Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಮೇ.7ರಂದು ಜರುಗಲಿದ್ದು, ಇದಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ನಡೆಸಲಾಯಿತು. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 246 ಮತಗಟ್ಟೆಗಳಿದ್ದು 2,40,500 ಮತದಾರರಿದ್ದಾರೆ. 9 ವಿಶೇಷ ಮತಗಟ್ಟೆಗಳನ್ನು ನಿರ್ಮಿಸಿದ್ದು 5 ಸಖಿ 1 ವಿಶೇಷ ಚೇತನ, 1 ಸಾಂಸ್ಕೃತಿಕ, ಸಾಂಪ್ರದಾಯಿಕ ಮತಗಟ್ಟೆಗಳಿವೆ. ಚುನಾವಣೆಗಾಗಿ ಒಟ್ಟು 1192 ಅಧಿಕಾರಿಗಳಿದ್ದು 20 ಸಿಬಂದಿಗಳನ್ನು ಕಾಯ್ದಿರಿಸಲಾಗಿದೆ.598 ಆರಕ್ಷಕರಿದ್ದು 85 ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ.ಮತದಾನಕ್ಕೆ ತಯಾರಿ ಪೂರ್ಣಗೊಂಡಿದ್ದು ಮತಗಟ್ಟೆಯಲ್ಲಿ ಕುಡಿಯುವ ನೀರು, ಆರೋಗ್ಯ ಸೇರಿದಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಮೇ.06: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವರೆಗೆ ಕುಂದಾಪುರ ತಾಲೂಕು ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪುಸ್ತಕ ಓದುವ ಅಭಿರುಚಿ ಜತೆಗೆ ಶಿಕ್ಷಣ, ಜ್ಞಾನಾರ್ಜನೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಶುರುವಾದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ “ಪುಸ್ತಕ ಮನೆ” ಮೂಡುಬಿದಿರೆಯಲ್ಲಿ ತನ್ನ ಎರಡನೇ ಪುಸ್ತಕ ಮಳಿಗೆಯನ್ನು ಲೋಕಾರ್ಪಣೆ ಮಾಡಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ.ಎಂ. ಮೋಹನ್ ಆಳ್ವ, ಎಕ್ಸಲೆಂಟ್ ಸಂಸ್ಥೆಯ ಮುಖ್ಯಸ್ಥರಾದ ಯುವರಾಜ್ ಜೈನ್ , ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ರವರು ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್, ಡಾ. ಗಣನಾಥ ಶೆಟ್ಟಿ ಬಿ , ಅಮೃತ್ ರೈ, ಅಶ್ವಥ್ ಎಸ್.ಎಲ್, ಆದರ್ಶ ಎಂ. ಕೆ , ವಿಮಲ್ ರಾಜ್ ಜಿ , ಗಣಪತಿ ಕೆ. ಎಸ್ ರವರು ಉಪಸ್ಥಿತರಿದ್ದು, ಗಣ್ಯರನ್ನು ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕದಲ್ಲಿ ಪುಸ್ತಕ ಲೋಕದಲ್ಲಿ ಪುಸ್ತಕಮನೆ ಹೊಸ ಮೈಲುಗಲ್ಲು ಸಾಧಿಸಿದ್ದು, ಕರಾವಳಿಯಲ್ಲಿ ತನ್ನ ಎರಡನೇ ಮಳಿಗೆ ಶುರುಮಾಡಿದೆ. ನೂರಾರು ಬರಹಗಾರರ ಪುಸ್ತಕಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿ ಮಾತನಾಡಿ 2024-25ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆದ ಎರಡು ಕಿರು ಪರೀಕ್ಷೆಗಳ ಉತ್ತರ ಪತ್ರಿಕೆಯನ್ನು ಪೋಷಕರಿಗೆ ವಿತರಿಸಿ ವಿದ್ಯಾರ್ಥಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ಮಾತನಾಡಿ ಗುಣಮಟ್ಟದ ಶಿಕ್ಷಣದ ಕುರಿತಾಗಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಹರ್ಷ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ,ವಿದ್ಯಾರ್ಥಿ ಪೋಷಕರು,ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ ಬಿಜೆಪಿ 400 ಅಧಿಕ ಸೀಟ್ ಗೆಲ್ಲಿಲಿದೆ. ಕರ್ನಾಟಕದಲ್ಲಿ 28ಕ್ಕೆ 28 ಸೀಟುಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಬೃಹತ್ ರೋಡ್ ಶೋಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಬಿಜೆಪಿ ಅಲೆ, ಮೋದಿ ಅಲೆ ಎದ್ದಿದೆ. ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರವ ಅವರು ಕನಿಷ್ಠ 3ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ. ಬೈಂದೂರಿನಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ಬರುವ ವಿಶ್ವಾಸವಿದೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ವಿಶ್ವವೇ ಮೆಚ್ಚದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಮೇ.03: ಅತಿಯಾದ ಉಷ್ಣತೆ ಮತ್ತು ಬಿಸಿಗಾಳಿಯಿಂದ ರಕ್ಷಣೆ ಪಡೆಯಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತವು ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು ನೀಡಿರುತ್ತದೆ. ಬಾಯಾರಿಕೆ ಇಲ್ಲದಿದ್ದರೂ ಸಹಾ ಹೆಚ್ಚು ನೀರನ್ನು ಆಗಾಗ್ಗೆ ಕುಡಿಯಬೇಕು. ಮೌಖಿಕ ಪುನರ್ಜಲೀಕರಣ ದ್ರಾವಣ (ಓ.ಆರ್.ಎಸ್), ಎಳನೀರು ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಶರಬತ್ತು, ಹಣ್ಣಿನ ರಸಗಳು, ಮಜ್ಜಿಗೆ/ಲಸ್ಸಿಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಬೆರೆಸಿ ಸೇವಿಸಬೇಕು ಮತ್ತು ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು, ತರಕಾರಿಗಳನ್ನು ಸೇವಿಸುವುದು ಸೂಕ್ತ. ತಿಳಿಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಹಾಗೂ ಗಾಳಿಯಾಡುವ ಪಾದರಕ್ಷೆಗಳನ್ನು ಧರಿಸುವುದು ಈ ಸಂದರ್ಭದಲ್ಲಿ ಉತ್ತಮ. ಬಿಸಿಲಿನಲ್ಲಿ ಹೊರಹೋಗುವ ಸಂದರ್ಭದಲ್ಲಿ ಛತ್ರಿ, ಟೋಪಿ, ಟವೆಲ್, ತಂಪು ಕನ್ನಡಕಗಳನ್ನು ಬಳಸಬೇಕು. ಸಾಧ್ಯವಾದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಹಾಗೂ ಸಂಜೆ 4 ಗಂಟೆಯ ನಂತರಕ್ಕೆ ಸೀಮಿತವಿರುವಂತೆ ಹೊರಾಂಗಣ ಚಟುವಟಿಕೆಗಳನ್ನು ಯೋಜಿಸಿಕೊಳ್ಳುವುದು ಸೂಕ್ತವಾಗಿದ್ದು, ಮಧ್ಯಾಹ್ನ 12 ಗಂಟೆಯಿAದ 4 ಗಂಟೆಯವರೆಗೆ ಬಿಸಿಲಿನಲ್ಲಿ ಓಡಾಡುವುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕದ್ವಯರು ಹಾಗೂ ಬಿಜೆಪಿ ಮುಖಂಡರು ಪಾದಯಾತ್ರೆ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಮತ ಯಾಚನೆ ಮಾಡಿದರು. ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದಿಂದ ಮೀನುಗಾರಿಕೆ ಬಂದರು ಪ್ರದೇಶದ ತನಕ ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ ಯಾಚಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಬಿಜೆಪಿ ಹಿರಿಯ ಮುಖಂಡರು, ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಗಮನಿಸಿ, ಮತ್ತೊಮ್ಮೆ ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನ ಮಂತ್ರಿಯನ್ನಾಗಿ ನೋಡಲು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಅತ್ಯಧಿಕ ಬಹುಮತದೊಂದಿಗೆ ಆಯ್ಕೆ ಮಾಡುವಂತೆ ಅವರು ಮನವಿ ಮಾಡಿದರು. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪ ತತ್ವಂ ಚೈಲ್ಡ್‌ ಕೇರ್‌ ಸೆಂಟರ್‌ ಶುಭಾರಂಭಗೊಂಡಿತು. ಕುಂದಾಪುರದ ಶ್ರೀದೇವಿ ನರ್ಸಿಂಗ್‌ ಹೋಮ್‌ ಇದರ ಮುಖ್ಯಸ್ಥರಾದ ಡಾ. ರವೀಂದ್ರ ರಾವ್ ಹಾಗೂ ಡಾ. ಭವಾನಿ ರವೀಂದ್ರ ರಾವ್‌ ರವರು ದೀಪ ಬೆಳಗಿಸಿ ಮೂಲಕ ತತ್ವಂ ಚೈಲ್ಡ್‌ ಕೇರ್‌ ಸೆಂಟರ್‌ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಳೆದ 20 ವರ್ಷಗಳಿಂದ ಮಕ್ಕಳ ಆರೈಕೆ ಹಾಗೂ ಚಿಕಿತ್ಸೆಯಲ್ಲಿ ಕುಂದಾಪುರ ನಗರದ ಮನೀಷ್‌ ಆಸ್ಪತ್ರೆ ಹಾಗೂ ಶ್ರೀದೇವಿ ನರ್ಸಿಂಗ್‌ ಹೋಮ್‌ನಲ್ಲಿ ಮಕ್ಕಳ ತಜ್ಞೆಯಾಗಿ ಸೇವೆ ಸಲ್ಲಿಸಿದ ಡಾ. ರಶ್ಮೀ ಎಸ್‌ ಉಡುಪ (ಎಂ.ಡಿ.ಪಿಡಿಯಾಟ್ರಿಕ್ಸ್‌) ರವರು ನೂತನ ಕ್ಲಿನಿಕ್‌ನಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಸೇವೆಗೆ ಲಭ್ಯರಿದ್ದಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ.7ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟೊçÃಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ. ಗರಿಷ್ಠ ತಾಪಮಾನದ ಅವಧಿಯಲ್ಲಿ ಮಧ್ಯಾಹ್ನ 12 ರಿಂದ 3 ರ ಅವಧಿಯಲ್ಲಿ ಬಿಸಿಲಿಗೆ ಹೋಗುವುದನ್ನು ಆದಷ್ಟು ಕಡಿಮೆ ಮಾಡಬೇಕು. ಶ್ರಮದಾಯಕ ಚಟುವಟಿಕೆಗಳಲ್ಲಿ ತೊಡಗಬಾರದು. ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು. ಹಗುರ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸಬೇಕು. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ರಕ್ಷಣೆಗಾಗಿ ಕನ್ನಡಕ, ಕೊಡೆ, ಬೂಟು / ಚಪ್ಪಲಿಗಳನ್ನು ಬಳಸಬೇಕು. ಪ್ರಯಾಣದ ಸಂದರ್ಭದಲ್ಲಿ ನೀರಿನ್ನು ಜೊತೆಗೆ ಕೊಂಡೊಯ್ಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ನಂತಹ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಮಾರಿಕಲ್ಲುಬೆಟ್ಟು, ಶ್ರೀ ಮಾರಿಕಾಂಬಾ ಹಾಗೂ ಸಹ ಪರಿವಾರ ದೇವರುಗಳ ಸಾನ್ನಿಧ್ಯದಲ್ಲಿ ವಾರ್ಷಿಕ ವರ್ಧ್ಯಂತ್ಯೋತ್ಸವದ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಇತ್ತಿಚಿಗೆ ಜರುಗಿತು. ಮರವಂತೆಯ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ನಾಯಕ್ ನಾಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರವಂತೆ ಮಾರಿಕಲ್ಲುಬೆಟ್ಟು ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ , ಕದಂ ದುಬೈನ ಶೀನ ದೇವಾಡಿಗ ಮರವಂತೆ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಮರವಂತೆ ಮಾರಿಕಲ್ಲುಬೆಟ್ಟು ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ರಾಜು ದೇವಾಡಿಗ ತ್ರಾಸಿ, ಶೀನ ದೇವಾಡಿಗ ಮರವಂತೆ, ಮರವಂತೆ ಶ್ರೀ ರಾಮಮಂದಿರ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾಗಿರುವ ವಾಸುದೇವ ಖಾರ್ವಿಯವರು ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು. ಈ ಸಂದರ್ಭ ದೇಗುಲದ ಜೀರ್ಣೋದ್ದಾರಕ್ಕೆ ಸಹಕರಿಸಿದ 7 ಜನ ಮಹನೀಯರನ್ನು ಹಾಗೂ ವಿಜ್ಞಾನ…

Read More