Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೋವರ‍್ಸ್ ರೇಂಜರ‍್ಸ್, ಎನ್.ಸಿ.ಸಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಎನ್.ಸಿ.ಡಿ ವಿಭಾಗ ಸಾರ್ವಜನಿಕ ಆಸ್ಪತ್ರೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಪ್ರಸಾದ್ ನೇತ್ರಾಲಯ ಉಡುಪಿ, ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಬಸ್ರೂರು, ರಥಬೀಧಿ ಪ್ರೆಂಡ್ಸ್ ಬಸ್ರೂರು, ಬಸ್ರೂರು ಸ್ಪೋಟ್ಸ್ ಕ್ಲಬ್, ಮಹಿಷಮರ್ಧಿನಿ ಮೊಗವೀರ ಯುವಕ ಮಂಡಲ ಬಸ್ರೂರು, ನ್ಯೂ ಸ್ಪೋಟ್ಸ್ ಕ್ಲಬ್ ಬಳ್ಕೂರು ಇವರ ಸಹಯೋಗದಲ್ಲಿ ಬ್ರಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ನೇತ್ರ ತಪಾಸಣಾ ಶಿಬಿರವು ಕಾಲೇಜಿನ ಆವರಣದಲ್ಲಿ ಶನಿವಾರದಂದು ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಯಕ್ಷಗಾನ  ಕಲೆಯ ಹೆಸರಲ್ಲಿ ನಡೆಸುವ “ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ” ಕಾರ್ಯಕ್ರಮವು 50ನೇ ವರ್ಷದ ಸುವರ್ಣ ಸಂಭ್ರಮದ “ಸುವರ್ಣಾಕ್ಷ” ಕಾರ್ಯಕ್ರಮ ನವೆಂಬರ್ 01 & 02ರಂದು ನಡೆಯಲಿದೆ ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ್ ಪ್ರಭು ಹೇಳಿದರು. ಅವರು ಕಾಲೇಜಿನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನ.01 ಮತ್ತು 02ರಂದು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಇಲ್ಲಿನ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿವೆ. ರಾಜ್ಯೋತ್ಸವ ಯಕ್ಷಗಾನ, ತಾಳಮದ್ದಲೆ, ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ, ಯಕ್ಷಗಾನ ಪ್ರದರ್ಶನ, ವಿಚಾರಗೋಷ್ಠಿ, ಯಕ್ಷಗಾನ ವಸ್ತು ಸಂಗ್ರಹಾಲಯ ಉದ್ಘಾಟನೆ ಕಾಯಕ್ರಮಗಳು ನಡೆಯಲಿವೆ ಎಂದರು. ನವೆಂಬರ್ 1ರಂದು ಶನಿವಾರ ಬೆಳಿಗ್ಗೆ 9.30ಕ್ಕೆ 50ನೇ ವಷದ ಯಕ್ಷಗಾನ ತಾಳಮದ್ದಲೆ ಮತ್ತು “ಸುವಣಾಕ್ಷ” ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾಸಭಾ ಕ್ಷೇತ್ರದ ಮಾಜಿ ಶಾಸಕರಾದ ಪ್ರಮೋದ್ ಮಧ್ವರಾಜ್ ಅವರು ನೆರವೇರಿಸಲಿದ್ದಾರೆ. ಕಾಲೇಜಿನ ವಿಶ್ವಸ್ಥ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕೆಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಪ್ಲೇ ಸ್ಕೂಲ್, ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳು ಎಲ್ಲೋ ಕಲರ್ ಡೇಯನ್ನು ಆಚರಿಸಿದರು. ಮಕ್ಕಳಲ್ಲಿ ಬಣ್ಣಗಳನ್ನು ಗುರುತಿಸಿ ನೆನಪಿನಲ್ಲಿಟ್ಟುಕೊಳ್ಳುವ ಕೌಶಲವನ್ನು ವೃದ್ದಿಸುವ ಸಲುವಾಗಿ ಪ್ರತಿ ತಿಂಗಳು ವಿವಿಧ ಬಣ್ಣಗಳ ದಿನಾಚರಣೆಯನ್ನು ಮಾಡಿ ಮಕ್ಕಳಿಗೆ ಬಣ್ಣಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ಪ್ರಯುಕ್ತ ವಿದ್ಯಾರ್ಥಿಗಳು ಹಳದಿ ಬಣ್ಣದ ವಿವಿಧ ತಿನಿಸುಗಳು ಹಾಗೂ ವಸ್ತುಗಳನ್ನು ಪ್ರದರ್ಶಿಸಿದರು. ತರಗತಿ ಕೋಣೆಗಳಲ್ಲಿ ಹಳದಿ ಬಣ್ಣದ ವಸ್ತುಗಳ ಅಲಂಕಾರವನ್ನು ಮಾಡಿ ವಿದ್ಯಾರ್ಥಿಗಳು ನಲಿದಾಡಿದರು. ವಿದ್ಯಾರ್ಥಿಗಳು ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಳದಿ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಅಲ್ಮೇಡಾ, ಕಿಂಡರ್ ಗಾರ್ಟನ್ ಸಂಯೋಜಕಿ ವಿಲಾಸಿನಿ ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಂಪ್ರದಾಯಿಕವಾಗಿ ನಡೆಯುವ ದೀಪಾವಳಿ ಹಬ್ಬ ಕೃಷಿ ಸಂಬಂಧಿಯಾಗಿದ್ದು, ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ನಡೆಯುವ ಬಲೀಂದ್ರ ಪೂಜೆ, ಲಕ್ಷ್ಮಿ ಪೂಜೆ, ತುಳಸಿ ಪೂಜೆ, ಗೋಪೂಜೆ ಈ ಎಲ್ಲಾ ಆಚರಣೆಗಳು ವಿದ್ಯಾರ್ಥಿಗಳಿಗೆ ತಿಳಿದಿರಬೇಕು ಎಂದು ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ದೀಪಾವಳಿ ಸಂಭ್ರಮ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು. ಕಾರ್ಯಕ್ರಮದ ಸಂಯೋಜಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿನಿ ಶರಣ್ಯ ಶೆಟ್ಟಿ ನಿರೂಪಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿದರು. ಈ ಸಂದರ್ಭ ಲಕ್ಷ್ಮಿ ಪೂಜೆ, ಗೋಪೂಜೆ, ಬಲೀಂದ್ರ ಪೂಜೆಯನ್ನು ಕಾಲೇಜಿನ ಆವರಣದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಜೆಸಿಐ ಗಂಗೊಳ್ಳಿ ಘಟಕವು ತನ್ನ ಸ್ಥಾಪನೆಯ ಮೊದಲ ವರ್ಷದಲ್ಲೇ ́ಅತ್ಯುತ್ತಮ ನೂತನ ಘಟಕ ಪ್ರಶಸ್ತಿʼಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಅನೇಕ ಸಮಾಜಮುಖಿ ಮತ್ತು ಸೃಜನಾತ್ಮಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಅತ್ಯುತ್ತಮ ಸಾಧನೆ ದಾಖಲಿಸಿರುವ ಗಂಗೊಳ್ಳಿ ಜೇಸಿಐ ಘಟಕಕ್ಕೆ ಮಂಗಳೂರಿನ ಸ್ವಸ್ತಿಕ್ ವಾಟರ್ ಫ್ರೆಂಡ್‌ನಲ್ಲಿ ನಡೆದ ಜೆಸಿಐ ಇಂಡಿಯಾ ಝೋನ್ ಘಿಗಿರ ಝೋನ್‌ಕಾನ್ ವಲಯ ಸಮ್ಮೇಳನದಲ್ಲಿ ಅತ್ಯುತ್ತಮ ನೂತನ ಘಟಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿಐ ಗಂಗೊಳ್ಳಿ ಘಟಕದ ಅಧ್ಯಕ್ಷ ರೋಶನ್ ಖಾರ್ವಿ, ಕಾರ್ಯದರ್ಶಿ ನಾಗರಾಜ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದ.ಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಜೈನ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 25 ಚಿನ್ನ, 20 ಬೆಳ್ಳಿ ಮತ್ತು 04 ಕಂಚಿನ ಪದಕಗಳೊಂದಿಗೆ 52 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 100 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 104 ಅಂಕ ಒಟ್ಟು 204 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು 16 ಅಂಕಗಳೊಂದಿಗೆ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಜೈನ್ ಪದವಿಪೂರ್ವ ಕಾಲೇಜು 19 ಅಂಕ ಪಡೆದು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ಸಮರ್ಥ ಪಡೆದುಕೊಂಡರೆ, ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ನಾಗಿಣಿ ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ತೆಕ್ಕಟ್ಟೆ ಗ್ರಾಮದ ಜನಪ್ರಿಯ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿರುವ ಎಸ್.ಪಿ. ಕ್ರಿಯೇಶನ್ ಕ್ಲಬ್‌ನಲ್ಲಿ ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಡುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಕೋಟ ಪಿಎಸ್‌ಐ ಪ್ರವೀಣ್ ಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ನಡೆಸಿದ್ದು, ಆರೋಪಿಗಳಾದ ಹಂಗಳೂರು ಕೋಡಿ ರಸ್ತೆಯ ಶ್ರೀನಿವಾಸ (63), ಬಿದ್ಕಲಕಟ್ಟೆ ಸೂರ್ಯ (51), ಅಂಬಾಗಿಲು ಹನುಮಂತ ನಗರದ ಚಂದ್ರಹಾಸ (40), ಬೀಜಾಡಿ ಗ್ರಾಮದ ಕೃಷ್ಣ (46), ಕುಂಭಾಶಿ ಗ್ರಾಮದ ಕೊರವಾಡಿಯ ಪುರಂದರ (44), ಬ್ರಹ್ಮಾವರ ಕೊಳಂಬೆಯ ರಜಾಕ್ (52), ನೀಲಾವರ ಗ್ರಾಮದ ಸದಾಶಿವ ದೇವಾಡಿಗ (48) ಬಂಧಿತ ಆರೋಪಿಗಳು. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ್ದ ನಗದು 1,130 ರೂ., 7 ಮೊಬೈಲ್ ಫೋನ್‌ಗಳು, 40 ಪ್ಲಾಸ್ಟಿಕ್‌ ಚೇರ್‌, 3 ರೌಂಡ್‌ ಟೇಬಲ್‌, 5 ಪ್ಲಾಸ್ಟಿಕ್‌ ಸ್ಟೂಲ್‌, 1 ಟೇಬಲ್‌, ಸಿಸಿ ಟಿವಿ ಡಿವಿಆರ್ ಮತ್ತು ಮಾನಿಟರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಎಂಐಟಿಕೆ ಯಲ್ಲಿ ಎಂಪಿಎಲ್ 2025 ( ಎಂಐಟಿ ಕೆ ಪ್ರೀಮಿಯರ್ ಲೀಗ್ ) ಇತ್ತೀಚೆಗೆ ಆಯೋಜಿಸಲಾಗಿತ್ತು. ಇದರಲ್ಲಿ 8 ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಹಾವ್ಕ್ ಐಸ್ ತಂಡವು ಎಂಬಿಎ ಡೆಮನ್ಸ್ ತಂಡವನ್ನು ಸೋಲಿಸಿ ವಿಜೇತರಾದರು. ಹುಡುಗಿಯರ ಆರು ತಂಡಗಳಿದ್ದು, ಫೀನಿಕ್ಸ್ ತಂಡ ವಿಜೇತರು ಮತ್ತು ಹಾಕ್ ಐಸ್ ರನ್ನರ್ಸ್ ಆಗಿ ಹೊರಹೊಮ್ಮಿದರು. ಫೈನಲ್ಸ್‌ನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ವಿಕಾಸ್ ಬಿ. ಪೂಜಾರಿ, ಬೆಸ್ಟ್ ಬೌಲರ್ ರಜಿಕ್, ಬೆಸ್ಟ್ ಬ್ಯಾಟ್ಸ್‌ಮನ್ ಅಖಿಲ್ ಮತ್ತು ಮ್ಯಾನ್ ಆಫ್ ದಿ ಸೀರೀಸ್ ಸುಜಲ್ ಎಸ್. ಶೆಟ್ಟಿ ವಿಶೇಷ ಕ್ರೀಡಾ ಪ್ರತಿಭೆ ಮೆರೆದರು. ಈ ಪಂದ್ಯಾಟವನ್ನು ಕಾಲೇಜಿನ ವಿದ್ಯಾರ್ಥಿ, ಕ್ರೀಡಾ ಕಾರ್ಯದರ್ಶಿ ಅಶೋಕ್ ಪೂಜಾರಿ, ಹಾಗೂ ದೈಹಿಕ ನಿರ್ದೇಶ ಡಾ. ನವೀನ್ ಕುಮಾರ್ ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಅಥಿತಿಗಳಾದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ, ಬಸ್ರೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸತ್ಯನಾರಾಯಣ, ಉಪಾಧ್ಯಕ್ಷ ದೀಪಕ್ ಕುಮಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಕೋಟೇಶ್ವರ ವೃತ್ತ ಮಟ್ಟದ 14ರ ವಯೋಮಾನದ (ಪ್ರಾಥಮಿಕ ಹಾಗೂ ಪ್ರೌಢಶಾಲಾ) ಬಾಲಕ-ಬಾಲಕಿಯರ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರದಂದು ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವರು ಹಾಗೂ ಸಂಸದರು ಕೆ. ಜಯಪ್ರಕಾಶ್ ಹೆಗ್ಡೆ ಕ್ರೀಡಾಕೂಟವನ್ನು ದೀಪ ಬೆಳಗಿಸಿ, ಉದ್ಘಾಟಿಸಿ, ಮಾತನಾಡಿ, ಕ್ರೀಡೆಯಲ್ಲಿ ನಾವೆಲ್ಲರೂ ಒಂದೇ ಎನ್ನುವ ಮನೋಭಾವ ಬೆಳೆಸಿಕೊಂಡು ನಂತರ ಕಾಲಘಟ್ಟದಲ್ಲಿ ಯಾವುದೇ ಬದಲಾವಣೆಯಾಗಬಾರದು. ಶಿಕ್ಷಣದ ಜೊತೆಯಲ್ಲಿ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಸೋತರೆ ಎದೆಗುಂದಬಾರದು. ಕ್ರೀಡೆಯಲ್ಲಿ ಸ್ಪರ್ಧಿಸುವುದು ಬಹಳ ಮುಖ್ಯ. ಶಿಕ್ಷಕರು ಪ್ರೋತ್ಸಾಹಿಸಿದ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಸದ್ ವಿನಿಯೋಗ ಮಾಡಿಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕ್ರೀಡಾಳುಗಳಿಗೆ ಉತ್ತಮ ಅವಕಾಶಕ್ಕೆ ಸರಕಾರವೇ ಪ್ರೋತ್ಸಾಹಿಸುತ್ತದೆ ಎಂದರು. ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ಉದ್ಘಾಟನೆಗೆ ತಯಾರಿ ನಡೆಸಿರುವ ಘನ ತ್ಯಾಜ್ಯ ಘಟಕ ಕಾನೂನು ಬಾಹಿರವಾಗಿದ್ದು ಇದರ ಉದ್ಘಾಟನೆಗೆ ಪ್ರಯತ್ನಿಸಿದರೆ ಸ್ಥಳೀಯರು ಶಾಂತಿಯುತವಾಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತೇವೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ತಿಳಿಸಿದರು. ಅವರು ಸಾಲಿಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಥಳೀಯರ ಪರವಾಗಿ ಮಾತನಾಡಿದರು. ಈ ಘಟಕಕ್ಕೆ ಸಿ.ಆರ್.ಝಡ್. ಅನುಮತಿ ಇದುವರೆಗೆ ಸಿಕ್ಕಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇದೆ. ಹೀಗಾಗಿ ಎಲ್ಲಾ ಅನುಮತಿ ಪಡೆಯುವ ತನಕ ಹಾಗೂ ಹೈಕೋರ್ಟ್ ನಲ್ಲಿ ಸ್ಥಳೀಯರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆದು ತೀರ್ಪು ಪ್ರಕಟಗೊಳ್ಳುವ ತನಕ ಇದರ ಉದ್ಘಾಟನೆ ನಡೆಸಬಾರದು. ಒಂದು ವೇಳೆ ಕಾನೂನುಬಾಹಿರವಾಗಿ ಉದ್ಘಾಟನೆಗೆ ಮುಂದಾದರೆ ಜನಪ್ರತಿನಿಧಿಗಳು ಇದರಲ್ಲಿ ಭಾಗವಹಿಸಬಾರದು. ಮುಂದೆ ಘಟಕದ ವಿರುದ್ಧವಾಗಿ ತೀರ್ಪು ಬಂದು ಕೋಟ್ಯಾಂತರ ರೂ. ಹಾನಿಯಾದರೆ ಅದಕ್ಕೆ ಅಧಿಕಾರಿಗಳು, ಇಂದಿನ ಜನಪ್ರತಿನಿಧಿಗಳು ನೇರ ಹೊಣೆಯಾಗುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದರು.…

Read More