ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಂಜೀವಿನಿ ಸಂಘದ ಮೂಲಕ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸರಕಾರ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸುತ್ತಿದೆ. ಊರಿನಲ್ಲಿದ್ದು ದುಡಿಮೆ ಮಾಡಲು ಸಂಜೀವಿನಿ ಸಂಘಗಳ ಸಹಕಾರಿಯಾಗುತ್ತದೆ. ಸಂಜೀವಿನಿ ಸಂಘದ ಸದಸ್ಯರು ವ್ಯವಹಾರ ಬಗ್ಗೆ ತರಬೇತಿ ಪಡೆದುಕೊಂಡು ವ್ಯವಹಾರದಲ್ಲಿ ಯಶಸ್ಸು ಗಳಿಸಲು ಪ್ರಯತ್ನಿಸಬೇಕು. ಸಂಜೀವಿನಿ ಘಟಕ ಯಶಸ್ಸು ಗಳಿಸುವುದರ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೃಷಿ ಇಲಾಖೆ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ ಹಾಗೂ ಗ್ರಾಮ ಪಂಚಾಯತ್ ಗುಜ್ಜಾಡಿ, ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವತಿಯಿಂದ ಕೊಡಪಾಡಿಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಶ್ರೀ ದುರ್ಗಾ ಸಂಜೀವಿನಿ ಚಿಕ್ಕಿ ಘಟಕವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಕುಂದಾಪುರ ತಾಪಂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ, ಬೈಂದೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರೂರು ಇಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜರುಗಿತು. ರೋಟರಿ ವತಿಯಿಂದ ಎರಡೂ ಕಡೆಗಳಲ್ಲಿ ಲಸಿಕೆಯ ಮನೆ ಮನೆ ವಿತರಣೆಗಾಗಿ ವಾಹನದ ವ್ಯವಸ್ಥೆ ಹಾಗೂ ಸಿಬಂದಿಗಳಿಗೆ ಉಪಹಾರದ ವ್ಯವಸ್ಥೆಯನ್ನು ವತಿಯಿಂದ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಪ್ರಸಾದ ಪ್ರಭು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ಪೂರ್ವಾಧ್ಯಕ್ಷ ಐ ನಾರಾಯಣ ಹಾಗೂ ಹಿರಿಯ ಸದಸ್ಯರಾದ ಡಾ. ಎಮ್.ಎಸ್. ಶೆಟ್ಟಿ ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭವಿಷ್ಯದಲ್ಲಿ ನೀರಿನ ಆಹಾಕಾರ ತಪ್ಪಿಸಲು ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಜಮೀನುಗಳಲ್ಲಿ ಮಳೆ ನೀರಿನ ಕೊಯ್ಲು ಅಳವಡಿಸಿಕೊಳ್ಳುವುದು ಅತ್ಯಂತ ಸೂಕ್ತ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜನೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉದಯವಾಣಿ ಸಹಯೋಗದೊಂದಿಗೆ ನಡೆದ ಮಳೆ ನೀರು ಕೊಯ್ಲು ಕಾರ್ಯಗಾರವನ್ನು ಗಿಡಕ್ಕೆ ನೀರನ್ನು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಉಡುಪಿ ಜಿಲ್ಲೆಯು ಕರಾವಳಿ ಪ್ರದೇಶದಲ್ಲಿದ್ದು, ಸಮುದ್ರ ತೀರ ಒಂದೆಡೆಯಾದರೆ, 4000 ಮಿ.ಮೀ.ಕ್ಕೂ ಹೆಚ್ಚು ವಾಡಿಕೆ ಮಳೆ ಸುರಿದು , 16 ಕ್ಕೂ ಹೆಚ್ಚು ನದಿಗಳು ಹರಿಯುತ್ತಿದ್ದರೂ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ ಎಂದರೆ ಇದಕ್ಕೆ ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಮೂಲ ಕಾರಣ. ಇದನ್ನು ಗಂಭೀರವಾಗಿ ತೆಗೆದುಕೊಂಡು ಅಂತರ್ಜಲ ಮಟ್ಟ ಹೆಚ್ಚಿಸಲು ಮಳೆ ನೀರಿನ ಕೊಯ್ಲು ಅಳವಡಿಸಿಕೊಳ್ಳಬೇಕು ಎಂದರು. ಮಳೆ ನೀರಿನ ಕೊಯ್ಲು ಅಳವಡಿಸುವುದು ಅತ್ಯಂತ ಸರಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಚುನಾವಣಾ ಆಯೋಗ ಸೂಚಿಸಿರುವ ನಿಯಮಾನುಸಾರ ಚುನಾವಣೆಗೆ ಸಂಭಂದಿಸಿದ ಯಾವುದೇ ರೀತಿಯ ಕರಪತ್ರ ಹಾಗೂ ಜಾಹೀರಾತು ಮೂಲಕ ಚುನಾವಣೆ ಪ್ರಚಾರ ಪಡಿಸುವ ಮುನ್ನ ಎಂ.ಸಿ.ಎಂ.ಸಿ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸ್ಥಳೀಯ ಕೇಬಲ್ ಆಪರೇರ್ಸ್ ಮತ್ತು ನೆಟ್ವರ್ಕ್ ಸರ್ವೀಸ್ ಪ್ರೋವೈರ್ಸ್ ಗಳಿಗೆ ಸೂಕ್ತ ನಿರ್ದೇಶನ ನೀಡಲು ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯು ಕೆಲವೇ ದಿನಗಳಲ್ಲಿ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ಪ್ರಕ್ರಿಯೆಗೆ ಸಂಭ್ರಮದಿಂದ ಚಟುವಟಿಕೆಗಳಲ್ಲಿ ಭಾಗಿದರರಾಗಿರುವ ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಗದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು. ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕರ ಪತ್ರವನ್ನು ಮುದ್ರಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸೈಂಟ್ ಮೇರಿಸ್ ಪ್ರೌಢ ಶಾಲೆ, ಕುಂದಾಪುರ ಇಲ್ಲಿಯ ಮುಖ್ಯೋಪಾಧ್ಯಾಯಿನಿ ಅಸುಂತಾ ಲೋಬೊರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ. 85ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಸ್ವಾಗತಿಸಿ, ಸಹಶಿಕ್ಷಕಿ ರಕ್ಷಿತಾ ನಿರೂಪಿಸಿ, ವಿದ್ಯಾರ್ಥಿನಿ ಮನ್ವಿತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ರಾಜ್ಯದ ನಂ.೧ ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ೨೦೨೪-೨೫ನೇ ಸಾಲಿನ, ೬ರಿಂದ ೯ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆ, ಮೂಡುಬಿದಿರೆಯ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಂತ ೩೨ ಶೈಕ್ಷಣಿಕ ಜಿಲ್ಲೆಗಳ ೧೯೨೪೪ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ೧೫೯೮೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ೬ನೇ ತರಗತಿಗೆ ೧೧೭೯೫, ೭ನೇ ತರಗತಿಗೆ ೧೪೩೮, ೮ನೇ ತರಗತಿಗೆ ೧೮೮೯ ಹಾಗೂ ೯ನೇ ತರಗತಿಗೆ ೮೬೪ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು. ಬೆಳಗಾವಿ ಜಿಲ್ಲೆಯಿಂದ ೫೨೩೭ ವಿದ್ಯಾರ್ಥಿಗಳು, ಬಾಗಲಕೋಟೆ ಹಾಗೂ ವಿಜಯಪುರದಿಂದ ಕ್ರಮವಾಗಿ ೨೭೮೩ ಹಾಗೂ ೧೫೫೪ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಪರೀಕ್ಷಾ ಅರ್ಜಿ ಸಲ್ಲಿಕಾ ವ್ಯವಸ್ಥೆಯು ಕಳೆದ ವರ್ಷದವರೆಗೆ ಕೈಬರಹದಲ್ಲಿ ಸಲ್ಲಿಕೆಯಾಗುತ್ತಿ ದ್ದು, ಪ್ರತಿಭಾನ್ವಿತ ಮಕ್ಕಳನ್ನು ತಲುಪುವ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಆನ್ಲೈನ್ನಲ್ಲಿ ಅರ್ಜಿ ನಮೂನೆಯನ್ನು ಕ್ಯೂಆರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಡ್ತಾಡಿ ಗ್ರಾಮದ ಸಾಧಮ್ಮ ಶೆಡ್ತಿ ಅವರು ನೂರು ವರ್ಷ ಪೂರೈಸಿದ ಅಂಗವಾಗಿ ಅಲ್ತಾರು ದೇವುಬೆಟ್ಟು ವಠಾರದಲ್ಲಿ ಕೀರ್ತಿ ಶೇಷ ಕೊರಗಯ್ಯ ಶೆಟ್ಟಿಯ ಸುಂದರ ವೇದಿಕೆಯಲ್ಲಿ ಜನ್ಮ ಶತಾಬ್ಧಿ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಉಪನ್ಯಾಸಕಿ ರೇಖಾ ವಿ. ಬನ್ನಾಡಿ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಎಚ್. ಧನಂಜಯ ಶೆಟ್ಟಿ, ಕಾಜ್ರಳ್ಳಿ ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ನಿರಂಜ ಹೆಗ್ಡೆ, ಉದ್ಯಮಿ ಸಮಾಜಸೇವಕ ಕೃಷ್ಣಮೂರ್ತಿ ಮಂಜ, ಯಡ್ತಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಕುಟುಂಬಸ್ಥರಾದ ಅಲ್ತಾರು ಜಯರಾಮ್ ಶೆಟ್ಟಿ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಕಲಚೇತನರು, ಆರೋಗ್ಯ ಸಮಸ್ಸೆ ಉಳ್ಳವರು, ತಂದೆ -ತಾಯಿ ಕಳೆದುಕೊಂಡ ವಿದ್ಯಾರ್ಥಿನಿಗೆ ಮತ್ತು ಅಸಾಹಯಕರಿಗೆ ಧನಸಹಾಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಯರಾಮ್ ಶೆಟ್ಟಿ ಅಲ್ತಾರು ಅವರಿಗೆ ́ಕುಟುಂಬ ರತ್ನʼ ಪ್ರಶಸ್ತಿ ಕೊಟ್ಟು ಗೌರವಿಸಲಾಗಿದೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಚೇತನ್ ನೈಲ್ಯಾಡಿ ಮತ್ತು ತಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಂಗಭೂಮಿ ಕ್ಷೇತ್ರದಲ್ಲಿ ಲಾವಣ್ಯ ತನ್ನ ಪರಿಪೂರ್ಣ ಸಾಧನೆಯ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಂದಿನ ಕಾಲಘಟ್ಟಕ್ಕೆ ತಕ್ಕಂತೆ ಅನೇಕ ಬದಲಾವಣೆಗಳಿಗೆ ಒಗ್ಗಿಕೊಂಡು ಅಭಿನಯ, ನಾಟಕದ ಆಯ್ಕೆ ಜತೆಗೆ ಹೊಸ ಪ್ರಸ್ತುತಿಗಳನ್ನು ರಂಗಭೂಮಿಗೆ ನೀಡುತ್ತಿರುವುದು ಸಂಸ್ಥೆ ಹೆಗ್ಗಳಿಕೆಯಾಗಿದೆ ಎಂದು ಘಟಪ್ರಭಾ ಜೆ.ಎನ್.ಎಸ್ ಕನ್ಸ್ಟ್ರಕ್ಷನ್ ಆಡಳಿತ ನಿರ್ದೇಶಕ ಎಚ್. ಜಯಶೀಲ ಎನ್. ಶೆಟ್ಟಿ ಹೇಳಿದರು. ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ಸ್ಥಳೀಯ ಕಲಾಸಂಸ್ಥೆ ಲಾವಣ್ಯದ 47ನೇ ವಾರ್ಷಿಕೋತ್ಸವ ಹಾಗೂ ರಂಗಪಂಚಮಿ – 2024 ಐದು ದಿನಗಳ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ನರಸಿಂಹ ಬಿ. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿ ಸ್ವರ್ಣಪದಕ ಪುರಸ್ಕೃತ ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ., ಉದ್ಯಮಿ ಎಚ್. ಜಯಶೀಲ ಎನ್. ಶೆಟ್ಟಿ ಇವರನ್ನು ಅಭಿನಂದಿಸಲಾಯಿತು. ಹಿರಿಯ ರಂಗ ಕಲಾವಿದ, ಚುಟುಕು ಕವಿ ಬಿ. ವಿಠಲದಾಸ್ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಇವರನ್ನು ಸನ್ಮಾನಿಸಲಾಯಿತು. ಲಾವಣ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಪಲ್ಸ್ ಪೋಲಿಯೊ ಕಾರ್ಯಕ್ರಮ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಡೆಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಎಂ.ನಾಗೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಪೋಲಿಯೊ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಭಾರತವು ಪೋಲಿಯೊ ಮುಕ್ತ ದೇಶವಾಗಿದೆ. ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೊವನ್ನು ಲಸಿಕೆ ಮೂಲಕ ಹೋಗಲಾಡಿಸಬಹುದು. ಐದು ವರ್ಷದ ಒಳಗಿನ ಪ್ರತಿ ಮಗುವಿಗೆ ಪೋಲಿಯೊ ಲಸಿಕೆಯನ್ನು, ಮಗುವನ್ನು ಪೋಲಿಯೊದಿಂದ ರಕ್ಷಣೆ ಮಾಡಬಹುದು ಎಂದರು. ರೋಟರಿಯ ಪಲ್ಸ್ ಪೋಲಿಯೊ ಝೋನಲ್ ಕೋ-ಆರ್ಡಿನೇಟರ್ ಪ್ರದೀಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂಕಾಂಬಿಕಾ ರಸ್ತೆ ಬೈಂದೂರು ರೈಲು ನಿಲ್ದಾಣವು ಕರಾವಳಿ ಕರ್ನಾಟಕದ ಪ್ರಮುಖ ನಿಲ್ದಾಣಗಳಲ್ಲಿ ಒಂದಾಗಿದ್ದು, ಮೂಕಾಂಬಿಕಾ ರಸ್ತೆ ಬೈಂದೂರು ನಿಲ್ದಾಣದಲ್ಲಿ ದಾದರ್-ತಿರುನೆಲ್ವೆಲಿ ರೈಲು ನಿಲುಗಡೆಯಿಂದ ಬೈಂದೂರು ಕ್ಷೇತ್ರದ ಯಾತ್ರಾರ್ಥಿಗಳಿಗೆ ಮಧುರೈ ಮೀನಾಕ್ಷಿ, ಗುರುವಾಯೂರ್ ಮತ್ತು ಶಬರಿಮಲೈ ಅಯ್ಯಪ್ಪ ದೇವಸ್ಥಾನದಂತಹ ಇತರ ಯಾತ್ರಾ ಸ್ಥಳಗಳ ದರ್ಶನಕ್ಕೆ ಅನುಕೂಲವಾಗಲಿದೆ ಹಾಗೂ ಅಲ್ಲಿನ ಭಕ್ತಾದಿಗಳಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬರಲು ಅನುಕೂಲವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡು ರಾಜ್ಯದ ಭಕ್ತರು ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡುವುದರಿಂದ ಕೇರಳ ಹಾಗೂ ಮುಂಬೈಗೆ ಹೋಗುವ ಹೆಚ್ಚಿನ ರೈಲುಗಳಿಗೆ ಇಲ್ಲಿ ನಿಲುಗಡೆ ನೀಡಲಾಗುತ್ತಿದೆ. ದಾದರ್-ತಿರುನೆಲ್ವೆಲಿ ಎಕ್ಸ್ ಪ್ರೆಸ್ ರೈಲು ಸಂಖ್ಯೆ 22629/22630 ರೈಲನ್ನು ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣದಲ್ಲಿ ನಿಲುಗಡೆಗೆ ನೀಡಿದ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ.
