Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬೈಕ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟ ರಾ.ಹೆ – 66ರ ಬಸ್ ನಿಲ್ದಾಣದ ಹತ್ತಿರ ಮಂಗಳವಾರ ನಡೆದಿದೆ. ಮಣೂರು ನಿವಾಸಿ ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತ ದುರ್ದೈವಿ ಬೆಳಿಗ್ಗೆ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ ಬಸ್ ನಿಲ್ದಾಣ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಸೇರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಿದ್ದಾರೆ. ಕೋಟ ಪೊಲೀಸರು ಸ್ಥಳಕ್ಕಾಗಿಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರಸಿದ್ದ ಹೋಟೆಲ್ ಪಾರಿಜಾತದ ಮಾಲಕ ರಾಮಚಂದ್ರ ಭಟ್ (82 ವರ್ಷ) ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ ರಾಮಚಂದ್ರ ಭಟ್ ಅವರು ಪಾರಿಜಾತ ಭಟ್ರು ಎಂದೇ ಪ್ರಸಿದ್ಧರಾಗಿದ್ದರು. ಅವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿ ಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ತಾಲೂಕಿನ ಕಿರಿಮಂಜೇಶ್ವರದಲ್ಲಿ ಬಿಜೆಪಿ ಬೈಂದೂರು ಮಂಡಲದಿಂದ ನಡೆದ ಶಕ್ತಿಸಿಂಧು – ಬೃಹತ್ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ.33ರಷ್ಟು ಸ್ಥಾನ ಹಾಗೂ ರಾಜ್ಯದಲ್ಲಿ ಜಿ.ಪಂ-ತಾಪಂ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಶೇ. 50ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಿದವರು ಪ್ರಧಾನಿ ಮೋದಿ ಹಾಗೂ ಬಿ.ಎಸ್. ಯಡಿಯೂರಪ್ಪನವರು. ಆದರೆ ರಾಜ್ಯ ಸರ್ಕಾರ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇಂತಹ ಸರ್ಕಾರ ಅಧಿಕಾರದಲ್ಲಿ ಇರಬೇಕಾ ಎಂಬುದನ್ನು ಮತದಾರರು ಯೋಚಿಸಬೇಕಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯನವರು ಇಂದು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಇದೂ ಕೇಂದ್ರ ಸರಕಾರದ ನೀಡುತ್ತಿರುವ ಅಕ್ಕಿಯಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಸುಳ್ಳು ಹೇಳಿಕೊಂಡು ರಾಜಕಾರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ತನ್ನ ಪ್ರೀತಿಯನ್ನು ಒಪ್ಪಿಲ್ಲ ಎನ್ನುವ ಕಾರಣಕ್ಕೆ ನೇಹಗಳನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ. ಇದು ಲವ್ ಜಿಹಾದ್ ನ ಒಂದು ಭಾಗ. ಈ ಸರ್ಕಾರ ಕೊಲೆಯಾದ ನೇಹಳ ಕುಟುಂಬಕ್ಕೆ ರಕ್ಷಣೆ ನೀಡುವುದನ್ನು ಬಿಟ್ಟು ಕೊಲೆ ಮಾಡಿದವನ ಮನೆಗೆ ರಕ್ಷಣೆ ನೀಡಿದೆ. ರಾಮ ನವಮಿ ಪಾನಕ ಹಂಚಿದವರ ವಿರುದ್ಧ ಕೇಸ್ ದಾಖಲಿಸುತ್ತಾರೆ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹಾಡು ಬರೆದರೆ ಹಲ್ಲೆ ಮಾಡುತ್ತಾರೆ. ಮಡಿಕೇರಿಯ ಕುಟ್ಟಪ್ಪ, ಶಿವಮೊಗ್ಗದ ಹರ್ಷ, ಭಟ್ಕಳ ಸಮೀಪದ ಪರೇಶ್ ಮೆಸ್ತಾ ಹೀಗೆ ನಮ್ಮ ಕಾರ್ಯಕರ್ತರನ್ನು ಕಳೆದುಕೊಳ್ಳುತ್ತಿದ್ದೇವೆ. ಇದೆಲ್ಲದಕ್ಕೂ ಉತ್ತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಶಿರೂರು ನೇಮಕಗೊಂಡಿದ್ದಾರೆ. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಬ್ಲಾಕ್ ಅಧ್ಯಕ್ಷ ಅರವಿಂದ ಪೂಜಾರಿ ಅವರು, ಪ್ರಸನ್ನ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಶಿರೂರು ಭಾಗದ ಯುವ ಮುಖಂಡರಾಗಿರುವ ಪ್ರಸನ್ನ, ಉದ್ಯಮದೊಂದಿಗೆ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರೆಂಟಿ ಕಾರ್ಡ್ ಇಂದು ಅನುಷ್ಠಾನಕ್ಕೆ ತರಲಾಗಿದೆ. ಇದರಿಂದಾಗಿ ಜನರಲ್ಲಿಯೂ ವಿಶ್ವಾಸ ಮೂಡಿದೆ. ಈ ಭಾರಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವೂ ಗ್ಯಾರೆಂಟಿ ಜಾರಿಗೊಳಿಸುತ್ತಿದ್ದು, ಇದನ್ನು ಜನರಿಗೆ ಮನದಟ್ಟು ಮಾಡುವ ಪ್ರಬಲ ಮಾಧ್ಯಮ ನಮ್ಮ ಕಾರ್ಯಕರ್ತರೇ ಆಗಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಅನಿಲ್ ಹೇಳಿದರು. ಅವರು ಶನಿವಾರ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಬಿಡುಗಡೆಗೊಳಿಸಿ ಬಳಿಕ ಮಾತನಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು 5 ಲಕ್ಷದಷ್ಟು ಕುಟುಂಬ ಫಲಾನುಭವಿಗಳು ಕಾಂಗ್ರೆಸ್ ಗ್ಯಾರೆಂಟಿಯ ಫಲಾನುಭವಿಗಳಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಸರಕಾರದ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನೀಡಲಿರುವ ಗ್ಯಾರೆಂಟಿಯನ್ನು ಮನವರಿಕೆ ಮಾಡುವ ಕೆಲಸ ಮಾಡಬೇಕು. ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬರನ್ನು ಕಾರ್ಯಕರ್ತರು ವೈಯಕ್ತಿಕವಾಗಿ ಭೇಟಿಯಾಗಿ ಮನವರಿಕೆ ಮಾಡುವ ಕೆಲಸ ಮಾಡಬೇಕು ನಿಮ್ಮ ಬೂತ್ ನಿಮ್ಮ ಜವಾಬ್ದಾರಿ ಎಂಬುದನ್ನು ಪ್ರತಿಯೊಬ್ಬ ನಾಯಕರು ಅರಿತು ಕೆಲಸ ಮಾಡಬೇಕಾಗಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಯಾಶ್ಯೂ ಫ್ಟಾಕ್ಟರಿಯಿಂದ ರೂ.1.21 ಕೋಟಿ ಮೌಲ್ಯದ ಗೋಡಂಬಿಯನ್ನು ಟ್ರಕ್ ಮೂಲಕ ಕೊಂಡೊಯ್ದಿದ್ದ ಚಾಲಕ ಟ್ರಕ್ ಸಹಿತ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಹೊರರಾಜ್ಯದಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ರಹ್ಮಾವರ ತಾಲೂಕಿನ 33ನೇ ಶೀರೂರು ಗ್ರಾಮದ ಮೂಡುಗುಡ ಎಂಬಲ್ಲಿರುವ ಶ್ರೀ ಕೃಷ್ಣ ಕ್ಯಾಶ್ ಪ್ಯಾಕ್ಟರಿಯಿಂದ ಟ್ರಕ್ನಲ್ಲಿ ಗೋಡಂಬಿಯನ್ನು ಸೂರತ್ ಹಾಗೂ ಅಹಮ್ಮದಬಾದಿಗೆ ಕ್ರಮವಾಗಿ 21.24 ಹಾಗೂ 3.450 ಟನ್ ಗೋಂಡಬಿಯನ್ನು ಲೋಡ್ ಮಾಡಿ ಇನ್ವೈಸ್ ಮತ್ತು ಇ-ವೇ ಬಿಲ್ ತಯಾರಿಸಿ ಲಾರಿಯ ಚಾಲಕ ರಮ್ಝಾನ್ ಸೌದಾ ಮತ್ತು ಸಹ ಚಾಲಕ ಮಹೇಂದ್ರಪುರಿ ಲಾಲ್ಪುರಿ ಗುಸ್ಸಾಯಿ ಜೊತೆಯಲ್ಲಿ ಲೋಡ್ ಮಾಡಿಸಿಕೊಂಡು ತೆರಳಿದವರು ಲಾರಿಯಲ್ಲಿದ್ದ 1,21,76,598 ರೂ ಮೌಲ್ಯದ 24.69 ಮೆಟ್ರಿಕ್ ಟನ್ ಗೋಡಂಬಿಯನ್ನು ತಲುಪಿಸಬೇಕಾಗಿದ್ದವರಿಗೆ ತಲುಪಿಸದೇ ಮೋಸ ಮಾಡಿ ವಂಚನೆ ಮಾಡಿದ್ದರು. ಈ ಬಗ್ಗೆ ಮೋಹನ ದಾಸ್ ಶೆಟ್ಟಿ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆಗೆ ಪಿಎಸೈ ಪವನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನರೇಂದ್ರ ಮೋದಿಯವರು ವಿಶ್ವವೇ ಪುರಸ್ಕರಿಸುವ ನಾಯಕ. ಅಂತರಾಷ್ಟ್ರೀಯ ಸಂಬಂಧ, ರಾಷ್ಟ್ರದ ಭದ್ರತೆ, ಹಿಂದೂ ಧರ್ಮದ ಉಳಿವು ಇವೆಲ್ಲದಕ್ಕೂ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನೂ ಕೂಡ ಗೆದ್ದು ಅವರು ಪ್ರಧಾನಿಯಾಗಲು ಬೆಂಬಲಿಸುವುದುದೇ ನನ್ನ ಗುರಿಯಾಗಿದೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಗುರುವಾರ ಉಪ್ಪಂದದ ದೇವಕಿ ಬಿ.ಆರ್. ಸಭಾಂಗಣದಲ್ಲಿ ಜರುಗಿದ ರಾಷ್ಟ್ರಭಕ್ತ ಬಳಗದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ಕಾಂಗ್ರೆಸ್ ಸೋಲಿಸುವುದು, ಮೋದಿ ಪ್ರಧಾನಿಯಾಗುವುದು ಹಾಗೂ ಬಿಜೆಪಿಯ ಹೊಂದಾಣಿಕೆ ರಾಜಕಾರಣಕ್ಕೆ ಕೊನೆ ಹಾಡಲು ಕಾರ್ಯಕರ್ತರ ನಮ್ಮ ಜೊತೆಗೆ ಬಂದಿದ್ದಾರೆ. ಜಾತೀಯತೆ, ಕುಟುಂಬ ರಾಜಕಾರಣ, ಬಿಜೆಪಿಯ ಹಿರಿಯ ಕಿರಿಯ ಕಾರ್ಯಕರ್ತರ ನೋವು ಈ ಎಲ್ಲದಕ್ಕೂ ಒಂದು ಪರಿಹಾರ ಕಂಡುಕೊಳ್ಳಲು ಚುನಾವಣೆ ಎದುರಿಸುತ್ತಿದ್ದೇನೆ. ರಾಷ್ಟ್ರಭಕ್ತ ಬಳಗ ಸಂಘಟನೆಗೆ ದಿನದಿಂದ ದಿನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು. ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಮಾತನಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಉಪ್ಪುಂದದ ಶ್ರೇಯಸ್ ಜಿ. ರಾವ್ 651ನೇ ರ್ಯಾಂಕ್ ಗಳಿಸಿದ್ದಾರೆ. ಬೈಂದೂರು ತಾಲೂಕು ಉಪ್ಪುಂದದವರಾದ ಶ್ರೇಯಸ್ ಜಿ. ರಾವ್ ಅವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸಂದೀಪನ್ ಮತ್ತು ಹೆಚ್.ಎಂ.ಎಂ.ಎಸ್ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣವನ್ನು ನಾವುಂದದ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಪೂರೈಸಿ ಬಳಿಕ ಶಿವಮೊಗ್ಗದ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ. ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಬಿಎಂಎಸ್ ರೆಡಿಯೋಲಾಜಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಕಳೆದ ಎರಡೂವರೆ ವರ್ಷದಲ್ಲಿ ಉಡುಪಿ ಅಂಬಲಪಾಡಿಯಲ್ಲಿ ವೃತ್ತಿಯಲ್ಲಿರುವ ಶ್ರೇಯಸ್ ಅವರು ವೃತ್ತಿಯ ಜೊತೆಗೆ ಯುಪಿಎಸ್ಸಿಗೂ ತಯಾರಿ ನಡೆಸಿದ್ದರು. ಶ್ರೇಯಸ್ ಅವರು ಉಪ್ಪುಂದದ ದಿ. ಗಣೇಶ್ ಶ್ರೀನಿವಾಸ ರಾವ್ ಹಾಗೂ ಉಪ್ಪುಂದ ಉರ್ದು ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸುಶೀಲಾ ಯು.ಎಸ್. ಅವರ ಪುತ್ರರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ (ರಿ) ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ ಸುದೀರ್ಘ 25ವರ್ಷಗಳ ಸೇವಾನುಭವ ಹೊಂದಿರುವ ರವಿದಾಸ್ ಶೆಟ್ಟಿ ನೂತನ ಮುಖ್ಯಶಿಕ್ಷಕರಾಗಿ ನೇಮಕಗೊಂಡಿರುತ್ತಾರೆ ರವಿದಾಸ್ ಶೆಟ್ಟಿ ಅವರು ಎಂಎ, ಎಂಇಡ್ ಪದವೀಧರರಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಯೊಂದಿಗೆ (ಜಿಲ್ಲಾಮಟ್ಟದ ಉತ್ತಮಶಿಕ್ಷಕ ಪ್ರಶಸ್ತಿ ಕಾರವಾರ ಮತ್ತು ಉಡುಪಿ ಜಿಲ್ಲೆ, ಜಿಲ್ಲಾ ಆದರ್ಶ ಶಿಕ್ಷಕ, ಸಾಧಕ ಪ್ರಶಸ್ತಿ, ಜೆಸಿಐ ಉಪ್ಪುಂದ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಶುಭದಾ ಶಾಲೆಗಳು ಹಾಗೂ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇರಳ) ಆಯ್ಕೆಯಾದ ನೂತನ ಮುಖ್ಯ ಶಿಕ್ಷಕರಿಗೆ ಸಂಸ್ಥೆಯ ಆಡಳಿತಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದ ಪಾಲಕರು ಶುಭಕೋರಿರುತ್ತಾರೆ

Read More