ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ವಿಭಾಗಕ್ಕೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ ಮೈನ್ಸ್ ನ ಮೊದಲ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳು 95 ಪರ್ಸಂಟೈಲ್ ಗಿಂತ ಅಧಿಕ ಅಂಕಗಳಿಸಿದ್ದಾರೆ 81 ವಿದ್ಯಾರ್ಥಿಗಳು 90 ಪರ್ಸಂಟೈಲ್ ಗಿಂತ ಅಧಿಕ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಪ್ರಣವ್ ಟಿ. ಎಂ 98.6313, ಯುವರಾಜ್ ಬಿ. ಕೆ 98.2878, ಸತೀಶಗೌಡ 97.9123, ಆನ್ಯಾ ಡಿ. ಜೆ ಗೌಡ 97.7325, ಕಾರ್ತಿಕ್ ಎ.ಎಸ್ 97.4489, ಕದಂಬ ಸಿದ್ದಾಂತ್. ಎಸ್ 97.3435, ಸುಜಿತ್ ಡಿ.ಕೆ 97.2340 ಹಾಗೂ ಪ್ರೇಮ್ಸಾಗರ್ ಪಾಟೀಲ್ 97.1615 ಪರ್ಸಂಟೈಲ್ ಗಳಿಸಿದ್ದಾರೆ. ಅತ್ಯಂತ ಕಠಿಣವಾದ ಪರೀಕ್ಷೆಯಲ್ಲಿ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಜೆ.ಇ.ಇ ಸಂಯೋಜಕರಾದ ನಂದೀಶ್ ಹೆಚ್. ಬಿ ಶ್ಲಾಘಿಸಿ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜನವರಿ 2024ರಲ್ಲಿ ನಡೆದ ಜೆಇಇ ಮೈನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಸಂಸ್ಥೆಯಲ್ಲಿ ಜೆಇಇ ತರಬೇತಿ ಪಡೆದ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಅಧಿಕ ಅಂಕಗಳಿಸಿ ವಿಶೇಷ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಈಶಾ ಶೆಟ್ಟಿ 98.63, ಚಿರಾಗ್ ವಿನಾಯಕ ಮಹಲೆ 97.66, ಎಂ. ಸೃಜನ್ 95.82, ಗೌರವ್ 95.64, ನಿಶಾ 94.50, ನಾಗರಾಜ್ ಸಿದ್ಧಪ್ಪಾ ಉಪ್ಪಾರ್ 94.35, ಸನ್ಮಾನ್ 94.11, ವರುಣ್ ಕೆ ಪಿ 92.58, ಸಮರೇಶ್ 92.40, ರೋಹಿತ್ ಆರ್ ಪೂಜಾರಿ 91.28, ಧನುಷ್ 91.23, ಶಶಾಂಕ್ ಶೆಟ್ಟಿ 91.11, ಪ್ರೀತಮ್ ಶೆಟ್ಟಿ 90.73, ನಿರ್ಮಿತಾ ಎನ್. ಡಿ 90.61, ಅನಿರುದ್ಧ್ ಎಸ್ ಹತ್ವಾರ್ 90.54, ವಿನುತಾ 90.46 ಶೇಕಡಾ ಅಂಕಗಳನ್ನು ಗಳಿಸಿ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಎಕ್ಸಲೆಂಟ್ ಕುಂದಾಪುರ ಸಂಸ್ಥೆಯಲ್ಲಿ ಸರ್ಧಾತ್ಮಕ ಪರೀಕ್ಷೆಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ತೃತೀಯ ಬಿ.ಎ ವಿದ್ಯಾರ್ಥಿನಿಯರಾದ ಭಾರ್ಗವಿ ಮತ್ತು ಧನ್ಯಶ್ರೀ ಜೋಗಿ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರಿಂದ ರಾಜ್ಯ ಪುರಸ್ಕಾರ ದೊರೆತಿದೆ. ಇವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ , ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಗಂಗೊಳ್ಳಿ, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಗ್ರಾಮ ಮಟ್ಟದ ಬೇಟಿ ಬಚಾವೊ, ಬೇಟಿ ಪಡಾವೊ ಜಾಗೃತಿ ಕಾರ್ಯಕ್ರಮ ಗಂಗೊಳ್ಳಿ ಖಾರ್ವಿಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ವಲಯ ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ., ಸಂಪನ್ಮೂಲ ವ್ಯಕ್ತಿಗಳಾದ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ಶಾಲೆಯ ಸಹಶಿಕ್ಷಕಿ ಉಷಾ ಕುಮಾರಿ, ಎಸ್ಡಿಎಂಸಿ ಉಪಾಧ್ಯಕ್ಷೆ ರೇಣುಕಾ ಮೊಗವೀರ, ಸಮುದಾಯ ಆರೋಗ್ಯ ಅಧಿಕಾರಿ ನಯನಾ ತಾಂಡೇಲ, ಶಾಲೆಯ ವಿದ್ಯಾರ್ಥಿ ಅಂಶು ಖಾರ್ವಿ, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮೊದಲಾದವರು ಉಪಸ್ಥಿತರಿದ್ದರು. ಹೆಣ್ಣು ಮಕ್ಕಳ ಜನನವನ್ನು ಸಂಭ್ರಮಿಸುವ ಸಲುವಾಗಿ ಶಾಲೆಯ ವಠಾರದಲ್ಲಿ ಸಾಂಕೇತಿಕವಾಗಿ ಗಿಡ ನೆಡಲಾಯಿತು. ಬೇಟಿ ಬಚಾವೊ, ಬೇಟಿ ಪಡಾವೊ, ಹೆಣ್ಣು…
ಭಾರತದಲ್ಲಿ ಪಾನ್ ಕಾರ್ಡ್ ಪ್ರಮುಖ ಗುರುತು ದೃಢೀಕರಣ ದಾಖಲೆಯಾಗಿದ್ದು, ಮುಖ್ಯವಾಗಿ ತೆರಿಗೆ ಸಂಬಂಧಿ ಉದ್ದೇಶಗಳಿಗೆ ಬಳಸಲಾಗುತ್ತದೆ. ಒಂದು ವೇಳೆ ನಿಮ್ಮ ಪಾನ್ ಕಾರ್ಡ್ ಕಳೆದು ಹೋಗಿದ್ದರೆ ಪುನಃ ಅರ್ಜಿ ಸಲ್ಲಿಸಬಹುದಾಗಿದೆ. ಆದಾಯ ತೆರಿಗೆ ಇಲಾಖೆ ಆನ್ ಲೈನ್ ಸೌಲಭ್ಯ ಬಳಸಿಕೊಂಡು ಇನ್ ಸ್ಟೆಂಟ್ ಇ-ಪ್ಯಾನ್ ಅಥವಾ ಡಿಜಿಟಲ್ ಪ್ಯಾನ್ ಕಾರ್ಡ್ ಗೆ ಕೂಡ ಅರ್ಜಿ ಸಲ್ಲಿಸಬಹುದು. ಪಾನ್ ಕಾರ್ಡ್ ಕಳೆದು ಹೋದ ತಕ್ಷಣ ಎಫ್ ಐಆರ್ ಫೈಲ್ ಮಾಡೋದು ಅಗತ್ಯ. ಇದರಿಂದ ಬೇರೆಯವರು ನಿಮ್ಮ ಪಾನ್ ಕಾರ್ಡ್ ದುರ್ಬಳಕೆ ಮಾಡದಂತೆ ತಡೆಯಲು ಸಾಧ್ಯವಾಗುತ್ತದೆ. ಆನ್ ಲೈನ್ ನಲ್ಲಿ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದು ಹೇಗೆ? ಈಗ ಪಾವತಿ ಪುಟ ತೆರೆದುಕೊಳ್ಳುತ್ತದೆ. ಒಮ್ಮೆ ಪಾವತಿ ಮಾಡಿದ ಬಳಿಕ ನಿಮ್ಮ ನಕಲಿ ಪ್ಯಾನ್ ಕಾರ್ಡ್ ಸ್ಟೇಟಸ್ ಅನ್ನು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಂದರ್ಭದಲ್ಲಿ ಸೃಷ್ಟಿಯಾದ 15 ಅಂಕೆಗಳ ಸ್ವೀಕೃತಿ ಸಂಖ್ಯೆ ಬಳಸಿಕೊಂಡು ಪರಿಶೀಲಿಸಬಹುದು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಮೊಳಹಳ್ಳಿಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರು ಶುಭ ಹಾರೈಸಿದರು. ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ದ್ಯಾವಲ್ ಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸರ್ಕಾರದ ತೋಟಗಾರಿಕಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಎಚ್. ಜಯಶೀಲ ಶೆಟ್ಟಿ ಅವರು ಆಶಯ ನುಡಿಗಳನ್ನಾಡಿದರು. ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ದೀನಪಾಲ ಶೆಟ್ಟಿ ಅವರು ದಿಕ್ಸೂಚಿ ಭಾಷಣ ಮಾಡಿ, ಎನ್.ಎಸ್.ಎಸ್.ನ ಧ್ಯೇಯ ಉದ್ದೇಶಗಳ ಕುರಿತು ವಿವರಿಸಿದರು. ಈ ಸಂದರ್ಭ ಮೊಳಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚೈತ್ರ ವಿ. ಅಡಪ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.13: 12 ನೇ ಶತಮಾನದಲ್ಲಿ ಶಿವಶರಣೆಯರು ರಚಿಸಿದ ವಚನ ಸಾಹಿತ್ಯಗಳು ವಿಚಾರ ಕ್ರಾಂತಿಯನ್ನು ಮೂಡಿಸುವುದರೊಂದಿಗೆ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರುಗಳ ಭಾವಚಿತ್ರöಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. 12 ನೇ ಶತಮಾನ ಮಹತ್ವಪೂರ್ಣವಾದ ಕಾಲಘಟ್ಟ. ಈ ಕಾಲಘಟ್ಟದಲ್ಲಿ ಕಾಯಕ ನಿಷ್ಠೆಯಿಂದ ಗುರುತಿಸಿಕೊಂಡ ಪ್ರತಿಯೊಬ್ಬ ಶರಣರು ವಿಶಿಷ್ಟವಾದ ಜೀವನ ನಡೆಸಿದ್ದಾರೆ. ಪ್ರಮಾಣಿಕ ಕೆಲಸಕ್ಕೆ ಗೌರವ ದೊರಕುತ್ತದೆ ಎಂಬುದನ್ನು ಇವರುಗಳಿಂದ ತಿಳಿಯಬಹುದಾಗಿದೆ. ವೈಚಾರಿಕ ಜ್ಞಾನವನ್ನು ಹೊಂದಿದ್ದ ಇವರುಗಳು ಮಾತು ಮತ್ತು ಕೃತಿಗೆ ವ್ಯತ್ಯಾಸ ಇಲ್ಲದಂತೆ ಸರಳ ಜೀವನ ನಡೆಸಿರುವುದು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದರು. ಶಿವಶರಣೆಯರು ಜಾತಿ, ಮತ, ಪಂಥದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಎಕ್ಸಲೆಂಟ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಸಿಎ ಮತ್ತು ಸಿಎಸ್ ಪರೀಕ್ಷೆಯಲ್ಲಿ ಉತಿರ್ಣರಾಗುವುದರ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳಾದ ಹೃತಿಕ್ ಎಮ್. (237), ಆಯುಷ್ (236), ದೀಕ್ಷಾ ಎ. ಶೆಟ್ಟಿ (223), ಸಮೃದ್ಧಿ ಎಸ್. ಶೆಟ್ಟಿ (218) ಮತ್ತು ಅಮೋಘ್ (202) ಅಂಕಗಳೊಂದಿಗೆ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವೈಷ್ಣವಿ (137), ಸಹನಾ (118) ಮತ್ತು ಭೂಮಿಕಾ (112) ಅಂಕಗಳೊಂದಿಗೆ ಸಿಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿಎ ಫೌಂಡೇಶನ್, ಸಿಎಸ್ ಫೌಂಡೇಶನ್ (ಸಿಎಸ್ಇಇಟಿ ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂದಿನ ಹಂತದ ಪರೀಕ್ಷೆಯ ಸಿದ್ಧತೆಯಲ್ಲಿದ್ದಾರೆ. ಪದವಿಪೂರ್ವ ಶಿಕ್ಷಣದೊಂದಿಗೆ ವೃತ್ತಿಪರ ಕೋರ್ಸು ಗಳಿಗೆ ಸಿದ್ಧತೆ:ಎಕ್ಸಲೆಂಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಇಂದಲೇ ವೃತ್ತಿಪರ ಕೋರ್ಸು ಗಳಾದ ಸಿಎ ಮತ್ತು ಸಿಎಸ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ನೆರವಾಗಿದೆ. ಸಿಎ/ಸಿಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನರ ಪರಸ್ಪರ ಸಂಬಂಧಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೇಸೆಜ್ ವಿಚಾರದಲ್ಲಿ ತಪ್ಪಾಗಿ ಅರ್ಥೈಸಿಕೊಂಡು ಅನುಭವಿಸುವ ಕೊರಗಿನ ಕುರಿತ ಎಳೆಯನ್ನು ಹೊಂದಿರುವ ಮರೆಯದಿರು ಓಲವೇ ಮ್ಯೂಸಿಕ್ ವಿಡಿಯೋ ಐಶ್ವರ್ಯ ಮೀಡಿಯಾ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಸದ್ಯದಲ್ಲಿಯೇ ಬಿಡುಗಡೆಗೊಳ್ಳಲಿದೆ. ಮ್ಯೂಸಿಕಲ್ ವೀಡಿಯೋವನ್ನು ನಾಗೇಶ್ ಕುಂದಾಪುರ ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ರಾಘವೇಂದ್ರ ಎಸ್ ಬೀಜಾಡಿ ಛಾಯಾಗ್ರಹಣ ಮತ್ತು ಸಂಕಲನ ಮಾಡಿ ತಮ್ಮ ಕೈ ಚಳಕವನ್ನು ತೋರಿಸಿದ್ದಾರೆ. ಕುಟುಂಬದಲ್ಲಿನ ಸದಸ್ಯರ ನಡುವೆ, ಸ್ನೇಹಿತರ ನಡುವೆ, ಪ್ರೇಮಿಗಳ ನಡುವೆ ಸಾಮಾನ್ಯವಾಗಿ ನಡೆಯುವ ಜಾಲತಾಣಗಳಲ್ಲಿ ಮುಖ್ಯವಾಗಿ ವಾಟ್ಸ ಆಪ್ ನಲ್ಲಿ ಹಂಚಿಕೊಳ್ಳುವ ಮೇಸಜ್ ಗಳನ್ನು ಓದಿ ಅದನ್ನು ತಪ್ಪಾಗಿ ತಿಳಿದುಕೊಂಡು ಪರಸ್ಪರ ಸಂಬಂಧವನ್ನು ಹದಗೆಡುವ ಮಟ್ಟಿಗೆ ಹೋಗುತ್ತವೆ ಈ ವಿಷಯಾಧಾರಿತವಾಗಿದೆ. ಐಶ್ವರ್ಯ ಮೀಡಿಯಾ ಹಾಗೂ ಐಶ್ವರ್ಯ ಸ್ಟುಡಿಯೋ ಇವರ ಚೊಚ್ಚಲ ಮ್ಯೂಸಿಕ್ ವೀಡಿಯೋದಲ್ಲಿ ಕರ್ನಾಟಕ ಕರಾವಳಿಯ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಕೆಲವೊಂದು ಪರಿಸರಗಳು ಮುನ್ನೆಲೆಗೆ ಬಾರದ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಡ್ತರೆ ರಾಹುತನಕಟ್ಟೆಯ ಶ್ರೀ ರಾಮ ಭಜನಾ ಮಂಡಳಿಯಿಂದ ವರ್ಷಂಪ್ರತಿ ನಡೆಯುವ ಅಖಂಡ ಶ್ರೀ ರಾಮ ಭಜನಾ ಉತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ರಾಹುತನಕಟ್ಟೆಯ ಶ್ರೀ ರಾಹುತನ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಜರುಗುವ ಅಖಂಡ ರಾಮ ಭಜನೆಯಲ್ಲಿ ಪ್ರದೀಪ ಸ್ಥಾಪನೆಯೊಂದಿಗೆ ಸ್ಥಳೀಯ ಹಾಗೂ ಸುತ್ತಲಿನ ಭಜನಾ ತಂಡಗಳು ಸಂಗೀತ ಹಾಗೂ ವಾದ್ಯತಂಡದೊಂದಿಗೆ ವಿವಿಧ ಭಜನೆ ಪ್ರಸ್ತುತಗೊಳಿಸಿದರು. ರಾಮಭಜನೆಯ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಈ ವೇಳೆ ಜರುಗಿದವು. ಈ ವೇಳೆ ಅಧ್ಯಕ್ಷರಾದ ಚಂದ್ರ ಮೊಗವೀರ, ಕಾರ್ಯದರ್ಶಿ ನಾಗರಾಜ ಮೊಗವೀರ ಸೇರಿದಂತೆ ಶ್ರೀ ರಾಮ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.
