ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕ ದೇವಳದ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 98.79 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 166 ವಿದ್ಯಾರ್ಥಿಗಳ ಪೈಕಿ, 164 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 51 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ , 94 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ , 15 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ನಮಿತಾ ಡಿ.ಎಚ್ (576), ಸುದರ್ಶನ ಶೆಟ್ಟಿ (571), ಇಶಾ ಭಟ್( 568), ಮಹಾಲಕ್ಷ್ಮಿ (567), ರಜನಿ (566), ಶ್ರೀರಕ್ಷಾ (564) , ಕೋಮಲಾ.ಎನ್ (562), ಸುಬ್ರಹ್ಮಣ್ಯ .ವಿ (558), ದೀಕ್ಷಾ (558), ಆಶ್ರೀತಾ ಎನ್. ಜಿ (558), ನಿಶಾ (554), ಚಂದ್ರಿಕಾ (553), ಪ್ರಥ್ವಿ (552), ಅಂಕಿತಾ (551), ಪ್ರತ್ಯಕ್ಷಾ (550), ಆಕಾಶ್ ಕೆ.ಎಲ್ (549), ಸಹನಾ (545), ಸೃಜನಾ (544), ಪ್ರಣೀತಾ (539), ವಿಕಾಸ್ ಶೆಟ್ಟಿ (538), ಜೀವಿತಾ. ಜಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಬವಳಾಡಿ ಕೆಳಗಾಯಾಡಿ ಮನೆ ಸುಮತಿ ಬಿ. ಶೆಟ್ಟಿ (58) ಅವರು ಶನಿವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಪತಿ ಭಾಸ್ಕರ್ ಆರ್. ಶೆಟ್ಟಿ, ಸಹೋದರರಾದ ಶೇಖರ್ ಶೆಟ್ಟಿ, ಶಂಕರ್ ಶೆಟ್ಟಿ, ಮಕ್ಕಳಾದ ಸಾಯಿರಾಜ್ ಶೆಟ್ಟಿ ಹಾಗೂ ಶೈಲಶ್ರೀ ಶೆಟ್ಟಿ ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.13 : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಲಟ್ಟ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಆಗದ 6100 ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿ್ಲ್ಲಾಧಿಕಾರಿ ವಿದ್ಯಾಕುಮಾರಿ ಕೆ ರವರು ತಿಳಿಸಿದರು. ಅವರು ಇಂದು ಕಾಪು ತಾಲೂಕಿನ ಕಲ್ಯಾ ಗ್ರಾಮದ ವಯಸ್ಕ ಮತದಾನರ ಮನೆಯಲ್ಲಿ ನಡೆದ ಮತದಾನದ ಪ್ರಕ್ರಿಯನ್ನು ವಿಕ್ಷಿಸಿ ಮತಾನಾಡುತ್ತಿದ್ದರು.ಉಡುಪಿ ಜಿಲ್ಲೆಯಲ್ಲಿ ವಿಶೇಷ ಚೇತನ ಹಾಗೂ 85 ವರ್ಷ ಮೇಲ್ಪಟ 4474, ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ 1626 ಸೇರಿದಂತೆ ಒಟ್ಟು 6100 ಮತದಾರರಿಗೆ ಮತದಾನ ಮಾಡಲು ಏಪ್ರಿಲ್ 13 ರಿಂದ 17 ರವರೆಗೆ ಅವಕಾಶ ಕಲ್ಪಿಸಲಾಗುವುದು. ಎಂದರು ಉಡುಪಿ ಯಲ್ಲಿ 1057 ವಯಸ್ಕ ಮತದಾರರು 216 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 14 ರಿಂದ 16 ರವರೆಗೆ, ಕುಂದಾಪುರದಲ್ಲಿ 764 ವಯಸ್ಕ ಮತದಾರರು 197 ಪಿ.ಡ್ಲೂ.ಡಿ. ಮತದಾರರಿಗೆ ಏಪ್ರಿಲ್ 14 ರಿಂದ 16, ರವರೆಗೆ, ಕಾಪು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಕ್ಸಲೆಂಟ್ ಪಿಯು ಕಾಲೇಜು ವಿಜ್ಞಾನ ವಿಭಾಗದ ಅವಳಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದಲ್ಲದೇ, ಇಬ್ಬರೂ ಪಿಸಿಎಂಬಿ ಕಾಂಬಿನೆಷನಲ್ಲಿ ಒಂದೇ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಶಂಕರನಾರಾಯಣದ ವಿದ್ಯಾರ್ಥಿಗಳಾದ ಉದಿತಾ ಕಾಮತ್ ಎಂ. ಹಾಗೂ ಹರ್ಷಿತ್ ಕಾಮತ್ ಎಂ ಈ ಸಾಧನೆಗೈದ ಅವಳಿ ವಿದ್ಯಾರ್ಥಿಗಳು. ಉದಿತಾ ಶೇ.93.8 ಫಲಿತಾಂಶ ಪಡೆದುಕೊಂಡಿದ್ದರೇ, ಹರ್ಷಿತ್ ಶೇ.93.4 ಫಲಿತಾಂಶ ಪಡೆದುಕೊಂಡಿದ್ದಾರೆ. ಪಿಸಿಎಂಬಿಯಲ್ಲಿ ಇಬ್ಬರೂ 375 ಅಂಕ ಗಳಿಸಿರುವುದು ವಿಶೇಷ. ಶಂಕರನಾರಾಯಣದ ಕಾಮತ್ ಶ್ರೀ ಹರಿ ಮೆಡಿಕಲ್ಸ್ʼನ ಎಂ. ಉದಯ ಕಾಮತ್ ಹಾಗೂ ಎಂ. ಗಾಯತ್ರಿ ಕಾಮತ್ ದಂಪತಿಗಳ ಮಕ್ಕಳಾಗಿರುವ ಅವಳಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಪ್ರಗತಿ ತೋರುತ್ತಲೇ ಬಂದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸ್ಕೃತಿ-ಸಂಸ್ಕಾರಗಳು ಒಂದು ದಿನದ ಆಚರಣೆಗೆ ಸೀಮಿತವಾಗದೆ, ಬದುಕಿನಲ್ಲಿ ಈ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಜೀವನವನ್ನು ಇನ್ನಷ್ಟು ಸಮೃದ್ಧಗೊಳಿಸಿಕೊಳ್ಳಿ ಎಂದು ಶ್ರೀ ಭವಾನಿ ಆಟೋಮೇಟ್ಸ್ ಸಂಸ್ಥಾಪಕ, ಸಮಾಜಸೇವಕ ಕರುಣಾಕರ ಹೆಗ್ಡೆ ಆನಗಳ್ಳಿ ಹೇಳಿದರು. ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿರುವ ಸಾಂಪ್ರದಾಯಿಕ ದಿನವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ನಮ್ಮ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಅವುಗಳ ಮೌಲ್ಯವನ್ನು ವಿದ್ಯಾರ್ಥಿಗಳು ಅರಿಯುವಂತಾದಾಗ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ ಎಂದರು. ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿ, ವಂದಿಸಿದರು. ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು. ಈ ಸಂದರ್ಭ ಸಂಸ್ಕೃತಿ ಶೀರ್ಷಿಕೆಯಡಿಯಲ್ಲಿ ನಡೆಸಿದ ಫ್ಯಾಶನ್ ಶೋ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಅಭಿನಂದಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿಯಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಬ್ರಹ್ಮಾಸ್ ಇಂಜಿನಿಯರಿಂಗ್ ಮತ್ತು ಕನ್ಸ್ಟ್ರಕ್ಷನ್ಸ್ ಕಂಪನಿ ಲಿಮಿಟೆಡ್ ಮ್ಯಾನುಫ್ಯಾಕ್ಚರಿಂಗ್ ನಿರ್ದೇಶಕರಾದ ಆತ್ಮಿಕಾ ಅಮೀನ್ ಮಾತನಾಡಿ ಅವರು ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ಬದಲಾಗುತ್ತಿರುವ ಉದ್ಯಮದ ಸನ್ನಿವೇಶಗಳಿಗೆ ಹೊಂದಿಕೊಳ್ಳುವಂತೆ ಸಲಹೆ ನೀಡಿದರು. ಯಾವುದೇ ಸಮಯದಲ್ಲಿ ಸ್ಪರ್ಧಾತ್ಮಕವಾಗಿರಲು ನಿರಂತರ ಕಲಿಕೆಯು ಮುಖ್ಯ ಎಂದರು. ಅವರು ತಮ್ಮದೇ ಆದ ಉದಾಹರಣೆಯನ್ನು ನೀಡುತ್ತಾ ಯಶಸ್ವಿ ಉದ್ಯಮಿಗಳಾಗಲು ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಿದರು. ಮೂಡ್ಲಕಟ್ಟೆಯಲ್ಲಿ ಸ್ನಾತಕೋತ್ತರ ಪದವಿ ಮಾಡಲು ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಿಕೊಟ್ಟಿರುವ ಆಡಳಿತ ಮಂಡಳಿಯ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ, ವಿದ್ಯಾರ್ಥಿಗಳು ವಿಭಾಗ ಹಾಗೂ ಸಂಸ್ಥೆ ನೀಡುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ವೇದಿಕೆಯಲ್ಲಿ ಐಎಂಜೆ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ, ಎಂಐಟಿಕೆ ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜಾ, ಡೀನ್ ಪ್ಲೇಸ್ಮೆಂಟ್, ಪ್ರೊ.ಅಮೃತಮಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಫಂಗಕ್ಷನಲ್ ಇಂಗ್ಲೀಷ್ ಸರ್ಟಿಫಿಕೇಟ್ ಕೋರ್ಸಿನ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಅಂಗವಾಗಿ ತಲ್ಲೂರಿನ ನಾರಾಯಣ ವಿಶೇಷ ಚೇತನ ವಿದ್ಯಾರ್ಥಿಗಳಿಗಾಗಿ ವಿವಿಧ ವಿನೋದಾವಳಿ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ಸಹಾಯಹಸ್ತ ನೀಡಿದರು. ಈ ಸಂದರ್ಭದಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ದೀಪಿಕಾ ಜಿ., ಉಪನ್ಯಾಸಕರಾದ ಸ್ಟಾಲಿನ್ ಡಿಸೋಜಾ, ರವೀನಾ ಸಿ. ಪೂಜಾರಿ, ಸ್ವಾತಿ ರಾವ್, ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಮ್ಯಾನೆಜಿಂಗ್ ಟ್ರಸ್ಟಿ ಸುರೇಶ್ ಟಿ., ಟ್ರಸ್ಟಿ ಮನೋರಮಾ ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣಪ್ರೇಮಿ ಬಳಗ ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು. ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿದ ಸಹಶಿಕ್ಷಕಿ, ಗಾಯಕಿ ಅಕ್ಷತಾ ವಿನಯ್, ಸಹಶಿಕ್ಷಕಿ ಭೂದೇವಿ, ಕಳೆದ 30 ವರ್ಷಗಳಿಂದ ಶ್ರೀ ಇಂದುಧರ ದೇವಸ್ಥಾನದಲ್ಲಿ ಸ್ವಚ್ಛತಾ ಸೇವೆ ಮಾಡುತ್ತಿರುವ ಸರೋಜ ಜಿ.ಟಿ. ಮತ್ತು ಮೇಲ್ಗಂಗೊಳ್ಳಿ ಅಂಗನವಾಡಿ ಕೇಂದ್ರದ ಸಹಾಯಕಿ ಮೂಕಾಂಬು ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ರೇಖಾ ಖಾರ್ವಿ, ಸೀಮಾ ಖಾರ್ವಿ, ಅಂಗನವಾಡಿ ಕಾರ್ಯಕರ್ತೆಯರಾದ ಶೋಭಾ, ಕಮಲಾ, ಶೇಷಮ್ಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಅಧ್ಯಕ್ಷೆ ಸುಮಿತ್ರಾ ಜಿ. ಮೊದಲಾದವರು ಉಪಸ್ಥಿತರಿದ್ದರು. ಸುಮಿತ್ರಾ ಜಿ. ಸ್ವಾಗತಿಸಿದರು. ರೇಖಾ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಕಮಲಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕುಂದಾಪುರ ದಕ್ಷಿಣ ವತಿಯಿಂದ ಕೋಣಿಯ ಮಾನಸ ಜ್ಯೋತಿ ವಿಶೇಷ ಶಾಲೆಗೆ ಸೋಲಾರ್ ವಿದ್ಯುಚ್ಛಕ್ತಿ ಉಪಕರಣಗಳ ಕೊಡುಗೆಯಾಗಿ ನೀಡಲಾಯಿತು. ಮಾನಸ ಜ್ಯೋತಿ ಶಾಲಾ ವಠಾರದಲ್ಲಿ ನಡೆದ ಸಭೆಯಲ್ಲಿ ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸುರೇಶ ಮಲ್ಯ ಯೋಜನೆಯ ರೂ.1,25,000 ನೆರವನ್ನು ಮಾನಸ ಜ್ಯೋತಿ ಟ್ರಸ್ಟ್ ಅಧ್ಯಕ್ಷ ಡಾ| ಬಿ.ವಿ.ಉಡುಪರಿಗೆ ಹಸ್ತಾಂತರಿಸಿದರು. ದೀಪ ಬೆಳಗಿಸಿ ಸಮಾರಂಭ ಉದ್ಘಾಟಿಸಿದ ಡಾ| ಬಿ.ವಿ. ಉಡುಪ, ದಾನಿಗಳು ನೀಡುತ್ತಿರುವ ನೆರವು, ಶಾಲೆಯ ನಿರ್ವಾಹಕರ ನಿಸ್ವಾರ್ಥ ಸೇವೆ ಹಾಗೂ ವಿಶೇಷ ಶಾಲೆ ಮಾನವೀಯತೆಯ ದೃಷ್ಠಿಯಿಂದ ನಡೆಯುತ್ತಿರಲು ಕಾರಣವಾಗಿದೆ” ಎಂದರು. ಅಗತ್ಯವಾಗಿದ್ದ ಸೋಲಾರ್ ಶಕ್ತಿ ಯೋಜನೆ ಕಾರ್ಯಗತಗೊಳಿಸಿದ ರೋಟರಿ ಕುಂದಾಪುರ ದಕ್ಷಿಣಕ್ಕೆ ಅವರು ಅಭಿನಂದನೆ ಸಲ್ಲಿಸಿದರು. ಸೆಲ್ಕೋ ಸೋಲಾರ್ ಕಂಪೆನಿ ಪರವಾಗಿ ಮಂಜುನಾಥ ಅವರನ್ನು ಗೌರವಿಸಲಾಯಿತು. ಯೋಜನೆ ಅನುಷ್ಠಾನಕ್ಕೆ ಸಹಕರಿಸಿದ ವಾಸುದೇವ ಕಾರಂತ, ರೋಟರಿ ದಕ್ಷಿಣದ ನಿಕಟಪೂರ್ವ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ ಮಾಹಿತಿ ನೀಡಿದರು. ರೋಟರಿ ಡಿಡಿಎಫ್ ಯೋಜನೆ ಮೂಲಕ ನೀಡಲಾದ ಈ ಕಾರ್ಯದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಜೆಯ ಹಿನ್ನೆಲೆ ಕುಟುಂಬ ಸದಸ್ಯರೊಂದಿಗೆ ತಾಲೂಕಿನ ಹೆಂಗವಳ್ಳಿಯ ರೆಸಾರ್ಟ್ಗೆ ಹೋಗಿದ್ದ ಬಾಲಕ ಈಜು ಕೊಳದಲ್ಲಿ ಇಳಿದಾಗ ಮುಳುಗಿ ಪ್ರಾಣ ಕಳೆದುಕೊಂಡ ಘಟನೆ ಏಪ್ರಿಲ್ 11 ರಂದು ಮಧ್ಯಾಹ್ನ ನಡೆದಿದೆ. ಹೂಡೆಯ ಆರಿಝ್ ಉಮ್ಮರ್ ಸೌಕುರ್(10) ಮೃತ ಬಾಲಕ. ಹೂಡೆಯ ಇಬಾದುಲ್ಲ ಅವರು ಕುಟುಂಬ ಸಮೇತರಾಗಿ ರೆಸಾರ್ಟ್ ಗೆ ಹೋಗಿದ್ದು, ಆರಿಝ್ ಮಕ್ಕಳೊಂದಿಗೆ ಆಟ ಆಡುತ್ತ ನೀರಿನಲ್ಲಿ ಬಿದ್ದಿದ್ದಾನೆ. ಈಜು ಕೊಳ ಮತ್ತು ಸುತ್ತಮುತ್ತಲೂ ಹತ್ತಾರು ಜನರಿದ್ದರೂ ಎಲ್ಲರೂ ಸಂಭ್ರಮಿಸುತ್ತಿದ್ದ ಕಾರಣ ಆತನನ್ನು ರಕ್ಷಿಸುವುದು ಸಾಧ್ಯವಾಗಿಲ್ಲ ಎನ್ನಲಾಗಿದೆ. ಒಂದಷ್ಟು ಸಮಯದ ಬಳಿಕ ಬಾಲಕ ಮುಳುಗಿದ್ದು ಗಮನಕ್ಕೆ ಬಂದಿದ್ದು ಆತನನ್ನು ಸ್ಥಳದಲ್ಲಿದ್ದವರು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ, ಹಾಲಾಡಿಯ ಆಸ್ಪತ್ರೆಗೆ ಬಂದು ಪರಿಶೀಲಿಸಿದಾಗ ವೈದ್ಯರು ಆರಿಝ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬಾಲಕನ ಸಾವಿಗೆ ರೆಸಾರ್ಟ್ ಅವರ ನಿರ್ಲಕ್ಷ್ಯ ಹಾಗೂ ಅಜಾಗರೂಕತೆ, ಲೈಫ್ ಜಾಕೆಟ್ ಮತ್ತು ಲೈಫ್ ಗಾರ್ಡ್ ಹಾಗೂ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದಿರುವುದೇ ಕಾರಣ ಎಂದು ಆರೋಪ ಕೇಳಿ…
