Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ, ಮೇ.15: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ಸತತ 14ನೇ ಬಾರಿ ಸಿ.ಬಿ.ಎಸ್.ಸಿ. 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 76 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 47 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಧವಲ್ ಎಸ್. ಶೆಟ್ಟಿ ಕೆ 95.00%, ಸುರ್ವಿ ಶೆಟ್ಟಿ 93.80%, ಅನ್ವಿತಾ ಕೆ 93.20%, ನೇಹಾಲಾ ಆರ್. ಹೆಗ್ಡೆ 93.00%, ಶಿರಿನ್ ಹೆಗ್ಡೆ 91%, ಎನುಗುಲಾ ಶ್ರೆಯಸ್ 90.40%, ಪ್ರಣವ 90.00%, ಪ್ರತೀಕ್ಷಾ ಎಚ್. ಶೆಟ್ಟಿ 89.60%, ಸಹನಾ ಎಸ್. ಶೆಟ್ಟಿ 88.80%, ಸಾನ್ವಿ ಎಸ್ ಬಿಲ್ಲವ 88.80%, ಪಾವನಿ ಎಸ್. ಕುಮಾರ್ 88.60%, ಹೇಮಂತ್‌ಗಣೇಶ್ ಸಿ.ವಿ 88.00%, ನೇಹಾ ಹೀರೆಕೊಡಿ 87.20%, ಸಾನ್ವಿ ಕೊಠಾರಿ 87.20%, ದ್ಯುತಿ ಶ್ರೀಕಾಂತ್ 87.00%, ಸುಕ್ಷಾನ್‌ಆರ್ ಶೆಟ್ಟಿ 86.40%, ಶ್ರೇಷ್ಟಾ ಆರ್. ನಾಯಕ್ 86.20%, ಆಝ್ಮಾ ಆಫಿಯಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.14: ತಾಲೂಕಿನಾದ್ಯಂತ ಇಂದು ಸಂಜೆ ಕೆಲಕಾಲ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕುಂದಾಪುರ ತಾಲೂಕಿನ ಸಿದ್ಧಾಪುರ ಭಾಗದಲ್ಲಿ ಗಾಳಿ ಮಳೆಗೆ ಹಾ̧ನಿ ಸಿಡಿಲಿಗೆ ವ್ಯಕ್ತಿಯೋರ್ವ ಮೃತಪಟ್ಟಿರುವ ಹಾಗೂ ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ತಾಲೂಕಿನ ಮಲೆನಾಡು ಪ್ರದೇಶದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸಿಡಿಲು ಸಹಿತ ಗಾಳಿ ಮಳೆ ಸುರಿದಿದ್ದರೇ, ಕರಾವಳಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ. ಇಂದು ಸಂಜೆಯ ವೇಳೆಗೆ ಸಿಡಿಲು ಬಡಿದು ಸಿದ್ಧಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್ ಶೆಟ್ಟಿ (38) ಮೃತಪಟ್ಟ ಘಟನೆ ನಡೆದಿದೆ. ಸುರೇಶ್ ಶೆಟ್ಟಿ ಅವರು ತನ್ನ ಕಿರಿಯ ಮಗನೊಂದಿಗೆ ತನ್ನ ಮನೆಯ ಸಮೀಪವೇ ಇದ್ದ ಮಾವಿನ ಮರದಿಂದ ಮಾವಿನಹಣ್ಣು ತರಲು ತೆರಳಿದ್ದರು. ಈ ವೇಳೆ ಅವರ ಎದೆಯ ಭಾಗಕ್ಕೆ ಏಕಾಏಕಿ ಅವರಿಗೆ ಸಿಡಿಲು ಬಡಿದಿದೆ. ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಬದುಕಿಸುವ ಪ್ರಯತ್ನ ಮಾಡಲಾಗಿತ್ತಾದರೂ, ಇದೇ ವೇಳೆ ಸಿದ್ಧಾಪುರ ಭಾಗದಲ್ಲಿ ಸಿಡಿಲಿನ ಕಾರಣಕ್ಕೆ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಆಸ್ಪತ್ರೆಗೆ…

Read More

ಕುಂದಾಪ್ರ ಡಾಟ್‌ ಕಾಂ ಮಾಹಿತಿ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಈ ಕೆಳಗಿನಂತೆ ಸಲಹೆ, ಸೂಚನೆಗಳನ್ನು ನೀಡಿದೆ. * ಸಾರ್ವಜನಿಕರು ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ (ಸಿ.ಎ.ಪಿ) ಮೂಲಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಬರುವ ಸಂದೇಶಗಳನ್ನು ಗಮನಿಸಿ, ನಂತರ ಹೊರಗಡೆ ತೆರಳಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗಬಾರದು. * ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಾಗಿರುವುದಿಲ್ಲ. ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಛೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು. * ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಅಂತಹ ಸ್ಥಳಗಳಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಮೇ.14: ಮಳೆಯಿಂದ ಉಂಟಾಗುವ ನೆರೆ, ಸಿಡಿಲು-ಬಡಿತ ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪಗಳಲ್ಲಿ ಮಾನವಹಾನಿ ಹಾಗೂ ಹೆಚ್ಚಿನ ಆಸ್ತಿ-ಪಾಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಾದ್ಯಂತ ಮುಂಬರುವ ದಿನಗಳಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗುವುದರ ಜೊತೆಗೆ ನೆರೆ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು. ಪೂರ್ವ ಮುಂಗಾರು ಸಮಯದಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.14: ತಾಲೂಕಿನ ಸಿದ್ಧಾಪುರದ ಗ್ರಾಮದಲ್ಲಿ ಇಂದು ಸಂಜೆಯ ವೇಳೆಗೆ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಸಿದ್ಧಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್ ಶೆಟ್ಟಿ (38) ಮೃತ ದುರ್ದೈವಿ. ಮಂಗಳವಾರ ಸಂಜೆ ಸಿದ್ಧಾಪುರದಲ್ಲಿ ಸಿಡಿಲು ಸಹಿತ ಮಳೆಯಾಗಿದ್ದು, ಈ ಸಂದರ್ಭ ಸುರೇಶ್ ಶೆಟ್ಟಿ ಎಂಬವವರು ತನ್ನ ಕಿರಿಯ ಮಗನೊಂದಿಗೆ ತನ್ನ ಮನೆಯ ಸಮೀಪವೇ ಇದ್ದ ಮಾವಿನ ಮರದಿಂದ ಮಾವಿನಹಣ್ಣು ತರಲು ತೆರಳಿದ್ದರು. ಈ ವೇಳೆ ಅವರ ಎದೆಯ ಭಾಗಕ್ಕೆ ಏಕಾಏಕಿ ಅವರಿಗೆ ಸಿಡಿಲು ಬಡಿದಿದೆ. ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಬದುಕಿಸುವ ಪ್ರಯತ್ನ ಮಾಡಲಾಗಿತ್ತಾದರೂ, ಇದೇ ವೇಳೆ ಸಿದ್ಧಾಪುರ ಭಾಗದಲ್ಲಿ ಸಿಡಿಲಿನ ಕಾರಣಕ್ಕೆ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಆಸ್ಪತ್ರೆಗೆ ಕರೆದೊಯ್ಯಲು ವಿಳಂಬವಾಗಿದ್ದರಿಂದ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಅದೃಷ್ಟವಶಾತ್ ಅವರೊಂದಿಗಿದ್ದ ಕಿರಿಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಹೆನ್ನಾಬೈಲುವಿನ ಬಸವ ಶೆಟ್ಟಿ ಎಂಬುವವರ ಪುತ್ರರಾದ ಸುರೇಶ್ ಶೆಟ್ಟಿ ಅವರು ಬೆಂಗಳೂರಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪ್ರಸಿದ್ಧ ವೈದ್ಯ, ಪರಿಸರ ಪ್ರೇಮಿ, ಪಕ್ಷಿ ತಜ್ಞ, ಯಡ್ತರೆ ನರ್ಸಿಂಗ್ ಹೋಂ ಮಾಲೀಕ ಡಾ. ಹೆಚ್. ಶುಭೋದ್ ಕುಮಾರ್ (ಹೆಚ್.ಎಸ್.ಮಲ್ಲಿ) ಮಲ್ಲಿ ವಯೋಸಹಜವಾಗಿ ಸೋಮವಾರ ರಾತ್ರಿ ನಿಧನರಾದರು. ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಡಾ. ಮಲ್ಲಿ, ಪರಿಸರ ಪ್ರೇಮಿಯಾಗಿದ್ದವರು. ಪಕ್ಷಿ ಸಂಕುಲ, ಪ್ರಕೃತಿ ನಿಸರ್ಗ ಸಾಮಾಜಿಕ ಸ್ವಾಸ್ತ್ಯದ ಕುರಿತು ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದ ಅವರು, ಸಾಕಷ್ಟು ಅಧ್ಯಯನ ನಡೆಸಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಸ್ತ್ರೀ ರೋಗ ತಜ್ಞರಾಗಿಯೂ ಸೇವೆ ಸಲ್ಲಿಸಿದ್ದ ಡಾ. ಮಲ್ಲಿ, ರೋಟರಿ ಕ್ಲಬ್ ಸದಸ್ಯರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಾಮಾಜಿಕ ಸೇವೆ ಮಾಡಿದ್ದಾರೆ. ಕುಂದಾಪುರದ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಉಚಿತವಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಇಬ್ಬರು ವಿವಾಹಿತ ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಅವರ ‘ಮನೋರಮಾ’ ಮನೆಯಲ್ಲಿ ವೀಕ್ಷಿಸಿಲು ಸಂಜೆಯ ತನಕ ಅವಕಾಶ…

Read More

ಕುಂದಾಪ್ರ ಡಾಟ್ ಕಾಂಕುಂದಾಪುರ: ಪ್ರಕೃತಿ ಪ್ರಿಯರು ಹಾಗೂ ಸಾಹಸ ಪ್ರಿಯರಿಗೆ ವೈವಿಧ್ಯಮಯ ಸಾಹಸದ ಅನುಭವವನ್ನು ನೀಡುವ ಸುಂದರ ತಾಣವೊಂದು ಉಡುಪಿ ಗೋಳಿಯಂಗಡಿ – ಬೆಳ್ವೆ ಪರಿಸರದಲ್ಲಿದೆ. ಅದುವೇ ಟಿಂಟನ್ ಅಡ್ವೆಂಚರ್ ರೆಸಾರ್ಟ್. ಹಚ್ಚಹಸಿರು ಪರಿಸರ, ಪ್ರಶಾಂತವಾಗಿ ಹರಿಯುವ ನದಿ. ಇದಕ್ಕೆ ಹೊಂದಿಕೊಂಡಿರುವ ರೆಸಾರ್ಟ್, ಪ್ರಕೃತಿ ಸೌಂದರ್ಯದ ನಡುವೆ ಶಾಂತಿ ಮತ್ತು ನೆಮ್ಮದಿಯನ್ನು ಬಯಸುವವರಿಗೆ ಒಂದು ಉತ್ತಮ ಪ್ರವಾಸಿ ತಾಣವಾಗಲಿದೆ. ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗಳ ಅನುಕೂಲಕ್ಕೆ ಬೇಕಾದ ವಸತಿ ವ್ಯವಸ್ಥೆಯನ್ನು ಹೊಂದಿದೆ. ಪ್ರಕೃತಿ ಸೊಬಗಿನ ನಡುವೆ ಆಧುನಿಕ ಸೌಕರ್ಯದೊಂದಿಗೆ ವಿಶಾಲವಾದ ಒಳಾಂಗಣ ಹೊಂದಿರುವ ಐಷಾರಾಮಿ ವಸತಿ ವ್ಯವಸ್ಥೆಯನ್ನು ಹೊಂದಿದೆ. ವಿಶೇಷ ರಿಯಾಯಿತಿ:ಈ ಬೇಸಿಗೆ ರಜೆಯನ್ನು ಆನಂದದಿಂದ ಕಳೆಯಬೇಕು ಎನ್ನುವವರಿಗೆ ಈ ರೆಸಾರ್ಟ್ ಉತ್ತಮ ರಿಯಾಯಿತಿ ಕೊಡುಗೆಯನ್ನು ನೀಡುತ್ತಿದೆ. ಇಲ್ಲಿ ಶಾಲಾ ಪ್ರವಾಸ, ಫ್ಯಾಮಿಲಿ ಔಟಿಂಗ್, ಕಛೇರಿ ಕೆಲಸದಿಂದ ಸ್ವಲ್ಪ ಬಿಡುವು ಮಾಡಿಕೊಂಡು ಸ್ವಲ್ಪ ರಿಫ್ರೆಶ್ ಆಗಬೇಕು ಎನ್ನುವವರಿಗಾಗಿಯೇ ವಿಶೇಷವಾಗಿ ಶೇ. 10 ರಿಯಾಯ್ತಿಯೊಂದಿಗೆ ಗ್ರೂಪ್ ಬುಕ್ಕಿಂಗ್ ಆರಂಭಗೊಂಡಿದೆ. ಜೊತೆಗೆ ವಿದ್ಯಾರ್ಥಿಗಳಿಗಾಗಿ ಶೇ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಗಣಿತ ವಿಭಾಗದ ಮುಖ್ಯಸ್ಥೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳ ಸಂಯೋಜಕರಾಗಿ ನಿರ್ಮಲಾ ಕುಮಾರಿ ಬಿ. ಅವರನ್ನು ನಿಯೋಜಿಸಲಾಗಿದೆ. ನಿರ್ಮಲಾ ಅವರು ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾಗಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳ ಸಂಯೋಜಕರಾಗಿ ಸುದೀರ್ಘ 23 ವರ್ಷಗಳ ಸೇವಾ ಅನುಭವವನ್ನು ಹೊಂದಿರುತ್ತಾರೆ. ಅದರೊಂದಿಗೆ ಮಂಗಳೂರಿನ ಬೋಸ್ಕೋಸ್ ಕಾಲೇಜಿನಲ್ಲಿ ಇದೇ ಕಾಯಕದ 3 ವರ್ಷದ ಸೇವಾ ಅನುಭವ ಹೊಂದಿರುತ್ತಾರೆ. ಗಣಿತ ವಿಷಯದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದು ಗಣಿತದ ಸಾಧನೆಗಾಗಿ ಹತ್ತು ಹಲವು ಪುರಸ್ಕಾರಗಳನ್ನ ಪಡೆದಿರುವ ಇವರು ಈ ಶೈಕ್ಷಣಿಕ ವರ್ಷದಲ್ಲಿ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತ ವಿಷಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಾಯರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರುದ್ರಭೂಮಿಯನ್ನು ಶಿವನ ಮೂರ್ತಿಯನ್ನು ನಿರ್ಮಿಸಿರುವುದು ದೇವಾಲಯ ನಿರ್ಮಿಸಿದಷ್ಟೇ ಪುಣ್ಯದ ಕೆಲಸ. ಶಿವನ ವಾಸಸ್ಥಾನವೇ ರುದ್ರಭೂಮಿ. ಹೀಗಾಗಿ ರುದ್ರಭೂಮಿಯ ಪಾವಿತ್ರ್ಯತೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ರುದ್ರಭೂಮಿಯನ್ನು ನವೀಕರಣಗೊಳಿಸಿ ಶಿವನ ಮೂರ್ತಿಯನ್ನು ನಿರ್ಮಿಸಿರುವುದು ಅತ್ಯಂತ ಪವಿತ್ರವಾದ ಕೆಲಸ. ಈ ಮಹತ್ಕಾರ್ಯದಲ್ಲಿ ಕೈಜೋಡಿಸಿದ ಪ್ರತಿಯೊಬ್ಬರಿಗೂ ದೇವರು ಸನ್ಮಂಗಲವನ್ನುಂಟು ಮಾಡಲಿ ಎಂದು ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಿ. ರವೀಶ್ ಭಟ್ ಹೇಳಿದರು. ಶ್ರೀ ವೀರೇಶ್ವರ ಸೇವಾ ಟ್ರಸ್ಟ್ ಗಂಗೊಳ್ಳಿ ಮತ್ತು ವೀರ ಸಾವರ್ಕರ್ ಬಳಗ ಗಂಗೊಳ್ಳಿ ಇದರ ನೇತೃತ್ವದಲ್ಲಿ ಗಂಗೊಳ್ಳಿ ಗ್ರಾಮದ ದುರ್ಗಿಕೇರಿಯ ಸಾರ್ವಜನಿಕ ಹಿಂದು ರುದ್ರಭೂಮಿ ’ಮೋಕ್ಷ ಧಾಮʼ ದಲ್ಲಿ ನೂತನವಾಗಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಇತ್ತಿಚಿಗೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಶಿಲ್ಪಿ ಕುಮಾರ್ ಶಿವಮೊಗ್ಗ ಅವರನ್ನು ಸನ್ಮಾನಿಸಲಾಯಿತು. ರುದ್ರಭೂಮಿಯ ನವೀಕರಣ ಹಾಗೂ ಶಿವನಮೂರ್ತಿ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳು, ಗುತ್ತಿಗೆದಾರರು ಹಾಗೂ ಸಹಕರಿಸಿದವರನ್ನು ಗೌರವಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ನ ಪಿಡಿಒ ಉಮಾಶಂಕರ, ಗ್ರಾಪಂ.ನ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮೊದಲ ಬಾರಿಗೆ “ಭಂಡಾರ್ಕಾರ್ಸ್ ಪ್ರೀಮಿಯರ್ ಲೀಗ್” ಪಂದ್ಯ ವಿದ್ಯಾರ್ಥಿಗಳಿಗಾಗಿ ಜರುಗಿತು. ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಂದಾಪುರ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ʼನ ಅಧ್ಯಕ್ಷ ಗೌತಮ್ ಶೆಟ್ಟಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಂ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ನಿರ್ದೇಶಕರಾದ ಶಂಕರನಾರಾಯಣ ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಮೀಳಾ ವಂದಿಸಿದರು. ವಿದ್ಯಾರ್ಥಿನಿ ಖುಷಿ ಕಾರ್ಯಕ್ರಮ ನಿರೂಪಿಸಿದರು. ಐಪಿಎಲ್ ಮಾದರಿಯಲ್ಲಿ 150 ವಿದ್ಯಾರ್ಥಿ ಆಟಗಾರರನ್ನು 10 ತಂಡಗಳನ್ನಾಗಿ ರಚಿಸಿ 4 ಓವರ್ ಗಳ ಮ್ಯಾಚ್, 3 ದಿನಗಳ ಕಾಲ ನಡೆಯಸಲಾಯಿತು.

Read More