ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗೆ ಸೆಪ್ಟಂಬರ್ 15ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಂಸತ್ತು ಸಭೆಯ ಕುರಿತು ಮಾಹಿತಿ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವ ತತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ ಹಾಗೂ ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದರು. ಸೆಪ್ಟಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಸೆ. 16 ರಿಂದ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗಳ ಸ್ಫರ್ಧೆಗಳು ಆರಂಭವಾಗಲಿದ್ದು, ಅಕ್ಟೋಬರ್ 10 ರ ಒಳಗಾಗಿ ತಾಲೂಕು ಮಟ್ಟದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ-ಒನ್, ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 01 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.kssd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆಯ ಸಲುವಾಗಿ ಕಾನೂನು ಸುವಸ್ಯವಸ್ಥೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಗೌರಿ – ಗಣೇಶ ಹಬ್ಬವನ್ನು ಇದೇ ಸೆಪ್ಟೆಂಬರ್ 13 ಮತ್ತು 14 ರಂದು ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವುದರೊಂದಿಗೆ ನೈಸರ್ಗಿಕ ಜಲಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ನೈಸರ್ಗಿಕವಾಗಿ ನೀರಿನಲ್ಲಿ ಕರಗುವುದಿಲ್ಲ. ಇವು ಮಾಲಿನ್ಯ ಉಂಟು ಮಾಡುವುದರೊಂದಿಗೆ ಜಲಚರಗಳಿಗೆ ಹಾನಿ ಉಂಟು ಮಾಡುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು. ನೈಸರ್ಗಿಕ ಜಲ ಮೂಲಗಳ ಮೇಲಿನ ಒತ್ತಡ ಕಡಿಮೆ ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಗುಂಡ್ಮಿ ಸಮೀಪದ ಹದ್ದಿನಬೆಟ್ಟು ಯಡಬೆಟ್ಟು ಸಾಮೂಹಿಕ ಶ್ರೀ ಗಣೇಶೋತ್ಸವ ಆರಾಧನೋತ್ಸವ ಸಮಿತಿ ಆಶ್ರಯದಲ್ಲಿ ಇದೇ ಸೆಪ್ಟೆಂಬರ್ 14ರಂದು ಸಂಜೆ 07. ಗಂಟೆಗೆ ಹದ್ದಿನಬೆಟ್ಟು ಪರಿಸರದಲ್ಲಿ ನಡೆಯುವ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಆರಾಧನೋತ್ಸವ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ ಗುಂಡ್ಮಿ ತಿಳಿಸಿದ್ದಾರೆ ಈ ಪುರಸ್ಕಾರ 50 ಸಾವಿರ ನಗದು ಒಳಗೊಂಡ ಶಾಶ್ವತ ಫಲಕ ನೀಡಿ ಗೌರವಿಸಲಿದೆ ಅಲ್ಲದೆ ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ದತ್ತುಸ್ವೀಕಾರ ಕಾರ್ಯಕ್ರಮದ ಅಂಗವಾಗಿ ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯ 30 ವಿದ್ಯಾರ್ಥಿಗಳಿಗೆ 5 ಸಾವಿರ ರೂ.ಗಳಂತೆ ವಿದ್ಯಾರ್ಥಿ ವೇತನ ವಿತರಣೆ,ಎರಡು ಸ್ಥಳೀಯ ಸರಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಒಂದು ವರ್ಷದ ಮಾಸಿಕ ಗೌರವ ವೇತನ, 6 ಜನ ಅನಾರೋಗ್ಯ ಪೀಡಿತರಿಗೆ ಸಹಾಯನಿಧಿ ವಿತರಣೆ ಜತೆಗೆ ಹಲವು ಸಾಮಾಜಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪ್ರತಿಷ್ಟಿತ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಪ್ರಧಾನ ಕಚೇರಿ ವಠಾರದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಮಾನ್ಯ ಅಧ್ಯಕ್ಷರಾದ ಎಸ್. ಶೀನ ಪೂಜಾರಿ ಅವರು ವಹಿಸಿ, ಮಾತನಾಡಿ, ಸಂಘದಿಂದ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿಯನ್ನು ನೀಡುವುದರೊಂದಿಗೆ 2025-26ನೇ ಸಾಲಿನಲ್ಲಿ ಸಂಘವು 105.23 ಕೋಟಿಯಷ್ಟು ಸಾಲ ನೀಡಿ ಸಂಘವು ಗಳಿಸಿದ ಲಾಭ ರೂ.2.53 ಕೋಟಿಯಲ್ಲಿ ವಿವಿಧ ಖಾತೆಗಳಿಗೆ ಹಂಚಿಕೆ ಮಾಡಿದ ಮೇಲೆ ಪಾಲುದಾರ ಸದಸ್ಯರಿಗೆ ಶೇ.17 ಡಿವಿಡೆಂಡನ್ನು ಘೋಷಿಸಿದರು. ಸಂಘವು ವರದಿ ಸಾಲಿನಲ್ಲಿ ಸುಮಾರು 502 ಕೋಟಿಗೂ ಮಿಕ್ಕಿದ ವ್ಯವಹಾರವನ್ನು ನಡೆಸಿದ್ದು ಲಾಭವನ್ನು ಗಳಿಸಲು ಸಂಘದ ನೌಕರರ ಸಾಧ್ಯವಾಗಿರುವುದಕ್ಕೆ ಮತ್ತು ಸದಸ್ಯರ ಸಹಕಾರದಿಂದ ಗಮನಾರ್ಹವಾದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು. ಸುಧಾ ಸಿ. ಶೆಟ್ಟಿ , ಸಂಧ್ಯಾರಾಣಿ ಶೆಟ್ಟಿ ಮತ್ತು ಸುಷ್ಮಿತಾ ಇವರ ಪ್ರಾರ್ಥನೆಯೊಂದಿಗೆ ಸಭೆಯ ಕಲಾಪಗಳು ಪ್ರಾರಂಭವಾಯಿತು. ಮಹಾಸಭೆಯ ನಡವಳಿಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಹಾಗೂ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಸ್ತುತ ಆಧುನಿಕ ಕಾಲದ ಆಹಾರ ಕ್ರಮಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಅನಾರೋಗ್ಯಕ್ಕಿಡಾಗುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಹೇಳಿದರು. ಅವರು ಕೋಟ ಗ್ರಾಮಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ತಾಲೂಕು ಪಂಚಾಯತ್ ಬ್ರಹ್ಮಾವರ, ಸಮುದಾಯ ಆರೋಗ್ಯ ಕೇಂದ್ರ ಕೋಟ ಹಾಗೂ ಗ್ರಾಮ ಪಂಚಾಯತ್ ಕೋಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಂಕ್ ಫುಡ್ ಸೇವನೆ ಮನುಕುಲವನ್ನು ಕಂಗೆಡಿಸಿದ್ದು ಇದರಿಂದ ದೇಹದ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಅನುಭವಿಸುತ್ತಾ ಇದ್ದೇವೆ,ಆಗಿನ ಕಾಲದ ಆಹಾರ ಕ್ರಮಗಳು ಮನುಷ್ಯನ ಆರೋಗ್ಯವನ್ನು ಸಮೃದ್ಧಗೊಳಿಸಿದ್ದು ಇಂದಿನ ಪೋಷಣ್ ಮಾಸಾಚರಣೆಯಲ್ಲಿ ಕಂಡುಬರುವ ಸೊಪ್ಪು ತರಕಾರಿಗಳು ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಭಾಗವಾಗಿದೆ ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಪೋಷಣ್ ಮಾಸಾಚರಣೆ ಅರ್ಥಪೂರ್ಣವಾಗಿದೆ ಎಂದರು. ಈ ಸಂದರ್ಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಸಹಭಾಗಿತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕರನಾರಾಯಣದಲ್ಲಿ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ನೆರವೇರಿತು. ರೋಟರಿ ವಲಯ 1ರ ಸಹಾಯಕ ಗವರ್ನರ್ ಜೆ. ಶ್ರೀನಾಥ್ ರಾವ್ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ನ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ತಾಲೂಕು ವೈದ್ಯಾಧಿಕಾರಿ ಡಾ . ಪ್ರೇಮಾನಂದ, ರೋಟರಿ ವಲಯ 1ರ ಮೆಟರ್ನಲ್ ಅಂಡ್ ಚೈಲ್ಡ್ ಹೆಲ್ತ್ ಕೋ ಆರ್ಡಿನೇಟರ್ ಶೇಖರ್ ಎನ್. ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಕಮ್ಯುನಿಟಿ ಸರ್ವಿಸ್ ಚೇರ್ಮನ್ ಶಶಿಧರ ಶೆಟ್ಟಿ ಎಚ್., ಕಾರ್ಯಕ್ರಮದ ಸಂಯೋಜಕರಾದ ಶಂಕರ ಶೆಟ್ಟಿ ಯು., ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಡಾ. ವಿದ್ಯಾ ಅಶೋಕ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ನ ಸದಸ್ಯರಾದ ಸದಾನಂದ ಶೆಟ್ಟಿ ಎನ್., ನಿರಂಜನ್ ಶೆಟ್ಟಿ, ಸುಕುಮಾರ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೇರಳದ ಶ್ರೀಮಂತ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಜೀವನಶೈಲಿಯನ್ನು ಕರ್ನಾಟಕದ ನೆಲದಲ್ಲಿ ಅನಾವರಣಗೊಳಿಸುವ ‘ಆಳ್ವಾಸ್ ಕೇರಳೀಯಂ–2026’ ಕಾರ್ಯಕ್ರಮ ಆಳ್ವಾಸ್ ವಿದ್ಯಾಸಂಸ್ಥೆಯ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಗುರುವಾರ ವೈಭವದಿಂದ ನಡೆಯಿತು. ಕೇರಳದ ಸಾಂಸ್ಕೃತಿಕ ಪರಂಪರೆಯ ವೈವಿಧ್ಯವನ್ನು ಒಂದೇ ವೇದಿಕೆಯಲ್ಲಿ ಕಟ್ಟಿಕೊಟ್ಟ ಭವ್ಯ ಮೆರವಣಿಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು. ಕೇರಳದ ಸಾಂಪ್ರದಾಯಿಕ ವೇಷಭೂಷಣ, ಜನಪದ ಕಲೆ, ಶಾಸ್ತ್ರೀಯ ನೃತ್ಯ, ವಾದ್ಯ ಸಂಗೀತ ಹಾಗೂ ಆಚರಣೆಗಳ ಸೊಬಗನ್ನು ಮೆರವಣಿಗೆಯಲ್ಲಿ ಪ್ರಸ್ತುತಪಡಿಸಲಾಯಿತು. ಮೆರವಣಿಗೆಯಲ್ಲಿ ಕಥಕಳಿ, ಮೋಹಿನಿಯಾಟ್ಟಂ ಮತ್ತು ಮಾವೇಲಿ ಪಾತ್ರಗಳ ಸಂಯೋಜಿತ ಪ್ರದರ್ಶನ ಗಮನ ಸೆಳೆಯಿತು. ಕೇರಳದ ಸಾಂಪ್ರದಾಯಿಕ ವಾದ್ಯ ಪರಂಪರೆಯನ್ನು ಪ್ರತಿಬಿಂಬಿಸುವ ಪಂಚವಾದ್ಯ ಮೆರವಣಿಗೆಗೆ ವಿಶಿಷ್ಟ ಮೆರುಗು ನೀಡಿತು. ಅದರೊಂದಿಗೆ ತಾಲಪೊಲಿ, ಪುಲಿಕಳಿ, ಚೆಂಡೆ, ಬಾಲಕ–ಬಾಲಕಿಯರ ಸಾಂಸ್ಕೃತಿಕ ಸಂಯೋಜಿತ ಪ್ರದರ್ಶನ, ಕಾವಡಿ, ಒಪ್ಪನ, ಕೋಲ್ಕಳಿ, ಕಲರಿ ಮೊದಲಾದ ಕಲಾ ಪ್ರಕಾರಗಳು ಮೆರವಣಿಗೆಯಲ್ಲಿ ಮೂಡಿಬಂದವು. ಕೇರಳದ ಉತ್ತರ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ತೆಯ್ಯಂ ವಿವಿಧ ರೂಪಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ಭಾಷೆಯಲ್ಲಿ ಮಾತನಾಡಿದರು ಅದು ಹೃದಯ ಗೆಲ್ಲುವಂತಿರಬೇಕು. ಮನಸುಗಳನ್ನು ಕಟ್ಟುವಂತಿರಬೇಕು. ಆ ಮುಖೇನ ಮನೆ, ಸಮಾಜ, ದೇಶ ಸ್ವಸ್ಥವಾಗಲು ಭಾಷೆ ಕಾರಣವಾಗುತ್ತದೆ. ಅಂತಹ ಭಾಷೆಯ ಮೂಲಕ ಸಂಸ್ಕೃತಿಯನ್ನು ತಿಳಿಯುವಂತಾಗಬೇಕು ಎಂದು ಸಿದ್ದಾಪುರದ ಜ್ಞಾನಸರಸ್ವತಿ ಪದವಿ-ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಸುಜನ್ ಕುಮಾರ್ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘ ಲಿಂಗ ಕಲ್ಪವೃಕ್ಷ ಇದರ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಆಲಿಸುವಿಕೆ, ಓದುಗಾರಿಕೆ, ಮಾತುಗಾರಿಕೆ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳುವ ಮೂಲಕ ಎಲ್ಲಾ ಭಾಷೆಗಳನ್ನು ಕಲಿತು ಬಳಸಿರಿ ಎಂದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮ ಸಂಯೋಜಕರಾದ ಸ್ವಾತಿ ಜಿ. ರಾವ್, ಪ್ರವೀಣಾ ಎಮ್. ಪೂಜಾರಿ, ಮೇಘಾ ಎಸ್. ಭಟ್, ಸರೋಜಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಿಶಿಕಾ ಅತಿಥಿಗಳನ್ನು ಪರಿಚಯಿಸಿದರು. ಸೈಮಾ ಶೇಖ್ ಸ್ವಾಗತಿಸಿ, ಸಿರಿ ನಿರೂಪಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವಪೀಳಿಗೆಗೆ ಪ್ರಾಚೀನ ಪಾರಂಪರಿಕ ಆಯುರ್ವೇದ ಪದ್ಧತಿ ಹಾಗೂ ನೈಸರ್ಗಿಕ ಗ್ರಾಮ ಜೀವನಶೈಲಿಯನ್ನು ಪರಿಚಯಿಸುವ ಮಹತ್ತರ ಉದ್ದೇಶದೊಂದಿಗೆ, ಕರಾವಳಿ ಕರ್ನಾಟಕದಲ್ಲೇ ಇದೇ ಮೊದಲ ಬಾರಿಗೆ ಚಿತ್ರಕೂಟ ಆಯುರ್ವೇದ ಹಬ್ಬ 2026ರ ಅಕ್ಟೋಬರ್ 4ರ ಭಾನುವಾರ ಆಯೋಜಿಸಲಾಗಿದೆ. ಕುಂದಾಪುರ ತಾಲೂಕಿನ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಈ ಮಹತ್ವದ ಹಬ್ಬದ ಅಧಿಕೃತ ಲೋಗೋ ಅನಾವರಣ ಹಾಗೂ ದಿನಾಂಕ ಘೋಷಣೆ ನೆರವೇರಿತು. ಕಾರ್ಯಕ್ರಮದ ಲೋಗೋ ಅನಾವರಣಗೊಳಿಸಿ ಮಾತನಾಡಿದ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಮುಖ್ಯಸ್ಥ ಡಾ. ರಾಜೇಶ್ ಬಾಯರಿ ಅವರು, “ಕಣ್ಣಿಗೆ ಮೊಬೈಲ್ ಪರದೆಯ ಕೃತಕ ಬೆಳಕು, ನಾಲಿಗೆಗೆ ಜಂಕ್ ಆಹಾರ, ಮನಸ್ಸಿಗೆ ಯಾಂತ್ರಿಕ ಬದುಕಿನ ಒತ್ತಡ- ಇಂದಿನ ಯುವಜನತೆಯನ್ನು ಆತಂಕ, ನಿದ್ರಾಹೀನತೆ ಮತ್ತು ಉದರ ಸಮಸ್ಯೆಗಳು ಸೇರಿದಂತೆ ಸಾಕಷ್ಟು ಜೀವನಶೈಲಿ ಸಮಸ್ಯೆಗಳಿಂದ ಹಿಂಡಿ ಹಿಪ್ಪೆ ಮಾಡುತ್ತಿವೆ. ಈ ಸಂಕಷ್ಟಗಳಿಗೆ ಕೇವಲ ಇಂಗ್ಲಿಷ್ ಹೆಸರುಗಳನ್ನು ಹುಡುಕಿ ಕಂಗಾಲಾಗುವ ಬದಲು, ನಮ್ಮ ನೆಲದ ಆಯುರ್ವೇದ ಜ್ಞಾನ ಮತ್ತು…
