Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯಗಳು ಬರದಿಂದ ಸಾಗುತ್ತಿದ್ದು ಉಡುಪಿ ಜಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಶಾಂತ ರೀತಿಯಲ್ಲಿ ಮತದಾನ ನಡೆಯುತ್ತಿದೆ. ಸಂಜೆ 5 ಗಂಟೆಯ ತನಕ ಒಟ್ಟು ಶೇ.72.12 ಮತದಾನ ನಡೆದಿದೆ. ಉಡುಪಿ ಜಿಲ್ಲೆಯಲ್ಲಿ ಬಿರುಸಿನ ಮತದಾನ ನಡೆದಿದ್ದು, ಜಿಲ್ಲೆಯಾದ್ಯಂತ ಹಿರಿಯ ನಾಗರಿಕರು, ವಿಕಲಚೇತನರು, ವಧು ವರರು, ಪ್ರಥಮ ಭಾರಿಗೆ ಮತದಾನ ಮಾಡುವ ಯುವ ಸಮೂಹ ಕೂಡ ಖುಷಿಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ನಡೆದು ಬರಲು ಸಾಧ್ಯವಾಗದ ವಿಕಲಚೇತನರಿಗೆ ವಾಹನದ ಮೂಲಕ ಕರೆತಂದು ವೀಲ್ ಚೇರ್ ಮೂಲಕ ಮತಗಟ್ಟೆಗೆ ಕರೆದೋಯ್ದು ಮತದಾನ ಮಾಡಿಸಲಾಯಿತು. ಕುಂದಾಪುರ ಕೋಯಕುಟ್ಟಿ ಹಾಲ್ ಸಮೀಪದ 21ನೇ ಮತಗಟ್ಟೆಯಲ್ಲಿ ಅನಾರೋಗ್ಯವುಳ್ಳ ತಾಯಿ ವಿ.ಕೆ ಲಲಿತಾ (85) ಅವರನ್ನು ಪುತ್ರ ವಿ. ವಾಸುದೇವ ಹಂದೆ ಅವರು ತಮ್ಮ ಅಂಬುಲೆನ್ಸ್ ಮೂಲಕ ಕರೆತಂದು ಮತದಾನ ಮಾಡಿಸಿ ತಮ್ಮ ಜವಾಬ್ದಾರಿ ಮೆರೆದರು. ಮದುವೆ ತಯಾರಿಯಲ್ಲಿದ್ದ ಮಧುಗಳು ಕೂಡ, ಹಸೆಮಣೆ ಏರುವ ಮುನ್ನವೇ ಮತದಾನ ಮಾಡಿ ತಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಣಿಪಾಲ ಇದರ ವತಿಯಿಂದ ದಿ. ಮಾಧವ ರಾವ್ ಸ್ಮರಣಾರ್ಥ ಕೊಡ ಮಾಡುವ 2023-24ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಗೆ ಗಂಗೊಳ್ಳಿಯ ದಾಕುಹಿತ್ಲು ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಭಾಜನರಾಗಿದ್ದಾರೆ. ಮಣಿಪಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಫಿಲೋಮಿನಾ ಫೆರ್ನಾಂಡಿಸ್ ಅವರಿಗೆ ಹಸ್ತಾಂತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 586 ಅಂಕ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂರ್ವಿ ಆರ್. ಚಿತ್ತಾಲ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು. ಗಂಗೊಳ್ಳಿಯ ಎಸ್.ವಿ.ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ. ನಾಗೇಂದ್ರ ಪೈ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷರಾದ ಉದಯಶಂಕರ ರಾವ್, ಜನಾರ್ದನ ಪೂಜಾರಿ ಪೆರಾಜೆ, ಉಮೇಶ ಮೇಸ್ತ ಹಾಗೂ ದಯಾನಂದ ಗಾಣಿಗ ಅವರು ಪೂರ್ವಿ ಚಿತ್ತಾಲ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗೌರವಿಸಿದರು. ಗಂಗೊಳ್ಳಿ ರೋಟರಿ ಕಾರ್ಯದರ್ಶಿ ಕೃಷ್ಣ ಪೂಜಾರಿ, ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ಕೆ. ರಾಮನಾಥ ನಾಯಕ್, ವಾಸುದೇವ ಶೇರುಗಾರ್, ನಾರಾಯಣ ಇ. ನಾಯ್ಕ್, ರೋಟರಿ ಸದಸ್ಯರಾದ ರಾಮನಾಥ ಚಿತ್ತಾಲ್, ಟಿ.ದಿನಕರ ಶೆಣೈ, ಆನಂದ ಕೆ., ಮಾಲಾಶ್ರೀ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರೇಶ್ಮಾ ಚಿತ್ತಾಲ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್ಸ್‌) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.‌ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.1312779, ನೇಹಾ ಕೆ ಉದಪುಡಿ 98.9485981, ಪ್ರಣವ್ ಟಿ ಎಮ್ 98.6313992, ಆದಿತ್ಯ ಅಲಗೌಡ ಪಾಟೀಲ್ 98.5573008, ಯುವರಾಜ್ ಬಿ ಕೆ 98.287914, ಅಕುಲ್ ಕೃಷ್ಣ ಎಮ್ ಎಸ್ 98.0229479, ಪಾರ್ಥ ಎ ಬಿ 98.0229479 ಪರ್ಸಂಟೈಲ್ ಗಳಿಸಿರುತ್ತಾರೆ. ಈ ಮೂಲಕ ಪರೀಕ್ಷೆ ಬರೆದ 441 ವಿದ್ಯಾರ್ಥಿಗಳಲ್ಲಿ 126 ವಿದ್ಯಾರ್ಥಿಗಳು ಮುಂಬರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳು ಎನ್.ಐ.ಟಿ ಅಂತಹ ಸಂಸ್ಥೆಗಳಲ್ಲಿ ಬಿ.ಇ ಪದವಿಗೆ ಪ್ರವೇಶ ಪಡೆಯುವ ಅವಕಾಶದ ಜೊತೆಗೆ ಐ.ಐ.ಟಿ ಸಂಸ್ಥೆ ಸೇರಲು ಮಾನದಂಡವಾಗಿರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆದಿರುತ್ತಾರೆ. ಜೆ.ಇ.ಇ (ಮೈನ್ಸ್) ಪರೀಕ್ಷೆಯಲ್ಲಿ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಗ್ನಿಶಾಮಕದವರು ಬೆಂಕಿ ಬಿದ್ದಾಗ ಮಾತ್ರ ಬರುವವರು ಎಂಬ ಭಾವನೆ ಜನರಲ್ಲಿ ಇದೆ ಆದರೆ ಅಗ್ನಿ ಅವಘಡಗಳಲ್ಲದೆ ಚಂಡಮಾರುತ, ಭೂಕುಸಿತ, ನೆರೆಹಾವಳಿ, ಮುಂತಾದ ಪ್ರಾಕೃತಿಕ ವಿಕೋಪಗಳಲ್ಲದೆ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ, ಜೀವ ರಕ್ಷಣೆ, ಪ್ರಾಣಿ ಪಕ್ಷಿಗಳ ಜೀವ ರಕ್ಷಣೆ ಸೇರಿದಂತೆ ತುರ್ತು ಸೇವೆಗಳಿಗೆ 24 ಗಂಟೆಗಳೂ ಕಾರ್ಯನಿರ್ವಹಿಸುವವರಾಗಿದ್ದೇವೆ ಎಂದು ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಶ್ರೀನಿವಾಸ ಪೂಜಾರಿ ಹೇಳಿದರು. ಲಾವಣ್ಯ ಬೈಂದೂರು ಆಶ್ರಯದಲ್ಲಿ ಲಾವಣ್ಯ ರಂಗಮನೆಯಲ್ಲಿ ನಡೆಯುತ್ತಿರುವ ಲಾವಣ್ಯ ಮಕ್ಕಳ ರಂಗ ತರಬೇತಿ ಶಿಬಿರದ ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ಮಾತನಾಡಿದರು. ಬೆಂಕಿ ಎಲ್ಲಿಯೇ ಆದರೂ ಒಂದೇ ಬಾರಿಗೆ ದೊಡ್ಡದಾಗಿ ಆವರಿಸಿಕೊಳ್ಳುವುದಿಲ್ಲ ಮೊದಲು ಸಣ್ಣ ಮಟ್ಟದಿಂದ ಶುರುವಾಗಿ ಅದನ್ನು ಹಾಗೆಯೇ ಬಿಟ್ಟಾಗ ಮಾತ್ರ ದೊಡ್ಡ ಮಟ್ಟಕ್ಕೆ ತಲುಪುತ್ತದೆ ಅದಕ್ಕಾಗಿ ಸಣ್ಣದಿರುವಾಗಲೇ ಹೇಗೆ ಅದನ್ನು ನಂದಿಸಬೇಕು ಎಂದು ಪ್ರತಿಯೊಬ್ಬರು ತಿಳಿದುಕೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮಕ್ಕೂ ಮೊದಲು ದೇಶಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯಗಳು ಬರದಿಂದ ಸಾಗುತ್ತಿದ್ದು ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಶೇ.57.49 ಮಂದಿ ಮತ ಚಲಾಯಿಸಿದ್ದಾರೆ. ಇಂದು ಮದುವೆ ತಯಾರಿಯಲ್ಲಿದ್ದ ಮಧುಗಳು ಕೂಡ, ಹಸೆಮಣೆ ಏರುವ ಮುನ್ನವೇ ಮತದಾನ ಮಾಡಿ ತಮ್ಮ ಜವಾಬ್ದಾರಿ ಮೆರೆದಿದ್ದಾರೆ. ಪೋಟೋದಲ್ಲಿ ಇರುವಂತೆ ಕ್ರಮವಾಗಿ (ಬಲದಿಂದ ಎಡಕ್ಕೆ) ಯಡಬೆಟ್ಟು ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ವಧು ಸೂರ್ತಿ ಆಚಾರ್ಯ, ಗೋಪಾಡಿ ಗ್ರಾ.ಪಂ ವ್ಯಾಪ್ತಿಯ ಮತಗಟ್ಟೆಯಲ್ಲಿ ವಧು ಹೃತಿಕಾ ಹಾಗೂ ವಡೆರಹೋಬಳಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ವಧು ಅಶ್ವಿನಿ ಮತಚಲಾಯಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟತಟ್ಟು ಗ್ರಾಮ ಪಂಚಾಯತ್ ಮತಗಟ್ಟೆಯಲ್ಲಿ ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದರು. ಕೋಟ ಶ್ರೀನಿವಾಸ ಪೂಜಾರಿ, ಪತ್ನಿ ಶಾಂತ ಹಾಗೂ ಪುತ್ರಿ ಶ್ರುತಿ ಅವರೊಂದಿಗೆ ಮತಗಟ್ಟೆಗೆ ತೆರಳಿ ಬೆಳಿಗ್ಗೆ 7.30 ಗಂಟೆಗೆ ಮತದಾನ ಮಾಡಿದರು. ಮತದಾನದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯಿಸಿ, ದೇಶದ ಐಕ್ಯತೆ ಮತ್ತು ಭದ್ರತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ. ಅಧಿಕ ಸಂಖ್ಯೆಯಲ್ಲಿ ಮತದಾರರು ನನ್ನ ಕೈ ಹಿಡಿಯುತ್ತಾರೆ ಎಂಬ ಭರವಸೆ ಇದೆ ಎಂದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕೊರ್ಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು. ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆ ಅವರೊಂದಿಗೆ ಮತಗಟ್ಟೆಗೆ ಆಗಮಿಸಿದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮತದಾನದ ಬಳಿಕ ಅವರು ಪ್ರತಿಕ್ರಿಯಿಸಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು, ಗೆಲ್ಲುವ ನಿರೀಕ್ಷೆ ಇದೆ. ಮತದಾರರು ಬೆಂಬಲಿಸುತ್ತಿರುವುದು ಗೆಲುವಿನ ವಿಶ್ವಾಸ ಹೆಚ್ಚಿಸಿದೆ ಎಂದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ ಹಾಗೂ ಕುಂದಾಪುರ ಸ್ವೀಪ್ ಸಮಿತಿ ನೇತೃತ್ವದಲ್ಲಿ ಬುಧವಾರ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಕುಂದಾಪುರದಲ್ಲಿ ಪಂಜಿನ ಮೆರವಣಿಗೆ ಜರುಗಿತು. ಕುಂದಾಪುರ ತಾಲೂಕು ಪಂಚಾಯತ್ ಆವರಣದಲ್ಲಿ ಪಂಜಿನ ಮೆರವಣಿಗೆಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ ಪ್ರತಿಯೊಬ್ಬ ನಾಗರಿಕನೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು. ಅದಕ್ಕಾಗಿ ಸಾಕಷ್ಟು ಮತದಾನ ಜಾಗೃತಿ ಮೂಡಿಸಲಾಗಿದೆ. ಮತಗಟ್ಟೆಗಳಲ್ಲಿ ಕನಿಷ್ಟ ಸೌಲಭ್ಯವಿರುವಂತೆ ನೋಡಿಕೊಳ್ಳಲಾಗಿದೆ. ಮಹಿಳೆಯರು, ವಿಕಲಚೇತನರು ಹಾಗೂ ಯುವ ಸಮುದಾಯವನ್ನು ಮತಗಟ್ಟೆಯತ್ತ ಆಕರ್ಷಿಸಲು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ 17 ವಿಶೇಷ ಮತಗಟ್ಟೆಗಳನ್ನು ಮಾಡಲಾಗಿದೆ ಎಂದರು. ತಾಲೂಕು ಪಂಚಾಯತಿ ಆವರಣದಿಂದ ಕುಂದಾಪುರ ಶಾಸ್ತ್ರೀ ವೃತ್ತದ ತನಕ ಅಧಿಕಾರಿಗಳು ಹಾಗೂ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ ಜರುಗಿತು. ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಮೊಂಬತ್ತಿಯನ್ನು ಬೆಳಗಿ, ಪ್ಲೈಓವರ್ ಮೇಲ್ಭಾಗದಲ್ಲಿ ಪಂಜುಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಲಾಯಿತು. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಪ್ರೆಮಾನಂದ, ಮೆಸ್ಕಾಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.25: ಬಡಗುತಿಟ್ಟಿನ ಯಕ್ಷರಂಗದ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಇಂದು ಬೆಳಗ್ಗೆ 4:30ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಪೆರ್ಡೂರು ಮೇಳದಲ್ಲಿ ಸುಧೀರ್ಘ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ತೊಡಿಗಿಸಿಕೊಂಡಿದ್ದರು. 1957ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ…

Read More