ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಭಾನುವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ ಪಾಲ್ಗೊಂಡು ಪುನೀತರಾದರು. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯ ಈ ಭಾರಿ ಮತ್ತಷ್ಟು ಅಲಂಕೃತಗೊಂಡಿದ್ದು, ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡಿತು. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಬೆಳಿಗ್ಗೆ ರಥೋತ್ಸವಕ್ಕೆ ಚಾಲನೆ ನೀಡಿದ್ದು, ಸಂಜೆಯ ವೇಳೆಗೆ ರಥವನ್ನು ರಥಬೀದಿಯಲ್ಲಿ ಏಳೆಯಲಾಗುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ನಗರೋತ್ಸವದಲ್ಲಿ ಜಾತಿ ಮತ ಭೇದವಿಲ್ಲದೇ ಎಲ್ಲಾ ಧರ್ಮಿಯರೂ ಪಾಲ್ಗೊಂಡು ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ವೈಯಕ್ತಿಕ ಬದುಕನ್ನು ಸಮಾಜದಲ್ಲಿ ಅತ್ಯುತ್ತಮವಾಗಿ ಕಟ್ಟುಕೊಳ್ಳುವುದೇ ದೇಶ ಕಟ್ಟುವ ಕಾರ್ಯ’ ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎನ್. ಶಶಿಕುಮಾರ್ ಹೇಳಿದರು. ಆಳ್ವಾಸ್ ಪದವಿ ಕಾಲೇಜು ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ವಿವಿಧ ವಿದ್ಯಾರ್ಥಿ ಘಟಕಗಳ ದಿನಾಚರಣೆ ’ಇನಾಮು – ೨೦೨೪’ ಉದ್ಘಾಟಿಸಿ ಅವರು ಮಾತನಾಡಿದರು. ಹಲವು ಯುವಕರು ನಾವು ದೇಶ ಕಟ್ಟುತ್ತೇವೆ.. ಎಂಬಿತ್ಯಾದಿಯಾಗಿ ಉತ್ಪ್ರೇಕ್ಷೆಯಿಂದ ಹೇಳುತ್ತಾರೆ. ಒಂದೇ ಬಾರಿಗೆ ಭಾರಿ ಭಾರ ಹೊರಬೇಡಿ. ನಮ್ಮ ಬದುಕು, ಮನೆಯವರ ಬದುಕು, ಊರು- ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಮಾತ್ರ ದೇಶ ಕಟ್ಟಲು ಸಾಧ್ಯ. ಅದಕ್ಕೆ ಮೌಲ್ಯಾಧಾರಿತ ಬದುಕು ಕಟ್ಟಿಕೊಳ್ಳಿ ಎಂದರು. ವ್ಯಕ್ತಿತ್ವ ವಿಕಸನದಲ್ಲಿ ತರಗತಿ ಶಿಕ್ಷಣ ಎನ್ನುವುದು ಒಂದು ಭಾಗವ?. ಅದನ್ನು ಹೊರತುಪಡಿಸಿ ಪಠ್ಯೇತರ ಚಟುವಟಿಕೆಗಳು ಸಾಕಷ್ಟಿವೆ. ಇವುಗಳಲ್ಲಿ ತೊಡಗಿಸಿಕೊಳ್ಳುವ ಬಹುದೊಡ್ಡ ಜವಾಬ್ದಾರಿಯುತ ಕಾರ್ಯವನ್ನು ಆಳ್ವಾಸ್ ಮಾಡುತ್ತಿದೆ ಎಂದು ಶ್ಲಾಘಿಸಿದರು. ಗುರಿ ಸ್ಪ?ವಿದ್ದಾಗ ಮಾತ್ರ ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿ ಮೂಡ್ಲಕಟ್ಟೆ ಸಾವಿಷ್ಕಾರ್ -24 ಅಂಗವಾಗಿ ಪ್ರಖ್ಯಾತ ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಕನ್ನಡ ರ್ಯಾಪ್ ಹಾಡುಗಳ ಮೂಲಕ ನೆರೆದ ಜನ ಸಮೂಹವನ್ನು ಮಂತ್ರ ಮುಗ್ಧರಾಗಿಸಿದರು. ತಮ್ಮ ಶೈಲಿಯಲ್ಲಿ ಉತ್ತಮ ಹಿಡಿತವಿರುವ ಅವರು ನೆರೆದಿದ್ದ ವಿದ್ಯಾರ್ಥಿವೃಂದಕ್ಕೆ ಹಾಡು, ನೃತ್ಯದ ಮೂಲಕ ಅವಿಸ್ಮರಣೀಯ ದಿನವಾಗುವಂತೆ ಮಾಡಿದರು. ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಸಿನಿಮಾಗಳಿಗೆ ಹಾಡಿದ ಸರಿಗಮಪ ಖ್ಯಾತಿಯಜ್ಯೂರಿ ಮೆಂಬರ್ ಶಶಿಕಲಾ ಸುನಿಲ್, ಸರಿಗಮಪ-20 ವಿನ್ನರ್ ದರ್ಶನ್ ನಾರಾಯಣ್ ರವರು ಪ್ರೇಕ್ಷಕರನ್ನು ರಂಜಿಸಿದರು. ಎರಡನೆಯ ದಿನದ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಜಾನಪದ ಶೈಲಿಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ ಹೆಸರಾಂತ ಹಿನ್ನೆಲೆ ಗಾಯಕ ನವೀನ್ ಸಜ್ಜು ಮತ್ತು ತಂಡದವರು. ತಾವೇ ಬರೆದ ಗೀತೆಗಳನ್ನ ಕೂಡಾ ಹಾಡಿ ಜನರನ್ನು ರಂಜಿಸಿದರು. ಸಾವಿಷ್ಕಾರ್ -24 ರ ಎರಡು ದಿನದ ಸಂಜೆಯ ಕಾರ್ಯಕ್ರಮವು ರಂಜನೀಯವಾಗಿ ಮೂಡಿ ಬಂದಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ. 98.36 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳ ಪೈಕಿ 60 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 22 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 618 ಅಂಕಗಳನ್ನು ಪಡೆದಿರುವ ದೀಕ್ಷಾ ವಿ.ಕಾಮತ್ ಶಾಲೆಯಲ್ಲಿ ಅಗ್ರ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ದೀಕ್ಷಾ ವಿ.ಕಾಮತ್ (618), ವೈಷ್ಣವಿ (607), ಆದಿತ್ಯ ಪೂಜಾರಿ (605), ಸಿಂಚನಾ ದೇವಾಡಿಗ (588), ಮಾನ್ವಿ ಎಸ್.ಪೂಜಾರಿ (587), ಗೌತಮಿ ಜಿ.ನಾಯಕ್ (586), ಐಶ್ವರ್ಯ ಎ.ಪೂಜಾರಿ (575), ಪ್ರತೀಕ್ ಕೊಠಾರಿ (572), ಶ್ರೀನಿಧಿ ವಿ.ಖಾರ್ವಿ (571), ಧನ್ಯ (568), ಧನುಶ್ ಶೇರುಗಾರ್ (565), ಅಕ್ಷಯ್ ಬಿಲ್ಲವ (562), ಅರ್ಪಿತಾ ಕುಲಾಲ್ (555), ಶ್ರಾವ್ಯ (551) ಉತ್ತಮ ಸಾಧನೆ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, 2023-24 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶುಕ್ತಿಜಾ ಸತೀಶ್ (621) ಅಂಕ ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ , ಪರ್ಣಿಕಾ (619), ಶ್ರೀಯಾ ಎಸ್.ಆಚಾರ್ (619) ಹಾಗೂ ವಿಭಾ (619) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಬಿ. ಶ್ರೀಲಕ್ಷ್ಮೀ ವಿ.ಅಡಿಗ (618) ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ. 193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 22 ವಿದ್ಯಾರ್ಥಿಗಳು 100 ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. 79 ವಿದ್ಯಾರ್ಥಿಗಳು A+ ಶ್ರೇಣಿಯಲ್ಲಿ , 69 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ, 41 ವಿದ್ಯಾರ್ಥಿಗಳು B+, 4 ವಿದ್ಯಾರ್ಥಿಗಳು B ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು ಶೇ. 100 ಫಲಿತಾಂಶ ಪಡೆದಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ರಲ್ಲಿ 619 ಅಂಕ ಪಡೆದ ರಾಜ್ಯಕ್ಕೆ 7ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈಕೆ ಬವಳಾಡಿ ಸಹಿಪ್ರಾ ಶಾಲೆಯ ಶಿಕ್ಷಕ ರಾಘವೇಂದ್ರ ಕಲ್ಲುಕಂಟ, ಬೈಂದೂರು ಸ.ಪ.ಪೂ ಕಾಲೇಜಿನ ಸಹಶಿಕ್ಷಕಿ ರಮಾವತಿ ದಂಪತಿಗಳ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್ ಮತ್ತು ಲಿಟ್ಲ್ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024ರ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾಳೆ. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಮ್. ಮಹೇಶ ಹೆಗ್ಡೆ ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ ಅವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿಅಮಾಸೆಬೈಲು, ಮೇ.9 : ಡ್ಯುಯಲ್ ಸ್ಟಾರ್ ಶಾಲೆ ಅಮಾಸಬೈಲುಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ದಾಖಲಾಗಿಸಿದೆ. ಶಾಲೆಯ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವೀತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಅಮಾಸೆಬೈಲಿನ ಮನಸ್ವಿ ರಾವ್ 601 (96.16%), ಸೃಜನ್ ಜೆ. ಪೂಜಾರಿ 586 (93.76%), ಶ್ರಾವ್ಯ ಎನ್.581 (92.96%) ಅಧಿಕ ಅಂಕವನ್ನು ಪಡೆದು ತೆರ್ಗಡೆಗೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದರು.
ಕುಂದಾಪ್ರ ಡಾ ಕಾಂ ಸುದ್ದಿಶಂಕರನಾರಾಯಣ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 54 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶಾಲೆಯ ವಿದ್ಯಾರ್ಥಿನಿ ಪ್ರಣಮಿ 615 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಹತ್ತನೇ ರ್ಯಾಂಕ್ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿನಿ ಮಹಿಮ 612 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಹದಿಮೂರನೇ ರ್ಯಾಂಕ್ ಪಡೆದಿರುತ್ತಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾ ಕಾಂ ಸುದ್ದಿಬೈಂದೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಂದೂರಿನ ರತ್ತೂಬಾಯಿ ಜನತಾ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳು ಪೈಕಿ, 43 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶ್ರೇಯ 596 ಅಂಕಗಳಿಸಿ ಶಾಲೆಗೆ ಪ್ರಥಮ, ನಿಹಾಲ್ 589 ಅಂಕದೊಂದಿಗೆ ದ್ವೀತಿಯ ಹಾಗೂ ರಾಘವೇಂದ್ರ 577 ತೃತೀಯ ಅಂಕ ಗಳಿಸಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹೆಮ್ಮಾಡಿ ಶ್ರೀ ವಿವಿವಿ ಮಂಡಳಿ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಹಾಗೂ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ , ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿದೆ.
