ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಗುವಿನ ಜನನದ ಕೆಲವು ಗಂಟೆಗಳು ಗೊಲ್ಡನ್ ಅವರ್ ಆಗಿದ್ದು ಈ ವೇಳೆ ತಾಯಂದಿರು ಸ್ತನಪಾನ ಮಾಡುವುದು ಬಹಳ ಮುಖ್ಯ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ, ಮಕ್ಕಳ ತಜ್ಞೆ ಡಾ. ನಂದಿನಿ ಹೇಳಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ನೇತೃತ್ವದಲ್ಲಿ, ರೋಟರಿ ಕ್ಲಬ್ ಬೈಂದೂರು, ಇನ್ನರ್ ವೀಲ್ ಕ್ಲಬ್ ಬೈಂದೂರು ಸಹಯೋಗದೊಂದಿಗೆ ಆಯೋಜಿಸಲಾದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿನ ಜನನದ ದಿನದಿಂದ ನಿಯಮಿತವಾಗಿ ಸ್ತನಪಾನ ಮಾಡುವುದರಿಂದ ತಾಯಿಯೊಂದಿಗೆ ಮಗುವಿನ ಭಾಂದವ್ಯ ವೃದ್ಧಿಯ ಜೊತೆಗೆ ಆರೋಗ್ಯವೂ ವೃದ್ಧಿಯಾಗುತ್ತದೆ. ಎದೆಹಾಲು ಕುಡಿದ ಮಕ್ಕಳು ಆರೋಗ್ಯವಂತರಾಗಿರುವುದಲ್ಲದೇ ಬುದ್ಧಿವಂತರು, ಮನೋಸ್ಥೈರ್ಯ ಹೊಂದಿರುವವರು ಆಗಿರುತ್ತಾರೆ ಎಂದು ಸಂಶೋಧನೆಗಳು ಹೇಳುತ್ತವೆ. ಮಹಿಳೆ ಗರ್ಭಿಣಿಯಾದ ದಿನದಿಂದ ಹೆರಿಗೆಯ ತನಕವೂ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಂದ ಸೂಕ್ತ ಮಾರ್ಗದರ್ಶನ ಪಡೆಯಲು ಅವಕಾಶವಿದೆ ಎಂದರು. ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ಐ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚುನಾವಣೆಯಲ್ಲಿ ಅಭಿವೃದ್ಧಿ ಕನಸಿನ ಗೋಪುರ ಕಟ್ಟಿದ ಶಾಸಕ ಗುರುರಾಜ್ ಗಂಟಿಹೊಳೆಯವರು ಚುನಾವಣೆ ನಂತರ ಕ್ಷೇತ್ರದ ಅಭಿವೃದ್ಧಿಯನ್ನು ಸಂಪೂರ್ಣ ಮರೆತಿದ್ದಾರೆ. ಈಗ ಜನತೆ ಅಭಿವೃದ್ಧಿಯ ಬಗ್ಗೆ ಮಾತನಾಡಿದರೆ ರಾಜ್ಯ ಸರ್ಕಾರ ಅನುದಾನ ನೀಡುವುದಿಲ್ಲ ಎನ್ನುವುದು ಜನಪ್ರತಿನಿಧಿಯ ವೈಫಲ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಸಂಸದರಾದ ಬಿ.ವೈ. ರಾಘವೇಂದ್ರ ಅವರಿಗೆ ಅಭಿವೃದ್ಧಿಯ ಬಗ್ಗೆ ಚಿಂತನೆ ಇದ್ದಿದ್ದರೆ ಮೂರು ಅವಧಿಯಿಂದ ಕೇಂದ್ರದಲ್ಲಿ ಇವರದ್ದೇ ಸರ್ಕಾರವಿದೆ. ಸತತವಾಗಿ ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಬಿ. ವೈ ರಾಘವೇಂದ್ರ ಆಯ್ಕೆಯಾಗುತ್ತಿದ್ದಾರೆ. ಆದರೆ ಇವರಿಬ್ಬರು ಅಭಿವೃದ್ಧಿಯ ಕೇವಲ ಮನವಿ ಕೊಟ್ಟು ಅದರ ಫೋಟೋ ಹಾಕಿ ಪ್ರಚಾರ ಪಡೆಯಲು ಮಾತ್ರ ಸೀಮಿತವಾಗಿದ್ದಾರೆ ಎಂದು ಟೀಕಿಸಿದ್ದಾರೆ. ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆದ ಘೋರ ಅನ್ಯಾಯದ ಬಗ್ಗೆ ಇವರು ಮಾತನಾಡುತ್ತಿಲ್ಲ. ನೆರೆಯಿಂದ ಸಂಪೂರ್ಣ ಬೈಂದೂರು ಕ್ಷೇತ್ರದ ಜನತೆ ತತ್ತರಿಸಿ ಹೋಗಿದ್ದಾರೆ. ಕೃಷಿ ಸಂಪೂರ್ಣ ಹಾಳಾಗಿದೆ, ಮೀನುಗರಾರು, ಮೂರ್ತೆದಾರರು ದಿಕ್ಕು ತೋಚದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಯಕತ್ವ ಹಾಗೂ ಸೇವೆ ಮನೋಭಾವನೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅಳವಡಿಸಿಕೊಳ್ಳಲು ಇಂಟರ್ಯಾಕ್ಟ್ ಕ್ಲಬ್ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯ ಆಧಾರದ ಮೇಲೆ ಗುಣಾತ್ಮಕ ಬದಲಾವಣೆಯೂ ಸಾಧ್ಯವಿದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಹೇಳಿದರು. ಅವರು ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಬೈಂದೂರು ರೋಟರಿ ಕ್ಲಬ್ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಇದರ ನೂತನ ಅಧ್ಯಕ್ಷರಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರತ್ತೂಬಾಯಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆನಂದ ಮದ್ದೋಡಿ, ರೋಟರಿಯ ಮಾಜಿ ಸಹಾಯಕ ಗವರ್ನರ್ ಸೋಮನಾಥನ್ ಆರ್., ಪೂರ್ವಾಧ್ಯಕ್ಷರುಗಳಾದ ಐ. ನಾರಾಯಣ್, ಮಂಜುನಾಥ ಮಹಾಲೆ, ಡಾ. ಪ್ರವೀಣ್ ಶೆಟ್ಟಿ, ಪ್ರಸಾದ್ ಪ್ರಭು, ಇನ್ನರ್ವೀಲ್ ಅಧ್ಯಕ್ಷರಾದ ಗುಲಾಬಿ ಮರವಂತೆ, ಬೈಂದೂರು ರೋಟರಿ ಇಂಟರ್ಯಾಕ್ಟ್ ಸಂಯೋಜಕ ರಾಘವೇಂದ್ರ ಉಪ್ಪುಂದ, ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಅಮ್ಜದ್, ಕಾರ್ಯದರ್ಶಿ ಪ್ರಕೃತಿ ಉಪಸ್ಥಿತರಿದ್ದರು. ರತ್ತೂಬಾಯಿ ಜನತಾ ಪ್ರೌಢಶಾಲೆಯ ಇಂಟರ್ಯಾಕ್ಟ್ ಸಂಯೋಜಕ ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರೂಪಿಸಿ, ಬೈಂದೂರು ರೋಟರಿ ಕಾರ್ಯದರ್ಶಿ ಸುನಿಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಣ್ಣಿಗೆ ಕಾಣುವ ಕಲ್ಲು ಎಲ್ಲರಿಗೂ ಸಾಮಾನ್ಯವಾಗಿ ಕಂಡರೂ ಶಿಲ್ಪಿಗೆ ಮಾತ್ರ ಅದರೊಳಗಿನ ಅದಮ್ಯ ಶಕ್ತಿ ಎದ್ದು ಕಾಣುತ್ತದೆ. ಶಿಲ್ಪಿ ಕಲ್ಲಿನಲ್ಲಿರುವ ಬೇಡದಿರುವ ಅಂಶಗಳನ್ನು ಕೆತ್ತಿ ತೆಗೆದು ಸುಂದರ ಶಿಲ್ಪಕ್ಕೆ ರೂಪು ನೀಡುವಂತೆ ಶಿಕ್ಷಕರು ಕೂಡ ವಿದ್ಯಾರ್ಥಿಗಳನ್ನು ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ .ಈ ಹಿನ್ನಲೆಯಲ್ಲಿ ಶಿಕ್ಷಕರ ಕಾರ್ಯ ಮಹತ್ವದಾಗಿದೆ ಎಂದು ಕರ್ನಾಟಕ ಬ್ಯಾಂಕ್, ಪ್ರಾದೇಶಿಕ ಕಛೇರಿ ಉಡುಪಿ ಇಲ್ಲಿಯ ಸಹಾಯಕ ಮಹಾ ಪ್ರಬಂಧಕ ವಾದಿರಾಜ.ಕೆ ಹೇಳಿದರು. ಅವರು ಗುರುವಾರ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘದ ಆಸರೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದಲ್ಲಿ ನಡೆದ ಕನ್ನಡ ಕಾರ್ಯಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು ಮಾತನಾಡಿ ಉಪನ್ಯಾಸಕರಿಗೆ ಪಾಠವನ್ನು ಮಾಡುವ ಮೊದಲು ಅದರ ಹಿಂದಿನ ತಯಾರಿ ಮುಖ್ಯವಾದುದು. ಹೆಚ್ಚು ಪುಸ್ತಕಗಳನ್ನು ಓದಿ ಹೊಸತನವನ್ನು ರೂಪಿಸಿಕೊಂಡು ಮಕ್ಕಳಲ್ಲೂ ಆ ಗುಣಗಳನ್ನು ಬೆಳೆಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಹಯೋಗದೊಂದಿಗೆ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿ ಸನತ್ ಆರ್. ಸಿರಿಯಾನ್ ವಿಜಯಶಾಲಿಯಾಗುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಮನವಿ ಮಾಡಿದರು. ಸುಮಾರು 1200 ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವನಿಧಿ ಯೋಜನೆಯ ಬಗ್ಗೆ ಹೆಚ್ಚು ಪ್ರಚಾರಪಡಿಸುವುದರೊಂದಿಗೆ ನಿರುದ್ಯೋಗ ಹೊಂದಿದ ಯುವಜನರು ಇದರ ಫಲಾನುಭವಿಗಳಾನ್ನಾಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಅನುಷ್ಠಾನ ಹಾಗೂ ಐ. ಟಿ. ಐ ಪ್ರವೇಶಾತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಾದ ಅರ್ಹ ಯುವಜನರಿಗೆ ಯುವನಿಧಿ ಯೋಜನೆಯಡಿ ಪ್ರತೀ ತಿಂಗಳು ಪದವಿ ಹೊಂದಿದವರಿಗೆ 3,000ರೂ. ಹಾಗೂ ಡಿಪ್ಲೋಮಾ ಹೊಂದಿದವರಿಗೆ 1,500 ರೂ. ಗಳನ್ನು ನೇರ ನಗದು ಹಣವನ್ನು ನಿರುದ್ಯೋಗ ಭತ್ಯೆ ರೀತಿಯಲ್ಲಿ ನೀಡುತ್ತಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಇದರ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು. ಪ್ರಸಕ್ತ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಹೊಂದಿದವರು ಹಾಗೂ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬೀಚ್ಗಳ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯ ತಯಾರಿಯಲ್ಲಿ ಪ್ರವಾಸಿಗರ ಜೀವಹಾನಿ ಸಂಭವವನ್ನು ತಡೆಗಟ್ಟಲು ಒತ್ತು ನೀಡುವುದರೊಂದಿಗೆ, ಯೋಜನೆಯನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಡಲತೀರಗಳಿಗೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಬೀಚ್ಗಳ ಸ್ಥಳೀಯ ಭೌಗೋಳಿಕ ಪ್ರದೇಶದ ಮಾಹಿತಿ ಕೊರತೆಯಿಂದ ಜೀವಹಾನಿಗಳು ಉಂಟಾಗುತ್ತವೆ. ಈ ಬಗ್ಗೆ ಪ್ರವಾಸಿಗರಿಗೆ ಸರ್ವಋತುಗಳಲ್ಲಿ ಸ್ಥಳೀಯ ಭೌಗೋಳಿಕ ಮಾಹಿತಿ ನೀಡುವುದು, ಅವರ ಭದ್ರತೆ, ಸುರಕ್ಷತೆ ಸೇರಿದಂತೆ ಮೂಲಸೌಲಭ್ಯಗಳ ವ್ಯವಸ್ಥೆಗಳನ್ನು ಕಲ್ಪಿಸುವುದನ್ನು ಒಳಗೊಂಡಂತೆ ಯೋಜನೆಯನ್ನು ರೂಪಿಸಬೇಕು ಎಂದರು. ಜಿಲ್ಲೆಯ ಪ್ರಾಕೃತಿಕ, ಧಾರ್ಮಿಕ ಪ್ರವಾಸೋದ್ಯಮಗಳ ಬಗ್ಗೆ ದೇಶ ವಿದೇಶಗಳಲ್ಲಿ ಪ್ರಚಾರ ಪಡಿಸುವ ಮಾಹಿತಿಯನ್ನು ಒಳಗೊಂಡ ನೂತನ ವೆಬ್ಸೈಟ್ ಅನ್ನು ಸೃಜನಪಡಿಸಬೇಕು. ಇದರಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರಗಳು, ಅಲ್ಲಿ ಪ್ರವಾಸಿಗರಿಗೆ ಸಿಗುವ ಸೌಲಭ್ಯಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.1: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 02ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜುಲೈ 31ರಿಂದ ಭಾರಿ ಮಳೆಯಾಗುತ್ತಿದ್ದು, ಅಗಸ್ಟ್ 5ರ ತನಕವೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ. 1077 ಹಾಗೂ 0820-2574802 ಅನ್ನು ಸಂಪರ್ಕಿಸಬಹುದಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇತ್ತೀಚಿಗೆ ವಯೋನಿವೃತ್ತಿ ಹೊಂದಿದ ಸಹಕಾರ ಇಲಾಖೆ ಕುಂದಾಪುರ ಉಪವಿಭಾಗದಲ್ಲಿ ಸಹಾಯಕ ನಿಬಂಧಕರಾಗಿ ಸೇವೆ ಸಲ್ಲಿಸಿದ ಅರುಣ್ ಕುಮಾರ್ ಎಸ್. ವಿ. ಅವರನ್ನು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಆನಂದ ಬಿಲ್ಲವ ಅವರ ಸನ್ಮಾನಿತರ ಸೇವಾವಧಿ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಸನ್ಮಾನಿತರು ತಮ್ಮ ಸೇವಾವಧಿಯ ಅನುಭವಗಳನ್ನು ಹಂಚಿಕೊಂಡರು. ನಿರ್ದೇಶಕರಾದ ಶ್ರೀನಿವಾಸ ಜತ್ತನ್ ಪೂಜಾರಿ, ಹರೀಶ ಮೇಸ್ತ, ಕೆ. ಮಾಧವ ಖಾರ್ವಿ, ಸುಭಾಶ್ಚಂದ್ರ ಪೂಜಾರಿ, ಜಿ. ಗೋಪಾಲ ನಾಯ್ಕ್, ಪ್ರೇಮಾ ಸಿ. ಪೂಜಾರಿ, ಯಮುನಾ, ಚಂದ್ರಮತಿ ಡಿ. ಹೆಗ್ಡೆ, ನಾಗರಾಜ ಎಂ., ಲಕ್ಷ್ಮಣ, ಬ್ಯಾಂಕಿನ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ವಾಸುದೇವ ಶೇರುಗಾರ್ ವಂದಿಸಿದರು.
