ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಬೇಳೂರು ಸರ್ಕಾರಿ ಶಾಲೆಗೆ ಎಜ್ಯುಕೇಶನ್ ‘ಟ್ರಸ್ಟ್ ಹೆಸರಿನಲ್ಲಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ದೇಣಿಗೆ ಪಡೆದು ವಂಚಿಸಿದ ಪ್ರಕರಣ ನಡೆದಿದೆ. ಎಜ್ಯುಕೇಶನ್ ‘ಟ್ರಸ್ಟ್ ಹೆಸರಿನಲ್ಲಿ ಸುಳ್ಳು ಟ್ರಸ್ಟ್ ಡೀಡುಗಳನ್ನು ನೋಂದಾಯಿಸಿಕೊಂಡು ಬೇಳೂರು ಗ್ರಾಮದ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ದೇಣಿಗೆ ಪಡೆದು, ಪ್ರತೀ ವರ್ಷ ಆಡಿಟ್ ಮಾಡದೆ, ಗ್ರಾಮ ಪಂಚಾಯತ್ ಕಟ್ಟಡವನ್ನೇ ಟ್ರಸ್ಟಿನ ಕಚೇರಿಯೆಂದು ಟ್ರಸ್ಟ್ ಡೀಡ್ ನಲ್ಲಿ ನಮೂದಿಸಿ, ಬೇಳೂರು ಪ್ರೌಢಶಾಲೆಯ ತರಗತಿಯ ಅವಧಿಯಲ್ಲಿ ಟ್ರಸ್ಟಿನ ಸಭೆಗಳನ್ನು ನಡೆಸಿ ಸರಕಾರದ ಸುತ್ತೋಲೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಚಾರ್ಮಕ್ಕಿ ಸಂಸ್ಥೆಯವರು ನೀಡಿದ ಬಸ್ಸನ್ನೇ ಟ್ರಸ್ಟ್ ನೀಡಿದ್ದೆಂದು ಹೇಳಿದ್ದಲ್ಲದೇ ಇಂಧನ ತುಂಬಿದ ಹಣವನ್ನೂ ನೀಡದೇ ಬಾಕಿ ಉಳಿಸಲಾಗಿದೆ. ಟ್ರಸ್ಟ್‌ನಲ್ಲಿ ಹಣಕಾಸಿನ ವಂಚನೆ ನಡೆದಿದೆ ಎಂದು ಸಭೆಯಲ್ಲಿ ಬಹಿರಂಗವಾದ ಬಳಿಕ 12 ಮಂದಿ ಮೇಲೆ ನ್ಯಾಯವಾದಿ ಅವಿನಾಶ್ ಶೆಟ್ಟಿ ಅವರು ದಾಖಲೆಗಳ ಸಮೇತ ಲಿಖಿತ ದೂರು ನೀಡಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿರುವ ದೇಶಗಳು ಉದ್ಯಮಶೀಲತೆ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದವೇ ಈ ಯಶಸ್ಸು ಲಭಿಸಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು. ಅವರು ಸೋಮವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದಿರೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಮತ್ತು ಸ್ಟೆಮ್ ಕುರಿತು ಐದು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಮಾಜದ ಅಭಿವೃದ್ಧಿಗೆ ಯುವಕರು ವಿಮರ್ಶೆಗಿಂತ ಕ್ರಿಯೆಗೆ ಆದ್ಯತೆ ನೀಡಬೇಕು. ಸಮಾಜದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಹುಡುಕಿ, ಆವಿಷ್ಕಾರಾತ್ಮಕ ಚಿಂತನೆ ಮೂಲಕ ಬದಲಾವಣೆ ತರಬೇಕು. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯೇ ಪ್ರಗತಿಯ ಕೀಲಿಕೈ ಎಂದರು. ಜೀವನದಲ್ಲಿ ಯಶಸ್ವಿಯಾದ ಪ್ರತೀ ವ್ಯಕ್ತಿಗಳು, ತಮ್ಮ ಜೀವನದ ಆರಂಭದಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ಸ್ಕೌಟ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕಿನ ಕೋಟ ವಲಯದ ಕೋಟತಟ್ಟು ಕಾರ್ಯಕ್ಷೇತ್ರದ ಶ್ರೀ ನಂದಿಕೇಶ್ವರ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕೇಂದ್ರವನ್ನು ಕೋಟವಲಯದ ಜನಜಾಗೃತಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಹೊಲಿಗೆ ಕಲಿತು ಮಹಿಳೆಯರು ಹೊಲಿಯಲು ಪ್ರಾರಂಭಿಸಿದರೆ ತನ್ನ ಸಂಸಾರವನ್ನುಉತ್ತಮ ರೀತಿಯಿಂದ ನಿರ್ವಹಣೆ ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿಯಾದ ರಮೇಶ್ ಪಿ.ಕೆ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸರಸ್ವತಿ, ತಾಲೂಕು ಜನಜಾಗ್ರತಿ ವೇದಿಕೆ ಸದಸ್ಯರಾದ ಚಂದ್ರ ಆಚಾರ್ಯ, ಒಕ್ಕೂಟದ ಅಧ್ಯಕ್ಷೆ ಪ್ರೇಮ, ಶೌರ್ಯ ವಿಪತ್ತು ಸದಸ್ಯರಾದ ಭಾಸ್ಕರ ಆಚಾರ್ಯ ಮತ್ತು ರಮೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಪುಷ್ಪಲತಾ ನಿರೂಪಿಸಿ, ಕೋಟ ವಲಯದ ಮೇಲ್ವಿಚಾರಕರಾದ ನಾಗೇಶ್ ಎನ್. ಸ್ವಾಗತಿಸಿ, ತರಬೇತಿ ಶಿಕ್ಷಕಿ ಶೋಭಾ ಶ್ರೀಯಾನ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ತಲ್ಲೂರಿನ ಸದ್ವಿನ್ ಎಸ್. ಆಚಾರ್ಯ ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಈತ ಜಯಶ್ರೀ ಮತ್ತು ಸದಾನಂದ ಆಚಾರ್ಯ ಅವರ ಪುತ್ರರಾಗಿದ್ದಾರೆ. ಪ್ರಸ್ತುತ ತಲ್ಲೂರು ಜಯರಾಣಿ ಆಂಗ್ಲ ಮಾದ್ಯಮ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರಿಗೆ ಕುಂದಾಪುರ ಸೆಂಟರ್ ನ ಮಖ್ಯಸ್ಥ ಪ್ರಸನ್ನ ಕೆ. ಬಿ., ಬೋಧಕಿ ಮಹಾಲಕ್ಷ್ಮಿ ಮತ್ತು ದೀಪಾ ಅವರು ತರಬೇತಿ ನೀಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರದ ಇಂಪನಾ ಆರ್. ಅವರು Z–X ಲೆವೆಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆ.ಬಿ. ಅವರಿಂದ ತರಬೇತಿ ಪಡೆದಿರುತ್ತಾರೆ. ಶಿಕ್ಷಕರಾದ ಮಹಾಲಕ್ಷ್ಮಿ ಮತ್ತು ದೀಪಾ ಅವರು ಮಾರ್ಗದರ್ಶನ ನೀಡಿರುತ್ತಾರೆ. ಅವರು ಕುಂದಾಪುರದ ನಿವಾಸಿಯಾಗಿದ್ದು, ದೀಪಿಕಾ ಜಿ. ಮತ್ತು ರಾಘವೇಂದ್ರ ಶೇರೆಗಾರ್ ಅವರ ಪುತ್ರಿಯಾಗಿದ್ದಾರೆ. ಪ್ರಸ್ತುತ ಅವರು ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವೈಷ್ಣವ್ ವಿ. ಖಾರ್ವಿ ಎ/ಕೆ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈತ ಕಂಚುಗೋಡು ಭಗತ್ ನಗರ ವಾಸುದೇವ ಖಾರ್ವಿ ಮತ್ತು ತಾರಾ ವಿ. ಖಾರ್ವಿ ದಂಪತಿ ಪುತ್ರ. ಈತನಿಗೆ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕುಂದಾಪುರ ಸೆಂಟರ್‌ನ ಪ್ರಸನ್ನ, ಮಹಾಲಕ್ಷ್ಮೀ ಮತ್ತು ಶಿಕ್ಷಕಿ ಸುನೀತಾ ತರಬೇತಿ ನೀಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಎಂಐಟಿಕೆಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗ, ವಿದ್ಯಾರ್ಥಿಗಳನ್ನು ಕೈಗಾರಿಕಾ ಕ್ಷೇತ್ರಕ್ಕೆ ಸಿದ್ಧಗೊಳಿಸಲು, ಕಾಕುಂಜೆ ಸಾಫ್ಟವೇರ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಿತು . ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ, ಕಾಕುಂಜೆ ಸಾಫ್ಟವೇರ್ ಸಿಇಒ ಡಾ. ಜಿ ಕೆ ಭಟ್, ಐ ಎಂ ಜೆ ಸಂಸ್ಥೆಗಳ ಅಕಾಡೆಮಿಕ್ಸ್ ನಿರ್ದೇಶಕ ಡಾ. ಎಸ್.ಎನ್. ಭಟ್, ಪ್ರಿನ್ಸಿಪಲ್ ಡಾ. ರಾಮಕೃಷ್ಣ ಹೆಗ್ಗಡೆ, ಇಸಿಇ ವಿಭಾಗದ ಮುಖ್ಯಸ್ಥ ಡಾ. ವರುಣ್ ಕುಮಾರ್, ಹಾಗೂ ವಿಭಾಗದ ಪ್ರಾಧ್ಯಾಪಕರು ಹಾಜರಿದ್ದರು.ಕಾಕುಂಜೆ ಸಾಫ್ಟವೇರ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ಕರ್ನಾಟಕದ ಪ್ರಮುಖ ಐಟಿ ಸಂಸ್ಥೆಯಾಗಿದ್ದು, ಐಟಿ ಕನ್ಸಲ್ಟಿಂಗ್, ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಉತ್ಪನ್ನಗಳ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದೆ. ಸಂಸ್ಥೆಯು ಎಂಟರ್‌ಪ್ರೈಸ್ ಸಾಫ್ಟ್‌ವೇರ್, ಸ್ಥಿರ ಮತ್ತು ಚರ ವೆಬ್‌ಸೈಟ್‌ಗಳು, ಮೊಬೈಲ್ ಅಪ್ಲಿಕೇಶನ್‌ಗಳು, ಇ-ಕಾಮರ್ಸ್ ಪರಿಹಾರಗಳು, ಮತ್ತು ಈ ಆರ್ಪಿ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸುತ್ತದೆ.ಪ್ರತಿಭಾವಂತ ತಂತ್ರಜ್ಞಾನ ಪರಿಣಿತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐಕ್ಯೂಎಸಿ ಮಾನವ ಹಕ್ಕು ಘಟಕ ಮತ್ತು ಮಾನವಿಕ ಸಂಘ ಹಾಗೂ ಮೊಳಹಳ್ಳಿ ದಿನೇಶ ಹೆಗ್ಡೆ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮವು ಕಾಲೇಜಿನ ಶ್ರೀ ಬಿ. ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಸೋಮವಾರದಂದು ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬ್ರಹ್ಮಾವರದ ಮಹೇಶ ಹಾಸ್ಪಿಟಲ್, ಇಲ್ಲಿನ ಮನ:ಶಾಸ್ತ್ರಜ್ಞರಾದ ಗಿರೀಶ ಎಂ.ಎನ್. ಕಾರ್ಯಕ್ರಮ ಉದ್ದೇಶಿಸಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಒತ್ತಡ ಖಿನ್ನತೆ, ದುಶ್ಚಟಗಳಿಗೆ ಒಳಗಾಗುತ್ತಿದ್ದು ಮತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದು ತುಂಬಾ ಕಳವಳಕಾರಿ ವಿಷಯವಾಗಿದ್ದರಿಂದ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವುದು ಅತ್ಯಂತ ಮಹತ್ವವಾದುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕರಾದ ಸಂದೀಪ ಕೆ., ಮಾನವಿಕ ಸಂಘದ ಸಂಯೋಜಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಅಂತಿಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯುವ ಸಮುದಾಯ ಹೆಚ್ಚು ಕ್ರೀಡಾಸಕ್ತಿ ಹೊಂದಬೇಕು ಆ ಮೂಲಕ ಸಾಧನೆಯ ಶಿಖರ ಏರಲು ಸಾಧ್ಯ ಎಂದು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ ಹೇಳಿದರು. ಅವರು ಸೋಮವಾರ ಸಾಲಿಗ್ರಾಮದ ಹಳೆಕೋಟೆ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡ ಇವರ ಸಂಯುಕ್ತ ಆಶ್ರಯದಲ್ಲಿ 14ರ ವಯೋಮಿತಿಯ ಬಾಲಕ – ಬಾಲಕಿಯರ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಮುಕುಟ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಮೊಬೈಲ್ ಕಾಲಘಟ್ಟದಲ್ಲಿ ಕ್ರೀಡಾಸಕ್ತಿ ಕುಂಠಿತಗೊಳ್ಳುತ್ತಿದ್ದು ಈ ಬಗ್ಗೆ ಯುವಕರು ಭಾಗಿಯಾಗುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಮುನ್ನುಡಿ ಬರೆಯಲು ಸಾಧ್ಯ, ಕ್ರೀಡೆಯಲ್ಲಿ ಗೆಲುವ ಹುಮ್ಮಸ್ಸಿಗಿಂತ ಭಾಗವಹಿಸುವುದು ಬಹುಮುಖ್ಯ, ಸೋಲು ಗೆಲುವು ಪ್ರತಿ ವ್ಯವಸ್ಥೆಯಲ್ಲಿ ಸಹಜ, ಆದರೆ ಸಮನಾಗಿ ಸ್ವೀಕರಿಸಿ ಮುನ್ನೆಡೆದರೆ ಕ್ರೀಡಾ ಸಾರ್ಥಕ್ಯಕ್ಕೆ ಕೈಗನ್ನಡಿಯಾಗಲಿದೆ ಎಂದರಲ್ಲದೆ ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟ ಆಯೋಜಿಸುವುದರ ಮೂಲಕ ಒಂದಿಷ್ಟು ಪ್ರತಿಭೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೌಸ್ತುಭ ಕೆ. ಪೂಜಾರಿ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. ಗಂಗೊಳ್ಳಿಯ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಯಾಗಿರುವ ಈತನಿಗೆ ಐಡಿಯಲ್ ಪ್ಲೇ ಅಭಾಕಸ್ ಕುಂದಾಪುರ ಸೆಂಟರ್‌ನ ಮುಖ್ಯಸ್ಥ ಪ್ರಸನ್ನ ಕೆ. ಬಿ. ಹಾಗೂ ಬೋಧಕಿ ಸುನೀತಾ ನೀಡಿದ್ದರು.
