Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಹಿಳೆಯರ ಹಾಗೂ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಹಾಗೂ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ 102 ಕ್ರೀಡಾಪಟುಗಳಿಗೆ ಆಳ್ವಾಸ್ ಕಾಲೇಜಿನಲ್ಲಿ ಜರ್ಸಿ ವಿತರಿಸಲಾಯಿತು. ಅಥ್ಲೆಟಿಕ್ಸ್ 72ರ ಪೈಕಿ 59 ಹಾಗೂ ಖೋ ಖೋ 30ರ ಪೈಕಿ 23 ಸೇರಿದಂತೆ 82 ಕ್ರೀಡಾಪಟುಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ತಮಿಳುನಾಡಿನಲ್ಲಿ ನಡೆಯಲಿರುವ ಪುರುಷರ ರಾಷ್ಟಿçÃಯ ಮಟ್ಟದ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ 39 ಸ್ಪರ್ಧಿಗಳು ಪಾಲ್ಗೊಳ್ಳಲಿದ್ದು, ಈ ಪೈಕಿ 33 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಒಡಿಶಾದಲ್ಲಿ ನಡೆಯಲಿರುವ ಮಹಿಳೆಯರ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ 33 ವಿದ್ಯಾರ್ಥಿನಿಯರು ಪಾಲ್ಗೊಳ್ಳಲಿದ್ದು, 26 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು. ಪುರುಷರ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್ಶಿಪ್ ಕೇರಳದ ಕಲ್ಲಿಕೋಟೆಯಲ್ಲಿ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾಲಯ ತಂಡದ 15…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಡಿ ಸತತ 90 ನೇ ತಿಂಗಳ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಗೋವಿಂದ ಗಾಣಿಗ, ಬೀಜಮಕ್ಕಿ ಅವರನ್ನು ಸನ್ಮಾನಿಸಿ ಆರ್ಥಿಕ ಸಹಾಯ ನೀಡಲಾಯಿತು. ಫಣಿಗಿರಿ ಪ್ರತಿಷ್ಠಾನ ಶಿರೂರು ಇದರ ಅಧ್ಯಕ್ಷ ಉಮೇಶ್ ಶಿರೂರು, ವಾಸುದೇವ ಶ್ಯಾನುಭಾಗ್, ನಾಗೇಶ್ ಶೆಣೈ , ಗಿರೀಶ್ ನಾಗೇಶ್ ಪ್ರಭು, ನಾಗೇಶ್ ಶ್ಯಾನುಭಾಗ್, ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಹಾಗೂ ಯಕ್ಷಗಾನ ಕಲಾವಿದ ನಾಗೇಂದ್ರ ಗಾಣಿಗ ಬೀಜಮಕ್ಕಿ ಯವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತಧಿಕಾರಿಯಾಗಿ ಕುಂದಾಪುರ ಸಹಾಯಕ ಕಮಿಷನರ್‌ ರಶ್ಮಿ ಎಸ್.‌ ಆರ್. ಯವರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಈ ವೇಳ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಆಡಳಿತಾಧಿಕಾರಿಯವರನ್ನು ದೇವಳದ ಪರವಾಗಿ ಸನ್ಮಾನಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣೀ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಅರ್ಹ 2023 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದದೇ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈ ಯೋಜನೆಯನ್ನು ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ, ರಾಜ್ಯದಲ್ಲಿ ವಾಸವಾಗಿರುವವರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ಪ್ರತೀ ತಿಂಗಳು 3000 ರೂ., ಡಿಪ್ಲೋಮಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮ್ಯಾಪ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಲಲಿತಕಲಾ ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವೈಯಕ್ತಿಕವಾಗಿ ತೃತೀಯ ಬಿ.ಬಿ.ಎ. ಸ್ವsಸ್ತಿಕ್ ಕಾರ್ಟೂನಿಂಗ್ನಲ್ಲಿ ಪ್ರಥಮ ಸ್ಥಾನ, ತೃತೀಯ ಬಿ.ಕಾಂ. ಮನೀಷ್ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ಬಿ.ಕಾಂ. ವಿನಾಯಕ ಫೋಟೋಗ್ರಾಫಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ದ್ವಿತೀಯ ಸಮಗ್ರ ಪುರಸ್ಕಾರವನ್ನು ಪಡೆದುಕೊಂಡಿದ್ದು, ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮುಗ್ಧ ಮಗುವಿನಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ, ಶಿಕ್ಷಕರ ಮತ್ತು ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿವೇಕ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಗಳಲ್ಲಿನ ಕೊಠಡಿಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರಕಾರ ಶಾಲೆಗಳಲ್ಲಿ ವಿವೇಕ ಕೊಠಡಿಗಳನ್ನು ನಿರ್ಮಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದೆ. ಈ ಶಾಲೆಯಲ್ಲಿ ಸುಮಾರು ೧೩ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿವೇಕ ಕೊಠಡಿಯ ಸದುಪಯೋಗ ಆಗಬೇಕು ಎಂದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯ ಹರೀಶ ಮೇಸ್ತ, ಉದ್ಯಮಿಗಳಾದ ಉಮೇಶ್ ಎಲ್.ಮೇಸ್ತ ಗುಜ್ಜಾಡಿ, ದಯಾಕರ ಮೇಸ್ತ ಗುಜ್ಜಾಡಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ಸೇವಾದಳ, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಶ್ರೀ ಶಾರದ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಸ್ರೂರು ಸಹಯೋಗದೊಂದಿಗೆ ಸೇವಾದಳ ಸಂಸ್ಥಾಪನ ಶತಮಾನೋತ್ಸವದ ಪ್ರಯುಕ್ತ ಭಾರತ ಸೇವಾದಳ ಕುಂದಾಪುರ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳವನ್ನು ಗುರುವಾರ ಶಾರದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ದೇಶಾಭಿಮಾನ ಶಿಸ್ತು ಸೇವಾ ಮನೋಭಾವನೆ ಹಾಗೂ ರಾಷ್ಟ್ರಧ್ವಜ ರಾಷ್ಟ್ರಗೀತೆ ಕುರಿತವಾದ ತರಬೇತಿ ನೀಡುತ್ತಿರುವ ಭಾರತ ಸೇವಾದಳ ಕಾರ್ಯ ಶ್ಲಾಘನೀಯ ಎಂದರು. ದೇಶದ ಸೇವೆಗಾಗಿ ಹುಟ್ಟಿಕೊಂಡಿರುವ ಸೇವಾದಳ ಶಿಸ್ತು ತಾಳ್ಮೆ ಸೇವಾ ಮನೋಭಾವದಿಂದ ಬಲಿಷ್ಠ ಸಂಸ್ಥೆಯಾಗಿ ಬೆಳೆದಿದೆ, ಇಂದಿನ ಮಕ್ಕಳು ಅತ್ಯುತ್ತಮ ಕಲಿಕೆ ಮೂಲಕ ಆಧುನಿಕತೆಯನ್ನು ಮೈಗೂಡಿಸಿಕೊಂಡಿದ್ದಾರೆ, ಸೇವಾ ದಳದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಊರಿನ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತು, ಉತ್ತಮ ನಾಗರಿಕರು ರೂಪುಗೊಂಡಾಗ ಅಲ್ಲಿ ಅಭಿವೃದಿಗೆ ಅಗತ್ಯವಿರುವ ವಾತಾವರಣ ನಿರ್ಮಾಣವಾಗುತ್ತದೆ. ಅಂತವರು ನೈಜ ಅಭಿವೃದ್ಧಿಯೆಡೆಗೆ ಊರನ್ನು ಮುಂದಕ್ಕೊಯ್ಯುತ್ತಾರೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಈಚೆಗೆ ನಡೆದ ಮರವಂತೆ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ರಜತ ಸಂಭ್ರಮದಲ್ಲಿ ಅವರು ಮಾತನಾಡಿದರು. ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಯೋಜನೆ ರೂಪಿಸಲಾಗಿದ್ದು, ಅದರಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಕೈಗಾರಿಕಾ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಗಳನ್ನು ಸಜ್ಜುಗೊಳಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಸರ್ವೋತ್ತಮ ಭಟ್ ಸ್ವಾಗತಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ ಖಾರ್ವಿ ಧ್ವಜಾರೋಹಣ ಮಾಡಿದರು. ಕೋಲಾರ ಜಿಲ್ಲೆಯ ಮಾಲೂರಿನ ಶಿಕ್ಷಣ ಪ್ರೇಮಿ ರಾಮಕೃಷ್ಣ ಮತ್ತು ಸ್ನೇಹಿತರು ಶಾಲೆಗೆ ನೀಡಿದ ಸ್ಮಾರ್ಟ್ ಕ್ಲಾಸ್ ಹಾಗೂ ಎಸ್ಸೆಸೆಲ್ಸಿ ಮೊದಲ ತಂಡದ ವಿದ್ಯಾರ್ಥಿಗಳು ನೀಡಿದ ಪ್ರಯೋಗಾಲಯ, ಕವಾಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಸಾಹಿತ್ಯಾಸಕ್ತಿ ಅವರಲ್ಲಿ ಭಿನ್ನ ಯೋಚನೆಗಳನ್ನು ಹುಟ್ಟುಹಾಕುತ್ತದೆ. ಅವುಗಳಿಗೆ ವೇದಿಕೆ ದೊರೆತಾಗ ಇನ್ನಷ್ಟು ಪುಷ್ಠಿ ದೊರೆಯುತ್ತದೆ. ಈ ವೇದಿಕೆ ನೀಡಿದ ಅನುಭವ ಮುಖ್ಯವೇ ಹೊರತು ಬಹುಮಾನಗಳಲ್ಲ. ಸ್ಪರ್ಧೆಯ ಆಯೋಜನೆ, ಸ್ಪರ್ಧಾಳುಗಳ ಕ್ರಿಯಾಶೀಲ ಭಾಗವಹಿಸುವಿಕೆ ಇದು ಕಾರ್ಯಕ್ರಮದ ಯಶಸ್ಸು ಎಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಎನ್. ಪಿ. ನಾರಾಯಣ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಿಸಿ ಮಾತನಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ| ಗಣೇಶ್ ಸಂಜೀವ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ಥಳೀಯ ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನಪೇಕ್ಷಿತ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಅಂತಹ ಕೇಬಲ್ ಟಿ.ವಿ ಆಪರೇಟರ್ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಬಲ್ ಟಿ.ವಿ ಯಲ್ಲಿ ಪ್ರಸಾರ ವಾಗುವ ಯಾವುದೇ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ ಭಂಗ ತರುವ ಯಾವುದೇ ಸಮುದಾಯಗಳ ಮಧ್ಯೆ ವೈರತ್ವ ತರುವ, ನೋವು ಉಂಟು ಮಾಡುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತಿಲ್ಲ ಹಾಗೂ ಜಾಹೀರಾತುಗಳು ಸಂಹಿತೆಗೆ ಅನುಗುಣವಾಗಿಲ್ಲದೇ ಇದ್ದಲ್ಲಿ ಅಥವಾ ಯಾವುದೇ ಆಧಾರವಿಲ್ಲದೇ ವಿವಿಧ ಧರ್ಮ , ಜನಾಂಗ, ಭಾಷೆ ಅಥವಾ ಪ್ರಾದೇಶಿಕ ಗುಂಪುಗಳ ಅಥವಾ ಜಾತಿ ನಡುವೆ ವೈಷ್ಯಮ್ಯದ ಅಥವಾ ವೈರತ್ವದ ಭಾವನೆಗಳನ್ನು ಬೆಳೆಸುವಂತಿದ್ದಲ್ಲಿ ಅವುಗಳನ್ನು ಪ್ರಸಾರ ಮಾಡುವಂತಿಲ್ಲ ಎಂದರು. ಕೇಬಲ್ ಆಪ್‌ರೇಟರ್ಗಳ ಗ್ರಾಹಕರುಗಳು ನಿಗಧಿಪಡಿಸಿದ…

Read More