ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಹೈಕಮಾಂಡ್ ತಡೆ ಹಿಡಿದಿದೆ. ಎರಡು ದಿನಗಳ ಹಿಂದಷ್ಟೇ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಉಡುಪಿ ಜಿಲ್ಲಾಧ್ಯಕ್ಷನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಅವರ ಆಯ್ಕೆ ಕಾಂಗ್ರೆಸ್ ವಲಯದಲ್ಲಿ ಭಾರಿ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಾಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಪತ್ರ ಬರೆದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಸದ್ಯ ಅಶೋಕ್ ಕುಮಾರ್ ಕೊಡವೂರು ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ನಡೆದಿರುವ ಈ ಪ್ರಕ್ರಿಯೆಯಿಂದ ಜಿಲ್ಲಾ ಕಾಂಗ್ರೆಸ್ನಲ್ಲಿ ಆಂತರಿಕವಾಗಿದ್ದ ಬೇಗುದಿ ಹೊರಬಂದಂತಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಜನತಾ ಪಕ್ಷದಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಈ ಸಂದರ್ಭ ಶಾಸಕರಾದ ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಶಾಸಕ ಸಿ.ಟಿ. ರವಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಅವರಿಂದ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭ ಸಚಿವ, ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಚ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮೋಟಮ್ಮ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಉಪಸ್ಥಿತರಿದ್ದರು. ಬಳಿಕ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಸದ್ಯ ನಾನು ನಾಮಪತ್ರ ಸಲ್ಲಿಸಿದ್ದು ಇನ್ನು ಇನ್ನು ಚುನಾವಣಾ ಕೆಲಸ ಮಾಡುವುದು ಬಾಕಿ ಇದೆ. ನಾನು ಕೆಲಸ ಮಾಡುತ್ತೇನೆ ಎಂದಷ್ಠೇ ಹೇಳಬಲ್ಲೆ ಯೋಜನೆಗಳು ಏನು ಎಂದು ಹೇಳೋದು ಇದು ಕಾಲವಲ್ಲ. ಈ ಹಿಂದೆ ನಾನು 20 ತಿಂಗಳು ಸಂಸದನಾಗಿ ಕೆಲಸ ಮಾಡಿದ್ದು ಮಾತ್ರವಲ್ಲ ಸೋತಾಗಲು ಕೆಲಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಯುಷ್ಮಾನ್ ಭಾರತ್ ಯೋಜನೆಯಡಿ ದೇಶಾದ್ಯಂತ ಕೋಟ್ಯಾಂತರ ಜನರು ಚಿಕಿತ್ಸೆ ಪಡೆದಿದ್ದಾರೆ ಮತ್ತು ಪಡೆಯುತ್ತಿದ್ದಾರೆ. ಬೈಂದೂರು ಸೇರಿದಂತೆ ಶಿವಮೊಗ್ಗ ಕ್ಷೇತ್ರ ವ್ಯಾಪ್ತಿಯಲ್ಲಿ 2018ರಿಂದ ಈಚೇಗೆ ಲಕ್ಷಕ್ಕೂ ಅಧಿಕ ಜನರು ಆಯುಷ್ಮಾನ್ ಅಡಿಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇದಕ್ಕಾಗಿ ಕೇಂದ್ರದ ಮೋದಿ ಸರಕಾರ 261 ಕೋಟಿ ರೂ. ವಿನಿಯೋಗಿಸಿದೆ. ಕಡಿಮೆ ಬೆಲೆಯಲ್ಲಿ ಔಷಧ ಒದಗಿಸಲು ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ. ಬೈಂದೂರಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜನೌಷಧ ಕೇಂದ್ರ ತೆರೆಯಲು ಪ್ರಯತ್ನ ಮಾಡಲಾಗುವುದು ಎಂದು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ತ್ರಾಸಿಯ ಕೊಂಕಣ ಖಾರ್ವಿ ಸಭಾಭವದಲ್ಲಿ ಮಂಗಳವಾರ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವ ಸಿದ್ಧಾಂತದಲ್ಲಿ ಬೆಳದು ಬಂದ ಅನೇಕರು ನಾವಿಲ್ಲಿ ಸೇರಿದ್ದೇವೆ. ಮುಂದಿನ 25 ವರ್ಷಗಳಲ್ಲಿ ವಿಕಸಿತ ಭಾರತ ಹೇಗಿರಬೇಕು ಎಂಬ ಸ್ಪಷ್ಟ ಚಿತ್ರವನ್ನು ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ನೀಡಿದ್ದಾರೆ. ಭಾರತವು ಈಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಚುನಾವಣೆ ಇದಾಗಿದೆ. ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯಾಗಿದೆ. ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿಯವರಿಗೆ ಪಟ್ಟಾಭಿಷೇಕ ಮಾಡಬೇಕು ಎಂದು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಲೋಕಸಭಾ ಚುನಾವಣೆ ಅಂಗವಾಗಿ ನಾಗೂರು ಗ್ರಾಮದ ಲಲಿತಾ ಕೃಷ್ಣ ಸಭಾಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಕಂಬದಕೋಣೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲ ಏರ್ಪಡಿಸಿದ್ದ “ಬೂತ್ ಮಟ್ಟದ ಕಾರ್ಯಕರ್ತರ” ಸಮಾವೇಶದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮ ಉದ್ಘಾಟಿಸಿ ದೇಶ, ಕರ್ನಾಟಕ, ಕ್ಷೇತ್ರದ ರೈತರು, ಬಡವರು, ಮಹಿಳೆಯರು ಸಹಿತ ಎಲ್ಲರೂ ಸ್ವಾಭಿಮಾನದಿಂದ ಬದುಕಬೇಕಾದರೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ 60 ವರ್ಷಕ್ಕೂ ಹೆಚ್ಚು ಕಾಲ ಈ ದೇಶವನ್ನು ಆಳಿದ್ದರೂ ಬಡವರನ್ನು ಅಭಿವೃದ್ಧಿ ಮಾಡಿಲ್ಲ. ಬಡವರು ಬಡವರಾಗಿಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಕ್ಷದ ಚೌಕಟ್ಟಿನಲ್ಲಿ ಪಕ್ಷದ ಅಭ್ಯರ್ಥಿ ಘೋಷಣೆ ಆದ ನಂತರದಲ್ಲಿ ಅದೇ ಅಧಿಕೃತವಾಗಲಿದೆ. ಹಿಂದುತ್ವವಾದ ವಿಚಾರದಲ್ಲಿ ನಮ್ಮ ಮೈಯಲ್ಲಿ ಹರಿಯುತ್ತಿರುವ ಒಂದೊಂದು ಹನಿ ರಕ್ತವೂ ಕೂಡ ಹಿಂದುವೇ ಆಗಿದೆ. ದೇಶದಲ್ಲಿರುವ ಎಲ್ಲರೂ ಹಿಂದುಗಳೇ ಆಗಿದ್ದಾರೆ. ಪೊಳ್ಳು ಹಿಂದುತ್ವ ವಾದಿಗಳಿಂದ ನಮಗೆ ಪಾಠ ಬೇಕಾಗಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗುಡುಗಿದರು. ನಾಗೂರಿನಲ್ಲಿ ಮಂಗಳವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿ. ವೈ.ರಾಘವೇಂದ್ರ ಎಂಬುದನ್ನು ಪಕ್ಷವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ, ಅವರ ಪಕ್ಕದಲ್ಲೇ ನನ್ನನ್ನು ನಿಲ್ಲಿಸಿಕೊಂಡು ಪ್ರಚಾರವನ್ನು ಮಾಡಿ, ರಾಘವೇಂದ್ರ ಅವರಿಗೆ ಹಾರೈಸಿ, ಆಶೀರ್ವಾದ ಮಾಡಿದ್ದಾರೆ. ಇಡೀ ಬಿಜೆಪಿ, ಪರಿವಾರ ನಮ್ಮ ಜತೆಗೆ ಇದೆ ಎಂದರು. ದೇಶದಲ್ಲಿರುವ ಎಲ್ಲರೂ ಹಿಂದೂ ವಾದಿಗಳು. ನಾನು ಮಾತೃವಲ್ಲ, ಬಿ.ಎಸ್. ಯಡಿಯೂರಪ್ಪನವರು ಅಯೋಧ್ಯೆಯ ರಾಮಜನ್ಮಭೂಮಿ ಆಂದೋಲನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು. ಕೊಲ್ಲೂರು ಕ್ಷೇತ್ರದ ಅಧಿದೇವತೆ ಹಾಗೂ ಗ್ರಾಮದೇವತೆ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ಊರಿನ ಹತ್ತು ಸಮಸ್ತರು, ಭಕ್ತಾದಿಗಳು ಸೇರಿ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ವಾರ್ಷಿಕ ಉತ್ಸವದ ಪ್ರಯುಕ್ತ ಕಳೆದ ರಾಜ್ಯ-ಹೊರರಾಜ್ಯದ ಕಲಾವಿದರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಸಹಾಯಕ ಕಮಿಷ್ನರ್ ರಶ್ಮಿ ಎಸ್.ಆರ್., ಕಾರ್ಯನಿರ್ವಾಹಣಧಿಕಾರಿ ಪ್ರಶಾಂತ್ ಶೆಟ್ಟಿ, ಸಹಾಯಕ ಕಾರ್ಯನಿರ್ವಾಹಣಧಿಕಾರಿ ಪುಷ್ಪಲತಾ, ಅರ್ಚಕರು ಮತ್ತು ದೇವಸ್ಥಾನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿವಿಧೆಡೆ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಶಂಕರನಾರಾಯಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ (23), ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್(21), ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್ ಅನ್ನಾರ್(24) ಬಂಧಿತ ಆರೋಪಿಗಳು. ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿ ಎಂಬಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಬಂಧಿತರಿಂದ 11.25 ಕ್ವಿಂಟಾಲ್ ಸಿಪ್ಪೆಅಡಿಕೆ, 40ಕೆ.ಜಿ. ಒಣ ಅಡಿಕೆ, ಮತ್ತು ಕೃತ್ಯಕ್ಕೆ ಬಳಸಿದ್ದ ಪಿಕ್ಆಪ್ ವಾಹನ ಹಾಗೂ ಸ್ಕೂಟರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 4,05,750ರೂ. ಅಂದಾಜಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ. ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ಸೇರಿದಂತೆ ಕುಂದಾಪುರ, ಬೈಂದೂರು, ಕೋಟ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಮಂಗಳೂರು ನಂತೂರಿನ ಅರ್ಷಿತ್ ಅವಿನಾಶ್ ದೋಡ್ರೆ (23), ಬೈಂದೂರು ಪಡುವರಿಯ ರಿಲ್ವಾನ್ ಅಲಿಯಾಸ್ ರಿಝ್ವಾನ್ (24), ಯಡ್ತರೆಯ ಮಹಮ್ಮದ್ ಅರ್ಬಾಝ್ (23) ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಮೂವರು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಗುಡ್ಡೆಯಂಗಡಿ ಗ್ರಾಮದ ಶಾನ್ ಮೆಡಿಕಲ್ ಶಾಪ್, ಬೈಂದೂರು ಠಾಣಾ ವ್ಯಾಪ್ತಿಯ ನಾಗೂರು ಎಂಬಲ್ಲಿ ಶ್ರೇಷ್ಠ ಮೆಡಿಕಲ್ ಶಾಪ್ ಹಾಗೂ ಕುಂದಾಪುರ ಠಾಣಾ ವ್ಯಾಪ್ತಿಯ ಖಾರ್ವಿಕೇರಿ ರಸ್ತೆಯಲ್ಲಿರುವ ಮಹಾಂಕಾಳಿ ಜನರಲ್ ಸ್ಟೋರ್ ಹಾಗೂ ಕೋಟಾ ಠಾಣಾ ವ್ಯಾಪ್ತಿಯ ಕೋಟ ಮೂರುಕೈ ಯಲ್ಲಿರುವ ವಿವೇಕ ಮೆಡಿಕಲ್ ಶಾಪ್, ಹಳ್ಳಾಡಿಯಲ್ಲಿರುವ ತಲ್ಲೂರು ಬಾರ್& ರೆಸ್ಟೋರೆಂಟ್, ಅಯ್ಯಂಗಾರ್ ಬೇಕರಿ, ಸಾಯಿಬ್ರಕಟ್ಟೆಯಲ್ಲಿರುವ ನಂದಿಕೇಶ್ವರ ಹೊಟೇಲಿನಲ್ಲಿ ನಡೆದ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಆರೋಪಿಗಳಿಂದ ಒಟ್ಟು 36,000 ರೂಪಾಯಿ ಮೌಲ್ಯದ ಹಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿ ಉದ್ಯಮಿ ದಿನೇಶ್ ಜಿ ಕಾಮತ್ ಆಯ್ಕೆಯಾಗಿದ್ದಾರೆ. ಜತೆ ಆಡಳಿತ ಮೊಕ್ತೇಸರರಾಗಿ ವೆಂಕಟೇಶ್ ಎಸ್ ಪೈ, ಕಾರ್ಯದರ್ಶಿಯಾಗಿ ಅಶೋಕ್ ಎಂ ಕಾಮತ್ ಖಜಾಂಚಿಯಾಗಿ ಶಂಕರ್ ವಿ ಕಾಮತ್ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಸದಸ್ಯರಾಗಿ ಅರವಿಂದ ಕೆ ಕಾಮತ್, ವಿಟ್ಠಲ ದಾಸ್ ಭಟ್, ಪದ್ಮನಾಭ ಎನ್ ಕಾಮತ್, ರತ್ನಾಕರ ವಿ ಕಾಮತ್, ಗಿರೀಶ್ ಎಂ ಪೈ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
