ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ , ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪಾರ್ಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಹಾಗೂ ಶಾಲಾ ವಿದ್ಯಾರ್ಥಿ ಸಂಸತ್ತಿನ ಮಕ್ಕಳು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ವಿದ್ಯಾರ್ಥಿ ಮನ್ವಿತಾ ಎಸ್. ಅವರು ಶಿಕ್ಷಕರ ದಿನಾಚರಣೆ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಲೋನಾ ಡಿಸೋಜಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಆರೋಗ್ಯ ಮತ್ತು ನೈರ್ಮಲ್ಯ ಉತ್ತಮ ಆರೋಗ್ಯದ ತಳಹದಿ, ಆಧುನಿಕತೆಯ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವAತ ವಿದ್ಯಾರ್ಥಿಗಳು ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಪ್ರಾಮುಖ್ಯತೆಯನ್ನು ನೀಡುವುದು ಅತ್ಯಂತ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಹಿತಮಿತವಾದ ಉತ್ತಮ ಆಹಾರ, ಶುದ್ಧ ನೀರು, ನಿಯಮಿತವಾದ ವ್ಯಾಯಾಮ ಅವಶ್ಯಕ ಎಂದರು. ಉಪ-ಪ್ರಾಂಶುಪಾಲರು ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ರಶ್ಮಿ ಗಾವಡಿ ಉಪಸ್ಥಿತರಿದ್ದರು. ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ವೀಣಾ ವಿ. ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಉಡುಪಿ ಜಿಲ್ಲಾ ಎನ್ಎಸ್ಎಸ್ ಘಟಕದ ಆಫೀಸರ್ ಡಾ. ಜಯಶಂಕರ ಕಂಗನಾರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸನ್ನಿಧಿ ಹೊಳ್ಳ ಮತ್ತು ಪಿ.ಸಿ.ಎಂ.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಅಮೋಘ ದೇವಾಡಿಗ ಅವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ. ವಹಿಸಿದ್ದರು. ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಲಾ ತಾಂಡೇಲಾ ಶುಭಾ ಸಂಸನಗೈದರು. ಎನ್ಎಸ್ಎಸ್ ಯೋಜನಾಧಿಕಾರಿ ಸುಗುಣ ಆರ್.ಕೆ, ಎನ್ಎಸ್ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳು ಜರುಗಿದವು. ಕುಂದಾಪುರ ಮತ್ತು ಬೈಂದೂರು ತಾಲೂಕಿಗೊಳಪ್ಪಟ್ಟ ಸುಮಾರು 30ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ̧1265ಕ್ಕೂ ಹೆಚ್ಚು ಸ್ಪರ್ಧಿಗಳು 20 ಸಾಂಸ್ಕೃತಿಕ, 10 ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಕರಾಮತ್ತನ್ನು ಪ್ರದರ್ಶಿಸಿದರು. ಮುಂಜಾನೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳೂ, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಶಾಲೆ ನಡೆದು ಬಂದ ಹಾದಿ, ಸ್ಪರ್ಧೆಗಳನ್ನು ನಡೆಸಿಕೊಂಡು ಬಂದ ರೀತಿನೀತಿಗಳನ್ನು ತಿಳಿಸಿದರು. ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಕುಂದಾಪುರದ ತಹಶೀಲ್ದಾರರಾದ ಶೋಭಾಲಕ್ಷ್ಮೀ ಗ್ರಾಮೀಣಪ್ರದೇಶದಲ್ಲಿ ವಿದ್ಯಾರ್ಜನೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿ ಮಾಡಿರುವುದರ ಬಗ್ಗೆ ಹರ್ಷವನ್ನು ವ್ಯಕ್ತಪಡಿಸುತ್ತಾ “ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಲ್ಲಿ ಹುದುಗಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವಜನತೆಗೆ ಮಾದರಿಯಾಗುವ ರೀತಿಯಲ್ಲಿ ಹಿರಿಯ ನಾಗರಿಕರು ಜೀವನ ನಡೆಸುತ್ತಿದ್ದು, ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯ ನಾಗರಿಕರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬ ಯುವಜನರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ , ವೃದ್ಧಾಶ್ರಮಗಳು ಉಡುಪಿ ಹಾಗೂ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶುಮಂದಿರ ಇದರ ಆಶ್ರಯದಲ್ಲಿ ಶಿಶು ಮಂದಿರದ ಪುಟಾಣಿಗಳಿಂದ 40ನೇ ವರ್ಷದ ಮುದ್ದುರಾದ ಮತ್ತು ಮುದ್ದುಕೃಷ್ಣ ವೇಷಗಳ ಪ್ರದರ್ಶನ ಹಾಗೂ ನೃತ್ಯ ಮತ್ತು ಅಭಿನಯಗಳ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ಸೇವಾ ಸಂಗಮ ಟ್ರಸ್ಟ್ ಇದರ ವಿಶ್ವಸ್ತರಾದ ರಿಷಿರಾಜ್ ಸಾಸ್ತಾನ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರಸ್ತುತ ಭಾರತೀಯ ಸಂಸ್ಕೃತಿಯ ಬಗ್ಗೆ ತಿಳಿಸಿ ಪಾಲಕರು ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಎಳೆವೆಯಲ್ಲಿಯೇ ನೀಡುವ ಉದ್ದೇಶದಿಂದ ಇಂತಹ ಶಿಶುಮಂದಿರಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕೆಂದು ಕರೆ ನೀಡಿದರು. ಸಮಾರಂಭದ ಸಭಾಧ್ಯಕ್ಷತೆ ವಹಿಸಿದ್ದ ಸೇವಾ ಸಂಗಮ ಬೈಂದೂರು ಇದರ ಅಧ್ಯಕ್ಷರಾದ ಮಂಜುನಾಥ ಶೆಟ್ಟಿ ಅವರು ಸಹಕರಿಸಿದ ಸರ್ವರಿಗೂ ವಂದಿಸಿ, ಸಂಸ್ಥೆ ಏಳಿಗೆ ಹಾಗೂ ಕಾರ್ಯಚಟುವಟಿಕೆಯಲ್ಲಿ ಸರ್ವ ಪಾಲಕರ ಸಹಕಾರ ಕೋರಿದರು. ವೇದಿಕೆಯಲ್ಲಿ ಸೇವಾ ಸಂಗಮದ ಉಪಾಧ್ಯಕ್ಷರಾದ ರವೀಂದ್ರ ಶಾನುಭಾಗ್ ಮತ್ತು ವ್ಯವಸ್ಥಾಪಕರಾದ ದಿನೇಶ್ ಪಡುವರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳು ಆದ ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ ಅವರ ಆಶ್ರಯದಲ್ಲಿ ದಿ.ಎ.ವಿ ಹೆಬ್ಬಾರ್ ಹಾಗೂ ದಿ.ಅವಿನಾಶ್ ಹೆಬ್ಬಾರ್ ಸಂಸ್ಮರಣೆ ಅಂಗವಾಗಿ ಸೀತಾರ್ ವಾದನ ಹಾಗೂ ಗಾಯನ ಕಾರ್ಯಕ್ರಮ ಕುಂದಾಪುರ ಪಾರಿಜಾತ ಹೋಟೆಲ್‌ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ವಿದ್ವಾನ್ ಭಾರ್ಗವ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಖ್ಯಾತ ವಿದ್ವಾನ್ ಭಾರ್ಗವ ಹೆಗಡೆ ಅವರಿಂದ ಸೀತಾರ್ ವಾದನ ಕಾರ್ಯಕ್ರಮ ನಡೆಯಿತು. ವಿಘ್ನೇಶ್ ಕಾಮತ್ ಕೋಟೇಶ್ವರ ತಬಲಾದಲ್ಲಿ ಸಹಕರಿಸಿದರು. ನಿಹಾರಿಕಾ ದೇರಾಜೆ ಅವರಿಂದ ಹಿಂದುಸ್ತಾನಿ ಗಾಯನ ಕಾರ್ಯಕ್ರಮ ನಡೆಯಿತು. ತಬಲಾದಲ್ಲಿ ಭಾರವಿ ದೇರಾಜೆ, ಹಾರ್ಮೋನಿಯಂನಲ್ಲಿ ಶಶಿಕಿರಣ್ ಮಣಿಪಾಲ ಮತ್ತು ವಿವೇಕ ಪೈ ಸಹಕರಿಸಿದರು. ಮುಖ್ಯ ಅತಿಥಿಯಾಗಿ ಸಂಗೀತ ಭಾರತಿ ಸಂಸ್ಥೆಯ ವಿಶ್ವಸ್ಥರಾದ ಎ.ಎಸ್.ಎನ್.ಹೆಬ್ಬಾರ್, ಡಾ| ಎಚ್.ಆರ್.ಹೆಬ್ಬಾರ್, ಕೆ.ಸೀತಾರಾಮ ನಕ್ಕತ್ತಾಯ, ರೇಖಾ ಕಾರಂತ, ಸುಪ್ರಸನ್ನ ಬಿ.ನಕ್ಕತ್ತಾಯ ಉಪಸ್ಥತರಿದ್ದರು. ಸಂಗೀತ ಭಾರತಿ ಸಂಸ್ಥೆಯ ಅಧ್ಯಕ್ಷ ಕೆ.ಶ್ರೀಧರ ಕಾಮತ್ ಅತಿಥಿಗಳನ್ನು ಗೌರವಿಸಿದರು. ಡಾ| ಆದರ್ಶ ಹೆಬ್ಬಾರ್ ಕಲಾವಿದರಿಗೆ ಸ್ಮರಣಿಕೆ ನೀಡಿದರು. ಯು.ಎಸ್.ಶೆಣೈ ಸ್ವಾಗತಿಸಿದರು. ಕಾರ್ಯದರ್ಶಿ ನಾರಾಯಣ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯತಿಯಲ್ಲಿ ಅಪೂರ್ಣ ಗ್ರಾಮ ಸಭೆ ನಡೆಸಲಾಗಿದ್ದು ಎರಡರಿಂದ ಮೂರು ಅಜಿಂಡಗಳಿಗೆ ಮಾನ್ಯತೆ ನೀಡಿಲ್ಲ, 2023-24ನೇ ಸಾಲಿನ ಜಮಾ ಖರ್ಚುಗಳನ್ನು ಓದಿ ಹೇಳಿಲ್ಲ, ಮುಂದಿನ ಸಾಲಿನಲ್ಲಿ ಮಾಡುವ ಕ್ರೀಯಾಯೋಜನೆಗಳ ಕಾಮಗಾರಿಗಳ ಪಟ್ಟಿ ಸಭೆಗೆ ತಿಳಿಸಿಲ್ಲ ಹಾಗೂ ಮಂಜೂರಾತಿ ಪಡೆದಿಲ್ಲ, ವಾರ್ಡು ಸಭೆಯ ನಡವಳಿ ಬಗ್ಗೆ ವಿಷಯ ತಿಳಿಸಿಲ್ಲ, ಈ ಎಲ್ಲಾ ಲೋಪಗಳನ್ನು ಮರೆಮಾಚಿಸುವ ಸಲುವಾಗಿ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಮಾದರಿ ಗ್ರಾಮಸಭೆ ಎಂದು ಬಿಂಬಿಸಿ ಪ್ರಜ್ಞಾವಂತ ಗ್ರಾಮಸ್ಥರ ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ ಎಂದು ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಸುಬ್ಬಣ್ಣ ಶೆಟ್ಟಿ ಆರೋಪಿಸಿದ್ದಾರೆ. ಅವರು ಬೈಂದೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಾಗೂರು ಮಹಾಲಸಾ ಕಲ್ಬರಲ್ ಹಾಲ್‌ನಲ್ಲಿ ನಡೆದ ಗ್ರಾಮಸಭೆಯಲ್ಲಿ ಮೂಲ ಆಶಯಗಳಿಗೆ ವಿರುದ್ಧವಾಗಿ ಅಧ್ಯಕ್ಷರು, ಪಿಡಿಓ, ನೋಡಲ್ ಅಧಿಕಾರಿಗಳು ನಡೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಮತನಾಡಲೂ ಅವಕಾಶ ಕೊಡದೇ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳದೆ ಕಾಟಾಚಾರಕ್ಕಾಗಿ ತರಾತುರಿಯಲ್ಲಿ ಗ್ರಾಮಸಭೆಯನ್ನು ಮುಗಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕುಂದಾಪುರ ಇವರು ಆಯೋಜಿಸಿದ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬುಲ್ ಬುಲ್ಸ್ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್‌ನಿಂದ ಸ್ವಂತ ಉದ್ಯೋಗ ಕಲ್ಪಿಸುವ ನೆಲೆಯಲ್ಲಿ ನ್ಯೂ ಮೆಡಿಕಲ್ ಸೆಂಟರ್‌ನ ಡಾ. ರಂಜನ್ ಶೆಟ್ಟಿ ಸಹಕಾರದೊಂದಿಗೆ ಹೇರಿಕುದ್ರು ನಿವಾಸಿ ಚಂದ್ರಶೇಖರ ಶೆಟ್ಟಿ ಅವರಿಗೆ ಹುಲ್ಲು ಕಟ್ಟಿಂಗ್ ಯಂತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಮಿಡ್ ಟೌನ್ ಅಧ್ಯಕ್ಷ ಶೇಖರ್ ಶೆಟ್ಟಿ ಕಾರ್ಯದರ್ಶಿ ಉದಯ್ ಶೆಟ್ಟಿ, ಕ್ಲಬ್‌ನ ಸದಸ್ಯರಾದ ರವಿರಾಜ್ ಶೆಟ್ಟಿ, ಸುನಿಲ್ ಶೆಟ್ಟಿ ಹೇರಿಕುದ್ರು, ಸ್ಥಳೀಯರಾದ ಮಹಾಬಲ ಪೂಜಾರಿ, ಸಂಜೀವ್ ಪೂಜಾರಿ, ಲಕ್ಷ್ಮಣ್ ಶೆಟ್ಟಿ, ದಿನಕರ್ ಶೆಟ್ಟಿ, ಮಹೇಂದ್ರ, ಪ್ರಫುಲ್, ಪ್ರಸನ್ನ ಉಪಸ್ಥಿತರಿದ್ದರು.
