹನಕ್ಕೆ ಸಿಲಿಕಾನ್ ಛೇಂಬರ್ನ್ನು ಕೊಡುಗೆಯಾಗಿ ನೀಡಿದ್ದು, ಒಟ್ಟು ಸುಮಾರು ೨೦ ಲಕ್ಷ ರೂ. ವೆಚ್ಚದಲ್ಲಿ ಹಿಂದು ರುದ್ರಭೂಮಿಯನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ ಎಂದರು. ರುದ್ರಭೂಮಿಯಲ್ಲಿ ವಿದ್ಯುತ್ ಸಂಪರ್ಕದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಇಬ್ಬರು ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಜಯಪ್ರಕಾಶ್ ಹೆಗ್ಡೆ ಅವರನ್ನು ವಿಧಾನ ಪರಿಷತ್ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಉಚ್ಚಟಿಸಿತ್ತು. ಬಳಿಕ ಅವರು ಬಿಜೆಪಿ ಸೇರಿದ್ದರು. ಬಳಿಕ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ, ಇಂಧನ ಸಚಿವ ಕೆ ಜೆ ಜಾರ್ಜ್ ಸಮ್ಮುಖದಲ್ಲಿ ಈ ಮೂವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದುಡಿಮೆಯು ಮನುಷ್ಯನನ್ನು ನಿಸ್ವಾರ್ಥಿಯನ್ನಾಗಿ ಮಾಡುತ್ತದೆ ಬೆವರು ಎಂದರೆ ಅದು ಶ್ರಮಸಂಸ್ಕೃತಿಯ ಪ್ರತೀಕ ಹೀಗಾಗಿ ಬೆವರು ಅತ್ಯಂತ ಶ್ರೇಷ್ಠ ವಾದುದು ಆದರೆ ಬೆವರನ್ನು ನಿಕೃಷ್ಟವಾಗಿ ನೋಡುವ ಮನಸ್ಥಿಯಿಂದ ನಮ್ಮ ಸಮಾಜ ಹೊರಗೆ ಬರಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಹೇಳಿದರು. ಅವರು ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಸ್ವಂತ ಕಚೇರಿ”ಬೆವರು” ಉದ್ಘಾಟಿಸಿ ಮಾತನಾಡಿದರು. ಬೆವರಿನ ಮಹತ್ವವನ್ನು ಅರಿತಿದ್ದ ಮಹಮ್ಮದ್ ಪೈಗಂಬರ್ ಕಾರ್ಮಿಕನ ಬೆವರು ಆರಿಹೋಗುವ ಮುನ್ನ ಅವರ ಕೂಲಿಯನ್ನು ನೀಡಬೇಕು ಎಂದು ಪ್ರತಿಪಾದಿಸಿದ್ದರು. ಸುಮಾರು 4 ಸಾವಿರ ಮಂದಿ ನಿರ್ಮಾಣ ಕಾರ್ಮಿಕರು ತಮ್ಮ ಬೆವರು ಹಾಗೂ ಶ್ರಮದಿಂದ ಕಟ್ಟಿರುವ ಈ ಕಾರ್ಮಿಕ ಕಚೇರಿಯು ಭವಿಷ್ಯದಲ್ಲಿ ಕಾರ್ಮಿಕರ ವರ್ಗದ ಅರಿವು ಹಾಗೂ ಜಾಗೃತಿ ಕೇಂದ್ರವಾಗಿ ರೂಪಗೊಳ್ಳಲಿ ಎಂದು ಅವರು ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕಾರ್ಮಿಕ ಅಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ12: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ವಿಚಾರವನ್ನು ಖಚಿತಪಡಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ. ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಟಿಕೇಟ್ ಕೈತಪ್ಪಿದಾಗಿನಿಂದ ಬಿಜೆಪಿ ಪಕ್ಷದ ಮೇಲೆ ಮುನಿಸಿಕೊಂಡಿದ್ದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನ ತೋಡಿಕೊಂಡಿರುವುದಲ್ಲದೇ ಪಕ್ಷ ತೊರೆಯುವುದಾಗಿ ಹೇಳಿಕೊಂಡಿದ್ದರು. ಕೆಲ ತಿಂಗಳುಗಳ ಹಿಂದೆಯೇ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ನಿನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ್ದರು. 2012ರ ಚುನಾವಣೆಗೂ ಪೂರ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡು ಕಾಂಗ್ರೆಸ್ನ ಕೆ. ಗೋಪಾಲ ಪೂಜಾರಿ ಅವರ ವಿರುದ್ಧ ಪರಾಭವಗೊಂಡಿದ್ದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಮತ್ತೆ 2018ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ► ಕಾಂಗ್ರೆಸ್ನೊಂದಿಗೆ ಕೈಜೊಡಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದು, ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಮಾರ್ಚ್ 12 ಮಂಗಳವಾರ ಸಂಜೆ 4 ಗಂಟೆಗೆ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ನಡೆಯುತ್ತಿರುವ ಈ ವಿದ್ಯಮಾನವು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಜೆಪಿ ಹೆಗ್ಡೆ ಆಗಲಿದ್ದಾರೆ ಎಂಬುದನ್ನು ಪುಷ್ಟಿಕರಿಸಿದೆ. ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಜೆ.ಪಿ ಹೆಗ್ಡೆ ಅವರು, ಜನತಾದಳ ಸರಕಾರದಲ್ಲಿ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಭಾರತೀಯ ಜನತಾಪಕ್ಷಕ್ಕೆ ಸೇರ್ಪಡೆಗೊಂಡು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಸರಕಾರದ ಬಂದ ಬಳಿಕವೂ ಜಾತಿ ಗಣತಿ ವರದಿ ಸಲ್ಲಿಕೆಯ ಕಾರಣಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ, ಲಕ್ಷಮೋದಕ ಹೋಮ, ಶತ ಚಂಡಿಯಾಗ ಹಾಗೂ 2016 ಕಾಯಿ ಗಣಹೋಮ ಕಾರ್ಯಕ್ರಮವು ಮಾರ್ಚ್ 13ರಿಂದ 17ರವರೆಗೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷೆ ರಮಾದೇವಿ ರಾಮಚಂದ್ರ ಭಟ್ಟ ಕೋರಿಕೊಂಡಿದ್ದಾರೆ. ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಧರ್ಮದರ್ಶಿ ಬಾಲಚಂದ್ರ ಭಟ್ಟ ಅವರು ಮಾತನಾಡಿ ಮಾ.13ರಿಂದ ಕಾರ್ಯಕ್ರಮಗಳು ಆರಂಭವಾಗಿ ಮಾ.17ರ ತನಕ ನಡೆಯಲಿದೆ. ಪ್ರತಿ ನಿತ್ಯ ಧಾರ್ಮಿಕ ಕಾರ್ಯಕ್ರಮಗಳು, ಸ್ವಾಮೀಜಿಯವರಿಂದ ಆಶೀರ್ವಚನ, ಧಾರ್ಮಿಕ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು ಪ್ರತಿ ನಿತ್ಯ ಮಹಾ ಅನ್ನಸಂತರ್ಪಣೆಯಿದೆ ಎಂದು ತಿಳಿಸಿದರು. ಮಾ.13ರಂದು ಬೆಳಿಗ್ಗೆ ಲಕ್ಷ ಮೋದಕ ಹವನ ಪ್ರಾರಂಭ, ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಯವರ ಶಿಷ್ಯ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ನೂತನ ದೇವಾಲಯ ಲೋಕಾರ್ಪಣೆ,…
ಬೇಸಿಗೆ ಕಾಲದಲ್ಲಿ ಧೂಳಿನಿಂದ ಅಲರ್ಜಿಯಾದಾಗ ಸಮಸ್ಯೆ ಕಾಡಲಾರಂಬಿಸುತ್ತದೆ. ಹೊರಗಡೆ ಓಡಾಡಿದ ತಕ್ಷಣ, ಭಾರವಾದ ಮೂಗು, ಉಸಿರಾಟದ ತೊಂದರೆ, ಕುಳಿತು ಕೊಳ್ಳಲು ಸಾಧ್ಯವಾಗದಿರುವುದು ಅಥವಾ ಮಲಗಿ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ. ಅತಿಯಾದ ಸೀನು, ಯಾವಾಗಲೂ ಮೂಗು ಹರಿಯುವಂತಹ ತೊಂದರೆಗಳಿಂದ ನರಳುವುದು ಡಸ್ಟ್ ಅಲರ್ಜಿಯ ಲಕ್ಷಣ. ಈ ಅಲರ್ಜಿಯನ್ನು ಸಡಿಲಗೊಳಿಸಲು ತೆಗೆದುಕೊಳ್ಳಬಹುದಾದ ಮನೆಮದ್ದುಗಳ ಕುರಿತು ಸಲಹೆ ಇಲ್ಲಿವೆಅಲೋವೆರಾ ರಸ:ಅಲೋವೆರಾದಲ್ಲಿ ಉರಿಯೂತ ನಿವಾರಕ ಗುಣಗಳಿವೆ, ಇದು ಧೂಳಿನ ಅಲರ್ಜಿಯಲ್ಲಿ ತುಂಬಾ ಪ್ರಯೋಜನಕಾರಿ. ಅಲೋವೆರಾ ರಸ ಅಥವಾ ಜೆಲ್ಲಿಯನ್ನು ನಿಯಮಿತವಾಗಿ ಸೇವಿಸುವುದು ಅಲರ್ಜಿಯನ್ನು ಬಹಳವಾಗಿ ನಿವಾರಿಸುತ್ತದೆ. ಅಲ್ಲದೆ ಇಲ್ಲಿ ಧೂಳಿನ ಅಲರ್ಜಿಗಳನ್ನು ನಿವಾರಿಸಲು ತುಂಬಾ ಪರಿಣಾಮಕಾರಿ. ತಯಾರಿಸುವುದು ಹೇಗೆ?ಅಲೋವೆರಾ ಸಸ್ಯದಿಂದ ಎಲೆಯನ್ನು ಕತ್ತರಿಸಿ ಮತ್ತು ಚಾಕುವಿನಿಂದ ತಾಜಾ ಜೆಲ್ಲಿಯನ್ನು ತೆಗೆಯಿರಿ. ಈಗ ಅದನ್ನು ಒಂದು ಬೌಲನಲ್ಲಿ ಹಾಕಿ ಮತ್ತು ಮೂರು ಟೀ ಚಮಚ ಜೇನುತುಪ್ಪ ಮತ್ತು ಒಂದು ಟೀ ಚಮಚ ನಿಂಬೆ ರಸವನ್ನು ಸೇರಿಸಿ. ಈಗ ಮಿಶ್ರಣವನ್ನು ಸೇರಿಸಿ ಮತ್ತು ಚೆನ್ನಾಗಿ ಬೀಟ್ ಮಾಡಿ ಮತ್ತು ರಸ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಕ್ಕೆ ಆಸ್ಥೆ ವಹಿಸಿ ಮಂಗಳೂರು ವಿಶ್ವವಿದ್ಯಾನಿಲಯವು ಸರಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ನಾಲ್ಕು ವರ್ಷಗಳ ಜೀವಕಳೆ ದೊರೆತಿದೆ. ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಟಿಪ್ಪಣಿಯಾಗಿದ್ದು, ಶೀಘ್ರವೇ ಅನುದಾನ ಬಿಡುಗಡೆಗೊಂಡು ಅಧ್ಯಯನ ಪೀಠ ಸ್ಥಾಪನೆಯ ಹಾದಿ ಸುಗಮವಾಗಲಿದೆ. ನಾಲ್ಕು ವರ್ಷಗಳ ಹಿಂದೆ ಅಧ್ಯಯನ ಪೀಠ ಆರಂಭಿಸಲು ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆರಂಭದಲ್ಲಿ ವಿಶ್ವ ವಿದ್ಯಾನಿಲಯದ ಆಂತರಿಕ ಸಂಪನ್ಮೂಲದಿಂದ ರೂ.25 ಲಕ್ಷ ಹಣವನ್ನು ಮೀಸಲಿರಿಸಿ, ಪೀಠದ ಸಮರ್ಪಕ ಹಾಗೂ ರಚನಾತ್ಮಕ ಕೆಲಸಗಳಿಗೆ ಸರಕಾರದಿಂದ 1.50 ಕೋಟಿ ಅನುದಾನವನ್ನು ನಿರೀಕ್ಷಿಸಿತ್ತು. ಅಂತಿಮವಾಗಿ ಸರಕಾರದ ಅನುದಾನ ಬಂದ ಬಳಿಕವಷ್ಟೇ ಅಧ್ಯಯನ ಪೀಠ ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಫೆ.20ರಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮತ್ತೆ ಪತ್ರ ಬರೆದು ವಿಶ್ವವಿದ್ಯಾನಿಲಯಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದು, ಅದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದರು. ದಶಕಗಳಿಂದ ಕುಂದಾಪ್ರ ಕನ್ನಡ ಅಕಾಡೆಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ B.Arch ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 99.744 ಫಲಿತಾಂಶದೊಂದಿಗೆ ಅಗ್ರಗಣ್ಯ ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿ, ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ದೈವಜ್ಞ ಬ್ರಾಹ್ಮಣ ಸಮಾಜದ ಆರಾಧಿಸಿ ಪೂಜಿಸಿಕೊಂಡು ಬಂದಿರುವ ದೈವಜ್ಞ ಕೇರಿಯಲ್ಲಿರುವ ಶ್ರೀ ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕುಂಭಾಭಿಷೇಕ ಮತ್ತು ಸ್ವಪರಿವಾರ ನಾಗಶಿಲಾ ಪ್ರತಿಷ್ಠೆ, ಆಶ್ಲೇಷ ಬಲಿ, ಹಾಗೂ ಸಪರಿವಾರ ಜಟ್ಟಿಗೇಶ್ವರ ದೈವದ ಪುನಃ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕವು ಬುಧವಾರ ಜರುಗಿತು. ಜ್ಯೋತಿಷಿ ವಿದ್ವಾನ್ ಶ್ರೀ ವಾಸುದೇವ ಜೋಷಿ ಹಾಲಾಡಿ ಇವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆಗೆ ಸಹಸ್ರಾರು ಭಕ್ತರು ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರವೀಂದ್ರ ಶೇಟ್ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು ,ಗೌರವಾಧ್ಯಕ್ಷರಾದ ಮುಖ್ಯ ಅತಿಥಿಗಳಾಗಿ ಶ್ರೀ ಮಂಜುನಾಥ್ ಶೇಟ್ ಶಂಕರನಾರಾಯ, ಣ ಯು. ನಾಗರಾಜ ಶೇಟ್ ಉಡುಪಿ, ಬಿ. ಎನ್ .ಸುಬ್ರಮಣ್ಯ ಶೇಟ್ ಬೆಂಗಳೂರು, ಪ್ರಶಾಂತ್ ಶೇಟ್ .ಮಂಗಳೂರು ಉಪಸ್ಥಿತರಿದ್ದರು, ಶ್ರೀ ನಾಗ ಜಟ್ಟಿಗೇಶ್ವರ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀನಿವಾಸ್ ಶೇಟ್ ಸ್ವಾಗತ ಕೋರಿ,ಜೀರ್ಣೋದ್ಧಾರಕ್ಕೆ ಸಹಕರಿಸಿದ ದಾನಿಗಳನ್ನು ವೇದಿಕೆಯಲ್ಲಿ ಸ್ಮರಣಿಕೆ ನೀಡಿ…
