Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಬೈಂದೂರು ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ಸಾರ್ವತ್ರಿಕ ಚುನಾವಣೆ 2025ಕ್ಕೆ ಸಂಬಂಧಿಸಿದಂತೆ ಭಾವಚಿತ್ರವಿಲ್ಲದ 20 ವಾರ್ಡಿನ ಕರಡು ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಕಛೇರಿಯಲ್ಲಿ, ಬೈಂದೂರು ತಾಲೂಕು ಕಛೇರಿ ಹಾಗೂ ಕುಂದಾಪುರ ಸಹಾಯಕ ಕಮೀಷನರ್ ಕಛೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಸದರಿ ಕರಡು ಮತದಾರರ ಪಟ್ಟಿಯನ್ನು ಉಡುಪಿ ಜಿಲ್ಲಾಧಿಕಾರಿಗಳ ಅಧೀಕೃತ ವೆಬ್‌ಸೈಟ್ https://udupi.nic.in/en/ ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 6ರ ಒಳಗಾಗಿ ಬೈಂದೂರು ತಾಲೂಕು ಕಛೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ  ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಎಚ್. ಎಂ. ಜಾವೆಲಿನ್ ಎಸೆತದಲ್ಲಿ  ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ತೀರ್ಥಹಳ್ಳಿಯ ಸಮಿತ್ ಎಚ್. ಎಂ. ಮಂಜುನಾಥ ಮತ್ತು ಸ್ಮಿತ ದಂಪತಿಯ ಪುತ್ರ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ವತಿಯಿಂದ ರಾಷ್ಟ್ರೀಯ ಸೈಬರ್ ಅಪರಾಧ ಜಾಗೃತಿ ಅಭಿಯಾನ – 2025 ಮತ್ತು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರದಂದು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತಿಮ್ಮೇಶ್ ಬಿ. ಎನ್. ಅವರು ಭೇಟಿ ನೀಡಿ, ಸೈಬರ್ ಅಪರಾಧ, ಸೈಬರ್ ಅಪರಾಧದ ಸ್ವರೂಪ ಹಾಗೂ ಅದರಿಂದ ಆಗುವ ದುಷ್ಪರಿಣಾಮಗಳು ಮತ್ತು  ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನವೀನ ಬೋರಕರ್ ಪಿಎಸ್‌ಐ (ತನಿಖೆ) ಅವರು ಪ್ರತಿಜ್ಞಾವಿಧಿ ಭೋದಿಸಿದರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿವಸದ ಪ್ರಯುಕ್ತ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು ಮತ್ತು ಎನ್‌ಡಿಪಿಎಸ್‌ ಕಾಯ್ದೆ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಘಟಕದಿಂದ ಹೊರತಂದಿರುವ ಕ್ಯೂಆರ್‌ (QR) ಕೋಡ್ ಕಾರ್ಯನಿರ್ವಹಿಸುವ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದ್ದರು. ಕಾರ್ಯಕ್ರಮದಲ್ಲಿ ಸದ್ರಿ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ  ಹೊಸ ಆ್ಯಪ್‌ಗಳನ್ನು ನಿರ್ವಹಿಸುವಾಗ ಸಾರ್ವಜನಿಕರು ಮುಖ್ಯವಾಗಿ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು. ಅವುಗಳ ಅಧಿಕೃತೆಯ ಬಗೆಗೆ ಜಾಗರೂಕರಾಗಿರಿ. ನಿಮ್ಮ ವಯಕ್ತಿಕ ವಿವರಗಳನ್ನು ದಾಖಲಿಸಿದಾಗ ಕೆಲವೊಮ್ಮೆ ಅವು ಸೈಬರ್ ವಂಚಕರ ವಶವಾಗಬಹುದು, ಅದರಿಂದ ನಿಮ್ಮ ಚಾರಿತ್ರ್ಯಕ್ಕೆ ಧಕ್ಕೆ ಬರಬಹುದು. ಓಟಿಪಿಯನ್ನು ಯಾವುದೆ ಕಾರಣಕ್ಕೆ ಕೊಟ್ಟು ಮೋಸಹೋಗದೆ ಮುನ್ನೆಚ್ಚರಿಕೆ ವಹಿಸಿ ಎಂದು ಗಂಗೊಳ್ಳಿ ಪೋಲಿಸ್ ಠಾಣೆಯ ಠಾಣಾಧಿಕಾರಿ ಸುನಿಲ್ ಹೇಳಿದರು. ಅವರು ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುಜಯೀಂದ್ರ ಹಂದೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ಉಪನ್ಯಾಸಕರಾದ ಎನ್.ಸಿ ವೆಂಕಟೇಶ್ ಮೂರ್ತಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸುದೇಶ್, ಶಶಾಂಕ್ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕ ನಾರಾಯಣ್ ಇ. ನಾಯ್ಕ್ ಪ್ರಸ್ಥಾವಿಸಿ ಸ್ವಾಗತಿಸಿದರು ವಿದ್ಯಾರ್ಥಿನಿ ದೀಪಾಲಿ ಕಾರ್ಯಕ್ರಮ ನಿರ್ವಹಿಸಿದರು. ದೀಕ್ಷಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರಸಾಲ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ, ಗಂಗಾಕಲ್ಯಾಣ,ಅರಿವು ಸಾಲ ಯೋಜನೆ ಹಾಗೂ ಸಮುದಾಯ ಆಧಾರಿತ ಕೌಶಲ್ಯ ತರಬೇತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಜನಾಂಗದವರಿಂದ ವೆಬ್‌ಸೈಟ್ https://kccdclonline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಕ್ರೆöÊಸ್ತ ಸಮುದಾಯ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಝಾದ್ ಭವನ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ: 6360753075 ಅಥವಾ ಉಡುಪಿ ತಾಲೂಕು ದೂ.ಸಂಖ್ಯೆ: 0820-2574596, ಕಾರ್ಕಳ ತಾಲೂಕು ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ತಾಲೂಕು ದೂ.ಸಂಖ್ಯೆ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡಬಿದಿರೆ: ಮಂಗಳೂರಿನ ಬೆಸೆಂಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು. ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ಎನ್.ಎಂ. ಪದವಿಪೂರ್ವ ಕಾಲೇಜು ಅರಂತೋಡು ತಂಡವನ್ನು 35-11, 35-12 ಅಂಕಗಳಿಂದ ಸೋಲಿಸಿ 20ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವೈಕುಂಠ ಹೆಬ್ಬಾರ್ ಅವರು ಒಬ್ಬ ಸಮರ್ಥ ನಾಟಕ ನಿರ್ದೇಶಕರಾಗಿ, ಕಲಾವಿದರಾಗಿ ಮತ್ತು ಉದ್ಯಮಿಯಾಗಿ ಪ್ರಸಿದ್ದಿ ಪಡೆದವರು ಎಂದು ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಷಿ ಅಭಿಪ್ರಾಯಪಟ್ಟರು. ಅವರು ಕಲಾಕೇಂದ್ರದ ಅಧ್ಯಕ್ಷ ಆನಂದ್ ಸಿ. ಕುಂದರ್ ಅಧ್ಯಕ್ಷತೆಯಲ್ಲಿ ನಡೆದ ವೈಕುಂಠ ಹೆಬ್ಬಾರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಆಕಾಶವಾಣಿಯ ಮಾಜಿ ಉದ್ಘೋಷಕಿ ನಾರಾಯಣೀ ದಾಮೋದರ್‌ರರು ವೈಕುಂಠ ಹೆಬ್ಬಾರರ ಜೀವನ ವೃತ್ತಾಂತವನ್ನು ತಿಳಿಸುತ್ತಾ ಅವರ ಸಂಸ್ಮರಣಾ ಮಾತನಾಡಿದರು. ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂಧಿಯಾಗಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಹೆಬ್ಬಾರರು ಶ್ರಮದಿಂದ ಮೇಲ್ಬಂದವರು. ಔಷಧ ಅಂಗಡಿ, ಆಸ್ಪತ್ರೆ, ಮೂರು ಮಕ್ಕಳಿಗೆ ವೈದ್ಯಕೀಯ ವಿದ್ಯಾಭ್ಯಾಸ ನೀಡಿದ್ದಲ್ಲದೇ ಹಲವಾರು ಸಂಸ್ಥೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡವರು. ರೂಪರಂಗ, ಗೆಳೆಯರ ಬಳಗ ಹಂಗಳೂರು ಇವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಲವಾರು ನಾಟಕಗಳಿಗೆ ನಿರ್ದೇಶನ ನೀಡಿದವರು. ಹಂಗಾರಕಟ್ಟೆ- ಯಕ್ಷಗಾನ ಕಲಾಕೇಂದ್ರದ ಸದಸ್ಯರಾಗಿದ್ದು, ಅಧ್ಯಕ್ಷರಾಗಿ ಅದರ ಸರ್ವಾಂಗೀಣ ಪ್ರಗತಿಗೆ ಕಾರಣ ಪುರುಷರು, ಸಾರ್ವಜನಿಕವಾಗಿ ಗುರುತಿಸಿಕೊಂಡವರು. ಹಲವರ ಆರೋಗ್ಯ, ವಿದ್ಯಾಭ್ಯಾಸಗಳಿಗೆ ಆರ್ಥಿಕ ಸಹಾಯ ನೀಡುವ ಮೂಲಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಭಾರತೀಯರಿಗೆ ನೀಡಿದ ನಮ್ಮ ಹೆಮ್ಮೆಯ ಸಂವಿಧಾನದ ಪರಿಚ್ಚೇದ 19(1)(ಜಿ) ಸ್ಪಷ್ಟವಾಗಿ ಉದ್ಯೋಗ, ವ್ಯಾಪಾರ, ವ್ಯವಹಾರ ನಡೆಸುವ ಅವಕಾಶಗಳ ಕುರಿತು ಹೇಳುತ್ತದೆ. ಇವತ್ತು ಶುಚಿತ್ವ, ಪಾರ್ಕಿಂಗ್ ಇತ್ಯಾದಿ ನೆವನಗಳನ್ನು ಇಟ್ಟುಕೊಂಡು ಬಿಜೆಪಿ ಆಡಳಿತದ ಕುಂದಾಪುರ ಪುರಸಭೆ ಬೀದಿ ಬದಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸ ಹೊರಟದ್ದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುರಸಭೆ ಬೀದಿ ಬದಿ ವ್ಯಾಪಾರಸ್ಥರಿಗೆ ಶುಚಿತ್ವ, ಪಾರ್ಕಿಂಗ್ ಮುಂತಾದವುಗಳಿಗೆ ತೊಂದರೆಯಾಗದಂತೆ ಬೀದಿ ಬದಿ ವ್ಯಾಪಾರಸ್ಥರಿಗೆ ಅವರ ಉದ್ಯೋಗ, ವ್ಯಾಪಾರ, ವ್ಯವಹಾರ ನಡೆಸಲು ಅವಕಾಶ ಮಾಡಿಕೊಡುವುದನ್ನು ಬಿಟ್ಟು ಜೀವನೋಪಾಯಕ್ಕಾಗಿ ಇದನ್ನೇ ನಂಬಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಅತ್ಯಂತ ಖೇದಕರ ವಿಚಾರ. ಇನ್ನು ಶುಚಿತ್ವದ ಬಗ್ಗೆ ಮಾತನಾಡುವ ಪುರಸಭೆ ಆಡಳಿತ ತಮ್ಮ ವಾಣಿಜ್ಯ ಸಂಕೀರ್ಣಗಳಿಗೆ ಒಮ್ಮೆ ಭೇಟಿ ಕೊಡುವುದು ಒಳಿತು. ಪುರಸಭೆಯ ಕಚೇರಿ, ವಾಣಿಜ್ಯ ಸಂಕೀರ್ಣಗಳು ಶುಚಿತ್ವ ಎನ್ನುವ ಪದವನ್ನೇ ಮರೆತಿವೆ ಆದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವಕರು ದೇಶದ ಭವಿಷ್ಯ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ಭವಿಷ್ಯದಲ್ಲಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಅಂದು ಕುಂಜಿಬೆಟ್ಟುವಿನ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಂಬಾಕು ಸೇವನೆ ಒಂದು ಸಾಮಾಜಿಕ ಪಿಡುಗು. ಸರಕಾರದ ಮುಂದೆ ತಂಬಾಕು ಸೇವನೆಯನ್ನು ನಿಷೇಧಿಸುವ ಸಮಸ್ಯೆ ಒಂದೆಡೆಯಾದರೆ, ಯುವ ಜನತೆಯನ್ನು ತಂಬಾಕು ಚಟದಿಂದ ದೂರ ಇರಿಸುವ ಕಾರ್ಯವನ್ನು ನಿಭಾಯಿಸುವ ಸಮಸ್ಯೆ ಇನ್ನೊಂದೆಡೆ. ತಂಬಾಕು ಸೇವನೆಯಿಂದ ದೈಹಿಕ ಮತ್ತು ಮಾನಸಿಕವಾಗಿ ತೀವ್ರವಾದ ದುಷ್ಪರಿಣಾಮಗಳಾಗುತ್ತವೆ. ಸಮಾಜದಲ್ಲಿ ಇದೊಂದು ಗಂಭೀರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡುಬಿದ್ರಿಯ ಆಳ್ವಾಸ್ ಪಿಯು ಕ್ಯಾಂಪಸ್ ನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮನೋ-ಅಂಕಗಣಿತ (ಮೆಂಟಲ್‌ ಅರಿಥ್ ಮೆಟಿಕ್) ಸ್ಪರ್ಧೆಯಲ್ಲಿ ವಿದ್ಯಾರಣ್ಯ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. 5ನೇ ತರಗತಿಯ ಕೆ. ಅದ್ವಿಕ್ ಶೆಟ್ಟಿ, 6ನೇ ತರಗತಿಯ ದ್ರಿಶಾ ಎಚ್. ಶೆಟ್ಟಿ ಒಂದನೇ ವಿಭಾಗದ ಸ್ಪರ್ಧೆಯಲ್ಲಿ ಮೊದಲ ಸ್ಥಾನದೊಂದಿಗೆ ವಿಜೇತರಾದ ವಿದ್ಯಾರ್ಥಿಗಳು. ಕೆ. ಅದ್ವಿಕ್ ಶೆಟ್ಟಿ ಹೆಸ್ಕತ್ತೂರು ಕೃಷ್ಣ ಶೆಟ್ಟಿ ಹಾಗೂ ದೀಪಾ ದಂಪತಿಯ ಪುತ್ರ, ದ್ರಿಶಾ ಎಚ್. ಶೆಟ್ಟಿ  ಜನ್ನಾಡಿಯ ಹರ್ಷವರ್ಧನ್‌ ಶೆಟ್ಟಿ  ಹಾಗೂ ಸೌಮ್ಯ ಹೆಚ್‌. ಶೆಟ್ಟಿ ದಂಪತಿಯ ಪುತ್ರಿ. ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿ. ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ…

Read More