ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪುಸ್ತಕ ಓದುವ ಅಭಿರುಚಿ ಜತೆಗೆ ಶಿಕ್ಷಣ, ಜ್ಞಾನಾರ್ಜನೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಶುರುವಾದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ “ಪುಸ್ತಕ ಮನೆ” ಮೂಡುಬಿದಿರೆಯಲ್ಲಿ ತನ್ನ ಎರಡನೇ ಪುಸ್ತಕ ಮಳಿಗೆಯನ್ನು ಲೋಕಾರ್ಪಣೆ ಮಾಡಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ.ಎಂ. ಮೋಹನ್ ಆಳ್ವ, ಎಕ್ಸಲೆಂಟ್ ಸಂಸ್ಥೆಯ ಮುಖ್ಯಸ್ಥರಾದ ಯುವರಾಜ್ ಜೈನ್ , ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ರವರು ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್, ಡಾ. ಗಣನಾಥ ಶೆಟ್ಟಿ ಬಿ , ಅಮೃತ್ ರೈ, ಅಶ್ವಥ್ ಎಸ್.ಎಲ್, ಆದರ್ಶ ಎಂ. ಕೆ , ವಿಮಲ್ ರಾಜ್ ಜಿ , ಗಣಪತಿ ಕೆ. ಎಸ್ ರವರು ಉಪಸ್ಥಿತರಿದ್ದು, ಗಣ್ಯರನ್ನು ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕದಲ್ಲಿ ಪುಸ್ತಕ ಲೋಕದಲ್ಲಿ ಪುಸ್ತಕಮನೆ ಹೊಸ ಮೈಲುಗಲ್ಲು ಸಾಧಿಸಿದ್ದು, ಕರಾವಳಿಯಲ್ಲಿ ತನ್ನ ಎರಡನೇ ಮಳಿಗೆ ಶುರುಮಾಡಿದೆ. ನೂರಾರು ಬರಹಗಾರರ ಪುಸ್ತಕಗಳು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿ ಮಾತನಾಡಿ 2024-25ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆದ ಎರಡು ಕಿರು ಪರೀಕ್ಷೆಗಳ ಉತ್ತರ ಪತ್ರಿಕೆಯನ್ನು ಪೋಷಕರಿಗೆ ವಿತರಿಸಿ ವಿದ್ಯಾರ್ಥಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ಮಾತನಾಡಿ ಗುಣಮಟ್ಟದ ಶಿಕ್ಷಣದ ಕುರಿತಾಗಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಹರ್ಷ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ,ವಿದ್ಯಾರ್ಥಿ ಪೋಷಕರು,ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ ಬಿಜೆಪಿ 400 ಅಧಿಕ ಸೀಟ್ ಗೆಲ್ಲಿಲಿದೆ. ಕರ್ನಾಟಕದಲ್ಲಿ 28ಕ್ಕೆ 28 ಸೀಟುಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಬೃಹತ್ ರೋಡ್ ಶೋಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಬಿಜೆಪಿ ಅಲೆ, ಮೋದಿ ಅಲೆ ಎದ್ದಿದೆ. ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರವ ಅವರು ಕನಿಷ್ಠ 3ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ. ಬೈಂದೂರಿನಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ಬರುವ ವಿಶ್ವಾಸವಿದೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ವಿಶ್ವವೇ ಮೆಚ್ಚದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.03: ಅತಿಯಾದ ಉಷ್ಣತೆ ಮತ್ತು ಬಿಸಿಗಾಳಿಯಿಂದ ರಕ್ಷಣೆ ಪಡೆಯಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತವು ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು ನೀಡಿರುತ್ತದೆ. ಬಾಯಾರಿಕೆ ಇಲ್ಲದಿದ್ದರೂ ಸಹಾ ಹೆಚ್ಚು ನೀರನ್ನು ಆಗಾಗ್ಗೆ ಕುಡಿಯಬೇಕು. ಮೌಖಿಕ ಪುನರ್ಜಲೀಕರಣ ದ್ರಾವಣ (ಓ.ಆರ್.ಎಸ್), ಎಳನೀರು ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಶರಬತ್ತು, ಹಣ್ಣಿನ ರಸಗಳು, ಮಜ್ಜಿಗೆ/ಲಸ್ಸಿಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಬೆರೆಸಿ ಸೇವಿಸಬೇಕು ಮತ್ತು ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು, ತರಕಾರಿಗಳನ್ನು ಸೇವಿಸುವುದು ಸೂಕ್ತ. ತಿಳಿಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಹಾಗೂ ಗಾಳಿಯಾಡುವ ಪಾದರಕ್ಷೆಗಳನ್ನು ಧರಿಸುವುದು ಈ ಸಂದರ್ಭದಲ್ಲಿ ಉತ್ತಮ. ಬಿಸಿಲಿನಲ್ಲಿ ಹೊರಹೋಗುವ ಸಂದರ್ಭದಲ್ಲಿ ಛತ್ರಿ, ಟೋಪಿ, ಟವೆಲ್, ತಂಪು ಕನ್ನಡಕಗಳನ್ನು ಬಳಸಬೇಕು. ಸಾಧ್ಯವಾದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಹಾಗೂ ಸಂಜೆ 4 ಗಂಟೆಯ ನಂತರಕ್ಕೆ ಸೀಮಿತವಿರುವಂತೆ ಹೊರಾಂಗಣ ಚಟುವಟಿಕೆಗಳನ್ನು ಯೋಜಿಸಿಕೊಳ್ಳುವುದು ಸೂಕ್ತವಾಗಿದ್ದು, ಮಧ್ಯಾಹ್ನ 12 ಗಂಟೆಯಿAದ 4 ಗಂಟೆಯವರೆಗೆ ಬಿಸಿಲಿನಲ್ಲಿ ಓಡಾಡುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕದ್ವಯರು ಹಾಗೂ ಬಿಜೆಪಿ ಮುಖಂಡರು ಪಾದಯಾತ್ರೆ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಮತ ಯಾಚನೆ ಮಾಡಿದರು. ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದಿಂದ ಮೀನುಗಾರಿಕೆ ಬಂದರು ಪ್ರದೇಶದ ತನಕ ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ ಯಾಚಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಬಿಜೆಪಿ ಹಿರಿಯ ಮುಖಂಡರು, ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಗಮನಿಸಿ, ಮತ್ತೊಮ್ಮೆ ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನ ಮಂತ್ರಿಯನ್ನಾಗಿ ನೋಡಲು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಅತ್ಯಧಿಕ ಬಹುಮತದೊಂದಿಗೆ ಆಯ್ಕೆ ಮಾಡುವಂತೆ ಅವರು ಮನವಿ ಮಾಡಿದರು. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪ ತತ್ವಂ ಚೈಲ್ಡ್ ಕೇರ್ ಸೆಂಟರ್ ಶುಭಾರಂಭಗೊಂಡಿತು. ಕುಂದಾಪುರದ ಶ್ರೀದೇವಿ ನರ್ಸಿಂಗ್ ಹೋಮ್ ಇದರ ಮುಖ್ಯಸ್ಥರಾದ ಡಾ. ರವೀಂದ್ರ ರಾವ್ ಹಾಗೂ ಡಾ. ಭವಾನಿ ರವೀಂದ್ರ ರಾವ್ ರವರು ದೀಪ ಬೆಳಗಿಸಿ ಮೂಲಕ ತತ್ವಂ ಚೈಲ್ಡ್ ಕೇರ್ ಸೆಂಟರ್‌ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಳೆದ 20 ವರ್ಷಗಳಿಂದ ಮಕ್ಕಳ ಆರೈಕೆ ಹಾಗೂ ಚಿಕಿತ್ಸೆಯಲ್ಲಿ ಕುಂದಾಪುರ ನಗರದ ಮನೀಷ್ ಆಸ್ಪತ್ರೆ ಹಾಗೂ ಶ್ರೀದೇವಿ ನರ್ಸಿಂಗ್ ಹೋಮ್‌ನಲ್ಲಿ ಮಕ್ಕಳ ತಜ್ಞೆಯಾಗಿ ಸೇವೆ ಸಲ್ಲಿಸಿದ ಡಾ. ರಶ್ಮೀ ಎಸ್ ಉಡುಪ (ಎಂ.ಡಿ.ಪಿಡಿಯಾಟ್ರಿಕ್ಸ್) ರವರು ನೂತನ ಕ್ಲಿನಿಕ್‌ನಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಸೇವೆಗೆ ಲಭ್ಯರಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ.7ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟೊçÃಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ. ಗರಿಷ್ಠ ತಾಪಮಾನದ ಅವಧಿಯಲ್ಲಿ ಮಧ್ಯಾಹ್ನ 12 ರಿಂದ 3 ರ ಅವಧಿಯಲ್ಲಿ ಬಿಸಿಲಿಗೆ ಹೋಗುವುದನ್ನು ಆದಷ್ಟು ಕಡಿಮೆ ಮಾಡಬೇಕು. ಶ್ರಮದಾಯಕ ಚಟುವಟಿಕೆಗಳಲ್ಲಿ ತೊಡಗಬಾರದು. ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು. ಹಗುರ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸಬೇಕು. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ರಕ್ಷಣೆಗಾಗಿ ಕನ್ನಡಕ, ಕೊಡೆ, ಬೂಟು / ಚಪ್ಪಲಿಗಳನ್ನು ಬಳಸಬೇಕು. ಪ್ರಯಾಣದ ಸಂದರ್ಭದಲ್ಲಿ ನೀರಿನ್ನು ಜೊತೆಗೆ ಕೊಂಡೊಯ್ಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ನಂತಹ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಮಾರಿಕಲ್ಲುಬೆಟ್ಟು, ಶ್ರೀ ಮಾರಿಕಾಂಬಾ ಹಾಗೂ ಸಹ ಪರಿವಾರ ದೇವರುಗಳ ಸಾನ್ನಿಧ್ಯದಲ್ಲಿ ವಾರ್ಷಿಕ ವರ್ಧ್ಯಂತ್ಯೋತ್ಸವದ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಇತ್ತಿಚಿಗೆ ಜರುಗಿತು. ಮರವಂತೆಯ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ನಾಯಕ್ ನಾಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರವಂತೆ ಮಾರಿಕಲ್ಲುಬೆಟ್ಟು ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ , ಕದಂ ದುಬೈನ ಶೀನ ದೇವಾಡಿಗ ಮರವಂತೆ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಮರವಂತೆ ಮಾರಿಕಲ್ಲುಬೆಟ್ಟು ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ರಾಜು ದೇವಾಡಿಗ ತ್ರಾಸಿ, ಶೀನ ದೇವಾಡಿಗ ಮರವಂತೆ, ಮರವಂತೆ ಶ್ರೀ ರಾಮಮಂದಿರ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾಗಿರುವ ವಾಸುದೇವ ಖಾರ್ವಿಯವರು ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು. ಈ ಸಂದರ್ಭ ದೇಗುಲದ ಜೀರ್ಣೋದ್ದಾರಕ್ಕೆ ಸಹಕರಿಸಿದ 7 ಜನ ಮಹನೀಯರನ್ನು ಹಾಗೂ ವಿಜ್ಞಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಗರ ಅಥವಾ ಗ್ರಾಮೀಣ ಭಾಗದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ನೀರಿನ ಯಾವುದೇ ತೊಂದರೆಗಳು ಉಂಟಾಗದAತೆ ನೋಡಿಕೊಳ್ಳಬೇಕು. ಯಾರೊಬ್ಬರೂ ದೂರವಾಣಿ ಮೂಲಕ ನೀರಿನ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದ್ದಲ್ಲಿ 24 ಗಂಟೆಯ ಒಳಗಾಗಿ ಅದನ್ನು ಬಗೆಹರಿಸಬೇಕು. ಮಳೆ ಬರುವವರೆಗೂ ನೀರಿನ ಸಮಸ್ಯೆಗೆ ಸ್ಪಂದಿಸಲು ಸದಾ ಸನ್ನದ್ಧರಾಗಿರಬೇಕು ಎಂದರು. ಜಾನುವಾರುಗಳಿಗೆ ಮೇವಿನ ಕೊರತೆ ಈವರೆಗೂ ಕಂಡುಬAದಿಲ್ಲ. ಜಿಲ್ಲೆಯಲ್ಲಿ 2.20 ಲಕ್ಷ ಕ್ಕೂ ಹೆಚ್ಚು ಜಾನುವಾರುಗಳಿದ್ದು, ಮುಂದಿನ 14 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯತೆ ಇದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕು, ಬೆಲೆ ಏರಿಕೆ, ರೈತ, ಹೆಣ್ಣು ಮಕ್ಕಳ ಮಾನಹರಣ, ದೇಶದ ಸಮಸ್ಯೆಗಳ ಬಗ್ಗೆ ಮಾತನಾಡಬೇಕಿದ್ದ ದೇಶದ ಪ್ರಧಾನಿಗಳು ಯಾವುದೋ ನಾಯಕ ಮೀನು ತಿನ್ನುವುದನ್ನೇ ದೊಡ್ಡ ವಿಷಯವನ್ನಾಗಿಸಿ ವ್ಯಂಗ್ಯವಾಡುತ್ತಿದ್ದಾರೆ ನಿಕೇತರಾಜ್ ಮೌರ್ಯ ಹೇಳಿದರು. ಅವರು ಮಂಗಳವಾರ ಕಿರಿಮಂಜೇಶ್ವರದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಿವಮೋಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಪರ ಆಯೋಜಿಸಲಾದ್ದ ಮಹಿಳಾ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಅಂಬೇಡ್ಕರ್ ಅವರ ಶೋಷಿತರು, ಬಡವರು ದೇಶದ ಜನರ ಉಳಿವಿಗಾಗಿ ನೀಡಿದ ಸಂವಿಧಾನವನ್ನೇ ಬದಲಿಸಲು ಹೊರಟಿರುವ ಬಿಜೆಪಿಯನ್ನು ತಿರಸ್ಕರಿಸಿ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಅವರು ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಮೊದಲ ಭಾರಿಗೆ ಮೀಸಲಾತಿ ನೀಡಿ ಧ್ವನಿ ನೀಡಿದ್ದು, ದೇಶದ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ದೇಶದಲ್ಲಿ ಐಎನ್ಡಿಐಎ ಅಧಿಕಾರಕ್ಕೆ ಬಂದರೆ ದೇಶದಲ್ಲಿಯೂ…
