ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆಯ ಮಕ್ಕಳಿಗೆ ಊರಿನಲ್ಲೇ ಪ್ರೌಢಶಾಲಾ ಶಿಕ್ಷಣ ಸಿಗಬೇಕು ಎಂದು ಆಶಿಸಿದ ಅಲ್ಲಿನ ಶಿಕ್ಷಣಾಭಿಮಾನಿಗಳ ಪ್ರಯತ್ನ 1996ರಲ್ಲಿ ಫಲ ನೀಡಿತು. ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಎಂಬ ವಿಶೇಷ ಹೆಸರು ಹೊತ್ತು ಅಂದು ಆರಂಭವಾದ ಈ ಶಾಲೆ 27 ವರ್ಷಗಳ ಸಾರ್ಥಕ ಸೇವೆಯ ಬಳಿಕ ಇದೇ ೨೩ರಂದು ತನ್ನ ರಜತ ಸಂಭ್ರಮ ಆಚರಿಸುತ್ತಿದೆ. ಶಾಲೆಯ ಸ್ಥಾಪನೆಗೆ ಶ್ರಮಿಸಲು 1994ರಲ್ಲಿ ಎಸ್. ಜನಾರ್ದನ ಮರವಂತೆ ಅವರ ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟ ಪ್ರೌಢಶಾಲಾ ಸಂಸ್ಥಾಪನಾ ಸಮಿತಿಯು ಅಂದಿನ ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ಎಂ. ರವೀಂದ್ರ ಖಾರ್ವಿ ಮರವಂತೆ ಅವರ ಬೆಂಬಲದೊಂದಿಗೆ ಕಾರ್ಯೋನ್ಮುಖವಾಯಿತು. 1996ರಲ್ಲಿ ರಾಜ್ಯ ಸರಕಾರವು ರಾಜ್ಯದ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ಒಂದರಂತೆ ಪ್ರೌಢಶಾಲೆ ಮಂಜೂರು ಮಾಡಿದಾಗ ಅಂದಿನ ಶಾಸಕ ಐ. ಎಂ. ಜಯರಾಮ ಶೆಟ್ಟಿ ಅವರು ಈ ಸಮಿತಿಯ ಒತ್ತಡಕ್ಕೆ ಮಣಿದು, ತಮ್ಮ ವಿವೇಚನೆಗೆ ಒದಗಿದ ಶಾಲೆಯನ್ನು ಮರವಂತೆಗೆ ದಯಪಾಲಿಸಿದರು. ಅಲ್ಲಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವು ನಡೆಯಿತು. ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು ಮತ್ತು ಆರೋಗ್ಯ ಕಾರ್ಡ್ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಗೆ ಸಂಬಂಧಪಟ್ಟಂತೆ ತಲ್ಲೂರು ಶಾಲೆಯೊಂದಿಗೆ ನಾವು ಸದಾ ಜೊತೆಗಿರುತ್ತೇವೆ ಎಂದು ತಿಳಿಸಿದರು. ಮಣಿಪಾಲ ಆರೋಗ್ಯ ಕಾರ್ಡ್ ಮಾರ್ಕೆಟಿಂಗ್ ಡಿಪಾರ್ಟ್ಮೆಂಟ್ ಸಿಬ್ಬಂದಿಗಳಾದ ಅನಿಲ್, ಮೋಹನ್ ಹಾಗೂ ಅಕ್ಷಯ್, ಮಣಿಪಾಲ್ ಆರೋಗ್ಯ ಕಾರ್ಡ್ ಪ್ರತಿನಿಧಿಯವರಾದ ರಕ್ಷಿತ್ ಕುಮಾರ್ ಶೆಟ್ಟಿ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ಟಿ ಉಪಸ್ಥಿತರಿದ್ದರು. ಮಾರ್ಕೆಟಿಂಗ್ ವಿಭಾಗದ ಮೋಹನ್ ಅವರು ವಿಶೇಷ ಮಕ್ಕಳ ಪಾಲನೆಯಲ್ಲಿ ತೊಡಗಿರುವ ಕಳೆದ ಮೂರು ವರ್ಷಗಳಿಂದ ವಿಶೇಷ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಚಿತವಾಗಿ ಮಣಿಪಾಲ್ ಹೆಲ್ತ್ ಕಾರ್ಡನ್ನು ವಿತರಿಸುತ್ತಿರುವ ಸಿಬ್ಬಂದಿಗಳಿಗೆ ಸಂಸ್ಥೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರುತಿ ಸ್ವಾಗತಿಸಿ,ಶಿಕ್ಷಕಿ ಪ್ರತಿಮಾ ವಂದಿಸಿದರು ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉತ್ಕೃಷ್ಟ ಹಾಗೂ ಶಿಸ್ತುಬದ್ಧ ವ್ಯವಹಾರ ಮೌಲ್ಯಗಳನ್ನು ಅಳವಡಿಸಿಕೊಂಡು ಉನ್ನತಿಯನ್ನು ಸಾಧಿಸುವ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನೂ ನಿಭಾಯಿಸುತ್ತಾ ಶೈಕ್ಷಣಿಕ, ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿರುವ ಕುಸುಮ ಸಮೂಹ ಸಂಸ್ಥೆಗಳು ಇದೀಗ ರಜತ ಸಂಭ್ರಮದಲ್ಲಿದೆ. ಪ್ರಸಕ್ತ ಸಾಲಿನಲ್ಲಿ ಕುಸುಮಾಂಜಲಿ ಕಾರ್ಯಕ್ರಮವನ್ನು ಮತ್ತೆ ಆಯೋಜಿಸುವ ಮೂಲಕ ಸಾಂಸ್ಕೃತಿಕ ಲೋಕಕ್ಕೆ ತೆರೆದುಕೊಂಡಿದೆ. ಕುಸುಮಾಂಜಲಿ 2023 – ನಳೀನ್ ಕುಮಾರ್ ಶೆಟ್ಟಿ’ಕುಸುಮಾಂಜಲಿ 2023′ ಕುಸುಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಡಿ.24ರ ಭಾನುವಾರ ಮಧ್ಯಾಹ್ನ ಗಂಟೆ 3 ರಿಂದ 10:30ರ ವರೆಗೆ ನಾಗೂರಿನ ‘ಕುಸುಮ ಗ್ರೂಪ್’ ಪರಿಸರದಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ದಿಕ್ಸೂಚಿ ಭಾಷಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕುಸುಮಾ ಗ್ರೂಪ್ನ ನಳೀನ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಅಂದು ಮಧ್ಯಾಹ್ನ 3ರಿಂದ ಬಿಸ್ ಕಾನ್ 2023 ವ್ಯವಹಾರ ಸಮ್ಮೇಳನ, 4 ಗಂಟೆಗೆ ಸಂಗೀತ ಸಂಧ್ಯಾ, 5:30ರಿಂದ ಕುಸುಮ ಫೌಂಡೇಶನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ವಡೆರಹೋಬಳಿ ಆದರ್ಶ್ ಆಸ್ಪತ್ರೆ ಸೂಪರ್ ಸ್ಪೆಶಲಿಟಿ ಸೆಂಟರ್ ಉಡುಪಿ ಗ್ರಾಮ ಪಂಚಾಯತ್ ತಲ್ಲೂರು ರೋಟರಿ ಸಮುದಾಯ ದಳ ತಲ್ಲೂರು ಸಮುದಾಯ ಯುವಕ ಮಂಡಲ ( ರಿ) ತಲ್ಲೂರು ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ( ರಿ ) ಉಡುಪಿ ಇವರುಗಳ ಸಂಯುಕ್ತ ಅಶ್ರಯ ದಲ್ಲಿ ಉಚಿತ ಆರೋಗ್ಯ ತಪಾಸಣ ಶಿಬಿರ ಜರಗಿತು . ಕಾರ್ಯಕ್ರಮ ಉದ್ಘಾಟಿಸಿ ನ್ಯಾಯ ವಾದಿ ಟಿ. ಬಿ. ಶೆಟ್ಟಿಯವರು ಬದುಕಿನ ಎಲ್ಲ ಸಂಪತಗಿಂತ ಆರೋಗ್ಯ ಸಂಪತ್ತು ಮುಖ್ಯ. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ್ದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು. ಸಭೆಯ ಅಧ್ಯಕ್ಷ ತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ನಾಯಕ್ ವಹಿಸಿದ್ದರು. ವೇದಿಕೆಯಲ್ಲಿ ಆಸ್ಪತ್ರೆಯ ವೈದ್ಯಧಿಕಾರಿ ಸುದೀಪ್ ಕುಮಾರ್ ಶೆಟ್ಟಿ, ಪ್ರವೀಣ್ ಕುಮಾರ್ ಶೆಟ್ಟಿ, ಯೋಗೀಶ್ ಆಚಾರ್ಯ, ಸುರೇಶ್ ಪೂಜಾರಿ , ಪ್ರಶಾಂತ್ ತಲ್ಲೂರು, ಉಪಸ್ಥಿತರಿದ್ದರು. ಒಟ್ಟು 150 ಕ್ಕೂ ಮಿಕ್ಕಿ ಪಲಾನುಭವಿಗಳು ಪ್ರಯೋಜನ ಪಡೆದು ಕೊಂಡರು ಕಾರ್ಯಕ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆಯುವ ನಿರ್ಧಾರ ಪ್ರಕಟಿಸಿದ್ದಾರೆ. ಕೆರಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಭಾಗವಹಿಸಿ, ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು. ಶಾಲೆಯ ಶಿಕ್ಷಕರ ಕೊರತೆ ಸರಿದೂಗಿಸುವುದು, ಶಾಲಾ ವಾಹನ, ಕಟ್ಟಡ, ಪ್ರೀ ಸ್ಕೂಲ್ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಬೈಂದೂರು ಬಿಇಓ ಸೇರಿದಂತೆ ಊರ ಪ್ರಮುಖರು ಉಪಸ್ಥಿತರಿದ್ದರು. ಹುಟ್ಟೂರಿನ ಶಾಲೆಯ ದತ್ತುಪಡೆಯುವ ನಿರ್ಧಾರ ಪ್ರಕಟಿಸಿದ ರಿಷಬ್ ಶೆಟ್ಟಿಯವರನ್ನು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪತ್ರಿಕೆಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು ಹಾಗೂ ನೇರ ನಿಷ್ಠುರವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದರು. ಅವರು ಕೋಟ ಸಹಕಾರಿ ವ್ಯವಸಾಯಿಕ ಸಂಘದ ಬಿ.ಸಿ.ಹೊಳ್ಳ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಡಿ.17ರಂದು ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ಪ್ರದಾನಿಸಿ ಬಳಿಕ ಮಾತನಾಡಿದರು. ಪತ್ರಕರ್ತನಾದವನಿಗೆ ಎಲ್ಲ ವಿಚಾರಗಳನ್ನು ತಿಳಿದುಕೊಳ್ಳುವ ಸದಭಿರುಚಿ ಇರಬೇಕು. ಆಗ ಮಾತ್ರ ಪರಿಪೂರ್ಣ ಕಾರ್ಯನಿವರ್ಹಣೆ ಸಾಧ್ಯ ಎಂದರು. ಪತ್ರಕರ್ತ ಜೋಗಿ ಅಭಿನಂದನಾ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿಶ್ವೇಶ್ವರ ಭಟ್ ಅವರ ಕೊಡುಗೆ ಅಪಾರವಾದದ್ದು. ಈ ಕ್ಷೇತ್ರಕ್ಕೆ ಹೊಸತನ ಹಾಗೂ ನವ ಆಯಾಮ ನೀಡಿದ ಸಾಧನೆ ಇವರಿಗೆ ಸಲ್ಲಬೇಕು ಎಂದರು. ವಡ್ಡರ್ಸೆ ಸಾಧನೆ ಗುರುತಿಸಬೇಕು:ಪತ್ರಕರ್ತ ವಿಶ್ವೇಶ್ವರ ಭಟ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಡ್ಡರ್ಸೆ ರಘುರಾಮ ಶೆಟ್ಟರ ಕೊಡುಗೆ ಅದ್ಬುತವಾದದ್ದು. ಬ್ರಹ್ಮಾವರ ಪತ್ರಕರ್ತ ಸಂಘ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟ ಘಟನೆ ಶಿರೂರು ಕಳುಹಿತ್ಲು ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ದೋಣಿಯಲ್ಲಿದ್ದ ಹಡವಿನಕೋಣೆ ಅಬ್ಬುಲ್ ಸತ್ತರ್ (45 ) ಹಾಗೂ ಭಟ್ಕಳದ ಮಿಸ್ಸಾ ಯೂಸುಫ್ (48) ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ 10ಗಂಟೆಗೆ ಶಿರೂರು ಕಳುಹಿತ್ಲುವಿನನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ 3 ಜನ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ನಡೆಸಿ ವಾಪಾಸಾಗುತ್ತಿದ್ದ ಸಂದರ್ಭ ತಡರಾತ್ರಿ 01:30ರ ವೇಳಿಗೆ ಕಳುಹಿತ್ತು ಅಳಿವೆ ಸಮೀಪ ದೋಣಿ ಮಗುಚಿ ಇಬ್ಬರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಮತ್ತೋರ್ವ ಮೀನುಗಾರ ಹಡವಿನಕೋಣೆಯ ಬುಡು ಮುಖಾರ್ (37) ಅವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಮು ಯಾಕೂಬ್ ಎಂಬುವವರು ರಕ್ಷಣೆ ಮಾಡಿದ್ದಾರೆ. ಕರಾವಳಿ ಕಾವಲು ಪಡೆ ಹಾಗೂ ಬೈಂದೂರು ಪೊಲೀಸ್ ಠಾಣೆಯ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ತಿಂಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿದ್ದರು. ತಾಲೂಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಾವುಂದ ಬಳಿಯ ಮಸ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾವುಂದ ಗಣೇಶನಗರ ನಿವಾಸಿ ಗೋವಿಂದ ಖಾರ್ವಿ (70ವ) ಮೃತಪಟ್ಟಿದ್ದಾರೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಎಸ್ಯುವಿ ವಾಹನ ವೇಗವಾಗಿ ತೆರಳುತ್ತಿರುವ ಸಂದರ್ಭ ಪಾದಾಚಾರಿ ರಸ್ತೆ ದಾಟುತ್ತಿದ್ದು, ಈ ವೇಳೆ ವಾಹನ ನಿಯಂತ್ರಣಕ್ಕೆ ಸಿಗದೇ ಪಾದಾಚಾರಿಗೆ ಡಿಕ್ಕಿಹೊಡೆದೆ. ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಗೋವಿಂದ ಖಾರ್ವಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ರಾಷ್ಟ್ರೀಯತೆ. ಸಂವಿಧಾನದ ಆಧಾರದ ಮೇಲೆ ನಾವು ನಮ್ಮ ರಾಷ್ಟ್ರೀಯತೆಯನ್ನು ಕಟ್ಟಬೇಕು. ಆದರೆ ಇಂದು ರಾಷ್ಟ್ರೀಯತೆ ವಿಕೃತಗೊಂಡಿದೆ. ಧರ್ಮ ತನ್ನ ಮೌಲ್ಯ ಕಳೆದುಕೊಂಡಿದೆ. ಶಿಕ್ಷಣವು ಸಹಿಷ್ಣುತೆ, ಸೌಹಾರ್ದತೆಯನ್ನು ಕಲಿಸುತ್ತದೆ ಎನ್ನುವುದಕ್ಕೆ ನಮ್ಮಲ್ಲಿ ಆಧಾರವೇ ಇಲ್ಲ. ಹೀಗಾಗಿ ಸಾಂಸ್ಕೃತಿಕ ಪತನ ಅತ್ಯಂತ ವೇಗವಾಗಿ ನಡೆಯುತ್ತಿದೆ. ಹೋರಾಟದ ಹಿನ್ನೆಲೆಯಿರುವ ನಾವೆಲ್ಲ ಜವಾಬ್ದಾರಿಗಳನ್ನು ಈ ಬಗ್ಗೆ ಅರಿವಿರುವ ಹೊಸ ತಲೆಮಾರಿಗೆ ದಾಟಿಸುವ ಕೆಲಸ ಮಾಡಬೇಕಿದೆ ಎಂದು ನ್ಯೂ ದೆಹಲಿ ಜೆಎನ್ಯುನ ನಿವೃತ್ತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿನ ಬಸ್ರೂರು ಮೂರುಕೈ ಬಳಿಯ ಆಶೀರ್ವಾದ ಸಭಾಂಗಣದಲ್ಲಿ ಶನಿವಾರ ‘ಘನತೆಯ ಬದುಕು: ಸಾಂಸ್ಕೃತಿಕ ಮಧ್ಯಪ್ರವೇಶ’ ವಿಚಾರವಾಗಿ ಎರಡು ದಿನಗಳ ಕಾಲ ನಡೆಯುತ್ತಿರುವ ಸಮುದಾಯ ಕರ್ನಾಟಕ 8 ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತುರ್ತು ಪರಿಸ್ಥಿತಿಯಂದ ಹಿಡಿದು ಅನೇಕ ಜನ ವಿರೋಧಿ ಘಟನೆಗಳನ್ನು ಸಮುದಾಯ ಖಂಡಿಸುತ್ತಾ ಬಂದಿದೆ. ಪ್ರಭುತ್ವದ ವಿರುದ್ಧವಾಗಿ ಸಮುದಾಯ ತನ್ನ ಧ್ವನಿಯನ್ನು…
