ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಲಿದ್ದಾರೆ. ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್. ಸಿ. ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪಥ ಸಂಚಲನ ನಡೆಯಲಿದೆ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.31: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 01ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ. ಜುಲೈ 31ರ ಮಧ್ಯಾಹ್ನದಿಂದ ಭಾರಿ ಮಳೆಯಾಗುತ್ತಿದ್ದು, ಅಗಸ್ಟ್ 1ರಂದು ಭಾರಿ ಮಳೆಯ ಮುನ್ಸೂಚನೆ ಇದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ. 1077 ಹಾಗೂ 0820-2574802 ಅನ್ನು ಸಂಪರ್ಕಿಸಬಹುದಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂಸದ ಬಿ. ವೈ. ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು ನೀಡಲು ಮುಂದಾಗಬೇಕು” ಎಂದು ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಕರೆ ನೀಡಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಖಜಾಂಚಿಯವರಾದ ಶಿವರಾಮ್ ಶೆಟ್ಟಿ ಅವರು ರೆಡ್‌ಕ್ರಾಸ್ ಸೇವಾತತ್ವಗಳ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್ ಕುಮಾರ ಶೆಟ್ಟಿ ಅವರು ಕುಂದಾಪುರದ ರೆಡ್ ಕ್ರಾಸ್ ಘಟಕದ ಉದಾರತೆ ಮತ್ತು ಸೇವಾಕಾರ್ಯಗಳನ್ನು ಸ್ಮರಿಸಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷರು ಮತ್ತು ಖಜಾಂಚಿಅವರು ಪ್ರಥಮ ಚಿಕಿತ್ಸಾ ಕಿಟ್‌ನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ 2023-24 ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನಕ್ಕಾಗಿ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಹಾಗೂ ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನ. ಅರ್ಜಿಯನ್ನು ಅಕಾಡೆಮಿಯ ಪೇಸ್ ಬುಕ್ (facebook.com/karnatakasangeeta1978) ಮೂಲಕ ಪಡೆದು ವೆಬ್‌ಸೈಟ್ Sangeetanrityaacademy.karnataka.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2986168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ – 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶೃಂಗೇರಿಯ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯಿತು. ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಪುರೋಹಿತರಾದ ಜಿ. ರಾಘವೇಂದ್ರ ಆಚಾರ್ಯ, ಸಮಿತಿ ಅಧ್ಯಕ್ಷ ಸತೀಶ ಜಿ., ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಗೋಪಾಲ ಖಾರ್ವಿ ದಾವನಮನೆ, ಸುರೇಂದ್ರ ಖಾರ್ವಿ, ರಘುವೀರ ಕೆ., ಮಹಿಳಾ ಸಮಿತಿ ಕಾರ್ಯದರ್ಶಿ ಸುಜಾತ ಬಾಬು ಖಾರ್ವಿ, ಉಷಾ ದಿನಕರ, ಸ್ವಾತಿ ಮಡಿವಾಳ, ನಾಗಪ್ಪಯ್ಯ ಪಟೇಲ್, ಪುರುಷೋತ್ತಮ ಆರ್ಕಾಟಿ, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿ. ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎನ್. ಎಂ. ಡಿ. ಎಫ್. ಸಿ ಮಾದರಿಯಲ್ಲಿ ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ದೂ. ಸಂ: 0820-2574990 ಅಥವಾ ಉಡುಪಿ ದೂ. ಸಂಖ್ಯೆ: 0820-2574596, ಕಾರ್ಕಳ ದೂ. ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ. ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ. ವಿ ಮೌರ್ಯ ( 273) , ಭಕ್ತಿ ಕಾಮತ್ (253) , ಸುಪ್ರೀತ್ ಎಸ್. ಹೆಗ್ಡೆ (248) , ವಿನಯ್ ಪ್ರಶಾಂತ ಹಿರೇಮಠ (238) , ಸಾನ್ವಿ ರಾವ್ (223) ವಿದ್ಯಾರ್ಥಿಗಳು ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು, ಪರೀಕ್ಷಾ ಸಂಯೋಜಕರಾದ ರಾಘವೇಂದ್ರ ಬಿ. ರಾವ್ ಅವರು ಶ್ಲಾಘಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಖಾಸಗಿ ಬಾವಿಯೊಂದರಲ್ಲಿ ಮಂಗಳವಾರ ಬೃಹತ್ ಮೊಸಳೆ ಕಾಣಿಸಿಕೊಂಡಿದ್ದು, ಸುತ್ತಲಿನ ನಾಗರಿಕರು ಆತಂಕಕ್ಕೀಡಾದ ಘಟನೆ ನಡೆದಿದೆ. ನಾಗೂರು ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಮೊಸಳೆ ಕಾಣಿಸಿಕೊಂಡಿದಿದೆ. ಬೈಂದೂರು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯಲು ಕೇಜ್ ಇರಿಸಿದ್ದು ಒಳಗಡೆ ಕೋಳಿ ಮಾಂಸ ಇರಿಸಲಾಗಿದೆ. ಅದರ ಚಲನವಲನಗಳ ಮೇಲೆ ಕಣ್ಗಾವಲಿರಿಸಲು ಸಿಸಿ ಟಿವಿ ಅಳವಡಿಕೆ ಮಾಡಲಾಗಿದೆ. ಮೊಸಳೆ ಬೇರೆ ಭಾಗಗಳಿಂದ ಮೇಲಕ್ಕೆ ಭಾರದಂತೆ ಸುತ್ತಲು ಬಲೆ ಅಳವಡಿಸಲಾಗಿದೆ. ಡಿಢೀರ್ ಪ್ರತ್ಯಕ್ಷವಾದ ಮೊಸಳೆಯನ್ನು ನೋಡಲು ನೂರಾರು ಜನರು ತೆರಳುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ನೆರೆಯ ಸಂದರ್ಭದಲ್ಲಿ ಮೊಸಳೆ ಬೇರೆಡೆಯಿಂದ ಇಲ್ಲಿಗೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ತಹಶಿಲ್ದಾರ್ ಪ್ರದೀಪ್ ಆರ್., ವಲಯ ಅರಣ್ಯಾಧಿಕಾರಿ ಸಂದೇಶ್, ಪಿಎಸೈ ತಿಮ್ಮೇಶ್ ಮೊದಲಾದವರು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಪ್ರಸಕ್ತ ವರ್ಷದಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಡಾ. ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ 14.96% ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ 68.03% ಫಲಿತಾಂಶಗಳಿಸಿದೆ. ಆಳ್ವಾಸ್ ಕಾಲೇಜಿನ 147 ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷದಲ್ಲಿ ಆಳ್ವಾಸ್‌ನ 42 ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, 30 ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಿಎ ಪ್ರತಿ ಹಂತದಲ್ಲೂ ಉತ್ತಮ ಫಲಿತಾಂಶ ಪ್ರಕಟವಾಗಿದೆ. ಸುಮೀತ್ ವರ್ಧಮಾನ್ ರೂಗೆ (̳304), ಶಿವಪ್ರಸಾದ್ (295), ಆರ‍್ಯನ್ ಕಾರ್ಯಪ್ಪ ಎ. (287), ಶಿವಶೇಷ್ ಕೆ. ಆರ್. (283), ಹರೀಶ್ ಕುಲಕರ್ಣಿ (283), ಕನ್ಯಾ ಪ್ರಭು (281), ಗಿರೀಶ್ ಚಂದ್ರಪ್ಪ (277), ಆಕಾಶ್ ಜೆ. ಭಟ್ (276), ಹಿತೇಶ್ ಎಂ. ಎಸ್. (273), ದಿನೇಶ್ ಎನ್ (268), ಸಾಹುನ್ ಪಿಂಟೋ…
