Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾ ಕಾಂ ಸುದ್ದಿಬೈಂದೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಂದೂರಿನ ರತ್ತೂಬಾಯಿ ಜನತಾ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳು ಪೈಕಿ, 43 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶ್ರೇಯ 596 ಅಂಕಗಳಿಸಿ ಶಾಲೆಗೆ ಪ್ರಥಮ, ನಿಹಾಲ್ 589 ಅಂಕದೊಂದಿಗೆ ದ್ವೀತಿಯ ಹಾಗೂ ರಾಘವೇಂದ್ರ 577 ತೃತೀಯ ಅಂಕ ಗಳಿಸಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹೆಮ್ಮಾಡಿ ಶ್ರೀ ವಿವಿವಿ ಮಂಡಳಿ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಹಾಗೂ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ , ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದ್ದು, ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ -ತಾಂತ್ರಿಕ ಹಾಗೂ ಮ್ಯಾನೇಜ್ ಮೆಂಟ್ ಸ್ಪರ್ಧಾಕೂಟ ವಿಜೃಂಭಣೆಯಿಂದ ಜರುಗಿದ್ದು ಎರಡನೆಯ ದಿನದಂದು ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ ,ಕಾರ್ಯಕ್ರಮದ ಸಂಚಾಲಕ, ಉಪ ಪ್ರಾಂಶುಪಾಲ ಡಾ.ಮೆಲ್ವಿನ್ ಡಿಸೋಜಾ, ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಈ ಕಾರ್ಯಕ್ರಮ ನಡೆಸಿಕೊಟ್ಟರು. ವಿವಿಧ ವಿಭಾಗದಲ್ಲಿ 25ಕ್ಕೂ ಹೆಚ್ಚಿನ ಸ್ಪರ್ದೆಗಳನ್ನು ನಡೆಸಿದ್ದು 30ಕ್ಕೂ ಹೆಚ್ಚು ಕಾಲೇಜುಗಳು ಭಾಗವಹಿಸಿದ್ದವು. ಅವುಗಳಲ್ಲಿ ಹೆಚ್ಚು ಆಕರ್ಷಣೆಯ ಸ್ಪರ್ಧೆಯಾದ ವೆರೈಟಿ ಶೋ ಅಲ್ಲಿ ಡಾ ಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ ಪ್ರಥಮ ಸ್ಥಾನ ಗಳಿಸಿದರೆ, ಎಮ್ ಜಿ ಎಮ್ ಕಾಲೇಜು ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಎಲ್ಲ ಸ್ಪರ್ದೆಯ ವಿಜೇತರುಗಳಿಗೆ ಕ್ಯಾಶ್ ಪ್ರೈಸ್ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು ಸಾಂಸ್ಕೃತಿಕ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಡಾ ಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ ಚಾಂಪಿಯನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದ NATA (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 161 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಕಾಲೇಜಿನ ವಿದ್ಯಾರ್ಥಿನಿಯರಾದ ಉನ್ನತಿ ಗೌಡ 113 ಅಂಕಗಳು ಹಾಗೂ ವರ್ಣಾ ಆಚಾರ್ 113 ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2023-24ನೇ ಶೈಕ್ಷಣಿಕ ವರ್ಷದ ಐ. ಸಿ.ಎಸ್.ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶವನ್ನು ಪಡೆಯುವುದರ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರೀಯ ಐ. ಸಿ. ಎಸ್. ಇ. ಪಠ್ಯಕ್ರಮ ಆಧಾರಿತ ಶಿಕ್ಷಣದಲ್ಲಿ ಸತತವಾಗಿ 21ನೇ ಬಾರಿ ಶೇಕಡ 100 ಫಲಿತಾಂಶವನ್ನು ದಾಖಲಿಸಿದ ಕುಂದಾಪುರ ತಾಲೂಕಿನ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಗಿದೆ. ಪರೀಕ್ಷೆಗೆ ಹಾಜರಾದ 173 ವಿದ್ಯಾರ್ಥಿಗಳಲ್ಲಿ 119 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 54 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ತನ್ವಿಶ್ರೀ ಎಸ್. ಆಚಾರ್ ಮತ್ತು ಮಾನ್ಯ ಪೂಜಾರಿ 97.4 ಶೇಕಡಾ ಅಂಕದೊಂದಿಗೆ ಪ್ರಥಮ, ಜ್ಞಾನದೀಪ್ ವಿ. ಶೆಟ್ಟಿ 96 ಶೇಕಡಾ ಅಂಕದೊಂದಿಗೆ ದ್ವಿತೀಯ, ಪಾವನಿ ಪಾಟೀಲ್ 95.8 ಶೇಕಡಾ ಅಂಕದೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಟಾನ, ಹಟ್ಟಿಯಂಗಡಿಯ ಆಶ್ರಯದಲ್ಲಿ ನಡೆಯುತ್ತಿರುವ ರಜತ ವರ್ಷದ ಸಂಭ್ರಮದಲ್ಲಿ ಎರಡು ಗಿನ್ನಿಸ್ ಪ್ರಶಸ್ತಿ ಪುರಸ್ಕೃತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಇಂದು ನಡೆದಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.78.24 ಮತದಾನ ನಡೆದಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.76.40 ಮತದಾನ ನಡೆದಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ 83.61%, ಶಿಕಾರಿಪುರ-82.66%, ಸಾಗರ-80.2%, ಭದ್ರಾವತಿ-71.72%, ಸೊರಬ-83.27%, ತೀರ್ಥಹಳ್ಳಿ-82.23%, ಶಿವಮೊಗ್ಗ-70.33%, ಬೈಂದೂರು-76.4% ಮತದಾನವಾಗಿದೆ. ಬೆಳಿಗ್ಗೆ 9 ಗಂಟೆಯ ತನಕ ಶಿವಮೊಗ್ಗ ಕ್ಷೇತ್ರದಲ್ಲಿ ಶೇ.11.45 ಮತದಾನ, ಮಧ್ಯಾಹ್ನ 1 ಗಂಟೆಯ ತನಕ ಶೇ.45.19 ಮತದಾನ, ಮಧ್ಯಾಹ್ನ 3 ಗಂಟೆಗೆ ಶೇ.58.04 ಮತದಾನವಾಗಿದ್ದು, ಅಂತಿಮವಾಗಿ ಶೇ.78.24 ಮತದಾನವಾಗಿದೆ. ಬೈಂದೂರು ಕ್ಷೇತ್ರದಲ್ಲಿ ಹಳ್ಳಿಹೊಳೆ ಬೂತ್‌ 141ರಲ್ಲಿ ಅತಿಹೆಚ್ಚು ಶೇ.88 ಹಾಗೂ ಶಿರೂರು ಮೇಲ್ಪಂಕ್ತಿ ಬೂತ್‌ 3ರಲ್ಲಿ ಅತಿ ಕಡಿಮೆ ಶೇ.66.67 ಮತದಾನವಾಗಿದೆ.  ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತನ್ನ ತಂದೆ, ಮಾಜೀ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಹೋದರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕುಟುಂಬಿಕರ ಜೊತೆ ಮತ ಚಲಾಯಿಸಿದರು. ಸೊರಬದಲ್ಲಿ ಜಿಲ್ಲೆಯ ಉಸ್ತುವಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡದ ನಟ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟೂರು ಕೆರಾಡಿಯಲ್ಲಿ ಇಂದು ಮತದಾನ ಮಾಡಿದರು. ಕೆರಾಡಿ ಶಾಲೆಯ ಮತಗಟ್ಟೆ 135ರಲ್ಲಿ ಮತದಾನ ಮಾಡಿದ ಅವರು ಮತದಾನ ನನ್ನನ ಹಕ್ಕು ಹಾಗೂ ಜವಾಬ್ದಾರಿ ಎಂದಿದ್ದಾರೆ. ತಾನು ಓದಿ ಸದ್ಯ ದತ್ತು ಸ್ವೀಕಾರ ಮಾಡಿರುವ ಶಾಲೆಯಲ್ಲಿ ಮತದಾನ ಮಾಡಿದ ಅವರು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮತನಾಡಿ, ನಾನು ದೇಶದ ಹಿತಕ್ಕಾಗಿ ಮತ ಹಾಕಿದ್ದೇನೆ. ಸರ್ಕಾರದ ನಿರೀಕ್ಷೆ ಬೇಡಿಕೆ ಬಗ್ಗೆ ಮಾತಾಡಲ್ಲ. ಈಗ ಅದು ರಾಜಕೀಯವಾಗುತ್ತೆ. ನನ್ನ ಜವಾಬ್ದಾರಿಯನ್ನು ಮಾಡಿದ್ದೇನೆ ಅಷ್ಟೇ ಎಂದರು. ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಚುನಾವಣೆ ಇರುವುದರಿಂದ ಪೂರ್ತಿ ಕೆಲಸ ಮಾಡಲು ಆಗಿಲ್ಲ. ಶಾಲೆಯ ಗ್ರೌಂಡನ್ನು ಮಕ್ಕಳಿಗೆ ಆಟ ಆಡಲು ದೊಡ್ಡ ಮಾಡಿದ್ದೇವೆ. ಕಟ್ಟಡದ ಕೆಲಸ ಮತ್ತು ಪೀಠೋಪಕರಣ ಕೆಲಸ ಇನ್ನು ಆಗಬೇಕಾಗಿದೆ ಎಂದರು. ಕಾಂತಾರ ಪ್ರಿಕ್ವೆಲ್ ಬಗ್ಗೆ ಪ್ರತಿಕ್ರಿಯಿಸಿದ ಅವರು ಜನ ಸಿನಿಮಾವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಂಚಿಕಾನ್ ಶಾಲೆಯ ಮತಗಟ್ಟೆ ಸಂಖ್ಯೆ 68ರಲ್ಲಿ ಮತ ಚಲಾಯಿಸಿದರು. ಕಂಚಿಕಾನ್ ಮತಗಟ್ಟೆಗೆ ತೆರಳಿದ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಇದಕ್ಕೂ ಮೊದಲು ನವದುರ್ಗೆಯರಿಂದ ಬಿಜೆಪಿಗೆ ಮೊದಲು ಮತದಾನ ಅಭಿಯಾನದ ಭಾಗವಾಗಿ ಮಹಿಳೆಯರಿಂದ ಮೊದಲು ಮತದಾನ ಮಾಡಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಮೇ.7ರಂದು ಜರುಗಲಿದ್ದು, ಇದಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ನಡೆಸಲಾಯಿತು. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 246 ಮತಗಟ್ಟೆಗಳಿದ್ದು 2,40,500 ಮತದಾರರಿದ್ದಾರೆ. 9 ವಿಶೇಷ ಮತಗಟ್ಟೆಗಳನ್ನು ನಿರ್ಮಿಸಿದ್ದು 5 ಸಖಿ 1 ವಿಶೇಷ ಚೇತನ, 1 ಸಾಂಸ್ಕೃತಿಕ, ಸಾಂಪ್ರದಾಯಿಕ ಮತಗಟ್ಟೆಗಳಿವೆ. ಚುನಾವಣೆಗಾಗಿ ಒಟ್ಟು 1192 ಅಧಿಕಾರಿಗಳಿದ್ದು 20 ಸಿಬಂದಿಗಳನ್ನು ಕಾಯ್ದಿರಿಸಲಾಗಿದೆ.598 ಆರಕ್ಷಕರಿದ್ದು 85 ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ.ಮತದಾನಕ್ಕೆ ತಯಾರಿ ಪೂರ್ಣಗೊಂಡಿದ್ದು ಮತಗಟ್ಟೆಯಲ್ಲಿ ಕುಡಿಯುವ ನೀರು, ಆರೋಗ್ಯ ಸೇರಿದಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಮೇ.06: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವರೆಗೆ ಕುಂದಾಪುರ ತಾಲೂಕು ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ…

Read More