ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಶರಣ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಸಂಯೋಜಕರಾದ ರಿತಿನ್ ಎಸ್. ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಘಟಕದ ಕಾರ್ಯಕ್ರಮಾಧಿಕಾರಿ ವಿದ್ಯಾರಾಣಿ ವಂದಿಸಿದರು. ಎನ್.ಸಿ.ಸಿ ಕೆಡೆಟ್ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭ ಇತ್ತಿಚಿಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾದ ಕುಂದಾಪುರದ ವಸಂತನಾಟ್ಯಲಯದ ನೃತ್ಯ ತರಬೇತುದಾರರಾದ ಪ್ರವಿತಾ ಅಶೋಕ್, ಮಂದರ್ತಿ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತç ಉಪನ್ಯಾಸಕ ಪ್ರಭಾಕರ್ ಶೆಟ್ಟಿಗಾರ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕಿ ಸಂಗೀತಾ ಶೆಟ್ಟಿ ಉಪಸ್ಥಿತರಿದ್ದರಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಉಪನ್ಯಾಸಕಿ ದೀಪಿಕಾ ಜಿ. ಉಪಸ್ಥಿತರಿದ್ದರು. ಅತ್ಯುತ್ತಮ ನಿರೂಪಣೆ ಶೃದ್ಧಾ, ದ್ವಿತೀಯ ಬಿಬಿಎ, ಅತ್ಯುತ್ತಮ ಗುಂಪು ನೃತ್ಯ ಬಹುಮಾನ ದ್ವಿತೀಯ ಬಿಸಿಎ (ಬಿ), ವೈಯಕ್ತಿಕ ಪ್ರತಿಭೆ – ಬ್ರಾಹ್ಮಿ ಪ್ರಥಮ ಬಿಸಿಎ (ಎ), ಒಟ್ಟು ಸಮಗ್ರ ಪುರಸ್ಕಾರವನ್ನು ಕ್ರಮವಾಗಿ ತೃತೀಯ ಬಿ.ಕಾಂ. (ಬಿ), ತೃತೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರ ಜನ್ಮದಿನದ ಅಂಗವಾಗಿ ಭಾನುವಾರ ಶಾಸಕ ಗಂಟಿಹೊಳೆ ಅವರ ಅಭಿಮಾನಿಗಳು ಕ್ಷೇತ್ರದ ವಿವಿಧ ಭಾಗಗಳಲ್ಲಿ ಹತ್ತಾರು ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರು. ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಉಪ್ಪುಂದದಲ್ಲಿ ಸಮೃದ್ಧ ಹಸಿರು ಕಾರ್ಯಕ್ರಮದಡಿಯಲ್ಲಿಗಿಡಗಳನ್ನು ನೆಡಲಾಯಿತು. ಸಿದ್ಧಾಪುರದಲ್ಲಿ ಜರುಗಿದ ಸಮೃದ್ಧ ಹಸಿರು ಕಾರ್ಯಕ್ರಮದಲ್ಲಿ ಸ್ವತಃ ಶಾಸಕ ಗುರುರಾಜ ಗಂಟಿಹೊಳೆ ಅವರು ಪಾಲ್ಗೊಂಡರು. ಚಿತ್ತೂರು, ಆಲಂದೂರು, ವಂಡ್ಸೆ, ನೆಂಪು, ಯಡ್ತರೆ ಗುಲ್ವಾಡಿ, ತ್ರಾಸಿ ಮೊದಲಾದೆಡೆ ಗೀಡಗಳನ್ನು ನೆಡಲಾಯಿತು. ಬೈಂದೂರಿನಲ್ಲಿ ರಥೋತ್ಸವಕ್ಕೆ ತೆರಳುವ ಭಕ್ತಾಧಿಗಳಿಗೆ ತಂಪುಪಾನೀಯಗಳನ್ನು ವಿತರಿಸಲಾಯಿತು. ಮಧ್ಯಾಹ್ನ ಕುಂದಾಪುರ ಚೈತನ್ಯ ವೃದ್ಧಾಶ್ರಮಕ್ಕೆ ಊಟದ ವ್ಯವಸ್ಥೆ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು. ಮಂಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿಯನ್ನು ಮಂಕಿಯ ಯುವಕರ ತಂಡ ಶ್ರಮದಾನದ ಮೂಲಕ ದುರಸ್ತಿ ಮಾಡಿತು. ವಸ್ರೆ ಭಾಗದಲ್ಲಿ ಯುವಕರ ತಂಡ ಬಡಕುಟುಂಬದ ಮನೆಯ ಮಾಡು ನಿರ್ಮಿಸಿಕೊಡಲು ಶ್ರಮಿಸಿತು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಭಾನುವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ ಪಾಲ್ಗೊಂಡು ಪುನೀತರಾದರು. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯ ಈ ಭಾರಿ ಮತ್ತಷ್ಟು ಅಲಂಕೃತಗೊಂಡಿದ್ದು, ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡಿತು. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಬೆಳಿಗ್ಗೆ ರಥೋತ್ಸವಕ್ಕೆ ಚಾಲನೆ ನೀಡಿದ್ದು, ಸಂಜೆಯ ವೇಳೆಗೆ ರಥವನ್ನು ರಥಬೀದಿಯಲ್ಲಿ ಏಳೆಯಲಾಗುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ನಗರೋತ್ಸವದಲ್ಲಿ ಜಾತಿ ಮತ ಭೇದವಿಲ್ಲದೇ ಎಲ್ಲಾ ಧರ್ಮಿಯರೂ ಪಾಲ್ಗೊಂಡು ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ವೈಯಕ್ತಿಕ ಬದುಕನ್ನು ಸಮಾಜದಲ್ಲಿ ಅತ್ಯುತ್ತಮವಾಗಿ ಕಟ್ಟುಕೊಳ್ಳುವುದೇ ದೇಶ ಕಟ್ಟುವ ಕಾರ್ಯ’ ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎನ್. ಶಶಿಕುಮಾರ್ ಹೇಳಿದರು. ಆಳ್ವಾಸ್ ಪದವಿ ಕಾಲೇಜು ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ವಿವಿಧ ವಿದ್ಯಾರ್ಥಿ ಘಟಕಗಳ ದಿನಾಚರಣೆ ’ಇನಾಮು – ೨೦೨೪’ ಉದ್ಘಾಟಿಸಿ ಅವರು ಮಾತನಾಡಿದರು. ಹಲವು ಯುವಕರು ನಾವು ದೇಶ ಕಟ್ಟುತ್ತೇವೆ.. ಎಂಬಿತ್ಯಾದಿಯಾಗಿ ಉತ್ಪ್ರೇಕ್ಷೆಯಿಂದ ಹೇಳುತ್ತಾರೆ. ಒಂದೇ ಬಾರಿಗೆ ಭಾರಿ ಭಾರ ಹೊರಬೇಡಿ. ನಮ್ಮ ಬದುಕು, ಮನೆಯವರ ಬದುಕು, ಊರು- ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಮಾತ್ರ ದೇಶ ಕಟ್ಟಲು ಸಾಧ್ಯ. ಅದಕ್ಕೆ ಮೌಲ್ಯಾಧಾರಿತ ಬದುಕು ಕಟ್ಟಿಕೊಳ್ಳಿ ಎಂದರು. ವ್ಯಕ್ತಿತ್ವ ವಿಕಸನದಲ್ಲಿ ತರಗತಿ ಶಿಕ್ಷಣ ಎನ್ನುವುದು ಒಂದು ಭಾಗವ?. ಅದನ್ನು ಹೊರತುಪಡಿಸಿ ಪಠ್ಯೇತರ ಚಟುವಟಿಕೆಗಳು ಸಾಕಷ್ಟಿವೆ. ಇವುಗಳಲ್ಲಿ ತೊಡಗಿಸಿಕೊಳ್ಳುವ ಬಹುದೊಡ್ಡ ಜವಾಬ್ದಾರಿಯುತ ಕಾರ್ಯವನ್ನು ಆಳ್ವಾಸ್ ಮಾಡುತ್ತಿದೆ ಎಂದು ಶ್ಲಾಘಿಸಿದರು. ಗುರಿ ಸ್ಪ?ವಿದ್ದಾಗ ಮಾತ್ರ ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿ ಮೂಡ್ಲಕಟ್ಟೆ ಸಾವಿಷ್ಕಾರ್ -24 ಅಂಗವಾಗಿ ಪ್ರಖ್ಯಾತ ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಕನ್ನಡ ರ್ಯಾಪ್ ಹಾಡುಗಳ ಮೂಲಕ ನೆರೆದ ಜನ ಸಮೂಹವನ್ನು ಮಂತ್ರ ಮುಗ್ಧರಾಗಿಸಿದರು. ತಮ್ಮ ಶೈಲಿಯಲ್ಲಿ ಉತ್ತಮ ಹಿಡಿತವಿರುವ ಅವರು ನೆರೆದಿದ್ದ ವಿದ್ಯಾರ್ಥಿವೃಂದಕ್ಕೆ ಹಾಡು, ನೃತ್ಯದ ಮೂಲಕ ಅವಿಸ್ಮರಣೀಯ ದಿನವಾಗುವಂತೆ ಮಾಡಿದರು. ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಸಿನಿಮಾಗಳಿಗೆ ಹಾಡಿದ ಸರಿಗಮಪ ಖ್ಯಾತಿಯಜ್ಯೂರಿ ಮೆಂಬರ್ ಶಶಿಕಲಾ ಸುನಿಲ್, ಸರಿಗಮಪ-20 ವಿನ್ನರ್ ದರ್ಶನ್ ನಾರಾಯಣ್ ರವರು ಪ್ರೇಕ್ಷಕರನ್ನು ರಂಜಿಸಿದರು. ಎರಡನೆಯ ದಿನದ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಜಾನಪದ ಶೈಲಿಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ ಹೆಸರಾಂತ ಹಿನ್ನೆಲೆ ಗಾಯಕ ನವೀನ್ ಸಜ್ಜು ಮತ್ತು ತಂಡದವರು. ತಾವೇ ಬರೆದ ಗೀತೆಗಳನ್ನ ಕೂಡಾ ಹಾಡಿ ಜನರನ್ನು ರಂಜಿಸಿದರು. ಸಾವಿಷ್ಕಾರ್ -24 ರ ಎರಡು ದಿನದ ಸಂಜೆಯ ಕಾರ್ಯಕ್ರಮವು ರಂಜನೀಯವಾಗಿ ಮೂಡಿ ಬಂದಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ. 98.36 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳ ಪೈಕಿ 60 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 22 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 618 ಅಂಕಗಳನ್ನು ಪಡೆದಿರುವ ದೀಕ್ಷಾ ವಿ.ಕಾಮತ್ ಶಾಲೆಯಲ್ಲಿ ಅಗ್ರ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ದೀಕ್ಷಾ ವಿ.ಕಾಮತ್ (618), ವೈಷ್ಣವಿ (607), ಆದಿತ್ಯ ಪೂಜಾರಿ (605), ಸಿಂಚನಾ ದೇವಾಡಿಗ (588), ಮಾನ್ವಿ ಎಸ್.ಪೂಜಾರಿ (587), ಗೌತಮಿ ಜಿ.ನಾಯಕ್ (586), ಐಶ್ವರ್ಯ ಎ.ಪೂಜಾರಿ (575), ಪ್ರತೀಕ್ ಕೊಠಾರಿ (572), ಶ್ರೀನಿಧಿ ವಿ.ಖಾರ್ವಿ (571), ಧನ್ಯ (568), ಧನುಶ್ ಶೇರುಗಾರ್ (565), ಅಕ್ಷಯ್ ಬಿಲ್ಲವ (562), ಅರ್ಪಿತಾ ಕುಲಾಲ್ (555), ಶ್ರಾವ್ಯ (551) ಉತ್ತಮ ಸಾಧನೆ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, 2023-24 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶುಕ್ತಿಜಾ ಸತೀಶ್ (621) ಅಂಕ ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ , ಪರ್ಣಿಕಾ (619), ಶ್ರೀಯಾ ಎಸ್.ಆಚಾರ್ (619) ಹಾಗೂ ವಿಭಾ (619) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಬಿ. ಶ್ರೀಲಕ್ಷ್ಮೀ ವಿ.ಅಡಿಗ (618) ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ. 193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 22 ವಿದ್ಯಾರ್ಥಿಗಳು 100 ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. 79 ವಿದ್ಯಾರ್ಥಿಗಳು A+ ಶ್ರೇಣಿಯಲ್ಲಿ , 69 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ, 41 ವಿದ್ಯಾರ್ಥಿಗಳು B+, 4 ವಿದ್ಯಾರ್ಥಿಗಳು B ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು ಶೇ. 100 ಫಲಿತಾಂಶ ಪಡೆದಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ರಲ್ಲಿ 619 ಅಂಕ ಪಡೆದ ರಾಜ್ಯಕ್ಕೆ 7ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈಕೆ ಬವಳಾಡಿ ಸಹಿಪ್ರಾ ಶಾಲೆಯ ಶಿಕ್ಷಕ ರಾಘವೇಂದ್ರ ಕಲ್ಲುಕಂಟ, ಬೈಂದೂರು ಸ.ಪ.ಪೂ ಕಾಲೇಜಿನ ಸಹಶಿಕ್ಷಕಿ ರಮಾವತಿ ದಂಪತಿಗಳ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್ ಮತ್ತು ಲಿಟ್ಲ್ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024ರ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾಳೆ. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಮ್. ಮಹೇಶ ಹೆಗ್ಡೆ ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ ಅವರು ಉಪಸ್ಥಿತರಿದ್ದರು.
