ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ರಿ. ಬೈಂದೂರು ತಾಲೂಕು, ಅರಣ್ಯ ಇಲಾಖೆ ಕುಂದಾಪುರ ವಲಯ, ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಮೆಕ್ಕೆ ದುಡ್ಡಿನಗುಳಿ ಅವರ ಸಹಯೋಗದಲ್ಲಿ ಮೆಕ್ಕೆ ಗ್ರಾಮದ ಬಸ್ರಿಬೇರು ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳ ಸಂರಕ್ಷಣೆಗಾಗಿ ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೈಂದೂರು ತಾಲೂಕು ಯೋಜನಾಧಿಕಾರಿಗಳದ ಕೆ. ವಿನಾಯಕ ಪೈ. ಗೀಡ ನಾಟಿ ಮಾಡಿ ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳ ಸಂರಕ್ಷಣೆಗಾಗಿ ಹಾಗೂ ಮಣ್ಣಿನ ಸವಕಳಿ ತಪ್ಪಿಸಲು, ಉತ್ತಮ ಗಾಳಿ, ಮಳೆ, ಬೆಳೆಗಾಗಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಪ್ರಸ್ತುತ ವರ್ಷದಲ್ಲಿ ರಾಜ್ಯದಲ್ಲಿ ವೃಕ್ಷ ಬಂಧನ ಕಾರ್ಯಕ್ರಮದಡಿಯಲ್ಲಿ ದಶ ಲಕ್ಷ ಗಿಡಗಳನ್ನು ನಾಟಿ ಮಾಡುವ ಉದ್ದೇಶ ಹೊಂದಿದ್ದು, ಬೈಂದೂರು ತಾಲೂಕಿನಲ್ಲಿ ಐದು ಸಾವಿರ ಗಿಡಗಳನ್ನು ಈ ಬಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ 2024 – 26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗುತ್ತಿಗೆದಾರರು, ಯುವ ಸಂಘಟಕ, ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಪ್ರಸ್ತುತ ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅವರು ವಿವಿಧ ಸಂಘ – ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರು ಬಸ್ರೂರು ನಿವೃತ್ತ ಬ್ಯಾಂಕ್ ಉದ್ಯೋಗಿ ಸುಭಾಷ್ ಚಂದ್ರ ಶೆಟ್ಟಿ ಹಾಗೂ ರಸಿಕ ಎಸ್. ಶೆಟ್ಟಿ ದಂಪತಿಯ ಸುಪುತ್ರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಕಾರಿ ಪ್ರೌಢಶಾಲೆ ಬಸ್ರೂರು ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಧಾ ಫರ್ವಿನ್ ಪ್ರಥಮ ಸ್ಥಾನ (ಪ್ರೌಢಶಾಲೆ ವಿಭಾಗ), ಕಿಶನ್ ಶೆಟ್ಟಿ ಮತ್ತು ತನ್ಮಯ್ ತೃತೀಯ ಸ್ಥಾನ ಪಡೆದಿರುತ್ತಾರೆ ರಿಧಾ ಫರ್ವಿನ್ ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ಕರಾಟೆ ಶಿಕ್ಷಕಿ ಮೇಘನಾ ತರಬೇತಿ ನೀಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಾಧಿಕಾರಿಗಳು, ಮುಖ್ಯ ಶಿಕ್ಷಕರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ,.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೈಯಕ್ತಿಯ ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ ಪತ್ರ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, ನಿಗಧಿತ ಮೊತ್ತದ ಛಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿಯಲ್ಲಿ ಆಗಸ್ಟ್ 20 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಬೇಲರ್ ಅನ್ನು ಕಡ್ಡಾಯವಾಗಿ ಖರೀದಿಸಬೇಕು. ಇವುಗಳೊಂದಿಗೆ ಹಾರ್ವೆಸ್ಟರ್ ಹಬ್ಗೆ ಅನುಮತಿಸಲಾದ ಇತರೆ ಉಪಕರಣಗಳನ್ನು ಸ್ಥಳೀಯ ಅವಶ್ಯಕತೆಗಳಿಗನುಗುಣವಾಗಿ ಖರೀದಿಸಬಹುದಾಗಿದೆ. ವೈಯಕ್ತಿಕ ಫಲಾನುಭವಿಗಳಿಗೆ ಪ್ರತಿ ಹಾರ್ವೆಸ್ಟರ್ ಹಬ್ಗೆ ಉಪಕರಣವಾರು ಗರಿಷ್ಠ ಮಿತಿಗೊಳಪಟ್ಟು ಶೇ. 50 ರ ಸಹಾಯಧನ ಅಥವಾ 40 ಲಕ್ಷ ರೂ. ಮೀರದಂತೆ ಸಹಾಯಧನವನ್ನು ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮುಖಾಂತರ ಒದಗಿಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ ವತಿಯಿಂದ ಆಗಸ್ಟ್ 18 ರ ಭಾನುವಾರ ಯುವ ಮೆರಿಡಿನ್ನಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕರಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರೂ, ಸಾಹಿತ್ತಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಪ್ರಕರ ವಾಗ್ಮಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೇಡಿಯೋ ಕುಂದಾಪುರ 89.6 ಎಫ್. ಎಂ. ಮತ್ತು “ಕುಂದಪ್ರಭ” ಆಶ್ರಯದಲ್ಲಿ ನಡೆದ ಕುಂದಗನ್ನಡ ಹಾಡುಗಾರಿಕೆ ಸ್ಪರ್ಧೆಯಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ – ಆಪರೇಟಿವ್ ಸೊಸೈಟಿಯ 2024 – 26 ನೇ ಸಾಲಿನ ಅಧ್ಯಕ್ಷರಾಗಿ ಜಿ. ವೆಂಕಟೇಶ ಶೆಣೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರಿಯ ಸಭಾ ಭವನದಲ್ಲಿ ಸೋಮವಾರ ನಡೆದ ಅಧ್ಯಕ್ಷರ ಸ್ಥಾನಕ್ಕೆ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಆದ ಕಾರಣ ಜಿ. ವೆಂಕಟೇಶ ಶೆಣೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ನಿರ್ವಾಚನಾಧಿಕಾರಿ ಜಯರಾಮ ಕೆ. ಘೋಷಿಸಿದರು. ಸಹಕಾರಿಯ ಅಧ್ಯಕ್ಷರಾಗಿದ್ದ ಎಚ್. ಗಣೇಶ ಕಾಮತ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಸಹಕಾರಿಯ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಸಹಕಾರಿಯ ಉಪಾಧ್ಯಕ್ಷ ಜಿ. ವಿಶ್ವನಾಥ ಆಚಾರ್ಯ, ನಿರ್ದೇಶಕರಾದ ಎಚ್. ಗಣೇಶ ಕಾಮತ್, ಎನ್. ಮಾಧವ ಕಿಣಿ, ಎಸ್. ವೆಂಕಟರಮಣ ಆಚಾರ್ಯ, ಬಿ. ರಾಘವೇಂದ್ರ ಪೈ, ಜಿ. ವೇದವ್ಯಾಸ ಆಚಾರ್ಯ, ಕೆ. ಪರಮೇಶ್ವರ ನಾಯಕ್, ನಾಗಪ್ರಸಾದ ಪೈ. ಎಂ. ಜಿ., ಕೆ. ಗೋಪಾಲಕೃಷ್ಣ ನಾಯಕ್, ಮಹಾಬಲ ಪೂಜಾರಿ, ಕಿರಣ್ ಫಿಲಿಪ್ ಪಿಂಟೊ, ಮಾಲಾ ಕೆ. ನಾಯಕ್, ಗೀತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎ.ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ಆಯೋಜಿಸಿದ ಇಂಟರ್ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2024ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ಸಿಂಚನಾ ಕುಂದಾಪುರ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾಳೆ. ಕೋಡಿಯ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಿಂಚನ, ಕೋಡಿಯ ಸತೀಶ್ ಮತ್ತು ನಾಗವೇಣಿ ದಂಪತಿ ಪುತ್ರಿ. ಸಿಂಚನ ಕರಾಟೆ ತರಬೇತಿಯನ್ನು ಕೆಡಿಎಫ್ ಕುಂದಾಪುರ ಸಂಸ್ಥೆಯಲ್ಲಿ ಶಿಕ್ಷಕರಾದ ಶಿಯಾನ್ ಶೇಕ್ ಮತ್ತು ಶಶಾಂಕ್ ಶೆಣೈ ಅವರಿಂದ ತರಬೇತಿ ಪಡೆದಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಹಯೋಗದೊಂದಿಗೆ, ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಗಳಾದ ಸಿಧ್ವಿಕ್ ಪೂಜಾರಿ ೭B , ಯು.ವಿಶ್ರುತ್ ಮೇಲಾಡಿ 7D, ಸಾತ್ವಿಕ್ ಪೂಜಾರಿ 8̧D ಹರಿದಾಸ್ ಆರ್.ಮಲ್ಯ 9E, ವರ್ಣಿತಾ ವಿ.ಕುಂದರ್ 9F, ಮೇಘನ ಪ್ರಕಾಶ್ ಶ್ಯಾನಭಾಗ್ 7E, ದೇವಿಕಾ ಶೆಣೈ 8F ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
