ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಈ ಬಾರಿ ನಿರೀಕ್ಷೆಯಂತೆ ಮಳೆ ಬಾರದೆ ಇರುವುದರಿಂದ ಕುಂದಾಪುರ, ಬೈಂದೂರು ತಾಲೂಕಿನಲ್ಲಿ ನೀರಿನ ಕೊರತೆಯಿದ್ದು, ಈಗಿನಿಂದಲೇ ನೀರಿನ ಸಮಸ್ಯೆ ಎದುರಿಸಲು ಸಜ್ಜಾಗಬೇಕು’ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕುಂದಾಪುರ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರದಿ ಪ್ರಕಾರ ಬೈಂದೂರಲ್ಲಿ ಶೇ. 27 ಹಾಗೂ ಕುಂದಾಪುರದಲ್ಲಿ ಶೇ. 16ರಷ್ಟು ಮಳೆ ಕೊರತೆಯಾಗಿದೆ. ಮಳೆಮಾಪನ ಸರಿಯಾಗಿ ನಿರ್ವಹಣೆಯಾಗಿದ್ದಲ್ಲಿ, ಇನ್ನಷ್ಟು ಹೆಚ್ಚಿನ ಕೊರತೆ ಕಾಣುತ್ತಿತ್ತು. ಉಪ್ಪು ನೀರಿನ ಸಮಸ್ಯೆ ಇರುವ ಕಡೆ ಡಿಸೆಂಬರ್ನಿಂದಲೇ ಕೊರತೆಯಾಗಬಹುದು. ಈ ಕಾರಣಕ್ಕಾಗಿ ಈ ಬಾರಿ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದ್ದು, ಕೃಷಿಕರಿಗೂ ನೆರವಾಗಬೇಕು ಎಂದರು. ಈ ಬಾರಿಯ ಮಳೆಗೆ 16 ಕಡೆ ತೋಟಗಳಿಗೆ, 4.5 ಎಕರೆ ಪ್ರದೇಶಕ್ಕೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳಿದರು. ವಾರಾಹಿ ನದಿಯ ಮಾಣಿ ಜಲಾಶಯದ ಒಟ್ಟು ಸಂಗ್ರಹಣಾ ಸಾಮರ್ಥ್ಯ 31.5…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ- ಗುಜ್ಜಾಡಿ, ರೋಟರಿ ಕ್ಲಬ್ ಗಂಗೊಳಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ, ಶ್ರೀ ನಾರಾಯಣ ಗುರು ಜನಸೇವಾ ಬಳಗ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ ಗಂಗೊಳ್ಳಿಯ ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಸೋಮವಾರ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಗಂಗೊಳ್ಳಿ ಗ್ರಾಪಂ ಪಿಡಿಒ ರವಿ, ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧಾ ಹಾದಿಮನೆ, ಜಿಲ್ಲಾ ಮಹಿಳಾ ಮಕ್ಕಳ ಅಧಿಕಾರಿ ವಿಜಯಲಕ್ಷ್ಮೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಾತ್ಮ ಗಾಂಧೀ ಎಮೊರಿಯಲ್ ಸಂಧ್ಯಾ ಕಾಲೇಜಿನಲ್ಲಿ ಹಿಂದಿ ವಿಭಾಗದ ವತಿಯಿಂದ ”ಹಿಂದಿ ದಿವಸ್” ಆಚರಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಏನ್. ಬಾಯಾರ್ ಅವರು ಆಗಮಿ ಮಾತನಾಡಿ, “ಹಿಂದಿ ಬಹಳ ಪ್ರಾಚೀನ ಭಾಷೆ.ಹಿಂದಿಯಲ್ಲಿ ಹಲವು ಉತ್ತಮ ಸಾಹಿತ್ಯ ಪ್ರಕಾರಗಳು ರಚಿಸಲ್ಪಟ್ಟಿವೆ. ಹಿಂದಿ ಒಂದು ಭಾವೈಕ್ಯದ ಭಾಷೆ ಹಾಗು ಈ ಭಾಷೆಯು ಎಲ್ಲಾ ಬಗೆಯ ಜನರನ್ನು ಒಗ್ಗೂಡಿಸುವ ಭಾಷೆಯಾಗಿದೆ” ಎಂದರು. ಹಿಂದಿ ದಿವಸ್ ನ ಅಂಗವಾಗಿ ಕಾಲೇಜಿನಲ್ಲಿ ಆಶುಭಾಷಣವೇ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿಕಾಲೇಜಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. “ಡಿಜಿಟಲ್ ಯುಗ್ ಮೇ ಹಿಂದಿ” ವಿಷಯಕವಾದ ಭಿತ್ತಿಪತ್ರ ಪ್ರದರ್ಶನ ಮತ್ತು ರಂಗೋಲಿಗಳೊಂದಿಗೆ ವಿದ್ಯಾರ್ಥಿಗಳು ಸಭೆಯನ್ನು ಅಲಂಕರಿಸಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯ್ಕ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿಂದಿ ಉಪನ್ಯಾಸಕಿ ಕೃತ್ತಿಕಾ ಪಿ. ಶೆಣೈ ಅವರು “ಹಿಂದಿ ದಿವಸ್” ನ ಔಚಿತ್ಯದ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಅಭಿಯಾನದಡಿ ಆಯೋಜಿಸಲಾದ “ಅಂಗನ್ ಕಾ ಮಿಲನ್” ಕಾರ್ಯಕ್ರಮವು ಬೆಳ್ವೆಯ ವಾಸುಕಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರು ವಹಿಸಿ, ಮಾತನಾಡಿ, “ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಮತ್ತು ಸಂಸ್ಕಾರದ ಮೊದಲ ದೀಪ. ಅವರ ಸೇವೆಯನ್ನು ಗುರುತಿಸುವುದೇ ಈ ಮಿಲನ್ ಕಾರ್ಯಕ್ರಮದ ಉದ್ದೇಶ. ಸೇವೆಯೇ ಸಂಘಟನೆ ಎಂಬ ಮಂತ್ರದೊಂದಿಗೆ ಮಹಿಳಾ ಮೋರ್ಚಾ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದರು. ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಅವರು ಮಾತನಾಡಿ, “ಮೋದಿಜಿ ಅವರ ನೇತೃತ್ವದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ ಬಂದಿದೆ. ಅಂಗನವಾಡಿ ವ್ಯವಸ್ಥೆಯನ್ನು ಭವಿಷ್ಯದ ಭಾರತ ಕಟ್ಟುವ ಸಂಸ್ಕಾರ ಕೇಂದ್ರ ಎಂದು ಪರಿಗಣಿಸಿ ಕೆಲಸ ಮಾಡುತ್ತಿರುವ ಮಹಿಳಾ ಮೋರ್ಚಾದ ಪ್ರಯತ್ನ ಶ್ಲಾಘನೀಯ” ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತರಬೇತಿ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ JFM ಕೃಷ್ಣಮೂರ್ತಿ ಹೈಕಾಡಿ ಅವರಿಗೆ ‘ಪ್ರೇರಣಾ ಪ್ರಶಸ್ತಿ–2026’ ನೀಡಿ ಗೌರವಿಸಲಾಯಿತು. ಭಾನುವಾರ ಮಂಗಳೂರಿನ ʼಜೆಪ್ಪು ಪಾಲೆಮಾರ್ ಗಾರ್ಡನ್ನಲ್ಲಿ ನಡೆದ ‘ಆರೋಹಣ ತರಬೇತಿ ಸಮ್ಮೇಳನ–2026’ ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಂ.ಎ ಬಿ.ಇಡಿ ಪದವೀಧರರಾಗಿರುವ ಅವರು 2018ರಲ್ಲಿ JCI Brahmavara Sevame ಮೂಲಕ JCI ಸೇವಾ ಕ್ಷೇತ್ರಕ್ಕೆ ಪ್ರವೇಶಿಸಿದರು. 2023ರಲ್ಲಿ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಆ ಅವಧಿಯಲ್ಲಿ 100% Efficiency ಹಾಗೂ Zone ಮಟ್ಟದ ಪ್ರಶಸ್ತಿಗಳನ್ನು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2024ರಲ್ಲಿ JCI Zone Trainer ಆಗಿ ಆಯ್ಕೆಯಾದರು ಬಳಿಕ JCI Shankaranarayana ಘಟಕಕ್ಕೆ ಸೇರಿ ವಿವಿಧ ತರಬೇತಿ ಚಟುವಟಿಕೆಗಳನ್ನು ನಡೆಸಿದ್ದರು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ JCI ಸದಸ್ಯರಿಗೆ How to Face Exams, National Youth Day Training, Women Empowerment, Skill Development, Effective Communication, Personality Development,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ 14 ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಸೇವಾಸಿಂಧು ವೆಬ್ಸೈಟ್: https://sevaone.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್ಚೇರ್ ಯೋಜನೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಅಪಾರವಾದುದು ಎಂದು ಕಟ್ಕೇರಿ ಅರಣ್ಯ ಗುತ್ತಿಗೆದಾರರಾದ ಜಯಪ್ರಕಾಶ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ವೆಂಕಟರಮಣ ಬಿ., ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರು ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಲು ಸಹಕರಿಸುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಮೋಹಿನಿ ಅತ್ತಿಮನಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರೂಪೇಶ್ ತೃತೀಯ ಬಿ.ಕಾಂ., ಉಪಾಧ್ಯಕ್ಷರುಗಳಾದ ಅನನ್ಯ ತೃತೀಯ ಬಿ.ಸಿ.ಎ.,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಪ್ರಮುಖ ಹಂತವಾಗಿದ್ದು, ಈ ಅವಧಿಯಲ್ಲಿ ಬೆಳೆಸಿಕೊಳ್ಳುವ ಶಿಸ್ತು, ನೈತಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಸ್ಪಷ್ಟ ಗುರಿಗಳು ಭವಿಷ್ಯದ ಬದುಕಿಗೆ ಭದ್ರ ಬುನಾದಿಯಾಗುತ್ತವೆ ಎಂದು ಖ್ಯಾತ ಯಕ್ಷಗಾನ ಅರ್ಥದಾರಿಗಳು ಹಾಗೂ ವಿದ್ವಾಂಸರಾದ ಪವನ ಕಿರಣಕೆರೆ ನುಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್), ರೆಡ್ಕ್ರಾಸ್ ಹಾಗೂ ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ವಿದ್ಯಾರ್ಥಿ ಜೀವನ ಹಾಗೂ ನೈತಿಕತೆ” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನವು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವ ಸುಂದರ ಅವಕಾಶವಾಗಿದೆ. ಜ್ಞಾನಾರ್ಜನೆಯ ಜೊತೆಗೆ ನೈತಿಕತೆ, ಮಾನವೀಯತೆ, ಶಿಸ್ತು ಹಾಗೂ ಜವಾಬ್ದಾರಿಯಂತಹ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯ. ಕಲಿಕೆಯ ಪ್ರಕ್ರಿಯೆ ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗಿರದೆ, ಜೀವನಾನುಭವಗಳ ಮೂಲಕವೂ ನಡೆಯುತ್ತದೆ. ಜೀವನದಲ್ಲಿ ಎದುರಾಗುವ ಅನುಭವಗಳು ವ್ಯಕ್ತಿಯ ಚಿಂತನೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ರೋಟರಿ ಕ್ಲಬ್ ಕುಂದಾಪುರ ಮತ್ತು ಪಾರ್ವತಿ ಶೆಟ್ಟಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಪಾರ್ವತಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಕುಂದಾಪುರದ ಖ್ಯಾತ ವಕೀಲ ಟಿ.ಬಿ. ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರದ ಉಪಾಧ್ಯಕ್ಷ ಮನೋಜ್ ನಾಯರ್, ಕಾರ್ಯದರ್ಶಿ ಅಶೋಕ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ್ ನಾವುಂದ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್ ಅವರು ಭೇಟಿ ನೀಡಿದರು. ಹಿರಿಯ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರು ಆಗಮಪಂಡಿತರಾದ ಜಿ.ಎ. ವಿಜಯಕುಮಾರ್ ಅವರನ್ನು ಗೌರವಿಸಿದರು. ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಉದ್ಯಮಿ ಜಗದೀಶ್ ಮೊಗವೀರ ಮಾರ್ಕೋಡು, ರಥಶಿಲ್ಪಿ ಗಣಪತಿ ಆಚಾರ್ಯ ಉಪಸ್ಥಿತರಿದ್ದರು.
