ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾದ ಬಿ. ಕಿಶೋರ್ ಕುಮಾರ್ ಕುಂದಾಪುರ ಅವರನ್ನು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಿಸಿದ್ದಾರೆ. ಕಿಶೋರ್ ಕುಮಾರ್ ಅವರು ಬಿಜೆಪಿ ಪಕ್ಷದಲ್ಲಿ ಕುಂದಾಪುರ ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ರಾಜ್ಯ ಮೀನುಗಾರಿಕಾ ಪ್ರಕೋಷ್ಠದ ಸಂಚಾಲಕರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಂದರ್ಭ ವಿವಿಧ ಕ್ಷೇತ್ರಗಳ ಉಸ್ತುವಾರಿಯಾಗಿ ಸೇವೆಸಲ್ಲಿಸಿದ್ದರು. 2013ರಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿಯೂ ಕುಂದಾಪುರ ಅಥವಾ ಬೈಂದೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಅವರು ಹೆಸರು ಮುನ್ನೆಲೆಯಲ್ಲಿತ್ತು. ಉದ್ಯಮಿಯಾಗಿರುವ ಕಿಶೋರ್ ಕುಮಾರ್ ಅವರು ರಾಜಕೀಯದ ಹೊರತಾಗಿ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರು. ಹೋರಾಟಗಳ ಮುಂಚೂಣಿ ವಹಿಸಿದವರು. ಕುಂದಾಪುರ ರೋಟರ್ಯಾಕ್ಟ್ ಕ್ಲಬ್, ಕಲಾಕ್ಷೇತ್ರ ಕುಂದಾಪುರ ಸಂಸ್ಥೆಯ ಮೂಲಕ ಸಾಂಸ್ಕೃತಿಕ ರಂಗದಲ್ಲಿಯೂ ನಿರಂತರ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನವೆಂಬರ್ ನಡೆಸಿದ ಸಿಎ ಫೈನಲ್ ಮತ್ತು ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಷಣ್ಮುಖ ಕೆ. ಎಸ್.(256) ಸಿಎ ಅಂತಿಮ ಪರೀಕ್ಷೆಯನ್ನು ತೇರ್ಗಡೆ ಹೊಂದಿ ಲೆಕ್ಕಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಧನುಷ್ 518 ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದುವುದರ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಆಯೆಷಾ ತುಬಾ(260), ವೈಷ್ಣವಿ ಶೆಟ್ಟಿ (249), ಅಮೃತ (234), ಕೆ.ಆರ್. ದೀಕ್ಷಾ (228) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯೆಟ್ ದ್ವಿತೀಯ ಗ್ರೂಪ್ ಪರೀಕ್ಷೆಯನ್ನು ತೇರ್ಗಡೆ ಹೊಂದುದರ ಮೂಲಕ ಸಿಎ ಅಂತಿಮ ಹಂತಕ್ಕೆ ಪ್ರವೇಶ ಪಡೆದಿದ್ದಾರೆ. ಶೃದ್ಧಾ ಬಿ. ಸಾಲ್ಯಾನ್(270), ಪಂಚಮಿ ಕಿಣಿ (261), ರಕ್ಷಿತಾ (235), ಸುದೀಪ್ರಾಜ್(227), ಕಿಶನ್ ಅಡಿಗ (216), ವೈಷ್ಣವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಾಮಿ ವಿವೇಕಾನಂದರ ತತ್ವ ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಯುವ ಜನರು ಅದನ್ನು ಅರ್ಥೈಸಿಕೊಂಡು ಅದನ್ನು ಪಾಲಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹೇಳಿದರು. ಅವರು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ. ಎ.ವಿ ಹಾಲ್ನಲ್ಲಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಮತ್ತು ರಾಷ್ಟಿçÃಯ ಸೇವಾ ಯೋಜನಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆದ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾಮಿ ವಿವೇಕಾನಂದರು ಯುವ ಜನತೆಗೆ ಮಾದರಿಯಾಗಿದ್ದು, ಪ್ರತಿಯೊಬ್ಬರು ಅವರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೀವನದಲ್ಲಿ ಗುರಿ ಹೊಂದುವುದು ಮುಖ್ಯವಾಗಿದ್ದು, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಗುರಿಯನ್ನು ತಲುಪುವ ಕಡೆ ಗಮನಹರಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಒಂದು ವರ್ಷದಲ್ಲಿ ಮೊಬೈಲ್ ಕಳೆದು ಕೊಂಡು ಸಿಇಐಆರ್ ಪೋರ್ಟಲ್ ಮೂಲಕ ಪೊಲೀಸರಿಗೆ ದೂರು ನೀಡಿದವರ 20 ಮೊಬೈಲ್ ಫೋನುಗಳನ್ನು ಕುಂದಾಪುರ ಪೊಲೀಸರು ಪತ್ತೆ ಮಾಡಿದ್ದು ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ದಾಖಲಾದ ದೂರು ಆಧರಿಸಿ ಪ್ರಕರಣದ ಬೆನ್ನುಬಿದ್ದ ಪೊಲೀಸರು ಸಿಇಐಆರ್ (ಸೆಂಟ್ರಲ್ ಇಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್ ಮೂಲಕ ತನಿಖೆ ಕೈಗೊಂಡು 20 ಮೊಬೈಲ್ಗಳನ್ನು ಪತ್ತೆ ಮಾಡಿದ್ದಾರೆ. ಇದರಲ್ಲಿ ಒಂದು ಮೊಬೈಲ್ ಜಾರ್ಖಂಡ್ ಹಝಾರಿಭಾಗ್ ಎಂಬಲ್ಲಿ ಮತ್ತು ಇನ್ನೊಂದು ಮೊಬೈಲನ್ನು ಆಂಧ್ರಪ್ರದೇಶದ ಗೊಂಡ ಎಂಬಲ್ಲಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿ, ಬೆಂಗಳೂರು ಸಹಿತ ಕರ್ನಾಟಕದ ವಿವಿಧೆಡೆ ಗಳಿಂದ ಉಳಿದ ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಎಸ್.ಟಿ.ಸಿದ್ಧಲಿಂಗಪ್ಪ ನಿರ್ದೇಶನದಲ್ಲಿ ಕುಂದಾಪುರ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ ನೇತೃತ್ವದಲ್ಲಿ, ಕುಂದಾಪುರ ನಗರ ಠಾಣೆ ನಿರೀಕ್ಷಕ ನಂದಕುಮಾರ್, ಉಪ ನಿರೀಕ್ಷಕರಾದ ವಿನಯ್ ಎಂ. ಕೊರ್ಲಹಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಮಂಗಳೂರಿನ ಥಿಯೋಲಾಜಿಕಲ್ ಸಂಶೋಧನಾ ಕೇಂದ್ರದ ಮೂಲಕ ಪ್ರಸಿದ್ಧ ಅಂಕಣ ಬರಹಗಾರ, ಲೇಖಕ, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ| ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ ಕರಾವಳಿಯ ಪ್ರಾದೇಶಿಕ ಅಧ್ಯಯನದ ವಿಭಿನ್ನ ಪ್ರವೃತ್ತಿಗಳು” ಎಂಬ ವಿ?ಯದ ಕುರಿತು ಸಿದ್ಧಪಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪದವಿ ನೀಡಲಾಗಿದೆ. ಇವರು ೨೦೧೪ರಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ “ಗ್ರಾಮ ಚರಿತ್ರೆ ಕೋಶ” ಯೋಜನೆಗೆ ಹಿರಿಯ ಜಾನಪದ ವಿದ್ವಾಂಸ ಪ್ರೊ| ಎ.ವಿ. ನಾವಡ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ತಾಲೂಕಿನ ಕ್ಷೇತ್ರತಜ್ಞರಾಗಿ ಕಾರ್ಯನಿರ್ವಹಿಸಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಲ್ಲಿ ನಿರತರಾಗಿರುವ ಇವರಿಗೆ ನೇಶನ್ ಬಿಲ್ಡರ್, ಯುವರತ್ನ ಪ್ರಶಸ್ತಿಗಳು ಲಭಿಸಿವೆ. ಇವರು ಕ್ರೋಢ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ಕುಂದಾಪುರ ನಗರದ ಒಳಗೆ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆ, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳಾದ 1989ರ ಕಲಂ 221(ಎ)(2) &(5) ರ ಅನ್ವಯ ವಾಹನ ದಟ್ಟನೆ ಇರುವ ಈ ಕೆಳಕಂಡ ಮಾರ್ಗಗಳ ರಸ್ತೆಗಳಲ್ಲಿ ಏಕಮುಖ ಸಂಚಾರ ರಸ್ತೆ ಹಾಗೂ ಘನ ವಾಹನಗಳ ಸಂಚಾರ ನಿಷೇಧ ರಸ್ತೆಯನ್ನಾಗಿ ಮಾರ್ಪಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕುಂದಾಪುರ ಪುರಸಭಾ ವ್ಯಾಪ್ತಿಯ ಚಿಕ್ಕನ್ ಸ್ಟಾಲ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಮಾಸ್ತಿಕಟ್ಟೆ ರಸ್ತೆಯಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಪೂರ್ವದಿಂದ ಪಶ್ಚಿಮಕ್ಕೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಕುಂದಾಪುರ ಶಾಸ್ತ್ರಿ ಸರ್ಕಲ್ನಿಂದ ಹೊಸ ಬಸ್ ನಿಲ್ದಾಣದ ವರೆಗೆ ಪುರಸಭೆ ರಸ್ತೆಯ ಪಶ್ಚಿಮ ಬದಿಯ ರಸ್ತೆಯಲ್ಲಿ ಎಲ್ಲಾ ವಾಹನಗಳು ಉತ್ತರಾಭಿಮುಖವಾಗಿ ಸಂಚರಿಸಬೇಕು. ಹೊಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವವನ್ನು ಜನವರಿ 14ರ ಭಾನುವಾರದಂದು ಸಂಸ್ಥೆಯ ಆವರಣದಲ್ಲಿ ಜರುಗಲಿದೆ. ಈ ಸುಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಲಾಂಛನ ಅನಾವರಣಗೊಳ್ಳಲಿದೆ. ವಿಶ್ವಶಾಂತಿ ಸಂದೇಶ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಹೇಳಿದರು. ಅವರು ಕುಂದಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಶಾಸಕ ಕಿರಣ್ ಕುಮಾರ್ ಕೊಡ್ಲಿ ಭಾಗವಹಿಸಲಿದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಹೆಸರಾಂತ ಪರಿಸರವಾದಿಗಳಾದ ಪದ್ಮಶ್ರೀ ತುಳಸಿ ಗೌಡ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂಇಐಎಫ್ ಸಂಸ್ಥೆಯ ಅಧ್ಯಕ್ಷರಾದ ಮೂಸಬ್ಬ.ಪಿ. ಬ್ಯಾರಿ ಇವರು ಸನ್ಮಾನಿತಗೊಳ್ಳಲಿದ್ದಾರೆ ಎಂದರು. 1906ರಲ್ಲಿ ಶಿಕ್ಷಣದ ಮೊಳಕೆ ಎಂಬಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರಗತಿಗೆ ಮತ್ತು ಸ್ಪರ್ಧಾತ್ಮಕ ಜಗತ್ತಿಗೆ ಯುವ ನಾಯಕರನ್ನು ರೂಪಿಸುವ ನಿಟ್ಟಿನಲ್ಲಿ ಮತ್ತು ಯುವ ನಾಯಕತ್ವದ ಮಹತ್ವ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಕಾಲೇಜು ಐ.ಎಮ್.ಜಿ.ಐಸ್.ಸಿ ಯಂಗ್ ಲೀಡರ್ ಅವಾರ್ಡ್ 2024 ಎಂಬ ಸ್ಪರ್ಧೆಯನ್ನು ನಡೆಯುತ್ತಿದ್ದು ಜನವರಿ 12ರಂದು ಮೂಡ್ಡಕಟ್ಟೆ ಕ್ಯಾಂಪಸ್ ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ ಎಂದು ಪ್ರಾಂಶುಪಾಲರಾದ ಡಾ. ಪ್ರತಿಭಾ ಪಟೇಲ್ ಎಮ್ ಅವರು ಹೇಳಿದರು. ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಯುವ ನಾಯಕತ್ವವನ್ನು ಉತ್ತೇಜಿಸುವುದು ಮತ್ತು ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಸ್ವರ್ಧೆಯ ಉದ್ದೇಶವಾಗಿದೆ. ಒಬ್ಬ ವಿದ್ಯಾರ್ಥಿ ಯುವ ನಾಯಕನಾಗಿ ರೂಪುಗೊಳ್ಳಬೇಕಾದರೆ ಅವನಿಗೆ ಇರಬೇಕಾದ ಅರ್ಹತೆ ಮತ್ತು ತಯಾರಿ ಹೇಗಿರಬೇಕು ಮತ್ತು ಸಂವಹನ ಕಲೆಯು ವಿದ್ಯಾರ್ಥಿ ಜೀವನದಲ್ಲಿ ಹೇಗೆ ಮಹತ್ವದ ಪಾತ್ರ ವಹಿಸುತ್ತದೆ ಎನ್ನುವುದು ಸ್ಪರ್ಧೆ ಆಯೋಜನೆಯ ಪರಿಕಲ್ಪನೆ ಎಂದರು. ಸಂಸ್ಥೆಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ| ರಾಮಕೃಷ್ಣ ಹೆಗ್ಡೆ ಅವರು ಮಾತನಾಡಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿನೂತನ ಬಗೆಯ ಸಂಗೀತ ರಸಮಂಜರಿಯ ಮೂಲಕ ಸಂಗೀತ ಪ್ರೀಯರ ಮನಗೆದ್ದ ಇನಿದನಿ ಕಾರ್ಯಕ್ರಮ ಜನವರಿ 14ರ ಸಂಜೆ 6 ಗಂಟೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್ ಆವರಣದ ಬಯಲು ರಂಗಮಂದಿರದಲ್ಲಿ ಜರುಗಲಿದ್ದು, ಪ್ರತಿಭಾರಿಯಂತೆಯೇ ಹಲವು ವಿಶೇಷತೆಗಳಿಂದ ಕೂಡಿರಲಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಹೇಳಿದರು. ಅವರು ಮಂಗಳವಾರ ಕುಂದಾಪುರ ಪ್ರೆಸ್ಕ್ಲಬ್ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಈ ಭಾರಿಯ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಬೆಂಗಳೂರಿನ ಗಾಯಕ/ಗಾಯಕಿಯರಾದ ಅಜೇಯ್ ವಾರಿಯರ್, ಮೋಹನಕೃಷ್ಣ, ಶಶಿಕಲಾ ಸುನೀಲ್, ಸಮನ್ವಿತಾ ಶರ್ಮ, ಭಾಗವಹಿಸಲಿದ್ದಾರೆ. ಇವರೊಂದಿಗೆ ಮಂಗಳೂರಿನ ವೈ ಎನ್. ರವೀಂದ್ರ, ಸ್ಥಳೀಯರಾದ ಅಶೋಕ ಸಾರಂಗ್, ಯುವ ಪ್ರತಿಭೆ ಧಾರಿಣಿ ಕುಂದಾಪುರ, ಪ್ರಾಪ್ತಿ ಹೆಗ್ಡೆ ಹಾಗೂ ಕಮಲ್ ಕಿಶೋರ್ ಕುಂದಾಪುರ ಭಾಗವಹಿಸಲಿದ್ದು, ಹಿಮ್ಮೇಳದಲ್ಲಿ ರಾಜೇಶ್ ಭಾಗವತ್-ತಬಲಾ, ವಾಮನ್ ಕಾರ್ಕಳ-ಪ್ಯಾಡ್ ಮತ್ತು ಡ್ರಮ್ಸ್, ಗಣೇಶ್ ನವಗಿರಿ-ಕಾಂಗೋ, ಭಾಸ್ಕರ ಕುಂಬ್ಳೆ- ಡೋಲಕ್, ಶಿಜಿಮೂನ್ ಕ್ಯಾಲಿಕಟ್ ಹಾಗೂ ದೀಪಕ್ ಶಿವಮೊಗ್ಗ-ಕೀಬೋರ್ಡ್, ವರುಣ್-ಕೊಳಲು, ಸುಮುಖ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಇಲ್ಲಿ 25 ವರ್ಷಗಳ ಸಂವತ್ಸರಗಳನ್ನ ಅಂಗವಾಗಿ ಆಯೋಜಿಸಲಾದ ರೌಪ್ಯೋತ್ಸವದ ಉದ್ಘಾಟನಾ ಸಮಾರಂಭವವು ಅದ್ದೂರಿಯಾಗಿ ನೆರವೇರಿತು. ಸಮಾರಂಭವನ್ನು ಉದ್ಘಾಟಿಸಿದ ಉದ್ಯಮಿ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎಚ್.ಎಸ್. ಶೆಟ್ಟಿ ಅವರು ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 25 ವರ್ಷಗಳ ಪ್ರಗತಿಯನ್ನು ಕೊಂಡಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಲೋಕಾಯುಕ್ತರಾದ ಎನ್. ಸಂತೋಷ ಹೆಗ್ಡೆ ಅವರು ಮಾತನಾಡಿ ನಮ್ಮ ಸಮಾಜದಲ್ಲಿ ತುಂಬಿಕೊಂಡಿರುವ ಭ್ರಷ್ಟಾಚಾರ, ಅನ್ಯಾಯ, ಅಧರ್ಮ, ಮೋಸ,ವಂಚನೆಗಳ ಬಗ್ಗೆ ಖೇದವನ್ನು ವ್ಯಕ್ತಪಡಿಸುತ್ತಾ ಪೋಷಕರು ತಮ್ಮ ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡಿದರೆ ಸಾಲದು ಮಕ್ಕಳಲ್ಲಿ ಒಳ್ಳೆಯ ಗುಣಗಳನ್ನು ಬಿತ್ತಿ ಮಾನವರಂತೆ ಬದುಕುವ ಕಲೆಯನ್ನು ಕಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಾಚಾರ್ಯದ್ವಯರು ಏಳುಬೀಳುಗಳ ಬಗ್ಗೆ ಮಾತನಾಡುತ್ತಾ ಇಪ್ಪತ್ತೈದು ವರ್ಷಗಳ ಪ್ರಯಾಣದಲ್ಲಿ ತಮ್ಮೊಂದಿಗೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿದರು. ರೌಪ್ಯೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ…
