ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯು ಜ್ಞಾನ ವಾರಿಧಿ ಮತ್ತು ಜ್ಞಾನ ಶರಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿ ಆಯೋಜಿಸಿರುವ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8ನೇ ತರಗತಿಯ ರಿಷಿಕಾ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತ ವಿದ್ಯಾರ್ಥಿನಿಯನ್ನು ಧರ್ಮಸ್ಥಳದಲ್ಲಿ ನಡೆದ “ಪುರಸ್ಕಾರ ಸಮಾರಂಭದಲ್ಲಿ” ಖ್ಯಾತ ಸಾಹಿತಿ ಡಾ. ವಸಂತ ಭಾರದ್ವಾಜ್ ಕಬ್ಬಿನಾಲೆ ಇವರು ಸನ್ಮಾನಿಸಿದ್ದಾರೆ. ಈಕೆ ಕಳೆದ ವರ್ಷ ನಡೆದ ಇದೇ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಳು. ವಿದ್ಯಾರ್ಥಿಯ ಈ ಸಾಧನೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೆತ್ತವರ ಸ್ವಪ್ರತಿಷ್ಠೆಯಿಂದ ಮಕ್ಕಳಿಗೆ ಶಿಕ್ಷಣವೆಂಬುದು ಹೊರೆಯಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಪಂಜರದ ಗಿಣಿಗಳಂತೆ ಪೋಷಿಸಿ ದುಡಿಮೆಗೆ ಸೀಮಿತಗೊಳಿಸಿ ಬೆಳೆಸಿದರೆ ಅವರ ಬದುಕು ನಿಸ್ಸಾರವಾಗುತ್ತದೆ. ಅವರನ್ನು ಸಾಂಸ್ಕೃತಿಕವಾಗಿಯೂ ಸಂಪನ್ನರನ್ನಾಗಿಸಲು ಸಂಗೀತ, ನೃತ್ಯ, ಸಾಹಿತ್ಯದಂತಹ ಕಲೆಗಳಲ್ಲೂ ತೊಡಗಿಸಬೇಕು ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ಆಶ್ರಯದಲ್ಲಿ ಶನಿವಾರ ನಡೆದ ಸುರಭಿ ಜೈಸಿರಿ ಕಾರ್ಯಕ್ರಮದಲ್ಲಿ ’ಬಿಂದುಶ್ರೀ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಇಂದು ಮನುಷ್ಯನಲ್ಲಿ ಸ್ವಾರ್ಥ ಹೆಚ್ಚುತ್ತಿದೆ ಎಂದು ಒಮ್ಮೊಮ್ಮೆ ಭಾಸವಾಗುತ್ತದೆ. ಆದರೆ ನಾವು ಆಡುವ ಮಾತು ಹಾಗೂ ಮಾಡುವ ಕೆಲಸ ಎರಡೂ ಒಂದೇ ಆಗಿದ್ದರೆ ಮಾತ್ರ ಪ್ರೀತಿ ವಿಶ್ವಾಸದ ಸಮಾಜ ನಿರ್ಮಾಣವಾಗುತ್ತದೆ. ಕಲಾ ಚಟುವಟಿಕೆಗಳು ಅದಕ್ಕೆ ಪೂರಕ ವಾತಾವರಣವನ್ನು ನಿರ್ಮಿಸುತ್ತದೆ ಎಂದರು. ಸಂಗೀತ ಕೇಳುಗರ ಮನಸ್ಸನ್ನು ಅರಳಿಸುತ್ತದೆ. ನಾನು ಸಂಗೀತ ಕಲಿತಿಲ್ಲವಾದರೂ ನನ್ನಲ್ಲಿನ ಆಸಕ್ತಿ ಮತ್ತು ಛಲದಿಂದ ಸಿಕ್ಕ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ಈ ಮಟ್ಟಿಗೆ ಬೆಳಿದಿದ್ದೇನೆ. ಇದಕ್ಕೆ ಅನೇಕ ಹಿರಿಯರ ಮಾರ್ಗದರ್ಶನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜ.27: ಕುಂದಾಪುರದಲ್ಲಿ ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ವರದಿಗಾಗಿ ತೆರಳಿದ್ದ ಪತ್ರಕರ್ತರನ್ನು ಬಲವಂತವಾಗಿ ಹೊರಕಳುಹಿಸಿದ ಘಟನೆ ನಡೆದಿದ್ದು, ಇದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ. ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಈ ವೇಳೆ ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿ ತಳ್ಳಿದ್ದಾರೆ. ಇದರಿಂದ ಕೆಲ ಹೊತ್ತು ಸಂದಿಗ್ಧತೆ ವಾತಾವರಣ ಸೃಷ್ಟಿಯಾಯಿತು. ಇದೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಹಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಸಹಿತ ಎರಡು ಬ್ಲಾಕ್ ಕಾಂಗ್ರೆಸ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕರೆ ನೀಡಿದರು. ಶನಿವಾರ ಕುಂದಾಪುರದ ಆರ್.ಎನ್. ಶೆಟ್ಟಿ ಭವನದಲ್ಲಿ ನಡೆದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರದ ಪಂಚ ಗ್ಯಾರಂಟಿಗಳ ಪ್ರಯೋಜನವನ್ನು ಜನರಿಗೆ ಕಾರ್ಯಕರ್ತರು ತಲುಪಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಪ್ರತಿ 45 ದಿನಕ್ಕೊಮ್ಮೆ ಬ್ಲಾಕ್ ಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ನೋಡಿಕೊಳ್ಳಬೇಕು. ಸ್ಥಳೀಯ ನಾಯಕರು, ಬ್ಲಾಕ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ನಾಯಕರು ಕಾರ್ಯಕರ್ತರಿಗೆ ಹತ್ತಿರವಾದಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂದರು. ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಶೂಲಕ್ಕೆ ತಳ್ಳಿದೆ. ಕೇವಲ 4 ವರ್ಷಗಳಲ್ಲಿ ಸುಮಾರು ಮೂರೂವರೆ ಲಕ್ಷ ಕೋಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಲೆಯೆಂದರೆ ದೇವಸ್ಥಾನದಷ್ಟೇ ಪವಿತ್ರ ಸ್ಥಳ. ಅದರ ಬೆಳವಣಿಗೆಯ ಹಿಂದೆ ಶಿಕ್ಷಕರ ಜೊತೆಗೆ ಊರವರ ಅವಿರತ ಶ್ರಮವಿರುತ್ತೆ. ಎಲ್ಲರನ್ನೂ ಒಳಗೊಂಡು ಸರಕಾರಿ ಶಾಲೆಯ ಗುಣಮಟ್ಟ ಕಾಯ್ದುಕೊಳ್ಳುವುದು ಇಂದಿನ ಅಗತ್ಯ ಎಂದು ಬೈಂದೂರು ಬಿಐಇಆರ್ಟಿ ನಾಗರತ್ನ ಹೇಳಿದರು. ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜರುಗಿದ ಗಣರಾಜ್ಯೋತ್ಸವ ಮತ್ತು ಚಿಣ್ಣರ ಸಂಭಮ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಅವರು ಮಾತನಾಡಿ, ಕನ್ನಡ ಮಾಧ್ಯಮ ಇಂಗ್ಲೀಷ್ ಮಾಧ್ಯಮ ಶಾಲೆಗಳೆಂಬ ಭೇದಭಾವ ಮಾಡದೇ, ಗುಣಾತ್ಮಕ ಶಿಕ್ಷಣದ ಬಗ್ಗೆ ಪೋಷಕರು ಗಮನಹರಿಸಬೇಕಿದೆ. ಸರಕಾರಿ ಶಾಲೆಗಳಲ್ಲಿ ಕಲಿತು ಉನ್ನತ ಹುದ್ದೆಗೇರಿದ ಸಾವಿರಾರು ಉದಾಹರಣೆಗಳಿವೆ ಎಂದರು. ಹಳೆ ವಿದ್ಯಾರ್ಥಿ ಸಂಘದ ಖಜಾಂಚಿ ಮಾಹದೇವ ಬಿಲ್ಲವ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ತಗ್ಗರ್ಸೆ ಶಾಲೆ, ಶತಮಾನದ ಹೊಸ್ತಿಲಿನಲ್ಲಿದೆ. ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರವನ್ನು ಒಗ್ಗಟ್ಟಾಗಿ ಶತಮಾನೋತ್ಸವವನ್ನು ಆಚರಿಸಬೇಕಿದೆ ಎಂದರು. ಬೈಂದೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಮತ್ತು ಬೈಂದೂರು ತಾಲೂಕಿನ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದನ್ನು ಮನಗಂಡು ಕುಂದಾಪುರದ ಹೃದಯ ಭಾಗದಲ್ಲಿ ಉತ್ಕೃಷ್ಟ ಗುಣಮಟ್ಟದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಮುಂದಾಗಿದ್ದೇವೆ ಎಂದು ಸಂಸ್ಥೆಯ ಪಾಲುದಾರರಾದ ಬಿ. ಉದಯಕುಮಾರ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಹೋಟೆಲ್ ಯುವ ಮನೀಶ್ನಲ್ಲಿ ನಡೆದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಇಲ್ಲಿ ವಿಫುಲ ಅವಕಾಶಗಳಿದ್ದು ಇಲ್ಲಿನ ಪ್ರಕೃತಿ ಸೌಂದರ್ಯ ದೇಶ-ವಿದೇಶಿಗರ ಆಕರ್ಷಣೆಗೆ ಒಳಗಾಗಿದೆ. ಧಾರ್ಮಿಕ ಕೇಂದ್ರಗಳಿಗೂ ಬರುವ ಭಕ್ತರ ಸಂಖ್ಯೆಯೂ ಹೆಚ್ಚು. ಮರವಂತೆ, ಸೋಮೇಶ್ವರ, ಕೋಡಿ ಕಡಲ ಕಿನಾರೆ ಜನಜನಿತವಾಗಿದೆ. ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಹೋಟೆಲ್, ಆಹಾರ ಮೊದಲಾದ ಸೌಕರ್ಯಗಳು ವ್ಯವಸ್ಥಿತವಾಗಿ ಉತ್ತಮ ಸೂರಿನಡಿಯಲ್ಲಿ ದೊರಕಬೇಕು ಎಂಬ ಆಶಯ ಹೊಂದಿದ್ದೇವೆ ಎಂದರು. ಪಾಲುದಾರಿಕೆಯಲ್ಲಿ ಆತಿಥ್ಯೋದ್ಯಮ:ಈಗಾಗಾಲೇ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಾ ಬಂದಿರುವ ಪ್ರತಿಷ್ಠಿತ ಜೆ.ಎನ್.ಎಸ್. ಕಂಪೆನಿಯ ಆಡಳಿತ ಮುಖ್ಯಸ್ಥರಾದ ಜಯಶೀಲ ಎನ್. ಶೆಟ್ಟಿ ಮತ್ತು ಮನೀಶ್ ಜೆ. ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಾ.ಸುಂದರ ಕೇನಾಜೆ ಚಿತ್ರಕತೆ-ನಿರ್ದೇಶನ, ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಇವರು ನಿರ್ಮಾಪಕರಾಗಿರುವ “ಪುರ್ಸ ಕಟ್ಟುನ, ಇನಿ- ಕೋಡೆ- ಎಲ್ಲೆ” ಸಾಕ್ಷ್ಯಚಿತ್ರ ಮತ್ತೆ ಇನ್ನೊಂದು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಭಾಗವಹಿಸಿದ 82 ದೇಶಗಳ 2971 ಸಿನಿಮಾ ಮತ್ತು ಸಾಕ್ಷ್ಯಚಿತ್ರಗಳಲ್ಲಿ 326 ರಲ್ಲಿ ಒಂದಾಗಿ ಆಯ್ಕೆಯಾದ ಇದು ಈ ಚಲನಚಿತ್ರೋತ್ಸವದ ಇತಿಹಾಸದಲ್ಲೇ ಅತೀ ಹೆಚ್ಚು ಭಾಗವಹಿದ ದಾಖಲೆಯಲ್ಲಿ ಅರ್ಹತೆ ಪಡೆದಿದೆ. ಈ ಬಾರಿ ಇದು ಜಗತ್ತಿನ ಅತ್ಯಂತ ದೊಡ್ಡ ಹಾಗೂ ಪ್ರತಿಷ್ಠಿತ ಜೈಪುರ ಚಲನಚಿತ್ರೋತ್ಸವಕ್ಕೆ ಅರ್ಹತೆ ಪಡೆದಿದೆ. ಇದೇ ಫೆಬ್ರವರಿ 11ರಿಂದ 15 ವರೆಗೆ ಈ ಚಲನಚಿತ್ರೋತ್ಸವವು ರಾಜಸ್ಥಾನದ ಜೈಪುರದಲ್ಲಿ ನಡೆಯಲಿದ್ದು ಜೈಪುರದ ನಾನಾ ಕಡೆ ಇದರ ಪ್ರದರ್ಶನ, ಚರ್ಚೆ, ಸಂವಾದಗಳೂ ನಡೆಯಲಿವೆ. ಜೈಪುರ ಸಾಹಿತ್ಯೋತ್ಸವದ ನಂತರ ಈ ಚಲನಚಿತ್ರೋತ್ಸವ ನಡೆಯಲಿದೆ. ಈ ಸಾಕ್ಷ್ಯ ಚಿತ್ರವನ್ನು ವಿಕಿಮೀಡಿಯ ಪೌಂಢೇಶನ್, CIS A2K ಮತ್ತು ಕರಾವಳಿ ವಿಕಿಮೀಡಿಯನ್ ಯೂಸರ್ಸ್ ಗ್ರೂಪ್ನ ಸಹಕಾರದಿಂದ ತಯಾರಿಸಲಾಗಿ ಅಂತರಜಾಲಕ್ಕೆ ಬಿಡುಗಡೆ ಮಾಡಲಾಗಿದೆ, ಇದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಜಿ.ಎಸ್.ಮಮತಾ ದೇವಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಉಸ್ತುವಾರಿ ಸಚಿವರು ಗಣರಾಜ್ಯೋತ್ಸವದ ಸಂದೇಶ ನೀಡಿ, ಡಾ|| ಬಿ.ಆರ್ ಅಂಬೇಡ್ಕರ್ರವರು ತಮ್ಮ ಅನುಭವ ಜ್ಞಾನ, ಅಧ್ಯಯನ, ದೂರದೃಷ್ಟಿಯ ಒಳನೋಟಗಳಿಂದ ಸಮಾಜದ ಎಲ್ಲಾ ಶೋಷಿತ ಜನ ಸಮುದಾಯದ ಏಳಿಗೆಗೆ, ಸಹಬಾಳ್ವೆಯಿಂದ ಮುಖ್ಯ ವಾಹಿನಿಗೆ ಬಂದು ಎಲ್ಲರಂತೆ ಬದುಕುವ ಅವಕಾಶಗಳನ್ನು ಕಲ್ಪಿಸುವ ಶ್ರೇಷ್ಠ ಸಂವಿಧಾನವನ್ನು ರಚಿಸಿ ಈ ಮೂಲಕ ಮಾನವತೆಯ ಉಳಿವು ಏಳಿಗೆ ಹಾಗೂ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಬೈಂದೂರಿನ ಅನುದೀಪ್ ಹಾಗೂ ಮಿನುಷಾ ದಂಪತಿಗೆ ಈ ವರ್ಷ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದ್ದು, ಹೊಸದಿಲ್ಲಿಗೆ ತೆರಳಿದ್ದಾರೆ. 2020ರ ನವೆಂಬರ್ನಲ್ಲಿ ವಿವಾಹವಾಗಿದ್ದು ಅವರು, ಹನಿಮೂನ್ ಬದಲಿಗೆ ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛತೆ ಮೂಲಕ ಗುರುತಿಸಿಕೊಂಡಿದ್ದರು. ಈ ವಿಚಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್ನಲ್ಲಿ ಉಲ್ಲೇಖ ಮಾಡಿದ್ದರು. ಬೀಚ್ ಸ್ವಚ್ಛತೆಯ ಪಣತೊಟ್ಟ ದಂಪತಿಗಳು ಪ್ರತಿದಿನ ಸಂಜೆ 2ಗಂಟೆ ಶ್ರಮದಾನ ಮಾಡಿ ತೀರದಲ್ಲಿ ಬಿದ್ದಿದ್ದ ಮದ್ಯದ ಬಾಟಲಿ, ಪ್ಲಾಸ್ಟಿಕ್, ಚಪ್ಪಲಿ ಹೀಗೆ 9 ದಿನಗಳ ಅವಧಿಯಲ್ಲಿ ಹೀಗೆ ಸುಮಾರು 800ಕೆ.ಜಿಯಷ್ಟು ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಿದ್ದಾರೆ. ಇದು ಪ್ರಧಾನಿಗಳ ಗಮನವನ್ನೂ ಸೆಳೆದಿತ್ತು. ಬೈಂದೂರು ತಾಲೂಕಿನ ಕಳವಾಡಿಯವರಾದ ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟರ್. ತಮ್ಮದೇ ಸ್ವುಡಿಯೋ1 ಪ್ರೊಡಕ್ಷನ್ ಮೂಲಕ ಈ ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಮಿನುಷಾ ಫಾರ್ಮಾಸಿಟಿಕಲ್ ಕಂಪನಿ ಉದ್ಯೋಗಿ. ತಮ್ಮ ಮದುವೆಯ ನೆನಪು ಬಹುಕಾಲ ಉಳಿಯ ಇದನ್ನೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೈಂದೂರು ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಮಂಗಳವಾರ ಬೈಂದೂರು ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಶ್ರೀರಾಮ್ ಫೈನಾನ್ಸ್ ಲಿ. ಉಡುಪಿ ಕ್ಲಸ್ಟರ್ ಹೆಡ್ ಸದಾಶಿವ ಅಮೀನ್ ಕಟ್ಟೆಗುಡ್ಡೆ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪ್ಪುಂದ ಮೂರ್ತೆದಾರರ ಸೇವಾ ವ್ಯವಸಾಯ ಸಹಕಾರಿ ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಪೂಜಾರಿ, ವಕೀಲ ರಾಮಚಂದ್ರ ನಾಯ್ಕ್, ಉದ್ಯಮಿಗಳಾದ ಕೃಷ್ಣ ಮದ್ದೋಡಿ, ತಮಸಿರ್, ಶ್ರೀರಾಮ್ ಫೈನಾನ್ಸ್ನ ಗಣಪತಿ ನಾಯ್ಕ್, ಕ್ಲಸ್ಟರ್ ಸೇಲ್ಸ್ ಹೆಡ್ ಸದಾನಂದ ಪೈ, ರಿಜಿನಲ್ ಹೆಡ್ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಶಾಖಾ ವ್ಯವಸ್ಥಾಪಕರಾದ ಮಹೇಶ್ ಪೂಜಾರಿ ಸ್ವಾಗತಿಸಿದರು. ಕರುಣಾಕರ ಕೆ. ಕಾರ್ಯಕ್ರಮ ನಿರೂಪಿಸಿದರು. ಭಟ್ಕಳ ಶಾಖಾ ವ್ಯವಸ್ಥಾಪಕರಾದ ರಾಘವೇಂದ್ರ ಸ್ವಾಮಿ ಇವರು ವಂದಿಸಿದರು. 130 ವಿದ್ಯಾರ್ಥಿಗಳಿಗೆ ತಲಾ 3500 ರೂ ನಂತೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.
