Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ದೇಶದ ಅಸಂಖ್ಯಾಕ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೌಚಾಲಯ, ವಿದ್ಯುತ್, ರೈತರಿಗೆ ನೆರವು ಹೀಗೆ ಎಲ್ಲ ವರ್ಗದ ಜನರ ಪ್ರಗತಿಗೂ ನೆರವಾಗಿದ್ದಾರೆ. ನಮ್ಮ ದೇಶ ಸ್ವಾಭಿಮಾನಿ ಶಕ್ತಿಶಾಲಿ ರಾಷ್ಟ್ರವಾಗಿ ಬೆಳೆಯುತ್ತಿದ್ದು, ೨೦೪೭ರಲ್ಲಿ ನಮ್ಮ ದೇಶವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ಸಮೃದ್ಧ, ಶಕ್ತಿಶಾಲಿ, ಸ್ವಾಭಿಮಾನಿ ಭಾರತ ಮಾಡುವುದು ಪ್ರಧಾನಿ ನರೇಂದ್ರ ಮೋದಿಯವರ ಗುರಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ಬಡ ಜನರ ಅಭಿವೃದ್ಧಿ, ಸ್ವಾವಲಂಬನೆಗೆ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಮಾಹಿತಿ ತಿಳಿಯಬೇಕು ಎನ್ನುವ ದೃಷ್ಟಿಯಿಂದ ವಿಕಸಿತ ಭಾರತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಆಚರಣೆಯೊಂದಿಗೆ ‘ಐಎಂಜೆಐಎಸ್ಸಿ ಯಂಗ್ ಲೀಡರ್ ಅವಾರ್ಡ್ 2024’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಉದ್ಘಾಟನೆಗೊಂಡಿತು.. ಕಾರ್ಯಕ್ರಮವನ್ನು ನೀಲಕಂಠ ಎಂ ಹೆಗ್ಡೆ ಲಯನ್ಸ್ ಕ್ಲಬ್ ನ ಪೂರ್ವ ಜಿಲ್ಲಾ ಗವರ್ನರ್ ಹಾಗೂ ಅಂತರಾಷ್ಟ್ರೀಯ ಪ್ರೇರಕ ತರಬೇತುದಾರರು ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತ, ಭಾರತ ಸಂಸ್ಕೃತಿಯ ಕುರಿತು ಜಗತ್ತಿಗೆ ತಿಳಿಸಿದಂತಹ ಮಹಾಪುರುಷರು. ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಅವರ ಬದುಕಿನ ಜೀವನವನ್ನು ಅರ್ಥೈಸಿಕೊಂಡರೆ ಇಡೀ ಜಗತ್ತನ್ನು ಅರ್ಥೈಸಿಕೊಂಡ ಹಾಗೆ ಎಂದು ಹೇಳಿದರು. ವಿದ್ಯಾರ್ಥಿಗಳನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ನಮ್ಮ ಈ ಸಂಸ್ಥೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು ಮತ್ತು ವಿದ್ಯಾರ್ಥಿಗಳನ್ನು ಸಶಕ್ತಿ ಗೊಳಿಸಲು ಮಾಡಿದ ಕಾರ್ಯಕ್ರಮಕ್ಕೆ ಅಭಿನಂದನೆಯನ್ನು ಸಲ್ಲಿಸಿದರು. ನಾಳೆಯ ಬದುಕಿನ ಕನಸನ್ನು ಕಟ್ಟಿಕೊಳ್ಳಿ. ಕೇವಲ ಗೆಲುವಿನ ಹಿಂದೆ ಅಲ್ಲ, ಗೆಲುವು ಸಿಗುವವರೆಗೂ ಪ್ರಯತ್ನ ಪಡಬೇಕು. ಹಾಗೆ ತಮ್ಮ ನಂಬಿಕೆ, ವಿಶ್ವಾಸಗಳು ಅರಿಷಡ್ವರ್ಗಗಳನ್ನು ಬಿಟ್ಟು ತತ್ವದರ್ಶಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜ.16: ಮೀನುಗಾರಿಕೆ ಇಲಾಖೆಯ 2022-23 ನೇ ಸಾಲಿನಲ್ಲಿ ಮತ್ಸ್ಯಾಶ್ರಯ ಯೋಜನೆಯಡಿ ನಿರ್ವಸತಿ ಮೀನುಗಾರರಿಗೆ ವಸತಿ ಕಲ್ಪಿಸಲು ಬಿ.ಪಿ.ಎಲ್ ಅಥವಾ ಆರ್ಥಿಕವಾಗಿ ಹಿಂದುಳಿದ, ಸ್ವಂತ ನಿವೇಶನ ಹೊಂದಿರುವ, ಹುಟ್ಟಿನಿಂದ ಅಥವಾ ವೃತ್ತಿಯಲ್ಲಿ ಮೀನುಗಾರರಾಗಿರುವ, ವಿವಾಹಿತ, ವಿಧವೆ, ವಿಧುರ ಹಾಗೂ ಮೀನುಗಾರ ಸಹಕಾರಿ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ಒಟ್ಟು 98 (ಸಾಮಾನ್ಯ-74, ಪ.ಜಾ-17,ಪ.ಪಂ-7) ಗುರಿಗಳನ್ನು ಸರ್ಕಾರದ ಆದೇಶದಂತೆ ನಿಗಧಿ ಪಡಿಸಿದ್ದು, ಈಗಾಗಲೇ ಒಟ್ಟು 47(ಸಾಮಾನ್ಯ -43, ಪ.ಜಾ-1, ಪ.ಪಂ-3)ಅರ್ಜಿಗಳು ಸ್ವೀಕೃತವಾಗಿದ್ದು, ಉಳಿದ 51 (ಸಾಮಾನ್ಯ-31, ಪ.ಜಾ-16, ಪ.ಪಂ-4) ಗುರಿಗಳಿಗೆ ಅರ್ಜಿ ಸಲ್ಲಿಸುವವರು ಆಯ್ಕೆ ಸಮಿತಿ ಅಧ್ಯಕ್ಷರ ಶಿಫಾರಸ್ಸು ಪತ್ರದೊಂದಿಗೆ ಪೂರಕ ದಾಖಲೆಗಳನ್ನು ಉಡುಪಿಯ ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾದ ಬಿ. ಕಿಶೋರ್ ಕುಮಾರ್ ಕುಂದಾಪುರ ಅವರನ್ನು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಿಸಿದ್ದಾರೆ. ಕಿಶೋರ್‌ ಕುಮಾರ್‌ ಅವರು ಬಿಜೆಪಿ ಪಕ್ಷದಲ್ಲಿ ಕುಂದಾಪುರ ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ರಾಜ್ಯ ಮೀನುಗಾರಿಕಾ ಪ್ರಕೋಷ್ಠದ ಸಂಚಾಲಕರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಂದರ್ಭ ವಿವಿಧ ಕ್ಷೇತ್ರಗಳ ಉಸ್ತುವಾರಿಯಾಗಿ ಸೇವೆಸಲ್ಲಿಸಿದ್ದರು. 2013ರಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿಯೂ ಕುಂದಾಪುರ ಅಥವಾ ಬೈಂದೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಿಶೋರ್‌ ಕುಮಾರ್‌ ಅವರು ಹೆಸರು ಮುನ್ನೆಲೆಯಲ್ಲಿತ್ತು. ಉದ್ಯಮಿಯಾಗಿರುವ ಕಿಶೋರ್‌ ಕುಮಾರ್‌ ಅವರು ರಾಜಕೀಯದ ಹೊರತಾಗಿ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರು. ಹೋರಾಟಗಳ ಮುಂಚೂಣಿ ವಹಿಸಿದವರು. ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್‌, ಕಲಾಕ್ಷೇತ್ರ ಕುಂದಾಪುರ ಸಂಸ್ಥೆಯ ಮೂಲಕ ಸಾಂಸ್ಕೃತಿಕ ರಂಗದಲ್ಲಿಯೂ ನಿರಂತರ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನವೆಂಬರ್ ನಡೆಸಿದ ಸಿಎ ಫೈನಲ್ ಮತ್ತು ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಷಣ್ಮುಖ ಕೆ. ಎಸ್.(256) ಸಿಎ ಅಂತಿಮ ಪರೀಕ್ಷೆಯನ್ನು ತೇರ್ಗಡೆ ಹೊಂದಿ ಲೆಕ್ಕಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಧನುಷ್ 518 ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದುವುದರ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಆಯೆಷಾ ತುಬಾ(260), ವೈಷ್ಣವಿ ಶೆಟ್ಟಿ (249), ಅಮೃತ (234), ಕೆ.ಆರ್.‌ ದೀಕ್ಷಾ (228) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯೆಟ್ ದ್ವಿತೀಯ ಗ್ರೂಪ್ ಪರೀಕ್ಷೆಯನ್ನು ತೇರ್ಗಡೆ ಹೊಂದುದರ ಮೂಲಕ ಸಿಎ ಅಂತಿಮ ಹಂತಕ್ಕೆ ಪ್ರವೇಶ ಪಡೆದಿದ್ದಾರೆ. ಶೃದ್ಧಾ ಬಿ. ಸಾಲ್ಯಾನ್(270)‌, ಪಂಚಮಿ ಕಿಣಿ (261), ರಕ್ಷಿತಾ (235), ಸುದೀಪ್‌ರಾಜ್(227)‌, ಕಿಶನ್‌ ಅಡಿಗ (216), ವೈಷ್ಣವಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸ್ವಾಮಿ ವಿವೇಕಾನಂದರ ತತ್ವ ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಯುವ ಜನರು ಅದನ್ನು ಅರ್ಥೈಸಿಕೊಂಡು ಅದನ್ನು ಪಾಲಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹೇಳಿದರು. ಅವರು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ. ಎ.ವಿ ಹಾಲ್‌ನಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಮತ್ತು ರಾಷ್ಟಿçÃಯ ಸೇವಾ ಯೋಜನಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆದ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾಮಿ ವಿವೇಕಾನಂದರು ಯುವ ಜನತೆಗೆ ಮಾದರಿಯಾಗಿದ್ದು, ಪ್ರತಿಯೊಬ್ಬರು ಅವರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೀವನದಲ್ಲಿ ಗುರಿ ಹೊಂದುವುದು ಮುಖ್ಯವಾಗಿದ್ದು, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಗುರಿಯನ್ನು ತಲುಪುವ ಕಡೆ ಗಮನಹರಿಸಬೇಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಒಂದು ವರ್ಷದಲ್ಲಿ ಮೊಬೈಲ್ ಕಳೆದು ಕೊಂಡು ಸಿಇಐಆರ್ ಪೋರ್ಟಲ್ ಮೂಲಕ ಪೊಲೀಸರಿಗೆ ದೂರು ನೀಡಿದವರ 20 ಮೊಬೈಲ್ ಫೋನುಗಳನ್ನು ಕುಂದಾಪುರ ಪೊಲೀಸರು ಪತ್ತೆ ಮಾಡಿದ್ದು ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ದಾಖಲಾದ ದೂರು ಆಧರಿಸಿ ಪ್ರಕರಣದ ಬೆನ್ನುಬಿದ್ದ ಪೊಲೀಸರು ಸಿಇಐಆರ್ (ಸೆಂಟ್ರಲ್ ಇಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್ ಮೂಲಕ ತನಿಖೆ ಕೈಗೊಂಡು 20 ಮೊಬೈಲ್ಗಳನ್ನು ಪತ್ತೆ ಮಾಡಿದ್ದಾರೆ. ಇದರಲ್ಲಿ ಒಂದು ಮೊಬೈಲ್ ಜಾರ್ಖಂಡ್ ಹಝಾರಿಭಾಗ್ ಎಂಬಲ್ಲಿ ಮತ್ತು ಇನ್ನೊಂದು ಮೊಬೈಲನ್ನು ಆಂಧ್ರಪ್ರದೇಶದ ಗೊಂಡ ಎಂಬಲ್ಲಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿ, ಬೆಂಗಳೂರು ಸಹಿತ ಕರ್ನಾಟಕದ ವಿವಿಧೆಡೆ ಗಳಿಂದ ಉಳಿದ ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಎಸ್.ಟಿ.ಸಿದ್ಧಲಿಂಗಪ್ಪ ನಿರ್ದೇಶನದಲ್ಲಿ ಕುಂದಾಪುರ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ ನೇತೃತ್ವದಲ್ಲಿ, ಕುಂದಾಪುರ ನಗರ ಠಾಣೆ ನಿರೀಕ್ಷಕ ನಂದಕುಮಾರ್, ಉಪ ನಿರೀಕ್ಷಕರಾದ ವಿನಯ್ ಎಂ. ಕೊರ್ಲಹಳ್ಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಮಂಗಳೂರಿನ ಥಿಯೋಲಾಜಿಕಲ್ ಸಂಶೋಧನಾ ಕೇಂದ್ರದ ಮೂಲಕ ಪ್ರಸಿದ್ಧ ಅಂಕಣ ಬರಹಗಾರ, ಲೇಖಕ, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ| ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ ಕರಾವಳಿಯ ಪ್ರಾದೇಶಿಕ ಅಧ್ಯಯನದ ವಿಭಿನ್ನ ಪ್ರವೃತ್ತಿಗಳು” ಎಂಬ ವಿ?ಯದ ಕುರಿತು ಸಿದ್ಧಪಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪದವಿ ನೀಡಲಾಗಿದೆ. ಇವರು ೨೦೧೪ರಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ “ಗ್ರಾಮ ಚರಿತ್ರೆ ಕೋಶ” ಯೋಜನೆಗೆ ಹಿರಿಯ ಜಾನಪದ ವಿದ್ವಾಂಸ ಪ್ರೊ| ಎ.ವಿ. ನಾವಡ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ತಾಲೂಕಿನ ಕ್ಷೇತ್ರತಜ್ಞರಾಗಿ ಕಾರ್ಯನಿರ್ವಹಿಸಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಲ್ಲಿ ನಿರತರಾಗಿರುವ ಇವರಿಗೆ ನೇಶನ್ ಬಿಲ್ಡರ್, ಯುವರತ್ನ ಪ್ರಶಸ್ತಿಗಳು ಲಭಿಸಿವೆ. ಇವರು ಕ್ರೋಢ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ಕುಂದಾಪುರ ನಗರದ ಒಳಗೆ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆ, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳಾದ 1989ರ ಕಲಂ 221(ಎ)(2) &(5) ರ ಅನ್ವಯ ವಾಹನ ದಟ್ಟನೆ ಇರುವ ಈ ಕೆಳಕಂಡ ಮಾರ್ಗಗಳ ರಸ್ತೆಗಳಲ್ಲಿ ಏಕಮುಖ ಸಂಚಾರ ರಸ್ತೆ ಹಾಗೂ ಘನ ವಾಹನಗಳ ಸಂಚಾರ ನಿಷೇಧ ರಸ್ತೆಯನ್ನಾಗಿ ಮಾರ್ಪಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕುಂದಾಪುರ ಪುರಸಭಾ ವ್ಯಾಪ್ತಿಯ ಚಿಕ್ಕನ್ ಸ್ಟಾಲ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಮಾಸ್ತಿಕಟ್ಟೆ ರಸ್ತೆಯಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಪೂರ್ವದಿಂದ ಪಶ್ಚಿಮಕ್ಕೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಕುಂದಾಪುರ ಶಾಸ್ತ್ರಿ ಸರ್ಕಲ್‌ನಿಂದ ಹೊಸ ಬಸ್ ನಿಲ್ದಾಣದ ವರೆಗೆ ಪುರಸಭೆ ರಸ್ತೆಯ ಪಶ್ಚಿಮ ಬದಿಯ ರಸ್ತೆಯಲ್ಲಿ ಎಲ್ಲಾ ವಾಹನಗಳು ಉತ್ತರಾಭಿಮುಖವಾಗಿ ಸಂಚರಿಸಬೇಕು. ಹೊಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವವನ್ನು ಜನವರಿ 14ರ ಭಾನುವಾರದಂದು ಸಂಸ್ಥೆಯ ಆವರಣದಲ್ಲಿ ಜರುಗಲಿದೆ. ಈ ಸುಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಲಾಂಛನ ಅನಾವರಣಗೊಳ್ಳಲಿದೆ. ವಿಶ್ವಶಾಂತಿ ಸಂದೇಶ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಹೇಳಿದರು. ಅವರು ಕುಂದಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಶಾಸಕ ಕಿರಣ್ ಕುಮಾರ್ ಕೊಡ್ಲಿ ಭಾಗವಹಿಸಲಿದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಹೆಸರಾಂತ ಪರಿಸರವಾದಿಗಳಾದ ಪದ್ಮಶ್ರೀ ತುಳಸಿ ಗೌಡ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂಇಐಎಫ್ ಸಂಸ್ಥೆಯ ಅಧ್ಯಕ್ಷರಾದ ಮೂಸಬ್ಬ.ಪಿ. ಬ್ಯಾರಿ ಇವರು ಸನ್ಮಾನಿತಗೊಳ್ಳಲಿದ್ದಾರೆ ಎಂದರು. 1906ರಲ್ಲಿ ಶಿಕ್ಷಣದ ಮೊಳಕೆ ಎಂಬಂತೆ…

Read More