ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಕ್ ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಅಪರಾಹ್ನದ ವೇಳೆ ತಾಲೂಕಿನ ಖಂಬದಕೋಣೆ ರಾ.ಹೆ 66ರಲ್ಲಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಉಪ್ಪುಂದ ನಿವಾಸಿ ಭುವನ್ (19) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಉಪ್ಪುಂದ ಮೂಲದ ಮಧುಸೂಧನ್ ಗಂಭೀರ ಗಾಯಗೊಂಡಿದ್ದಾರೆ. ಭುವನ್ ಹಾಗೂ ಮಧುಸೂಧನ್ ಅವರು ಬೈಕಿನಲ್ಲಿ ಕುಂದಾಪುರ ಕಡೆಯಿಂದ ಉಪ್ಪುಂದಕ್ಕೆ ಬರುತ್ತಿದ್ದರು. ಖಂಬದಕೋಣೆಯಲ್ಲಿ ಬರುತ್ತಿದ್ದ ವೇಳೆ ಟಾಟಾ ಏಸ್ ವಾಹನವೊಂದು ಹೆದ್ದಾರಿಯ ಡಿವೈಡರ್ನಲ್ಲಿ ಏಕಾಏಕಿ ಯೂಟರ್ನ್ ತೆಗೆದುಕೊಂಡಿದ್ದು, ಇದರಿಂದ ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಢಿಕ್ಕಿಯಿಂದ ರಸ್ತೆಗೆಸೆಯಲ್ಪಟ್ಟ ಪರಿಣಾಮ ಭುವನ್ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಶಿವಕುಮಾರ್, ಪಿಎಸ್ಐ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ಪಡೆಯಲು ಸೇವಾಸಿಂಧು ವೆಬ್ಸೈಟ್ Sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 9 ರ ವರೆಗೆ ವಿಸ್ತರಿಸಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಬ್ರಿಯಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ (8 ರಿಂದ 12ನೇ ತರಗತಿ) ‘ಪ್ರತಿಭಾ ಕಾರಂಜಿ’ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ‘ಕನ್ನಡ ಕವನ ವಾಚನ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಶ್ರೀಶಾಂತ್ ಮತ್ತು ‘ಸಂಸ್ಕೃತ ಧಾರ್ಮಿಕ ಪಠಣ’ದಲ್ಲಿ ಪ್ರಥಮ ಸ್ಥಾನ ಪಡೆದ ಭೂಮಿಕಾ ಕಾರಂತ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ʼಕನ್ನಡ ಭಾಷಣʼ ಸ್ಪರ್ಧೆಯಲ್ಲಿ ಸ್ಪೂರ್ತಿ ದ್ವಿತೀಯ ಸ್ಥಾನ ʼಮಿಮಿಕ್ರಿʼಯಲ್ಲಿ ಮಿಥಿಲ್ ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳಿಗೆ ಏರ್ಪಡಿಸಿದ ವಾಲಿಬಾಲ್ ಪಂದ್ಯಾಟದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ದ್ವಿತೀಯ ಸ್ಥಾನ ಗಳಿಸಿದೆ. ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘ ಪ್ರಥಮ ಸ್ಥಾನ ಗಳಿಸಿದೆ. ಪಂದ್ಯಾಟದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ. ಮಹೇಶ ಹೆಗ್ಡೆ ಉದ್ಘಾಟಿಸಿದರು. ದ.ಕ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಎಸ್ ಪ್ರಕಾಶಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೆದೂರು ಸದಾನಂದ ಶೆಟ್ಟಿ, ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರದೀಪ ಯಡಿಯಾಳ ಉಪಸ್ಥಿತರಿದ್ದರು. ಕೃಷಿ ಪತ್ತಿನ ನೌಕರರ ಸಂಘದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ್ ಸ್ವಾಗತಿಸಿ ಕಾರ್ಯದರ್ಶಿ ಕೀರ್ತಿ ಕುಮಾರ್ ಶೆಟ್ಟಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ರಿ., ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ “ಶಿಶಿರ ಸಂಗೀತೋತ್ಸವ” ಕಾಲೇಜಿನ ರಂಗ ಅಧ್ಯಯನ ಕೇಂದ್ರದಲ್ಲಿ ಇತ್ತೀಚಿಗೆ ನಡೆಯಿತು. ದಿ| ಎ. ವೈಕುಂಠ ಹೆಬ್ಬಾರ್ ಹಾಗೂ ದಿ| ಅವಿನಾಶ್ ಹೆಬ್ಬಾರ್ ಸ್ಮರಣಾರ್ಥ ಏರ್ಪಡಿಸಿದ ಕಾರ್ಯಕ್ರಮವನ್ನು ಖ್ಯಾತ ಗಾಯಕರಾದ ಓಂಕಾರ್ ಹವಾಲ್ದಾರ್ ಮತ್ತು ಮಾನಸಿ ಶಾಸ್ತ್ರಿ ಬೆಂಗಳೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಗೀತ ಭಾರತಿ ಟ್ರಸ್ಟ್ ರಿ. ಅಧ್ಯಕ್ಷ ಕೆ. ಶ್ರೀಧರ ಕಾಮತ್, ಭಂಡಾರ್ಕಾರ್ಸ್ ಕಾಲೇಜು ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು, ಸಂಗೀತ ಭಾರತಿ ಟ್ರಸ್ಟಿನ ಕಾರ್ಯದರ್ಶಿ ನಾರಾಯಣ ಕೆ., ಟ್ರಸ್ಟಿಗಳಾದ ಕೆ. ಸೀತಾರಾಮ ನಕ್ಕತ್ತಾಯ, ಡಾ| ಎಚ್. ಆರ್. ಹೆಬ್ಬಾರ್, ಡಾ| ಆದರ್ಶ ಹೆಬ್ಬಾರ್, ಸುಪ್ರಸನ್ನ ನಕ್ಕತ್ತಾಯ, ರೇಖಾ ಕಾರಂತ್ ಉಪಸ್ಥಿತರಿದ್ದರು. ಕಲಾವಿದರಾದ ಸಿತಾರ್ ವಾದಕ ಅರ್ಜುನ್ ಆನಂದ ಬೆಂಗಳೂರು, ತಬಲಾ ಕಲಾವಿದರಾದ ಸಾಗರ್ಭರತ್ ರಾಜ್ ಬೆಂಗಳೂರು, ವಿಘ್ನೇಶ್ ಕಾಮತ್ ಕೋಟೇಶ್ವರ, ಹಾರ್ಮೋನಿಯಮ್ ಕಲಾವಿದ ಶ್ರೀಧರ್ ಭಟ್ ಕೋಟೇಶ್ವರ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ವಿಭಾಗದಲ್ಲಿ, ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಹತ್ತನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರೀತಮ್ ಜಿ. ಹಾಗೂ ರಿಷಿ ಶೆಟ್ಟಿ ಅವರು ಪ್ರಥಮ ಸ್ಥಾನ ಗಳಿಸಿ ಅಮೋಘ ಸಾಧನೆ ಮಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕೀರ್ತಿ ಹೆಚ್ಚಿಸಿರುವ ಈ ಹೆಮ್ಮೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ ಹಾಗೂ ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾಯ್ಸ್ ಅಲ್ಫೇನ್ ಗಂಗೊಳ್ಳಿ, ನೂರ್ ಕ್ರಿಕೆಟರ್ಸ್ ಗಂಗೊಳ್ಳಿ ಹಾಗೂ ನಮ್ಮ ನಾಡ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಮುಬಾರಕ್ ಮೈದಾನದಲ್ಲಿ ನಡೆದ ಕಲಾಯ್ಸ್ ಅಲ್ಫೇನ್ ಪ್ರೀಮಿಯರ್ ಲೀಗ್ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ’ಎನ್ಎನ್ಓ ಕಪ್ 2025’ದಲ್ಲಿ ಗಂಗೊಳ್ಳಿಯ ಸಹರಾ ಕ್ರಿಕೆಟರ್ಸ್ ತಂಡ ಪ್ರಥಮ ಸ್ಥಾನಿಯಾಗಿ 1,00,111 ರೂ. ನಗದು ಹಾಗೂ ’ಎನ್ಎನ್ಓ ಕಪ್ 2025ನ್ನು ತನ್ನದಾಗಿಸಿಕೊಂಡಿದೆ. ಮುಬಾರಕ್ ಗಂಗೊಳ್ಳಿ ತಂಡ ರನ್ನರ್ ಅಪ್ ಪ್ರಶಸ್ತಿ ಹಾಗೂ 50,555 ನಗದನ್ನು ಪಡೆದುಕೊಂಡಿತು. ಮುಬಾರಕ್ ಗಂಗೊಳ್ಳಿ ತಂಡದ ಮೊಹಮ್ಮದ್ ಅಜೀಂ ಸರಣಿ ಶ್ರೇಷ್ಟ ಆಟಗಾರ ಪ್ರಶಸ್ತಿ ಹಾಗೂ ದ್ವಿಚಕ್ರ ವಾಹನ ಪಡೆದುಕೊಂಡರು. ಫೈನಲ್ ಪಂದ್ಯದ ಪಂದ್ಯ ಶ್ರೇಷ್ಟ ಪ್ರಸ್ತಿಯನ್ನು ಸಹಾರ ಗಂಗೊಳ್ಳಿ ತಂಡದ ನವೀನ್ ಕುಂದಾಪುರ ಪಡೆದುಕೊಂಡರು. ಉತ್ತಮ ದಾಂಡಿಗ ಪ್ರಶಸ್ತಿಯನ್ನು ಸಹರಾ ಗಂಗೊಳ್ಳಿ ತಂಡದ ನವೀನ್ ಕುಂದಾಪುರ ಮೂಡಿಬಂದರು. ಉತ್ತಮ ಬೌಲರ್ ಆಗಿ ಡ್ರೈವರ್ ಫ್ರೆಂಡ್ ತಂಡದ ಪ್ರಮೋದ್ ಆಯ್ಕೆಯಾದರು. ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರ ಮತ್ತು ಪಾಲಕರ ಸಭೆಯನ್ನು ನಡೆಸಿ, ವಿದ್ಯಾರ್ಥಿಗಳ ಅಧ್ಯಯನದ ವಿಚಾರಗಳನ್ನು ಚರ್ಚಿಸಲಾಯಿತು. ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶರಣ ಕುಮಾರ ಪೋಷಕರ ಅಹವಾಲುಗಳಿಗೆ ಸ್ಪಂದಿಸಿ, ಮಾತನಾಡಿ, ಮಕ್ಕಳ ಸಂಜೆಯ ಅಧ್ಯಯನ ಸಮಯದಲ್ಲೂ ಪಾಠ ನಡೆಸಿದರೆ, ಮಕ್ಕಳಿಗೆ ಸ್ವತಃ ಅಧ್ಯಯನಕ್ಕೆ ಹಿಡಿತ ಕಡಿಮೆಯಾಗುತ್ತದೆ. ಆದ್ದರಿಂದ ನಾವು ಮಕ್ಕಳನ್ನು ಸ್ವತಃ ಓದುವುದಕ್ಕೂ ಆದ್ಯತೆ ನೀಡುತ್ತಿದ್ದೇವೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುತ್ತಿದ್ದೇವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಬೇಸ್ ಸಂಸ್ಥೆಯವರಿಂದ ತರಗತಿಗಳನ್ನು ನಡೆಸುತ್ತಿದ್ದು, ಅವಶ್ಯವಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಎಂದು ತಿಳಿಸುತ್ತಾ ಮಕ್ಕಳ ಸುರಕ್ಷತೆಯ ಬಗ್ಗೆ ಕೆಲವಷ್ಟು ಮಾಹಿತಿಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ, ಶಿಕ್ಷಣ ಸಂಯೋಜಕರಾದ ಸವಿತಾ ಭಟ್, ಶ್ರೀಮಧು ಕೆ. ಎಲ್, ಲತಾ ದೇವಾಡಿಗ, ವಸತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳ ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಬಹುಮುಖ ಪ್ರತಿಭೆ, ಪ್ರತೀಕ್ಷಾ ಅವರು ಪ್ರಥಮ ಸ್ಥಾನ ಗಳಿಸಿ, ಅದ್ವಿತೀಯ ಸಾಧನೆ ಮಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಈ ಶ್ಲಾಘನೀಯ ಸಾಧನೆ ಮಾಡಿರುವ ಈ ಉದಯೋನ್ಮುಖ ಪ್ರತಿಭಾನ್ವಿತೆಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ ಹಾಗೂ ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಲು ಸಿದ್ದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ತಂದೆಯ ಜತೆಯಲ್ಲಿ ಬೈಕಿನಲ್ಲಿ ಕುಳಿತಿರುವಾಗ ಟಿಪ್ಪರ್ ಚಾಲಕ ಅತೀ ವೇಗವಾಗಿ ಬಂದು ಬೈಕಿಗೆ ಢಿಕ್ಕಿ ಹೊಡೆದಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿದ್ದಾಪುರ ಕೆಳಪೇಟೆಯ ಮಕ್ಕಿಮನೆ ರಾಘವೇಂದ್ರ ಪೂಜಾರಿ (38) ಅವರು ತಂದೆ ಕೃಷ್ಣ ಪೂಜಾರಿ. ಅವರನ್ನು ತನ್ನ ಬೈಕ್ನಲ್ಲಿ ಮನೆಯಿಂದ ಕುಳ್ಳಿರಿಸಿಕೊಂಡು ಬಂದು ಶಾಲೆಯ ಬಳಿ ನಿಂತುಕೊಂಡಿದ್ದರು. ಆ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು. ಗಂಭೀರವಾಗಿ ಗಾಯಗೊಂಡ ಕೃಷ್ಣ ಪೂಜಾರಿ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
