ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕು, ಬೆಲೆ ಏರಿಕೆ, ರೈತ, ಹೆಣ್ಣು ಮಕ್ಕಳ ಮಾನಹರಣ, ದೇಶದ ಸಮಸ್ಯೆಗಳ ಬಗ್ಗೆ ಮಾತನಾಡಬೇಕಿದ್ದ ದೇಶದ ಪ್ರಧಾನಿಗಳು ಯಾವುದೋ ನಾಯಕ ಮೀನು ತಿನ್ನುವುದನ್ನೇ ದೊಡ್ಡ ವಿಷಯವನ್ನಾಗಿಸಿ ವ್ಯಂಗ್ಯವಾಡುತ್ತಿದ್ದಾರೆ ನಿಕೇತರಾಜ್ ಮೌರ್ಯ ಹೇಳಿದರು. ಅವರು ಮಂಗಳವಾರ ಕಿರಿಮಂಜೇಶ್ವರದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಿವಮೋಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಪರ ಆಯೋಜಿಸಲಾದ್ದ ಮಹಿಳಾ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಅಂಬೇಡ್ಕರ್ ಅವರ ಶೋಷಿತರು, ಬಡವರು ದೇಶದ ಜನರ ಉಳಿವಿಗಾಗಿ ನೀಡಿದ ಸಂವಿಧಾನವನ್ನೇ ಬದಲಿಸಲು ಹೊರಟಿರುವ ಬಿಜೆಪಿಯನ್ನು ತಿರಸ್ಕರಿಸಿ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಅವರು ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಮೊದಲ ಭಾರಿಗೆ ಮೀಸಲಾತಿ ನೀಡಿ ಧ್ವನಿ ನೀಡಿದ್ದು, ದೇಶದ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ದೇಶದಲ್ಲಿ ಐಎನ್ಡಿಐಎ ಅಧಿಕಾರಕ್ಕೆ ಬಂದರೆ ದೇಶದಲ್ಲಿಯೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ಅಭಿಷೇಕ್ ಅಡಿಗ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದರೆ, ವಿಜ್ಞಾನ ವಿಭಾಗದ ಸನ್ನಿಧಿ ಕುಲಾಲ್ 591 ಅಂಕಗಳೊAದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಪರೀಕ್ಷೆಗೆ ಹಾಜರಾದ 404 ವಿದ್ಯಾರ್ಥಿಗಳೆಲ್ಲರೂ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಶೇಕಡ 100 ಫಲಿತಾಂಶ ಲಭಿಸಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ 14 ವಿದ್ಯಾರ್ಥಿಗಳು 588 ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸುವುದರ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಒಟ್ಟು 404 ವಿದ್ಯಾರ್ಥಿಗಳಲ್ಲಿ ಶೇ.95 ಕ್ಕಿಂತಲೂ ಅಧಿಕ ಅಂಕಗಳನ್ನು 86 ವಿದ್ಯಾರ್ಥಿಗಳು ಗಳಿಸಿದರೆ, 308 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಎಂ.ಎಂ. ಹೆಗ್ಡೆ ಎಜುಕೇಶನಲ್ ಹಾಗೂ ಚಾರಿಟೇಬಲ್ ಟ್ರಸ್ಟ್ (ರಿ.)ನ ಅಧ್ಯಕ್ಷರಾಗಿರುವ ಎಂ. ಮಹೇಶ್ ಹೆಗ್ಡೆ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಡಾ. ರಮೇಶ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಮತಗಳ ಅಂತರ ಒದಗಿಸುವ ಶಾಸಕ ಗುರುರಾಜ ಗಂಟಿಹೊಳೆ ಅವರ ಸಂಕಲ್ಪದಂತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪೇಜ್ ಪ್ರಮುಖ್ ಕಾರ್ಯಗಾರ ನಡೆಯಿತು. ಶಿರೂರು, ಬೈಂದೂರು ಪಟ್ಟಣ ಪಂಚಾಯಿತಿ, ಕಾವ್ರಾಡಿ, ಸಿದ್ದಾಪುರ, ಚಿತ್ತೂರು, ಕಿರುಮುಂಜೇಶ್ವರ, ತ್ರಾಸಿ, ಯಡ್ತರೆ ಸೇರಿದಂತೆ ಬೈಂದೂರಿನ ವಿವಿಧ ಭಾಗಗಲ್ಲಿ ಪೇಜ್ ಪ್ರಮುಖ್ ಕಾರ್ಯಗಾರ ನಡೆಯಿತು. ಕಾರ್ಯಾಗಾರದಲ್ಲಿ ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ 2ನೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2024 ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಬಿ.ಆರ್ಚ್ (99.744) ಪರ್ಸಂಟೈಲ್ ಪಡೆದು ಜಿಲ್ಲೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾಳೆ. ಜೆಇಇ 2ನೇ ಪ್ರವೇಶ ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ)ಆದಿತ್ಯ ಸಿ.ಚಂದನ್ 95.97 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 95.84, ಲಲನ್ ಪಿ. 93.15 ಪರ್ಸಂಟೈಲ್,ಪ್ರಜ್ವಲ್ ಎಸ್.ಪೂಜಾರಿ 93.02 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ:…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಲಾವಣ್ಯ592(ವಾಣಿಜ್ಯ ವಿಭಾಗ) ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್, ಜಿಲ್ಲೆಗೆ ತೃತೀಯ ರ್ಯಾಂಕ್, ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದು ಸಾಧನೆ ಮಾಡುವುದರ ಮೂಲಕ ಒಟ್ಟು 12 ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಲಾವಣ್ಯ 592(ವಾಣಿಜ್ಯ ವಿಭಾಗ), ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ),ಪವಿತ್ರಾ 588(ವಿಜ್ಞಾನ ವಿಭಾಗ), ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ), ರಿಷಿಕಾ ಮೊಂಟೆರೋ 585(ವಿಜ್ಞಾನ ವಿಭಾಗ),ಪ್ರ ಜ್ವಲ್ ದೇವಾಡಿಗ 584 (ವಿಜ್ಞಾನ ವಿಭಾಗ),ಕ್ಷಮಾ ಪಡಿಯಾರ್ 582(ವಿಜ್ಞಾನ ವಿಭಾಗ), ದೀಪಿಕಾ 581 (ವಿಜ್ಞಾನ ವಿಭಾಗ), ಸಿಂಧು 581(ವಾಣಿಜ್ಯ ವಿಭಾಗ), ಕೌಶಲ್ ಆಚಾರ್ಯ 580 (ವಾಣಿಜ್ಯ ವಿಭಾಗ),ಶ್ರೀಶ ಶೆಟ್ಟಿ 580 (ವಿಜ್ಞಾನ ವಿಭಾಗ) ಅಂಕ ಗಳಿಸಿ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ದ್ವಿತೀಯ ಪಿಯು ಮರುಮೌಲ್ಯಮಾಪನ ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು ಉತ್ತರಕನ್ನಡದ ಹೊನ್ನಾವರದ ಜಗದೀಶ್ ರಾವ್ ಬಿ ಎಸ್ ಮತ್ತು ವಿನುತಾ ಭಟ್ ದಂಪತಿಗಳ ಸುಪುತ್ರಿ. ವಾಣಿಜ್ಯ ವಿಭಾಗದ ಭಕ್ತಿ ಕಾಮತ್ 596 ಅಂಕಗಳೊಂದಿಗೆ ರಾಜ್ಯಕ್ಕೆ ತೃತೀಯ ರ‍್ಯಾಂಕ್, ವಿಜ್ಞಾನ ವಿಭಾಗದ ಸಾಗರ್ ಎಸ್. ಟಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ಹಾಗೆಯೇ ವಾಣಿಜ್ಯ ವಿಭಾಗದ ವಿನಯ್ ಪ್ರಶಾಂತ್ 589 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿರುತ್ತಾರೆ. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಒಟ್ಟು ಶೇ.76.06 ಮತದಾನವಾಗಿದೆ. ಉಡುಪಿ ಜಿಲ್ಲೆಯ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.75.80 ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.79.10 ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶೇ.79.03 ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶೇ.78.50 ಮತದಾನವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.80.20 ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.75.12, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.69. ತರಿಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.20 ಮತದಾನವಾಗಿದೆ. ಜಿಲ್ಲೆಯಾದ್ಯಂತ ಹಿರಿಯ ನಾಗರಿಕರು, ವಿಕಲಚೇತನರು, ವಧು ವರರು, ಪ್ರಥಮ ಭಾರಿಗೆ ಮತದಾನ ಮಾಡುವ ಯುವ ಸಮೂಹ ಕೂಡ ಖುಷಿಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಸಣ್ಣ ಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ, ಮತ್ತೆಲ್ಲಾ ಮತಗಟ್ಟೆಗಳಲ್ಲಿಯೂ ಮತದಾನ ನಿರ್ವೀಘ್ನವಾಗಿ ನಡೆದಿದೆ. ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಶೇ.12.82 ಮತದಾನವಾಗಿದ್ದರೇ, ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಒಟ್ಟು ಶೇ.29.03 ಮತದಾನವಾಗಿದೆ. ಮಧ್ಯಾಹ್ನ 1 ಗಂಟೆಗೆ ಒಟ್ಟು ಶೇ.46.43 ಮತದಾನ, ಮಧ್ಯಾಹ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯಗಳು ಬರದಿಂದ ಸಾಗುತ್ತಿದ್ದು ಉಡುಪಿ ಜಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಶಾಂತ ರೀತಿಯಲ್ಲಿ ಮತದಾನ ನಡೆಯುತ್ತಿದೆ. ಸಂಜೆ 5 ಗಂಟೆಯ ತನಕ ಒಟ್ಟು ಶೇ.72.12 ಮತದಾನ ನಡೆದಿದೆ. ಉಡುಪಿ ಜಿಲ್ಲೆಯಲ್ಲಿ ಬಿರುಸಿನ ಮತದಾನ ನಡೆದಿದ್ದು, ಜಿಲ್ಲೆಯಾದ್ಯಂತ ಹಿರಿಯ ನಾಗರಿಕರು, ವಿಕಲಚೇತನರು, ವಧು ವರರು, ಪ್ರಥಮ ಭಾರಿಗೆ ಮತದಾನ ಮಾಡುವ ಯುವ ಸಮೂಹ ಕೂಡ ಖುಷಿಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ನಡೆದು ಬರಲು ಸಾಧ್ಯವಾಗದ ವಿಕಲಚೇತನರಿಗೆ ವಾಹನದ ಮೂಲಕ ಕರೆತಂದು ವೀಲ್ ಚೇರ್ ಮೂಲಕ ಮತಗಟ್ಟೆಗೆ ಕರೆದೋಯ್ದು ಮತದಾನ ಮಾಡಿಸಲಾಯಿತು. ಕುಂದಾಪುರ ಕೋಯಕುಟ್ಟಿ ಹಾಲ್ ಸಮೀಪದ 21ನೇ ಮತಗಟ್ಟೆಯಲ್ಲಿ ಅನಾರೋಗ್ಯವುಳ್ಳ ತಾಯಿ ವಿ.ಕೆ ಲಲಿತಾ (85) ಅವರನ್ನು ಪುತ್ರ ವಿ. ವಾಸುದೇವ ಹಂದೆ ಅವರು ತಮ್ಮ ಅಂಬುಲೆನ್ಸ್ ಮೂಲಕ ಕರೆತಂದು ಮತದಾನ ಮಾಡಿಸಿ ತಮ್ಮ ಜವಾಬ್ದಾರಿ ಮೆರೆದರು. ಮದುವೆ ತಯಾರಿಯಲ್ಲಿದ್ದ ಮಧುಗಳು ಕೂಡ, ಹಸೆಮಣೆ ಏರುವ ಮುನ್ನವೇ ಮತದಾನ ಮಾಡಿ ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಣಿಪಾಲ ಇದರ ವತಿಯಿಂದ ದಿ. ಮಾಧವ ರಾವ್ ಸ್ಮರಣಾರ್ಥ ಕೊಡ ಮಾಡುವ 2023-24ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಗೆ ಗಂಗೊಳ್ಳಿಯ ದಾಕುಹಿತ್ಲು ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಭಾಜನರಾಗಿದ್ದಾರೆ. ಮಣಿಪಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಫಿಲೋಮಿನಾ ಫೆರ್ನಾಂಡಿಸ್ ಅವರಿಗೆ ಹಸ್ತಾಂತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 586 ಅಂಕ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂರ್ವಿ ಆರ್. ಚಿತ್ತಾಲ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು. ಗಂಗೊಳ್ಳಿಯ ಎಸ್.ವಿ.ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ. ನಾಗೇಂದ್ರ ಪೈ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷರಾದ ಉದಯಶಂಕರ ರಾವ್, ಜನಾರ್ದನ ಪೂಜಾರಿ ಪೆರಾಜೆ, ಉಮೇಶ ಮೇಸ್ತ ಹಾಗೂ ದಯಾನಂದ ಗಾಣಿಗ ಅವರು ಪೂರ್ವಿ ಚಿತ್ತಾಲ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗೌರವಿಸಿದರು. ಗಂಗೊಳ್ಳಿ ರೋಟರಿ ಕಾರ್ಯದರ್ಶಿ ಕೃಷ್ಣ ಪೂಜಾರಿ, ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ಕೆ. ರಾಮನಾಥ ನಾಯಕ್, ವಾಸುದೇವ ಶೇರುಗಾರ್, ನಾರಾಯಣ ಇ. ನಾಯ್ಕ್, ರೋಟರಿ ಸದಸ್ಯರಾದ ರಾಮನಾಥ ಚಿತ್ತಾಲ್, ಟಿ.ದಿನಕರ ಶೆಣೈ, ಆನಂದ ಕೆ., ಮಾಲಾಶ್ರೀ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರೇಶ್ಮಾ ಚಿತ್ತಾಲ್ ಮೊದಲಾದವರು ಉಪಸ್ಥಿತರಿದ್ದರು.
