ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾʼ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು’ ಪರಿಸರ ಸಂರಕ್ಷಣೆ’ ವಿಷಯ ಆಧರಿಸಿ ನೃತ್ಯ ಪ್ರದರ್ಶನ ನೀಡಿ, ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧೆಡೆಯ ಒಟ್ಟು 700 ಕಾಲೇಜುಗಳು ಭಾಗವಹಿಸಿದ್ದವು. ಅತ್ಯುತ್ತಮ ಪ್ರದರ್ಶನಕ್ಕಾಗಿ ಕೇವಲ 8 ಕಾಲೇಜುಗಳು ಆಯ್ಕೆಯಾಗಿದ್ದವು. ಅದರಲ್ಲಿ ಸುಜ್ಞಾನ ಪಿಯು ಕಾಲೇಜು ಕೂಡ ಒಂದಾಗಿರುವುದು ಕಾಲೇಜಿಗೆ ಮತ್ತು ಕುಂದಾಪುರಕ್ಕೆ ಹೆಮ್ಮೆಯ ವಿಷಯವಾಗಿದೆ. ಸುಜ್ಞಾನ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೆ.14ರಂದು ಯುವ ಸಂಭ್ರಮದಲ್ಲಿ ಮೊದಲು ನೃತ್ಯ ಪ್ರದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿ, ಆಯ್ಕೆಯಾದ ನಂತರ ಸೆ. 24ರಂದು ಯುವ ದಸರದ ಮುಖ್ಯ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದರು. ಈ ನೃತ್ಯ ಪ್ರದರ್ಶನಕ್ಕೆ Zee ಕನ್ನಡ ವಾಹಿನಿಯ ʼಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ʼನ ರವಿ ಮಾಸ್ಟರ್ ಪರಿಕಲ್ಪನೆ ನೀಡಿದ್ದು, ʼಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ʼನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಲು ಕಟ್ಟುನಿಟ್ಟಿನ ಕ್ರಮವಹಿಸುವುದರೊಂದಿಗೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಆರ್ಥಿಕ ಸ್ಥಿತಿಯು ರಾಷ್ಟ್ರದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಸಮೀಕ್ಷೆ ಅನ್ವಯ ಸುಮಾರು 7 ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಇಂತಹ ಅನುಮಾಸ್ಪದ ಪಡಿತರ ಚೀಟಿಗಳನ್ನು ಪರಿಷ್ಕರಣಾ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಇಂತಹ ಪಡಿತರ ಚೀಟಿಗಳನ್ನು ಶೀಘ್ರದಲ್ಲಿ ಎಪಿಎಲ್ ಕಾರ್ಡ್‌ಗೆ ಪರಿವರ್ತಿಸುವಂತೆ ತಿಳಿಸಿದ ಅವರು, ಒಂದು ವೇಳೆ ಅರ್ಹ ಬಿಪಿಎಲ್ ಕಾರ್ಡ್‌ಗಳು ಎಪಿಎಲ್ ಎಂದು ಪರಿವರ್ತನೆ ಹೊಂದಿದ್ದಲ್ಲಿ ಅಂಥವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಅಭಿವೃದ್ಧಿಯ ಕೊನೆಯ ಹಂತದಲ್ಲಿರುವ ಕೋಟದ ಅಮೃತೇಶ್ವರೀ ದೇಗುಲದ ಸನಿಹದಲ್ಲಿರುವ ವರುಣತೀರ್ಥಕೆರೆಗೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕಾರ್ಕಳದ ಮೀನುಗಾರಿಗಾ ಉಪನಿರ್ದೇಶಕ ಕಛೇರಿ ನೀಡಿದ ಒಟ್ಟು ನಾಲ್ಕು ಸಾವಿರ ಅಧಿಕ ಮೀನುಗಳನ್ನು ಕೆರೆಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಕೆರೆಯ ಅಭಿವೃದ್ಧಿ ವೀಕ್ಷಿಸಿದ ಅವರು ಕೆರೆ ಕಾಮಗಾರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಈ ಕೆರೆ ಪ್ರಮುಖ ಪಾತ್ರ ವಹಿಸಲಿದ್ದು ಇಲ್ಲಿನ ಜನಸಾಮಾನ್ಯರ ಕೃಷಿಕ ಬಹು ವರ್ಷಗಳ ಕನಸು ಸಾಕಾರಗೊಳ್ಳುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಸದಸ್ಯರಾದ ರತನ್ ಐತಾಳ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಕೋಟ ಪಂಚಾಯತ್ ಸದಸ್ಯರಾದ ಚಂದ್ರ ಪೂಜಾರಿ, ಸಂಸದರ ಆಪ್ತ ಸಹಾಯಕ ಹರೀಷ್ ಕುಮಾರ್ ಶೆಟ್ಟಿ ಸ್ಥಳೀಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಅವರು ದೇವಿಯ ದರ್ಶನ ಪಡೆದು ಚಂಡಿಕಾ ಹೋಮದಲ್ಲಿ ಭಾಗಿಯಾದರು. ಸಚಿವರನ್ನು ದೇವಳದ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಮತ್ತು ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಪ್ರಸಾದ ಗೌರವಿಸಿದರು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ರಮೇಶ್ ಗಾಣಿಗ, ಕೊಲ್ಲೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಾಯಕ ಆಚಾರ್ಯ ಸೇರಿದಂತೆ ಪಕ್ಷದ ಪ್ರಮುಖರು ಜೊತೆಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್’ನಲ್ಲಿ ದಸರಾ ಹಬ್ಬದ ಅಂಗವಾಗಿ ಗ್ರಾಹಕರಿಗೆ “ಪ್ರೀತಿ ದಸರಾ ಧಮಾಕಾ ಆಫರ್” ನೀಡಲಾಗುತ್ತಿದೆ. ಪ್ರತಿ ಸ್ಮಾರ್ಟ್ ಪೋನ್ ಖರೀದಿಯ ಜೊತೆಗೆ ಗ್ರಾಹಕರಿಗೆ ಉಚಿತ ಲಕ್ಕಿ ಕೂಪನ್ ನೀಡಲಾಗುತ್ತಿದ್ದು ವಿಜೇತರಿಗೆ ಬೈಕ್, ಸ್ಮಾರ್ಟ್ ಟಿವಿ, ವಾಷಿಂಗ್ ಮಿಷಿನ್ ಸಹಿತ ಹಲವು ಕೊಡುಗೆಗಳನ್ನು ಪಡೆಯುವ ಅವಕಾಶವಿದೆ. ಅಲ್ಲದೇ ಪ್ರತಿ ಸ್ಮಾರ್ಟ್ ಪೋನ್ ಖರೀದಿಗೆ ಬ್ಯಾಗ್, ಇಯರ್ ಬಡ್ಸ್, ಮೊಬೈಲ್ ಸ್ಟಾಂಡ್, ಫ್ಯಾಷ್, ಬ್ಲೂಟೂತ್ ಸ್ಪೀಕರ್ ಉಚಿತವಾಗಿ ನೀಡಲಾಗುತ್ತಿದೆ. ಗ್ರಾಹಕರಿಗೆ ಈಜಿ ಇಎಂಐ ಸೌಲಭ್ಯ, ಮೊಬೈಲ್ ಸರ್ವಿಸ್ ಮೊದಲಾದ ಸೇವೆ ನೀಡಲಾಗುತ್ತಿದೆ. ಒಪ್ಪೊ ಸ್ಮಾರ್ಟ್ ಫೋನ್ ಖರೀದಿಸಿದ ಗ್ರಾಹಕರು 10 ಲಕ್ಷ ನಗದು ಗೆಲ್ಲುವ ಅವಕಾಶವಿದೆ. ದಸರಾ ಧಮಾಕಾ ಆಫರ್ ಅಕ್ಟೋಬರ್.30ರ ತನಕ ಇರಲಿದೆ. ಹೆಚ್ಚಿನ ಮಾಹಿತಿ ಹಾಗೂ ಖರೀದಿಗೆ ಬೈಂದೂರು ಪೊಲೀಸ್ ಸ್ಟೇಷನ್ ಎದುರಿನ ಪಂಚಾಯತ್ ಕಟ್ಟಡದಲ್ಲಿರುವ ‘ಪ್ರೀತಿ ಮೊಬೈಲ್ಸ್’ ಮಳಿಗೆ, ಬೈಂದೂರು ಬಂಕೇಶ್ವರ ರಸ್ತೆಯ ಪಂಚಾಯತ್ ಕಟ್ಟಡದಲ್ಲಿನ ಮಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತ ಪ್ರತಿಷ್ಠಾನ ಕೋಟ, ಗ್ರಾಮ ಪಂಚಾಯತ್ ಕೋಟತಟ್ಟು, ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಉಡುಪಿ, ಕೋಟ ರೋಟರಿ ಕ್ಲಬ್, ಉಸಿರು ಕೋಟ ಸಾರಥ್ಯದಲ್ಲಿ ಕೊಡಮಾಡುವ ಡಾ. ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗ:ಸಾರಿಕಾ ಶ್ರೀಧರ ಎಸ್. ಐತಾಳ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಾಪುರ), ರಾಜೀವ ಶೆಟ್ಟಿ ಎಂ. ( ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೆಟ್ಟಿನಹೊಳೆ ಬೈಂದೂರು), ರೇಖಾ ಪ್ರಭಾಕರ್ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಲಿಗ್ಗೇರಿ), ಸಾರಿಕಾ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಬೈಂದೂರು), ಮಂಜುಳಾ ಜಯಕರ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರು), ಶೈಲಾ ಜಾಯ್ಸ್ ಲೂಯಿಸ್ (ಎಸ್‌ಎಂಎಸ್ ಆಂಗ್ಲಮಾಧ್ಯಮ ಶಾಲೆ ಬ್ರಹ್ಮಾವರ), ಶಾರದಾ (ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಬೆಳೆ), ಕೃಷ್ಣ ನಾಯ್ಕ್ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರ್ವಾಶೆ ಮೈನ್), ಶಂಕರ ಪೂಜಾರಿ (ಸರಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ, ಹಾಸ್ಟೆಲ್ ಸಮಸ್ಯೆಗಳ ಕುರಿತು ಇಲ್ಲಿನ “ಪ್ರಜಾ ಸೌಧ” ದಲ್ಲಿರುವ ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಅವರು ಮಾತನಾಡಿ, ಪ್ರಸ್ತುತ ಬೈಂದೂರು ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್ ಗಳು ಹಾಗೂ ವಸತಿ ನಿಲಯಗಳಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಆದರೆ ಕುಂದಾಪುರ ಹಾಗೂ ಉಡುಪಿ ಭಾಗಗಳಲ್ಲಿನ ಹಾಸ್ಟೆಲ್ ಗಳಲ್ಲಿ ಅರ್ಜಿ ಹಾಕಿರುವ ಎಲ್ಲಾ ಗ್ರಾಮೀಣ ಭಾಗದ ಬಡ ಕುಟುಂಬಗಳ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ವಿದ್ಯಾರ್ಥಿಗಳು ಹಾಸ್ಟೆಲ್ ವಂಚಿತರಾಗುತ್ತಿರುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ನಿರಂತರ ತರುವ ವ್ಯವಸ್ಥೆಗಳಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊಸ ಹಾಸ್ಟೆಲ್ ಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಮೊಬೈಲ್ ರಿಟೈಲರ್ಸ್ ಅಸೋಸಿಯೇಶನ್ (UMRA) ಮೊಬೈಲ್ ಗ್ರಾಹಕರಿಗಾಗಿ ಆಕರ್ಷಕ ಬಹುಮಾನಗಳನ್ನು ನೀಡುತ್ತಿದ್ದು, ಪ್ರತಿ ಮೊಬೈಲ್ ಖರೀದಿಯೊಂದಿಗೆ ಲಕ್ಕಿ ಕೂಪನ್ ನೀಡಲಾಗುತ್ತಿದೆ. 2025ರ ಅಕ್ಟೋಬರ್ 01ರಿಂದ 2026ರ ಜನವರಿ 10ರ ತನಕ UMRA ಮೊಬೈಲ್ ಉತ್ಸವ ನಡೆಯಲಿದ್ದು, ನಿಮ್ಮ ಸ್ಥಳೀಯ ಮೊಬೈಲ್ ಶಾಪ್‌ನಲ್ಲಿ ನಿಮ್ಮಿಷ್ಟದ ಮೊಬೈಲ್ ಖರೀದಿಸಿ ಆಕರ್ಷಕ ಬಹುಮಾನಗಳನ್ನು ಗೆಲ್ಲಬಹುದಾಗಿದೆ. ಬಂಪರ್ ಬಹುಮಾನವಾಗಿ 5 ಬೈಕ್, 10 ಟಿವಿ, ಗೋಲ್ಡ್ – ಸಿಲ್ವರ್ ಕಾಯಿನ್, ವಾಷಿಂಗ್ ಮಷಿನ್ ಹಾಗೂ ಸಾವಿರಾರು ಉಡುಗೊರೆಗಳನ್ನು ಗೆಲ್ಲುವ ಅವಕಾಶವಿದೆ. ಜನವರಿ 18ರಂದು ಡ್ರಾ ನಡೆಯಲಿದೆ. ಬೈಂದೂರಿನಲ್ಲಿ ಪೊಲೀಸ್ ಸ್ಟೇಷನ್ ಎದುರು, ಬಸ್ ನಿಲ್ದಾಣ ಹಾಗೂ ಬಂಕೇಶ್ವರ ರಸ್ತೆಯಲ್ಲಿರುವ “ಪ್ರೀತಿ ಮೊಬೈಲ್ಸ್”ನಲ್ಲಿಯೇ ನಿಮ್ಮ ಮೊಬೈಲ್ ಖರೀದಿಸಿ ಲಕ್ಕಿ ಕೂಪನ್ ಪಡೆದುಕೊಳ್ಳಬಹುದಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಸಿಇಟಿ ಮತ್ತು ಎನ್‌ಇಇಟಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಪಡೆದು ವೈಯುಕ್ತಿಕ ಆಯ್ಕೆಯ ಕಾಲೇಜುಗಳನ್ನು ಉನ್ನತ ವ್ಯಾಸಂಗಕ್ಕೆ ಆಯ್ದುಕೊಳ್ಳುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ ಎಂದು ಬೆಳ್ಮಣ್ಣಿನ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಿ. ವಸಂತ್ ಆಚಾರ್ಯ ಹೇಳಿದರು. ಅವರು ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗ ಆಯೋಜಿಸಿದ ‘ ಕೆಮಿವರ್ಸ್’ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ವ್ಯಾಪಕ ಪಠ್ಯಕ್ರಮವಿರುವ ರಸಾಯನ ಶಾಸ್ತ್ರ ವಿಷಯದಲ್ಲಿ ಹೆಚ್ಚು ಒತ್ತು ನೀಡುವ ಓರ್ಗಾನಿಕ್ ರಿಯಾಕ್ಷನ್ ಗಳಂಥ ಕೆಲವು ಅಧ್ಯಾಯಗಳು ವಿದ್ಯಾರ್ಥಿಗಳಿಗೆ ಬಹುಬೇಡಿಕೆಯ ರಾಸಾಯನಿಕ ಉತ್ಪಾದನಾ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ಉದ್ಯೋಗ ಪಡೆಯುವಲ್ಲಿ ಸಹಾಯಕವಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸ ಕಾರ್ಯಕ್ರಮದ ಬಳಿಕ ನಡೆದ ಸಂವಾದ ಮತ್ತು ಅಭಿಪ್ರಾಯ ಹಂಚಿಕೆ ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಶೈನೋಲ್, ಅಮೂಲ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯವಾಗಿದ್ದು. ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟದಲ್ಲಿ ಭಾಗವಹಿಸಿ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಸರ್ವತೋಮುಖ ವಿಕಸನ ಸಾಧ್ಯ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕ ಅಧ್ಯಯನಕ್ಕೆ ಮಾತ್ರ ಸೀಮಿತವಾಗಬಾರದು ಕ್ರೀಡೆಯಲ್ಲಿ ಸಾಧನೆ ಮಾಡಬಹುದೆಂದು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆ ಕುಂದಾಪುರ – ಸರಕಾರಿ ಪ್ರೌಢಶಾಲೆ ಹೆಸ್ಕುತ್ತೂರು ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ 14 ಹಾಗೂ 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಕ್ರಿಕೆಟ್ ಪಂದ್ಯಾಟ 2025 ಇದರ ಕ್ರೀಡಾಕೂಟ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು ಸತ್ಯನಾರಾಯಣ ಜಿ., ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕ ಲೋಕೇಶ್.ಸಿ., ಶಿಕ್ಷಕರಾದ ಅಬ್ದುಲ್ ರವೂಫ್, ದೈಹಿಕ ಶಿಕ್ಷಣ…
