ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಾಲೆ, ಕಾಲೇಜು ಬಸ್ಸಿಗೆ ಹೊಸ ವಿಮೆ ಪಾಲಿಸಿ ಮಾಡಿಸುವುದಾಗಿ ಹಣ ಪಡೆದು ನಕಲಿ ವಿಮೆ ಮಾಡಿಸಿ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋಟ ಪೋಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ರಾಕೇಶ ಎಸ್., ಹಾಗೂ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು. ಘಟನೆಯ ವಿವರ:ಕುಂದಾಪುರ ತಾಲೂಕಿನ ಹೊಂಬಾಡಿ – ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಕೋಟ ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಕುಂದಾಪುರ ಸೆಷನ್ಸ್ ನ್ಯಾಯಾಲಯದ ವಿಚಾರಣೆಯಲ್ಲಿದ್ದು ರಿಕ್ಷಾದ ಚಾಲಕರಾದ ಉದಯ ಶೆಟ್ಟಿ ಎಂಬುವರು ವಿಮಾ ಪರಿಹಾರವಾಗಿ ರೂ, 15,95,000/- ಕೋರಿಕೊಂಡಿರುತ್ತಾರೆ. ಸದ್ರಿ ಪ್ರಕರಣವನ್ನು ವಿಮಾ ಕಂಪೆನಿಯವರು ಪರಿಶೀಲಿಸಲಾಗಿ ಶಾಲಾ ಬಸ್ಸಿನ ವಿಮಾ ಪಾಲಿಸಿಯು ನಕಲಿ ವಿಮಾ ಪಾಲಿಸಿಯಾಗಿರುವುದು ಕಂಡುಬಂದಿರುತ್ತದೆ. ಆರೋಪಿಯು ನಕಲಿ ವಿಮಾ ಪಾಲಿಸಿಯನ್ನು ಸೃಷ್ಟಿಸಿ ಠಾಣೆಗೆ ಹಾಗೂ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಮೂಲಕ ವಿಮಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷರಾಗಿ ಜಿ. ಗೋಪಾಲ ಪೂಜಾರಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಉದ್ಘಾಟನಾ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಗೋಪಾಲ ಚಂದನ್, ಉಪಾಧ್ಯಕ್ಷರಾಗಿ ಸುಜಾತ ಕಾಂತು, ಬಾಬು ಖಾರ್ವಿ ಮತ್ತು ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷೇಂದ್ರ ಆಚಾರ್ಯ, ಕಾರ್ಯದರ್ಶಿಯಾಗಿ ಕಾರ್ತಿಕ್ ಬಿ. ಖಾರ್ವಿ, ಜೊತೆ ಕಾರ್ಯದರ್ಶಿಗಳಾದ ಮಹೇಶ್ ಶೇಟ್ ಮತ್ತು ರಾಘವೇಂದ್ರ ಬಿ., ಕೋಶಾಧಿಕಾರಿಗಳಾಗಿ ನರೇಂದ್ರ ಎಸ್. ಗಂಗೊಳ್ಳಿ, ಸಂಘಟನಾ ಕಾರ್ಯದರ್ಶಿ ಆನಂದ ಬಿಲ್ಲವ, ಕ್ರೀಡಾ ಕಾರ್ಯದರ್ಶಿ ಶರಣ್ ಪೂಜಾರಿ, ಜೊತೆ ಕ್ರೀಡಾ ಕಾರ್ಯದರ್ಶಿಗಳಾದ ಗಣೇಶ್ ಪಡಿಯಾರ್ ಮತ್ತು ನಾಗಭೂಷಣ್ ಶೇಟ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೋಜ್ ಎನ್. ಡಿ., ಲೆಕ್ಕಪರಿಶೋಧಕರಾಗಿ ದೀಕ್ಷಿತ್ ಮೇಸ್ತ, ಸಲಹೆಗಾರರಾಗಿ ಡಾ. ವೀಣಾ ಕಾರಂತ್, ಸದಸ್ಯರಾಗಿ ರಘುನಾಥ ಪೂಜಾರಿ, ಶೈಲಜಾ ಪೂಜಾರಿ, ವಿನೋದಾ ದೇವಾಡಿಗ, ನಿತ್ಯಾನಂದ ದೇವಾಡಿಗ, ಸಂದೇಶ್, ವೈಷ್ಣವಿ ಗೋಪಾಲ್, ವಿಜಯ ಖಾರ್ವಿ, ಈಶ್ವರ್ ಗಂಗೊಳ್ಳಿ ಮತ್ತು ಅಭಿಷೇಕ್ ಗಾಣಿಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ,ಮಣೂರು ಫ್ರೆಂಡ್ಸ್, ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಸಂಯೋಜನೆಯೊಂದಿಗೆ 274ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಕೋಟ ರಾಷ್ಟ್ರೀಯ ಹೆದ್ದಾರಿ ಹರ್ತಟ್ಟು ಭಾಗವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಕಾರ್ಯಕ್ರಮ ಜರಗಿತು. ಸುಮಾರು ಒಂದು ಕಿಮೀ ಹೈವೇ ಎಂಬಾಕ್ ಮೆಂಟ್ ಆಸುಪಾಸು ಸ್ವಚ್ಛಗೊಳಿಸಿ ಸುಮಾರು 20ಚೀಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ,ಎಸ್ಎಲ್ಆರ್ಎಂ ಘಟಕದ ಮುಖ್ಯಸ್ಥೆ ಭವ್ಯ ಸಹಕಾರ ನೀಡಿದರು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್,ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಕೋಟ ಸಿನಿಯರ್ ಲಿಜನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾದ ಮಾಲತಿ ಹಾಗೂ ಗಣೇಶ ಬಿಲ್ಲವ ಮತ್ತು ಕೋಶಾಧಿಕಾರಿಯಾಗಿ ಸುಧಾಕರ ಮೊಗವೀರ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಾಲಯದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಚಂಡಿಕಾ ಹವನ ಸೇವೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ನಡೆಯಿತು. ಮಧ್ಯಾಹ್ನ ಯಾಗದ ಪೂರ್ಣಹುತಿ, ಮಧ್ಯಾಹ್ನ ಪೂಜೆ, ದೇವಿಗೆ ಬಂದ ಹರಕೆಯ ಸೀರೆಗಳ ಏಲಂ, ಮಹಾಸಮಾರಾಧನೆ ಸೇವೆ, ಸಂಜೆ ರಜತ ಪಲ್ಲಕ್ಕಿ ಉತ್ಸವ, ಭಜನಾ ಕಾರ್ಯಕ್ರಮ ಮೊದಲಾದ ಧಾರ್ಮಿಕ ಸಂಪನ್ನಗೊಂಡಿತು. ದೇವಸ್ಥಾನದ ಅರ್ಚಕರು, ಪುರೋಹಿತರು, ಆಡಳಿತ ಧರ್ಮದರ್ಶಿ ಮಂಡಳಿ ಸದಸ್ಯರು, ಸಮಾಜಬಾಂಧವರು, ಕುಳಾವಿ ಭಜಕರು, ಭಕ್ತಾದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬಲ್ಮಟದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನೆಗೊಂದು ಮರ ಊರಿಗೊಂದು ವನ ಎಂಬ ನಾಣ್ಣುಡಿಯಂತೆ ಭಾನುವಾರ ಮೊಗವೀರ ಸಂಘದ ಮಾರ್ಗದರ್ಶಕರಾದ ನಾಡೋಜ ಡಾ. ಜಿ ಶಂಕರ್ ಅವರ 70ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಮೊಗವೀರ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ವತಿಯಿಂದ ವಿನೂತನವಾಗಿ ಮನೆಮನೆಗೂ ಹಸಿರು ಕಾರ್ಯಕ್ರಮದಡಿ ಮನೆಗೊಂದು ಸಸಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಸಂಘಟನೆಯ ಕಾರ್ಯಕರ್ತರಾದ ಜಗದೀಶ್ ಮೇಸ್ತ್ರಿ ಅವರ ಮನೆಯಲ್ಲಿ ಗಿಡ ನೆಡುವುದರ ಮೂಲಕ ಚಾಲನೆ ನೀಡಲಾಯಿತು. ನಂತರ ತಂಡವಾಗಿ ವಿವಿದೆಡೆ ಮನೆಮನೆಗೆ ಭೇಟಿ ನೀಡಿ 70ರ ಹುಟ್ಟುಹಬ್ಬದ ನೆನಪಿಗಾಗಿ 70 ಮನೆಗಳಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು. ಇದೇ ವೇಳೆ ಸ್ಥಳೀಯವಾಗಿ ಅಶಕ್ತರಿಗೆ ಮನೆಗಳಿಗೆ ತೆರಳಿ ಅನಾರೋಗ್ಯಕ್ಕೆ ತುತ್ತಾದವರಿಗೆ ಸಾಂತ್ವನ ಹೇಳಿ ಅವರಿಗೆ ಧೈರ್ಯ ತುಂಬಲಾಯಿತು. ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷರಾದ ರಾಘವೇಂದ್ರ ಹರಪ್ಪನಕೆರೆ ಅಧ್ಯಕ್ಷೆತೆಯಲ್ಲಿ ಈ ಕಾರ್ಯಕ್ರಮ ಜರಗಿತು. ಸಂಘದ ಕೋಟೇಶ್ವರ ಘಟಕದ ಸ್ಥಾಪಕ ಅಧ್ಯಕ್ಷ ಸತೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಸ್ವಿಫ್ಟ್ ಕಾರಿಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ, ದುಷ್ಕೃತ್ಯ ಮೆರೆದ ಘಟನೆ ತಾಲೂಕಿನ ಕಾವ್ರಾಡಿಯ ನೂರಾನಿ ಮಸೀದಿ ಸಮೀಪದ ರಸ್ತೆಯಲ್ಲಿ ಇತ್ತೀಚಿಗೆ ನಡೆದಿದೆ. ಕಾವ್ರಾಡಿ ಗ್ರಾಮದ ಶೇಖ್ ಮೊಹಮ್ಮದ್ ಗೌಸ್ ಮತ್ತು ಕುಟುಂಬದವರು ಅ.1 ರಂದು ಹೈದರಾಬಾದ್ ಪ್ರವಾಸಕ್ಕೆ ಹೋಗಿದ್ದರು. ಅವರು ಪ್ರವಾಸಕ್ಕೆ ಹೋಗುವ 10 ದಿನಗಳ ಮೊದಲು 5 ಲಕ್ಷ ರೂಪಾಯಿ ಕೊಟ್ಟು ಸ್ವಿಫ್ಟ್ ಕಾರು ಖರೀದಿಸಿದ್ದರು. ಆದರೆ ಆ ಕಾರನ್ನು ಅವರ ಮನೆಗೆ ತೆಗೆದುಕೊಂಡು ಹೋಗಲು ಇತ್ತೀಚೆಗೆ ದಾರಿಯ ಸಮಸ್ಯೆ ಇದ್ದುದರಿಂದ ಕಾರನ್ನು ಕಾವ್ರಾಡಿಯ ನೂರಾನಿ ಮಸೀದಿಯ ಎದುರಿನ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಹೋಗಿದ್ದರು. ಅ.4 ರಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ಮೊಹಮ್ಮದ್ ಗೌಸ್ ಅವರ ತಮ್ಮ ಶೇಕ್ ಅನ್ಸಾರ್ ಸಾಹೇಬ್ ನಮಾಜಿಗೆ ಎದ್ದು ಬರುವಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಶೇಖ್ ಮೊಹಮ್ಮದ್ ಗೌಸ್ ಮತ್ತು ಅವರ ಮನೆಯವರಿಗೆ ಆರ್ಥಿಕವಾಗಿ ನಷ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಯಸ್ಸಿನಿಂದ ಮಾಗಿದ ಹಿರಿಯ ನಾಗರಿಕರು ಸಮಾಜದ ಮಾರ್ಗದರ್ಶಕರು. ಹಿರಿಯ ನಾಗರಿಕರನ್ನು ಗೌರವಿಸುವ ಜೊತೆಗೆ ಅವರ ಬದುಕಿಗೆ ಆತ್ಮಸ್ಥರ್ಯ ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು. ವೃದ್ಧಾಪ್ಯದ ಕಾಲದಲ್ಲಿ ಅವರನ್ನು ಕಾಡುವ ಏಕಾಂಗಿತನ, ಅಭದ್ರತೆ, ಆರೋಗ್ಯ ಸಮಸ್ಯೆಗಳನ್ನು ಅರಿತು ಅವರ ಬದುಕಿಗೆ ಆಸರೆ ಮತ್ತು ಚೈತನ್ಯ ನೀಡುವ ನಿಟ್ಟಿನಲ್ಲಿ ಸಮಾಜವೂ ಮುಂದಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಮತ್ತು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ 1 ಮತ್ತು 2 ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ರಾಮಕ್ಷತ್ರಿಯ ಯುವಕ ಸಮಾಜ ಶ್ರೀ ಸೀತಾರಾಮಚಂದ್ರ ದೇವಸ್ಥಾನದ 39ನೇ ವರ್ಷದ ಶಾರದೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ವೈಭವ ಸ್ಪರ್ಧೆಯಲ್ಲಿ ಪಡುವರಿಯ ಸೋಮೇಶ್ವರ ತಂಡವು ನಟಿಸಿದ ಕ್ಷಾತ್ರತೇಜ ನಾಟಕ ಪ್ರಥಮ ಸ್ಥಾನ ಗಳಿಸಿತು. ಬಹುಮಾನವನ್ನು ಬೈಂದೂರು ರಾಮಕ್ಷತ್ರಿಯ ಸಮಾಜ ಇದರ ಅಧ್ಯಕ್ಷರಾದ ರಾಮಕೃಷ್ಣ ಸಿ., ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುರೇಶ್ ಬಟವಾಡಿ, ಯುವಕ ಸಮಾಜದ ಗೌರವಾಧ್ಯಕ್ಷ ರವೀಂದ್ರಸೋಡಿ ತಾರ್, ಅಧ್ಯಕ್ಷರಾದ ರಾಜಶೇಖರ ರೊಕ್ಕನ್, ಗೌರವ ಕಾರ್ಯದರ್ಶಿ ಅಶೋಕ ಕೆ. ಕಾರ್ಯದರ್ಶಿ ಕೌಶಿಕ್ ಜಿಕೆ., ತಂಡದ ವ್ಯವಸ್ಥಾಪಕರಾದ ಹಾಗೂ ಮಾತ್ರ ಮಂಡಳಿಯ ಅಧ್ಯಕ್ಷರಾದ ಗಾಯತ್ರಿ ರಾಮ ಸೋಡಿತಾರ್ ಮತ್ತು ತಂಡಕ್ಕೆ ವಿತರಿಸಿದರು. ನಾಟಕ ಪರಿಕಲ್ಪನೆ ಮತ್ತು ನಿರ್ದೇಶನ ಗಣಪತಿ ಹೋಬಳಿದಾರ್ ಮಾಡಿದ್ದರು.
