ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು 70ನೇಯ ಕನ್ನಡ ರಾಜ್ಯೋತ್ಸವದ ದಿನಾಚರಣೆಯ ಕುಂದಾಪುದರ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ ಕುಂದಾಪುರ ಇವರಿಂದ ಆಯೋಜಿಸಲಾದ ಕನ್ನಡ ಹಬ್ಬದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ ಜಯಂತಿ ಇರಬಹುದು ಹೀಗೆ ಬೇರೆ ಬೇರೆ ದಿನಾಚರಣೆಯನ್ನು ಆಚರಿಸುದರೊಂದಿಗೆ ಮಕ್ಕಳಿಗೆ ಇದರ ಮಹತ್ವವನ್ನು ತಿಳಿಸಿ, ದೇಶ ಪ್ರೇಮದ ಜೊತೆಗೆ ಮತ್ತು ನಾಡಿನ ಬಗ್ಗೆ ಅರಿವು ಮೂಡಿಸುವಂತಹ ಆಗಬೇಕು ಎಂದರು. ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಿಂದ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕನ್ನಡದ ಜ್ಯೋತಿ ಬೆಳಗುವುದರ ಮೂಲಕ ಕನ್ನಡ ಮನಸುಗಳೆಲ್ಲ ಒಂದಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದಂತಹ ಗಣೇಶ ಮೊಗವೀರ ಅವರು ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಯೋಜಕರಾದಂತ ಸುಬ್ರಹ್ಮಣ್ಯ ಮರಾಠಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ಜನತಾ ಚಿತ್ರ ಸಿರಿ’ ಎನ್ನುವಂತಹ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಬಿಡಿಸಿದಂತಹ ಚಿತ್ರಗಳನ್ನು ಪ್ರದರ್ಶಿಸಿ, ಅತ್ಯುತ್ತಮ ಚಿತ್ರಗಳಿಗೆ ಮುಂದೆ ನಡೆಯುವಂತಹ ಜನತಾ ವ್ಯವಹಾರ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿಯರು ಕನ್ನಡ ನಾಡು ನುಡಿಗಳನ್ನು ಬಿಂಬಿಸುವಂತಹ ಗೀತೆಗಳಿಗೆ ದನಿಯಾದರು. ಶಿಕ್ಷಕಿ ಶ್ವೇತಾ ಅವರು ಕನ್ನಡ ನಾಡು ನುಡಿಯ ಕುರಿತಾದ ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ಶಿಕ್ಷಕಿಯರಾದ ಸುಜಾತ ಅವರು ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿ ಅವರು ಆಯೋಜಿಸಿದ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರದಂದು ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ, ಜಾನಪದ ಅಧ್ಯಯನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2025ರ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳಕರ್ ಹಾಗೂ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿಯ ಅಧ್ಯಕ್ಷರು, ಜಿಲ್ಲಾಧಿಕಾರಿಗಳಾಗಿರುವ ಸ್ವರೂಪಾ ಟಿ.ಕೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಯಶ್‌ಪಾಲ್ ಸುವರ್ಣ ವಹಿಸಿದ್ದರು. ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಇದರ ಅಧ್ಯಕ್ಷರಾದ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಇಂತಹ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯ ಸ್ಪರ್ಧೆ ‘ಉಗಮ-2025′ ರ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನೇರಳಕಟ್ಟೆ ನಾರಾಯಣ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆ ವಿದ್ಯಾರ್ಥಿಗಳಿಗೆ ತೆರೆದಿಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲೆ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲು ಯಕ್ಷಗಾನವು ಆಧಾರವಾಗಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ 50ನೇ ವರ್ಷದ ಕಾರ್ಯಕ್ರಮ “ಸುವರ್ಣಾಕ್ಷ” ನನ್ನು ಉದ್ಘಾಟಿಸಿ ಮಾತನಾಡಿದರು . ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಉಳಿಸುವಲ್ಲಿ ಕರ್ನಾಟಕದ ಸಾಂಸ್ಕೃತಿಕ ಕಲೆ ಯಕ್ಷಗಾನವು ಬಹುದೊಡ್ಡ ಪಾತ್ರ ವಹಿಸಿದೆ. ಕಳೆದ 3 ವರ್ಷಗಳಿಂದ ಕುಂದಾಪುರದ 22 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡಿ ವಿದ್ಯಾರ್ಥಿಗಳಿಂದ ಪ್ರದರ್ಶನ ಏರ್ಪಡಿಸಲಾಗುತ್ತದೆ. ಇದರಿಂದ ಭಾಷಾ ಶುದ್ಧಿ ಮತ್ತು ನಿರರ್ಗಳತೆ, ಅಧ್ಯಯನಕ್ಕೂ ಸಹ ಸಹಕಾರಿಯಾಗುತ್ತದೆ. ಅಲ್ಲದೆ ಕಲಿಕೆಗೆ ಒಳ್ಳೆಯ ವ್ಯವಸ್ಥೆಯಾಗುತ್ತದೆ. ಈ ಕಲೆಯ ಪ್ರಾಮುಖ್ಯತೆ ಅರಿತು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ.ಹೆಚ್. ಶಾಂತಾರಾಮ್ ಅವರು ಆಶಯದಂತೆ ಆರಂಭವಾದ ಈ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಇಂದು ಸುವರ್ಣ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ “ನಿರಾಮಯ ಸೊಸೈಟಿ” ಮೂಲಕ ಅನುಷ್ಠಾನಗೊಳ್ಳುತ್ತಿರುವ” ಸಮುದಾಯ ಉಪ ಶಮನ ಆರೈಕೆ ಕೇಂದ್ರ” ವನ್ನು ಉದ್ಘಾಟಿಸಿ ಮಾತನಾಡಿದದರು, ಪ್ರತಿಯೊಬ್ಬರು ಸಮಾಜ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜ ಸೇವಕರು ಸಮಾಜಕ್ಕೆ ರಾಜ್ಯಕ್ಕೆ ದೇಶಕ್ಕೆ ಆದರ್ಶ ಆಗುತ್ತಾರೆ. ಆರೈಕೆ ಕೇಂದ್ರದ ಮೂಲಕ ವಂಡ್ಸೆ ಗ್ರಾಮ ಪಂಚಾಯತಿ ಸಮಾಜ ಸೇವೆ ಮಾಡುತ್ತಿದೆ. ಜೊತೆಗೆ ಘನತಾಜ್ಯ ಘಟಕ ಲಾಭ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರ ವತಿಯಿಂದ ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್‌ಮೆಟಿಕ್ 2025 ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ಯು. ಪ್ರಥಮ ಸ್ಥಾನ ಹಾಗೂ ಅದ್ವಿತ್ ಐದನೇ ಸ್ಥಾನ ಗಳಿಸಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅವರು ಶನಿವಾರ ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ. ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮೀ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದು, ಇದರಿಂದ ಶೇ.88ರಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಿಜಾರಿನ ಶೋಭಾವನ ಆವರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನೂತನವಾಗಿ ಆರಂಭವಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜು, ಈ ಶೈಕ್ಷಣಿಕ ವರ್ಷದಿಂದಲೇ ಬಹು ಬೇಡಿಕೆಯ ನಾಲ್ಕು ವರ್ಷದ ಅವಧಿಯ ಬಿಎಸ್ಸಿ (ಆನರ್ಸ್) ಅಗ್ರಿಕಲ್ಚರ್ ಮತ್ತು ಬಿ.ಟೆಕ್ ಫುಡ್ ಟೆಕ್ನಾಲಜಿ ಕೋರ್ಸಗಳನ್ನು ಪ್ರಾರಂಭಿಸುತ್ತಿದೆ. ಈ ಕಾಲೇಜು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯದಡಿಯಲ್ಲಿ ಕರ‍್ಯನಿರ್ವಹಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಇದು ಕರಾವಳಿ ಕರ್ನಾಟಕದಲ್ಲಿ, ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣವನ್ನು ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಮತ್ತು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಹಟ್ಟಿಅಂಗಡಿ ವಲಯ ಇವುಗಳ ಸಂಯುಕ್ತ ಆಯೋಜನೆಯಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಸುಬ್ರಹ್ಮಣ್ಯ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲೇ ಜೀವನದ ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಬೇಕಾದ ಜವಾಬ್ದಾರಿ ಪಾಲಕರ ಮತ್ತು ಅಧ್ಯಾಪಕರ ಹೆಗಲ ಮೇಲಿದೆ. ಮಕ್ಕಳೂ ತಮ್ಮ ಬಗ್ಗೆ ತಾವು ಅರಿತುಕೊಂಡಿರಬೇಕಾಗುತ್ತದೆ. ಮಕ್ಕಳು ಪ್ರೌಢಶಾಲೆಯಲ್ಲಿ ಇರುವಾಗಲೇ ಜೀವನಕ್ಕೆ ಸ್ಪಷ್ಟವಾದ ಗುರಿಯನ್ನು ನಿರ್ಧರಿಸಿಕೊಂಡಿರಬೇಕು. ಕೈಮುಷ್ಟಿಯಲ್ಲಿರುವ ಚಿಟ್ಟೆಯ ಭವಿಷ್ಯ ಆ ಕೈಯಲ್ಲಿರುವಂತೆ, ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಎನ್ನುತ್ತಾ ಪ್ರಾಪಂಚಿಕ ಘಟನೆಗಳ ಮೂಲಕ ಮಕ್ಕಳಿಗೆ ತಿಳಿ ಹೇಳಿದರು. ಮತ್ತೋರ್ವ ಮುಖ್ಯ…
