Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಅಭಿಯಾನದಡಿ ಆಯೋಜಿಸಲಾದ “ಅಂಗನ್ ಕಾ ಮಿಲನ್” ಕಾರ್ಯಕ್ರಮವು ಬೆಳ್ವೆಯ ವಾಸುಕಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರು ವಹಿಸಿ, ಮಾತನಾಡಿ, “ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಮತ್ತು ಸಂಸ್ಕಾರದ ಮೊದಲ ದೀಪ. ಅವರ ಸೇವೆಯನ್ನು ಗುರುತಿಸುವುದೇ ಈ ಮಿಲನ್ ಕಾರ್ಯಕ್ರಮದ ಉದ್ದೇಶ. ಸೇವೆಯೇ ಸಂಘಟನೆ ಎಂಬ ಮಂತ್ರದೊಂದಿಗೆ ಮಹಿಳಾ ಮೋರ್ಚಾ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದರು. ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಅವರು ಮಾತನಾಡಿ, “ಮೋದಿಜಿ ಅವರ ನೇತೃತ್ವದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ ಬಂದಿದೆ. ಅಂಗನವಾಡಿ ವ್ಯವಸ್ಥೆಯನ್ನು ಭವಿಷ್ಯದ ಭಾರತ ಕಟ್ಟುವ ಸಂಸ್ಕಾರ ಕೇಂದ್ರ ಎಂದು ಪರಿಗಣಿಸಿ ಕೆಲಸ ಮಾಡುತ್ತಿರುವ ಮಹಿಳಾ ಮೋರ್ಚಾದ ಪ್ರಯತ್ನ ಶ್ಲಾಘನೀಯ” ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತರಬೇತಿ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ JFM ಕೃಷ್ಣಮೂರ್ತಿ ಹೈಕಾಡಿ ಅವರಿಗೆ ‘ಪ್ರೇರಣಾ ಪ್ರಶಸ್ತಿ–2026’ ನೀಡಿ ಗೌರವಿಸಲಾಯಿತು. ಭಾನುವಾರ ಮಂಗಳೂರಿನ ʼಜೆಪ್ಪು ಪಾಲೆಮಾರ್ ಗಾರ್ಡನ್‌ನಲ್ಲಿ ನಡೆದ ‘ಆರೋಹಣ ತರಬೇತಿ ಸಮ್ಮೇಳನ–2026’ ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಂ.ಎ ಬಿ.ಇಡಿ ಪದವೀಧರರಾಗಿರುವ ಅವರು 2018ರಲ್ಲಿ JCI Brahmavara Sevame ಮೂಲಕ JCI ಸೇವಾ ಕ್ಷೇತ್ರಕ್ಕೆ ಪ್ರವೇಶಿಸಿದರು. 2023ರಲ್ಲಿ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಆ ಅವಧಿಯಲ್ಲಿ 100% Efficiency ಹಾಗೂ Zone ಮಟ್ಟದ ಪ್ರಶಸ್ತಿಗಳನ್ನು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2024ರಲ್ಲಿ JCI Zone Trainer ಆಗಿ ಆಯ್ಕೆಯಾದರು ಬಳಿಕ JCI Shankaranarayana ಘಟಕಕ್ಕೆ ಸೇರಿ ವಿವಿಧ ತರಬೇತಿ ಚಟುವಟಿಕೆಗಳನ್ನು ನಡೆಸಿದ್ದರು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ JCI ಸದಸ್ಯರಿಗೆ How to Face Exams, National Youth Day Training, Women Empowerment, Skill Development, Effective Communication, Personality Development,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ 14 ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಸೇವಾಸಿಂಧು ವೆಬ್‌ಸೈಟ್: https://sevaone.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್‌ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಯೋಜನೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಅಪಾರವಾದುದು ಎಂದು ಕಟ್ಕೇರಿ ಅರಣ್ಯ ಗುತ್ತಿಗೆದಾರರಾದ ಜಯಪ್ರಕಾಶ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ವೆಂಕಟರಮಣ ಬಿ., ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರು ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಲು ಸಹಕರಿಸುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಮೋಹಿನಿ ಅತ್ತಿಮನಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರೂಪೇಶ್ ತೃತೀಯ ಬಿ.ಕಾಂ., ಉಪಾಧ್ಯಕ್ಷರುಗಳಾದ ಅನನ್ಯ ತೃತೀಯ ಬಿ.ಸಿ.ಎ.,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಪ್ರಮುಖ ಹಂತವಾಗಿದ್ದು, ಈ ಅವಧಿಯಲ್ಲಿ ಬೆಳೆಸಿಕೊಳ್ಳುವ ಶಿಸ್ತು, ನೈತಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಸ್ಪಷ್ಟ ಗುರಿಗಳು ಭವಿಷ್ಯದ ಬದುಕಿಗೆ ಭದ್ರ ಬುನಾದಿಯಾಗುತ್ತವೆ ಎಂದು ಖ್ಯಾತ ಯಕ್ಷಗಾನ ಅರ್ಥದಾರಿಗಳು ಹಾಗೂ ವಿದ್ವಾಂಸರಾದ ಪವನ ಕಿರಣಕೆರೆ ನುಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ರೆಡ್‌ಕ್ರಾಸ್ ಹಾಗೂ ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ವಿದ್ಯಾರ್ಥಿ ಜೀವನ ಹಾಗೂ ನೈತಿಕತೆ” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನವು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವ ಸುಂದರ ಅವಕಾಶವಾಗಿದೆ. ಜ್ಞಾನಾರ್ಜನೆಯ ಜೊತೆಗೆ ನೈತಿಕತೆ, ಮಾನವೀಯತೆ, ಶಿಸ್ತು ಹಾಗೂ ಜವಾಬ್ದಾರಿಯಂತಹ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯ. ಕಲಿಕೆಯ ಪ್ರಕ್ರಿಯೆ ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗಿರದೆ, ಜೀವನಾನುಭವಗಳ ಮೂಲಕವೂ ನಡೆಯುತ್ತದೆ. ಜೀವನದಲ್ಲಿ ಎದುರಾಗುವ ಅನುಭವಗಳು ವ್ಯಕ್ತಿಯ ಚಿಂತನೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ರೋಟರಿ ಕ್ಲಬ್ ಕುಂದಾಪುರ ಮತ್ತು ಪಾರ್ವತಿ ಶೆಟ್ಟಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಪಾರ್ವತಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಕುಂದಾಪುರದ ಖ್ಯಾತ ವಕೀಲ ಟಿ.ಬಿ. ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರದ ಉಪಾಧ್ಯಕ್ಷ ಮನೋಜ್‌ ನಾಯರ್, ಕಾರ್ಯದರ್ಶಿ ಅಶೋಕ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ್‌ ನಾವುಂದ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್‌ ರಾವ್‌ ಗುಜ್ಜಾಡಿ‌, ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್ ಅವರು ಭೇಟಿ ನೀಡಿದರು. ಹಿರಿಯ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರು ಆಗಮಪಂಡಿತರಾದ ಜಿ.ಎ. ವಿಜಯಕುಮಾರ್ ಅವರನ್ನು ಗೌರವಿಸಿದರು. ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಉದ್ಯಮಿ ಜಗದೀಶ್ ಮೊಗವೀರ ಮಾರ್ಕೋಡು, ರಥಶಿಲ್ಪಿ ಗಣಪತಿ ಆಚಾರ್ಯ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯಕೂಟ ಇತ್ತೀಚಿಗೆ ನಡೆದಿದ್ದು, “ಕುಂದಾಪುರ ಫೈಟರ್ಸ್” ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು. ಕುಂದಾಪುರದ ಮನ್ಸೂರ್ ಅವರ ಮಾಲಿಕತ್ವದ “ಕುಂದಾಪುರ ಫೈಟರ್ಸ್” ತಂಡವು ಇದರ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು. 3 ದಿನಗಳ ಈ ಪಂದ್ಯಕೂಟದಲ್ಲಿ ಒಟ್ಟಾರೆ 20 ತಂಡಗಳು ಭಾಗವಹಿಸಿದ್ದರು. ಪಂದ್ಯಾಕೂಟದಲ್ಲಿ ಭಾರತದಿಂದ ಸಹ ಹೆಸರಾಂತ ಆಟಗಾರನ್ನು ಕರೆಸಲಾಯಿತು. ಅದರಂತೆ ಕುಂದಾಪುರ ಫೈಟರ್ಸ್ ತಂಡದಲ್ಲಿ ಕ್ರೀಡಾಳುವಾಗಿ ಕರಾವಳಿಯ 4 ಸ್ಟಾರ್ ಆಟಗಾರರಾದ ರಾಜ ಸಾಲಿಗ್ರಾಮ, ಇಮ್ರಾನ್ ಕೋಟೇಶ್ವರ, ಸಾಗರ್ ಭಂಡಾರಿ ಹಾಗೂ ಸಂಪತ್ ಶೆಟ್ಟಿ ಸುರತ್ಕಲ್ ಅವರು ಸಹ ತೆರಳಿದ್ದರು. ಬಿಹಾರದ ಬಾಹುಬಲಿ ಖ್ಯಾತಿಯ ಸರ್ಫರಾಜ್ ಹಾಗೂ ಬಿಹಾರದ ಇನ್ನೊಬ್ಬ ಫೇಮಸ್ ಆಟಗಾರ ಕಾಶಿಮ್ ಬಾಬು ಸಹ ಕುಂದಾಪುರ ತಂಡವನ್ನು ಪ್ರತಿನಿಧಿಸಿದ್ದರು. ಮೊದಲ ಪಂದ್ಯ ಸೋತ ಕುಂದಾಪುರ ತಂಡವು ಅಭಿಮಾನಿಗಳಿಗೆ ಬಹಳಷ್ಟು ನಿರಾಸೆ ಮೂಡಿಸಿತ್ತು, ಅದಾದ ನಂತರದ ಎಲ್ಲಾ ಪಂದ್ಯವನ್ನು ಗೆದ್ದು ಚಾಂಪಿಯನ್ ಪಟ್ಟ ಸ್ವೀಕರಿಸಿತು. ಸೆಮಿ ಫೈನಲ್ ಪಂದ್ಯದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಸಹಸವಾರೊಬ್ಬರು ಮೃತಪಟ್ಟ ಘಟನೆ ಹಾದರ್ಳ್ಳಿ ಮಂಡಳ್ಳಿ ಗ್ರಾಮದ ಜನ್ನಾಡಿ ಮೂರುಕೈ ಬಳಿ ಕೋಟೇಶ್ವರ ಹಾಲಾಡಿ ಮುಖ್ಯ ರಾಜ್ಯ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಬೈಕ್‌ ಹಿಂಬದಿ ಸವಾರ ರಂಗ ಎಂದು ಗುರುತಿಸಲಾಗಿದೆ. ಸವಾರ ರಾಮ ಮಡಿವಾಳ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಅತೀವೇಗ ಹಾಗೂ ಅಜಾಗರೂಕೆತಯಿಂದ ಚಲಾಯಿಸಿ ಕೊಂಡು ಬಂದು ಹಾಲಾಡಿ ಕಡೆಯಿಂದ ಕೋಟೇಶ್ವರ ಕಡೆಗೆ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಸವಾರ ರಾಮ ಮಡಿವಾಳ ಹಾಗೂ ಹಿಂಬದಿ ಸವಾರ ರಂಗ ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ರಂಗ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಮನೋಭಾವನೆಯಿಂದ ಹಾಗೂ ಕಾನೂನು ಸಲಹಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಆಸಕ್ತರು ಸೆಪ್ಟಂಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ, ಉಡುಪಿ ಇದರ ವೆಬ್‌ಸೈಟ್ ಅಥವಾ ಸಮೀಪದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More