Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಬಟ್ಟೆ ಜೋಡಿಸುವ ವಿಚಾರವಾಗಿ ಸಹೋದರಿಯೊಂದಿಗೆ ಗಲಾಟೆ ಮಾಡಿಕೊಂಡು, ತಾಯಿ ಬೈದರೆಂಬ ಕಾರಣಕ್ಕೆ ಸಿಟ್ಟಾದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಾಲ ಗ್ರಾಮದಲ್ಲಿ ನಡೆದಿದೆ. ಬೆಳ್ಳಾಲ ಗ್ರಾಮದ ಗಂಗಮಾತಾ ನಿವಾಸಿ ಚಂದ್ರಾವತಿ ಹಾಗೂ ಪ್ರಭಾಕರ ನಾಯಕ್ ದಂಪತಿಯ 18 ವರ್ಷದ ಪುತ್ರಿ ಪ್ರಮಿತಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಗುರುವಾರದಂದು ಬೆಳಗ್ಗಿನ ಜಾವ ರೂಮಿನಲ್ಲಿ ಬಟ್ಟೆಗಳನ್ನು ಇಡುವ ವಿಚಾರವಾಗಿ ಪ್ರಮಿತಾ ಮತ್ತು ಆಕೆಯ ತಂಗಿಯ ನಡುವೆ ಮಾತುಕತೆ ನಡೆದು ಗಲಾಟೆಯಾಗಿತ್ತು. ಇದನ್ನು ಗಮನಿಸಿದ ತಾಯಿ ಚಂದ್ರಾವತಿ ಇಬ್ಬರಿಗೂ ಬೈದು ಗಲಾಟೆಯನ್ನು ಬಿಡಿಸಿದ್ದರು. ಇದರಿಂದ ಕೋಪಗೊಂಡ ಸಿಡುಕು ಸ್ವಭಾವದ ಪ್ರಮಿತಾ, ಕೊಠಡಿಗೆ ತೆರಳಿ ಒಳಗಿನಿಂದ ಬಾಗಿಲ ಚಿಲಕ ಹಾಕಿಕೊಂಡಿದ್ದಳು. ತಾಯಿ ಕೆಲಸಕ್ಕೆ ತೆರಳಿದ ಬಳಿಕ, ಬೆಳಿಗ್ಗೆ 08:30ರ ಸುಮಾರಿಗೆ ಪ್ರಮಿತಾಳ ಸಹೋದರ ತಾಯಿಗೆ ಕರೆ ಮಾಡಿ, ಅಕ್ಕ ಬಾಗಿಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಮತ್ತು  ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಖಂಬದಕೋಣೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಬೈಂದೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಸ್ಕೂಲ್ ನ ನಾಲ್ಕು ವಿದ್ಯಾರ್ಥಿಗಳು ಬೈಂದೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17ರ ವಯೋಮಾನದ ಹುಡುಗರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಹರಿಜಿತ್ (9ನೇ ತರಗತಿ), ಸನ್ವಿತ್ ಶೆಟ್ಟಿ (9ನೇ ತರಗತಿ), ತನೀಶ್ (9ನೇ ತರಗತಿ) ಮತ್ತು ಆರಾಧ್ಯ ಪೂಜಾರಿ (9ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜನತಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಲಿಕಾ ಚಟುವಟಿಕೆಗಳ ಜೊತೆಯಲ್ಲಿ ನುರಿತ ದೈಹಿಕ ಶಿಕ್ಷಣ ಶಿಕ್ಷಕರಿಂದ ವಿವಿಧ ಬಗೆಯ ಆಟೋಟ ಸ್ಪರ್ಧೆಗಳಿಗೆ ತರಬೇತಿಯನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ವಿಜೇತ ವಿದ್ಯಾರ್ಥಿಗಳಿಗೆ ಜನತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ ಇಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ- ಸಾಸ್ತಾನ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಇವರ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು. ಬ್ರಹ್ಮಾವರ ಪೋಲಿಸ್ ಠಾಣಾ ಉಪ ನಿರೀಕ್ಷಕಿ ಮುಕ್ತ ಬಾಯಿ ಹಾಗೂ ಪ್ರೊಫೆಷನರಿ ಪೊಲೀಸ್ ಉಪನಿರೀಕ್ಷಕಿ ಆಶ್ರೀತಾ ಎ. ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಪೋಕ್ಸೋ, ಸೈಬರ್ ಕ್ರೈಂಸ್, ಮಕ್ಕಳ ಕಳ್ಳ ಸಾಗಣಿಕೆ, ಮಾದಕ ದ್ರವ್ಯ ವ್ಯಸನ, ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ  ಹಾಗೂ ಕಾನೂನಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷೆ ಕುಸುಮ ಮನೋಜ್ ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪೋಷಕ ಪ್ರತಿನಿದಿಗಳಾದ ರೇಖಾ ಉಡುಪ, ರಕ್ಷಿತ್ ಕುಮಾರ್ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೋಟರಿ ಕ್ಲಬ್‌ನ ಸದಸ್ಯರಾದ ಮನೋಜ್ ಕುಮಾರ್, ಅರವಿಂದ್ ಶರ್ಮಾ, ಲಕ್ಷ್ಮೀನಾರಾಯಣ, ಲೀಲಾವತಿ, ಸುಲತಾ ಹೆಗ್ಡೆ, ಜ್ಯೋತಿ ಉದಯ್ ಕುಮಾರ್, ಅಮಿತಾ, ಮಮತಾ ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕಿ ಕು. ವರ್ಷ, ಶಿಕ್ಷಕ ವೃಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗೆಳೆಯರ ಬಳಗ ಕಾರ್ಕಡ ಇದರ 38ನೇ ವಾರ್ಷಿಕ ಮಹಾಸಭೆಯು ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷ ಕೆ . ತಾರಾನಾಥ ಹೊಳ್ಳ ವಹಿಸಿದ್ದರು. ವಾರ್ಷಿಕ ವರದಿಯನ್ನು ಬಳಗದ ಕಾರ್ಯದರ್ಶಿ ಕೆ. ನಾಗರಾಜ ಉಪಾಧ್ಯ ಹಾಗೂ ಅಡಿಟ್ ಮಾಡಿದ 2025-26ರ ಆಯವ್ಯಯ ಕೋಶಾಧಿಕಾರಿ ಕೆ. ಶೀನ ಸಭೆಯಲ್ಲಿ ಮಂಡಿಸಿದರು. ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ನಂತರ ಕಾರ್ಯಕಾರಿಣಿ ಸಭೆಯಲ್ಲಿ ಈ ಕೆಳಗಿನವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಕೆ. ತಾರಾನಾಥ ಹೊಳ್ಳ, ಉಪಾಧ್ಯಕ್ಷ ಕೆ. ಶಶಿಧರ ಮಯ್ಯ, ಕಾರ್ಯದರ್ಶಿ- ಕೆ. ನಾಗರಾಜ ಉಪಾಧ್ಯ, ಜೊತೆ ಕಾರ್ಯದರ್ಶಿ ಕೆ. ಜಗದೀಶ ಆಚಾರ್ಯ, ಖಜಾಂಚಿ ಕೆ. ಶೀನ, ಕಾರ್ಯಕಾರಿ ಸಮಿತಿಯಲ್ಲಿ ಕೆ. ಚಂದ್ರಕಾಂತ ನಾಯರಿ, ಕೆ. ಶ್ರೀಕಾಂತ ಐತಾಳ, ಕೆ. ಶ್ರೀಪತಿ ಆಚಾರ್ಯ, ಕೆ. ತಮ್ಮಯ್ಯ, ಕೆ. ಉದಯ ಐತಾಳ, ಕೆ. ರಾಘವೇಂದ್ರ ದೇವಾಡಿಗ, ಕೆ. ಶೇಖರ, ಕೆ. ರಘ ಭಂಡಾರಿ ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶಿವಮೊಗ್ಗ ಜಿಲ್ಲಾ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಎಸ್. ಪಿ. ದಿನೇಶ್ ಇತ್ತೀಚಿಗೆ ಶ್ರೀ ಕ್ಷೇತ್ರ ಹಲವು ಮಕ್ಕಳ ತಾಯಿ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೋದಿಸಿ ಗೌರವಿಸಿ ಪ್ರಸಾದ ವಿತರಿಸಿದರು. ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ್ ಆಚಾರ್ ಕೋಟ, ಸುಭಾಸ್ ಶೆಟ್ಟಿ ಗಿಳಿಯಾರು, ಗಣೇಶ್ ಕೆ. ನೆಲ್ಲಿಬೆಟ್ಟು, ದೇವಸ್ಥಾನದ ವ್ಯವಸ್ಥಾಪಕರಾದ ಗಣೇಶ್ ಹೊಳ್ಳ, ಅರ್ಚಕರಾದ ಸಂದೇಶ ಜೋಗಿ, ಅರವಿಂದ ಜೋಗಿ ಹಾಗೂ ಸ್ಥಳೀಯರಾದ ಭುಜಂಗ ಗುರಿಕಾರ, ಸೋಮಶೇಖರ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸಂಘ ರತ್ನ ಹಾಗೂ ಭಾರತ ಸಂಘ ಸಿರಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಫ್ರೆಂಡ್ಸ್ ಸರ್ಕಲ್ ರಿ. ಮೀನು ಮಾರ್ಕೆಟ್ ರಸ್ತೆ ಕುಂದಾಪುರ ಇದರ 36ನೇ ವರ್ಷದ ಪುರಸಭಾ ವ್ಯಾಪ್ತಿಯ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವು ಕುಂದಾಪುರದ ಬಿಆರ್ ರಾಯರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ನಾಯ್ಕ್ ಸಭಾಧ್ಯಕ್ಷತೆ ವಹಿಸಿ ಫ್ರೆಂಡ್ಸ್ ಸರ್ಕಲ್ ಸಂಸ್ಥೆಯು ಕಳೆದ 35 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸುತ್ತಿದ್ದು ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಪದವಿಪೂರ್ವ ವಿದ್ಯಾರ್ಥಿಗಳಿಗೂ ವಿಸ್ತರಿಸಲಿದೆ ಎಂದು  ನುಡಿದರು . ಮುಖ್ಯ ಅತಿಥಿಯಾದ ಚೇತನಾ ಕಿರಣ್ ಮಕ್ಕಳಿಗೆ ಜೀವನ ಮೌಲ್ಯ , ಉತ್ತಮ ಸಂಸ್ಕಾರ ಹಾಗೂ ಆದರ್ಶ ಜೀವನ ಶೈಲಿ ಬಗ್ಗೆ  ನುಡಿದರು . ಇನ್ನೋರ್ವ ಮುಖ್ಯ ಅತಿಥಿಯಾದ ಡಾ. ಅಶೋಕ್ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ, ಆಹಾರ ಸೇವನೆ ದೈಹಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮತ್ತೋರ್ವ ಮುಖ್ಯ ಅತಿಥಿಯಾಗಿ ಬಿ.ಆರ್ ರಾಯರ ಹಿಂದೂ ಶಾಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕಗಳು ಮತ್ತು ಮಾದಕ ವಿರೋಧಿ ಜಾಗೃತಿ ಕೋಶ ಇವುಗಳ ಆಶ್ರಯದಲ್ಲಿ ಕುಂದಾಪುರ ಅಬಕಾರಿ ಉಪ ವಿಭಾಗದ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ “ಮಾದಕ ದ್ರವ್ಯಗಳು ಮತ್ತು ಮನೋವಿಕಾರಕ ಪದಾರ್ಥಗಳು ಮತ್ತು ಸಂಬAಧಿತ ಕಾಯ್ದೆ” ವಿಷಯದ ಕುರಿತು ಉಪನ್ಯಾಸ ನಡೆಯಿತು. ಸಂಪನ್ಮೂಲ ವ್ಯಕ್ತಿ ಕುಂದಾಪುರದ ಉಪ ಅಬಕಾರಿ ಅಧೀಕ್ಷಕ ಶ್ರೀ ಪ್ರಭುಗೌಡ ಎಂ. ಪಾಟೀಲ್ ಅವರು ಮಾತನಾಡಿ, ವಿವಿಧ ರೀತಿಯ ಮಾದಕ ದ್ರವ್ಯಗಳು, ಅವುಗಳ ಸೇವನೆಯ ಲಕ್ಷಣಗಳು, ದೇಹದಲ್ಲಿ ಅವುಗಳ ಉಳಿಯುವ ಅವಧಿ, ದುಷ್ಪರಿಣಾಮಗಳು ಹಾಗೂ ಈ ರೀತಿಯ ವ್ಯಸನಗಳಿಂದ ದೂರವಿರುವ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲಾರದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್ ಮತ್ತು ಮಾದಕ ವಿರೋಧಿ ಜಾಗೃತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಖಿಲ ಕರ್ನಾಟಕ ಮಹಿಳಾ ಸೌಂದರ್ಯ ತಜ್ಞೆಯರ ಸಂಘ ರಿ. ಉಡುಪಿ, ಕುಂದಾಪುರ ವಲಯ  ಮಂಗಳವಾರ ಕುಂದಾಪುರದ  ಹೋಟೆಲ್ ಶೇರೋನ್ ನಲ್ಲಿ  ಮೇಕಪ್ ಕಾರ್ಯಗಾರವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾದ ರೇಖಾ ಅರ್ ಆಚಾರ್ಯ, ಜಿಲ್ಲಾ ಅಧ್ಯಕ್ಷರಾದ ಸುನಿತಾ ಗಣೇಶ್, ಮಾಜಿ ಜಿಲ್ಲಾ ಅಧ್ಯಕ್ಷರಾದ ಕಿಶ್ವರ್ ಜಹಾನ್ , ತರಬೇತುದಾರರಾದ ರೇಖಾ ಜಯರಾಮ್, ಕಾರ್ಯದರ್ಶಿಯಾದ ಪ್ರಮೀಳಾಪುತ್ರನ್, ಕೋಶಾಧಿಕಾರಿಯಾದ ಮಾಲತಿ ದೇವಾಡಿಗ, ಇವರೆಲ್ಲರೂ ಸೇರಿ ದೀಪ ಬೇಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮೇಕಪ್ ತರಬೇತಿದಾರರಾದ ಮಂಗಳೂರಿನ ರೇಖಾ ಜಯರಾಮ್ ಅವರು ತರಬೇತಿಯನ್ನು ಅತ್ಯುತ್ತಮವಾಗಿ ನಡೆಸಿಕೊಟ್ಟರು. ಹಾಗೆಯೇ ಅಂತಿಮವಾಗಿ ಎಲ್ಲರಿಗೂ ಸರ್ಟಿಫಿಕೇಟ್ ನೀಡುವುದರ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಉಪ್ಪುಂದ ವರಲಕ್ಷೀ ಚಾರಿಟೇಬಲ್ ಟ್ರಸ್ಟ ವತಿಯಿಂದ ದತ್ತು ಸ್ವೀಕರಿಸಲ್ಪಟ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷರ ಮುಂಜುನಾಥ ಎಸ್. ಸೇವಾ ನಿವೃತಿಗೊಂಡಿದ್ದು ಅವರಿಗೆ ಬಿಳ್ಕೋಡುಗೆ  ಮತ್ತು ಅಭಿನಂದನಾ ಸಮಾರಂಭವು  ಜುಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ಸಭಾಭವನದಲ್ಲಿ ನಡೆಯಿತು. ಉದ್ಯಮಿ ಡಾ. ಗೋವಿಂದಬಾಬು ಪೂಜಾರಿ ಮಾತನಾಡಿ, ಮುಖ್ಯಶಿಕ್ಷಕ ಮಂಜುನಾಥ ಇವರು ಕೇವಲ 74ಮಕ್ಕಳು ಇರುವ ಶಾಲೆಗೆ ಬಂದು ತನ್ನ ಪರಿಶ್ರಮದಿಂದ ವಿವಿಧ ಸವಾಲುಗಳನ್ನು ಎದುರಿಸಿ, ಎಲ್.ಕೆ.ಜಿ., ಯುಕೆಜಿ ತರಗತಿಗಳನ್ನು ಪ್ರಾರಂಭಿಸಿ, ಶಾಲೆಗೆ ವಿವಿಧ ಮೂಲ ಸೌಕರ್ಯಗಳನ್ನು ದೊರಕಿಸಿಕೊಟ್ಟು ಪ್ರಸ್ತುತ 185 ವಿದ್ಯಾರ್ಥಿಗಳು ಇರವಂತೆ ಮಾಡಿರುವುದು ಮುಖ್ಯಶಿಕ್ಷಕರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ ಅವರ ಈ ಸಾಧನೆಯು ಪ್ರತಿಯೊಬ್ಬರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್, ಶಾಲಾಬಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನ, ಶಾಲಾ ಶಿಕ್ಷಕರ ಬಳಗ, ವಿದ್ಯಾರ್ಥಿಗಳ ವತಿಯಿಂದ ಸೇವಾ ನಿವೃತ್ತರಾದ ಮುಖ್ಯೋಪಾಧ್ಯಾಯ ಮುಂಜುನಾಥ ಎಸ್. ಅವರನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಚರ್ಚ್ ರಸ್ತೆಯಲ್ಲಿ ಮೇ 31ರಂದು ನಸುಕಿನ ಜಾವ ಬಾರ್ಕೂರಿನ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ರೈಫಲ್ನಿಂದ ಗುಂಡಿಕ್ಕಿ ಕೊಲೆಗೈದ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತ (55) ಎಂಬಾತನನ್ನು ಬುಧವಾರ ಕುಂದಾಪುರ ಪೊಲೀಸರು ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಆರೋಪಿಯನ್ನು ಭಟ್ಕಳದ ಬೆಳಕೆ ಗ್ರಾಮದ ಹೇರಬುಡಿಕೆ ಎಂಬಲ್ಲಿ ಆ.1 ರಂದು ಪೊಲೀಸರು ಬಂಧಿಸಿದ್ದು ಹೆಚ್ಚಿನ ತನಿಖೆಗಾಗಿ ಆ.2 ರಂದು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವಿಚಾರಣೆ ಬಹುತೇಕ ಮುಗಿದ ಹಿನ್ನೆಲೆಯಲ್ಲಿ ಬುಧವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಇದನ್ನೂ ಓದಿ ►ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ.‌ ಆರೋಪಿ ಪರಾರಿ – https://kundapraa.com/?p=100278 . ಇದನ್ನೂ ಓದಿ ► ಕುಂದಾಪುರ: ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಆರೋಪಿ ಡೇರಿಕ್‌ ಕ್ರಾಸ್ಟಾ ಬಂಧನ – https://kundapraa.com/?p=100341 .

Read More