Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.21: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಏಪ್ರಿಲ್ 25 ಮತ್ತು 26 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಉಡುಪಿ-2 ಮತ್ತು ಉಡುಪಿ-3 ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಉಡುಪಿ ನಗರ ಪ್ರದೇಶಗಳಾದ ಅಜ್ಜರಕಾಡು, ಕೋರ್ಟ್ ರಸ್ತೆ, ಕೋರ್ಟ್ ಬ್ಯಾಕ್ ರಸ್ತೆ, ಪಿ.ಡಬ್ಲ್ಯೂ.ಡಿ ಆಫೀಸ್, ತೆಂಕಪೇಟೆ, ಕೆ.ಎಂ.ಮಾರ್ಗ, ಮಾರುತಿ ವಿಥೀಕಾ, ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಕನಕದಾಸ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಬ್ರಹ್ಮಾವರ, ಮಾಬುಕಳ, ಉಪ್ಪೂರು, ಚೇರ್ಕಾಡಿ ಫೀಡರ್ ಮಾರ್ಗದಲ್ಲಿ, 110/11ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಶಾಂತಿವನ ಫೀಡರ್ ಮಾರ್ಗದಲ್ಲಿ ಹಾಗೂ 110/11 ಕೆ.ವಿ ಮಧುವನ ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್. ಶೆಟ್ಟಿ ಪಿಯುಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತಾ ನರಸಿಂಹ ಪೂಜಾರಿಗೆ 554 ಅಂಕ ದೊರೆತಿದ್ದು, ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಈಕೆ ಕೆರ್ಗಾಲು ಗ್ರಾಮದ ನಿವಾಸಿ ನರಸಿಂಹ ಪೂಜಾರಿ ಹಾಗೂ ಚಂದ್ರಾವತಿ ದಂಪತಿಗಳ ಪುತ್ರಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯು 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರ ಎಕ್ಸಲೆಂಟ್ ಪಿ.ಯು ಕಾಲೇಜಿನ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರ‍್ಯಾಂಕ್ ಪಡೆದಿದ್ದು ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿನಿ ವಾಸವಿ ಬೋಳಾರ್ ವಿಜ್ಞಾನ ವಿಭಾಗದಲ್ಲಿ 592 ಅಂಕ ಪಡೆದು ರಾಜ್ಯಕ್ಕೆ 5ನೇ ರ‍್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ 3ನೇ ರ‍್ಯಾಂಕ್ ಪಡೆದಿರುತ್ತಾಳೆ. ಪ್ರಸ್ತುತ ಎಕ್ಸಲೆಂಟ್ ಪಿ.ಯು ಕಾಲೇಜಿನಲ್ಲಿ ಪಿ.ಸಿ.ಎಮ್.ಸಿ ವಿಭಾಗದಲ್ಲಿ ಅಭ್ಯಾಸಿಸಿರುತ್ತಾಳೆ. ವಿದ್ಯಾರ್ಥಿ ಅಮೋಘ ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ 591 ಅಂಕ ಪಡೆದು ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ 4ನೇ ಸ್ಥಾನಿಯಾಗಿ ಹೊರಹೊಮ್ಮುವುದರ ಜೊತೆಗೆ ಮೂರು ವಿಷಯಗಳಲ್ಲಿ 100 ಕ್ಕೆ 100ಅಂಕಗಳನ್ನು ಗಳಿಸಿರುತ್ತಾನೆ. ವಿದ್ಯಾರ್ಥಿಗಳಾದ ಸ್ನೇಹ 590 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 8ನೇ ರ‍್ಯಾಂಕ್ಗಳಿಸಿ ಉಡುಪಿ ಜಿಲ್ಲೆಗೆ 5ನೇ ಸ್ಥಾನಿಯಾಗಿ ಹೊರ ಹೊಮ್ಮಿದರೆ, ಪ್ರಣಿತಾ ಅಡಿಗ 588 ಅಂಕಗಳನ್ನು ಪಡೆಯುವುದರ ಮೂಲಕ 9ನೇ ರ‍್ಯಾಂಕ್ ಹಾಗೂ ಶ್ರೀನಿಧಿ ಶೆಟ್ಟಿ 587 ಅಂಕಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ತ್ರಾಸಿಯ ಮಸ್ಜಿದ್ ಎ ರಹಮತ್ ನಲ್ಲಿ ತಾಲೂಕು ಅಧ್ಯಕ್ಷರಾದ ಎಸ್. ದಸ್ತಗೀರ್ ಕಂಡ್ಲೂರು ರವರ ಅಧ್ಯಕ್ಷತೆಯಲ್ಲಿ ಪವಿತ್ರ ರಮಝಾನ್ ತಿಂಗಳ ಪ್ರಯುಕ್ತ “ಸೌಹಾರ್ದ ಇಫ್ತಾರ್ ಕೂಟ” ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಸಮಿತಿ ಸದಸ್ಯರಾದ ಹುಸೇನ್ ಕೊಡಿಬೇಂಗ್ರೆ ವಿಷಯ ಮಂಡಿಸಿದರು. ಅತಿಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಮಾಅತುಲ್ ಮುಸ್ಲಿಮೀನ್ ಗಂಗೊಳ್ಳಿಯ ಅಧ್ಯಕ್ಷರಾದ ಹಸೈನಾರ್ ಗಂಗೊಳ್ಳಿ, ಮಸ್ಜಿದ್ ಎ ರಹಮತ್ ತ್ರಾಸಿಯ ಕಾರ್ಯದರ್ಶಿ ಮಾಸ್ಟರ್ ರಫೀಕ್, ಜೈ ಭೀಮ್ ಅಧ್ಯಕ್ಷರಾದ ಜಗದೀಶ್ ಗಂಗೊಳ್ಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕು ಕೋಶಾಧಿಕಾರಿ ಮುಜಾವರ್ ಅಬು ಮುಹಮ್ಮದ್ ಕುಂದಾಪುರ, ಜಿಲ್ಲಾ ಸಮಿತಿ ಸದಸ್ಯರಾದ ಶಾಬಾನ್ ಹಂಗಳೂರು, ಜಿ. ರೆಹಾನ್ ತ್ರಾಸಿ, ತಾಲೂಕು ಸಮಿತಿ ಸದಸ್ಯರಾದ ಝಹೀರ್ ನಾಖುದಾ ಗಂಗೊಳ್ಳಿ, ಅಬ್ದುಲ್ ಖಾದರ್ ಮೂಡಗೋಪಾಡಿ, ಮುಹಮ್ಮದ್ ರಫೀಕ್ ವಂಡ್ಸೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದಿರುತ್ತಾಳೆ. ಕಾಲೇಜಿನ ವಿಧ್ಯಾರ್ಥಿಗಳು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದಿರುತ್ತಾಳೆ. ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿವಿಧ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ಪೂರ್ಣಗೊಳಿಸಿ, ದ್ವೀತಿಯ ಪಿ.ಯು.ಸಿ.ಗೆ ನೇರವಾಗಿ ನಮ್ಮ ಕಾಲೇಜಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜು ಕಾಮರ್ಸ್ ವಿಭಾಗದ ವಿದ್ಯಾರ್ಥಿನಿ ಚಂದ್ರ ಎಸ್. ಕೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿದ್ದಾಳೆ. ವಿದ್ಯಾರ್ಥಿನಿ ಚಂದ್ರ ಎಸ್.ಕೆ., ಕನ್ನಡ 99, ಇಂಗ್ಲಿಷ್ 92, ಎಕನಾಮಿಕ್ಸ್ 97, ಬಿಸಿನೆಸ್ ಸ್ಟಡಿಸ್ 100, ಅಕೌಂಟೆನ್ಸಿ 100, ಸ್ಟ್ಯಾಟ್ 100 ಅಂಕ ಪಡೆದಿದ್ದಾಳೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜು ವಿದ್ಯಾರ್ಥಿಗಳು 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ 46 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ 64 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ‘ಪಿಯುಸಿ ಇತಿಹಾಸದಲ್ಲಿ (ಕೋವಿಡೇತರ) ವಿದ್ಯಾರ್ಥಿಯೊಬ್ಬರು ಪೂರ್ಣಾಂಕ (ಶೇ100) ಪಡೆದಿರುವುದು ಸಾರ್ವಕಾಲಿಕ ಹಾಗೂ ಶಾಶ್ವತ ದಾಖಲೆಯಾಗಿದೆ’ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜು 99.74% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ ಒಟ್ಟು 47 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ರ ಒಳಗೆ ಸ್ಥಾನಗಳನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮೆರೆಯುವಂತೆ ಮಾಡಿದ್ದಾರೆ ಎಂದರು. ವಾಣಿಜ್ಯ ವಿಭಾಗದಲ್ಲಿ ಅನನ್ಯಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.21: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬAದಿಸಿದAತೆ, ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗ ನೀಡುವ ಎಲ್ಲಾ ನಿರ್ದೇಶನಗಳನ್ನು ಪಾಲಿಸುವುದರ ಮೂಲಕ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ತುಕಾರಾಂ ಹರಿಬಾಹು ಮುಂಡೆ ಹೇಳಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯಲ್ಲಿ ನಡೆದಿರುವ ಚುನಾವಣಾ ಪೂರ್ವ ಸಿದ್ದತೆಗಳನ್ನು ಬಗ್ಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಲೋಪಗಳು ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು ಮತಗಟ್ಟೆಗಳಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಮತದಾರರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಿದರು. ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ಸೌಲಭ್ಯವನ್ನು ಯಾವುದೇ ಗೊಂದಲಗಳಿಗೆ…

Read More