Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆಯಲ್ಲಿ ಆದ ಸಮಸ್ಯೆಯ ಬಗ್ಗೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಕುಂದಾಪುರ ತಾಲೂಕಿನ ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ ಹಾಗೂ ಬ್ರಹ್ಮಾವರದ ಸಾಲಿಗ್ರಾಮ, ಕೋಟತಟ್ಟು, ಕೋಟ, ಮಣೂರು, ಪಾಂಡೇಶ್ವರ ಹಾಗೂ ಸಾಸ್ತಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ಕೈಗೊಂಡಿರುವ ಸಾರ್ವಜನಿಕ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್‌ಗಳು ಹಾನಿಗೊಂಡು ಸಾರ್ವಜನಿಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ವಾರ್ಥ ಬಿಟ್ಟು ಈ ಸಮಾಜದಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಪಂಚವರ್ಣ ಸಂಘಟನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ,ನ್ಯಾಯವಾದಿ ಕೆ. ಅನಂತಪದ್ಮನಾಭ ಐತಾಳ್ ಹೇಳಿದರು ಅವರು ಕೋಟದ ಪಂಚವರ್ಣ ಸಂಘಟನೆಯ ಸದಸ್ಯೆ ಸುಜಾತ ಬಾಯರಿ ಅವರ ಹುಟ್ಟುಹಬ್ಬವನ್ನು ಬಡ ಅಶಕ್ತ ಕುಟುಂಬಕ್ಕೆ ದಿನಸಿ ಪರಿಕರ ಹಾಗೂ ಆರ್ಥಿಕ ಸಹಾಯಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಗವಂತನಿಗೆ ಅತಿ ಹತ್ತಿರ ಕಾರ್ಯ ಎಂದರೆ ಅದು ಬಡ ಹಾಗೂ ನಿರ್ಗತಿಗರಿಗೆ ಸಹಾಯ ಮಾಡುವ ಸೇವೆ ಅದೇ ಪಂಚವರ್ಣ ಸಂಘಟನೆ ಹಲವು ಕಾರ್ಯಕ್ರಮಗಳಲ್ಲಿ ಈ ಹುಟ್ಟು ಹಬ್ಬ ಆಚರಣೆ ವಿಶೇಷವಾಗಿ ಗಮನ ಸೆಳೆದಿದೆ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಇಲ್ಲಿನ ಅಶಕ್ತ ಕುಟುಂಬದ ಸದಸ್ಯೆ ವಿಜಯಲಕ್ಷ್ಮಿ ದಿನಸಿ ಪರಿಕರ ಹಾಗೂ ಆರ್ಥಿಕಸಹಾವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸುಜಾತ ಬಾಯರಿ ದೀಪ ಬೆಳಗಿಸಿ ಪ್ರತಿಯೊಬ್ಬರು ತಮ್ಮ ಹುಟ್ಟುಹಬ್ಬವನ್ನು ಈ ರೀತಿಯ ಸೇವೆಯ ಮೂಲಕ ಆಚರಿಸಿಕೊಳ್ಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯ ವತಿಯಿಂದ 2026-27 ನೇ ಸಾಲಿನ ಉದ್ಯೋಗಾದಾರಿತ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿ.ಪಿ.ಟಿ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) – 3 ವರ್ಷ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾಗುವವರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.  ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತರು ಆನ್‌ಲೈನ್ ರಿಜಿಸ್ಟ್ರೇಷನ್ ಲಿಂಕ್ https://cipet26.onlineregistrationform.org/CIPET/  ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0821-2510618, ಮೊ.ನಂ: 9480253024, 9791431827 ಅಥವಾ  ವೆಬ್‌ಸೈಟ್  www.cipet.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ರಿಷಿಕಾ ಆರ್. ದೇವಾಡಿಗ ಅವರಿಗೆ ಅವರ ಸಾಹಿತ್ಯ ಸಾಧನೆಯನ್ನು ಗುರುತಿಸಿ “ವಿದ್ಯಾರ್ಥಿ ಯುವ ಸಾಹಿತ್ಯ ರತ್ನ” ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 21ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿಟ್ಟೆ ನಿರ್ದೇಶಕರಾದ ಯೋಗೇಶ್ ಹೆಗಡೆ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿ, “ರಿಷಿಕಾ ಅವರ ಭವಿಷ್ಯ ಜೀವನ ಉಜ್ವಲವಾಗಲಿ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ” ಎಂದು ಹಾರೈಸಿದರು. ಸಮಾರಂಭದ ಸರ್ವಾಧ್ಯಕ್ಷತೆಯನ್ನು ವಹಿಸಿದ್ದ ಸಾಹಿತಿ ಸಿದ್ದಾಪುರ ವಸುದೇವ ಭಟ್, ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ, ಕೊಂಡಳ್ಳಿ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರುಗಳು, ಶಿಕ್ಷಕಿ ರೂಪಾ ದೇವಾಡಿಗ ಹಾಗೂ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕನ್ನಡ ನಾಡಿನ ಖ್ಯಾತ ಸಾಹಿತಿ, ‘ಚುಟುಕು ಬ್ರಹ್ಮನಂದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯ – 66ರಲ್ಲಿನ ಕಾಮಗಾರಿ ಮತಗತು ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಡಿ ಅವರು ಚರ್ಚೆ ಚರ್ಚಿಸಿದರು. ಎನ್.ಎಚ್-66ರಲ್ಲಿರುವ ಸಮಸ್ಯೆಗಳಲ್ಲಿ ಹೊಸದಾಗಿ ಜಿಪಿಆರ್ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪಡುಬಿದ್ರೆ ಉಡುಪಿಯ ಅಂಬಾಗಿಲು ಬ್ರಹ್ಮಾವರ ಕೋಟ ಜಂಕ್ಷನ್ ತೆಕ್ಕಟ್ಟೆ ಒಟ್ಟು 4-5 ಜಂಕ್ಷನ್ಗಳಲ್ಲಿ ಮೇಲ್ ಸೇತುವೆ ಮಾಡಬೇಕಾಗಿರುವುದರಿಂದ ಹೊಸದಾಗಿ ಎರಡು ಕಂಪನಿಗಳಿಗೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದು, ಜಿಪಿಆರ್ ಮಾಡಲು ಅವಕಾಶ ಕಲ್ಪಿಸಿದ್ದು ಅದರ ಜೊತೆಯಲ್ಲಿ ಹೆಜಮಾಡಿ ಯಿ೦ದ ಕುಂದಾಪುರ ಶಾಸ್ತ್ರಿ ಸರ್ಕಲ್ ತನಕ ಸುಮಾರು 64 ಕಿಲೋಮೀಟರ್ ಸರ್ವಿಸ್ ರಸ್ತೆ ಮಾಡಬೇಕೆನ್ನುವ ಬೇಡಿಕೆ ಹಿನ್ನೆಲೆ ಅನುಗುಣವಾಗಿ ಸುಮಾರು 29 ಕಿಲೋಮೀಟರ್ ಮಂಜೂರಾಗಿ ಪ್ರಸ್ತುತ ಕಾಮಗಾರಿ ಆಗುತ್ತಿದೆ. ಇನ್ನು 25-30 ಕಿ.ಮೀ ಸರ್ವಿಸ್ ರಸ್ತೆ ಹೊಸದಾಗಿ ಪ್ರಸ್ತಾಪನೆ ಬಂದಿದೆ.ಹೆಜಮಾಡಿಯಿಂದ ಕುಂದಾಪುರದವರೆಗಿನ ರಾಷ್ಟ್ರೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಕ್‌ ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಅಪರಾಹ್ನದ ವೇಳೆ ತಾಲೂಕಿನ ಖಂಬದಕೋಣೆ ರಾ.ಹೆ 66ರಲ್ಲಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಉಪ್ಪುಂದ ನಿವಾಸಿ ಭುವನ್ (19) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಉಪ್ಪುಂದ ಮೂಲದ ಮಧುಸೂಧನ್ ಗಂಭೀರ ಗಾಯಗೊಂಡಿದ್ದಾರೆ. ಭುವನ್ ಹಾಗೂ ಮಧುಸೂಧನ್ ಅವರು ಬೈಕಿನಲ್ಲಿ ಕುಂದಾಪುರ ಕಡೆಯಿಂದ ಉಪ್ಪುಂದಕ್ಕೆ ಬರುತ್ತಿದ್ದರು. ಖಂಬದಕೋಣೆಯಲ್ಲಿ ಬರುತ್ತಿದ್ದ ವೇಳೆ ಟಾಟಾ ಏಸ್ ವಾಹನವೊಂದು ಹೆದ್ದಾರಿಯ ಡಿವೈಡರ್‌ನಲ್ಲಿ ಏಕಾಏಕಿ ಯೂಟರ್ನ್ ತೆಗೆದುಕೊಂಡಿದ್ದು, ಇದರಿಂದ ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಢಿಕ್ಕಿಯಿಂದ ರಸ್ತೆಗೆಸೆಯಲ್ಪಟ್ಟ ಪರಿಣಾಮ ಭುವನ್ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಶಿವಕುಮಾರ್, ಪಿಎಸ್‌ಐ ಸುನೀಲ್ ಕುಮಾ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ಪಡೆಯಲು ಸೇವಾಸಿಂಧು ವೆಬ್‌ಸೈಟ್ Sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 9 ರ ವರೆಗೆ ವಿಸ್ತರಿಸಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೆಬ್ರಿಯಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ (8 ರಿಂದ 12ನೇ ತರಗತಿ) ‘ಪ್ರತಿಭಾ ಕಾರಂಜಿ’ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ‘ಕನ್ನಡ ಕವನ ವಾಚನ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಶ್ರೀಶಾಂತ್ ಮತ್ತು ‘ಸಂಸ್ಕೃತ ಧಾರ್ಮಿಕ ಪಠಣ’ದಲ್ಲಿ ಪ್ರಥಮ ಸ್ಥಾನ ಪಡೆದ ಭೂಮಿಕಾ ಕಾರಂತ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ʼಕನ್ನಡ ಭಾಷಣʼ ಸ್ಪರ್ಧೆಯಲ್ಲಿ ಸ್ಪೂರ್ತಿ ದ್ವಿತೀಯ ಸ್ಥಾನ ʼಮಿಮಿಕ್ರಿʼಯಲ್ಲಿ ಮಿಥಿಲ್‌ ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳಿಗೆ ಏರ್ಪಡಿಸಿದ ವಾಲಿಬಾಲ್ ಪಂದ್ಯಾಟದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ದ್ವಿತೀಯ ಸ್ಥಾನ ಗಳಿಸಿದೆ. ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘ ಪ್ರಥಮ ಸ್ಥಾನ ಗಳಿಸಿದೆ. ಪಂದ್ಯಾಟದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ. ಮಹೇಶ ಹೆಗ್ಡೆ ಉದ್ಘಾಟಿಸಿದರು. ದ.ಕ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಎಸ್ ಪ್ರಕಾಶಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೆದೂರು ಸದಾನಂದ ಶೆಟ್ಟಿ, ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರದೀಪ ಯಡಿಯಾಳ ಉಪಸ್ಥಿತರಿದ್ದರು. ಕೃಷಿ ಪತ್ತಿನ ನೌಕರರ ಸಂಘದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ್ ಸ್ವಾಗತಿಸಿ ಕಾರ್ಯದರ್ಶಿ ಕೀರ್ತಿ ಕುಮಾ‌ರ್ ಶೆಟ್ಟಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ರಿ., ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ “ಶಿಶಿರ ಸಂಗೀತೋತ್ಸವ” ಕಾಲೇಜಿನ ರಂಗ ಅಧ್ಯಯನ ಕೇಂದ್ರದಲ್ಲಿ ಇತ್ತೀಚಿಗೆ ನಡೆಯಿತು. ದಿ| ಎ. ವೈಕುಂಠ ಹೆಬ್ಬಾರ್ ಹಾಗೂ ದಿ| ಅವಿನಾಶ್ ಹೆಬ್ಬಾರ್ ಸ್ಮರಣಾರ್ಥ ಏರ್ಪಡಿಸಿದ ಕಾರ್ಯಕ್ರಮವನ್ನು ಖ್ಯಾತ ಗಾಯಕರಾದ ಓಂಕಾರ್ ಹವಾಲ್ದಾರ್ ಮತ್ತು ಮಾನಸಿ ಶಾಸ್ತ್ರಿ ಬೆಂಗಳೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಗೀತ ಭಾರತಿ ಟ್ರಸ್ಟ್ ರಿ. ಅಧ್ಯಕ್ಷ ಕೆ. ಶ್ರೀಧರ ಕಾಮತ್, ಭಂಡಾರ್‌ಕಾರ್ಸ್‌ ಕಾಲೇಜು ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು, ಸಂಗೀತ ಭಾರತಿ ಟ್ರಸ್ಟಿನ ಕಾರ್ಯದರ್ಶಿ ನಾರಾಯಣ ಕೆ., ಟ್ರಸ್ಟಿಗಳಾದ ಕೆ. ಸೀತಾರಾಮ ನಕ್ಕತ್ತಾಯ, ಡಾ| ಎಚ್. ಆರ್. ಹೆಬ್ಬಾರ್, ಡಾ| ಆದರ್ಶ ಹೆಬ್ಬಾರ್, ಸುಪ್ರಸನ್ನ ನಕ್ಕತ್ತಾಯ, ರೇಖಾ ಕಾರಂತ್ ಉಪಸ್ಥಿತರಿದ್ದರು. ಕಲಾವಿದರಾದ ಸಿತಾರ್ ವಾದಕ ಅರ್ಜುನ್ ಆನಂದ ಬೆಂಗಳೂರು, ತಬಲಾ ಕಲಾವಿದರಾದ ಸಾಗರ್‌ಭರತ್ ರಾಜ್ ಬೆಂಗಳೂರು, ವಿಘ್ನೇಶ್ ಕಾಮತ್ ಕೋಟೇಶ್ವರ, ಹಾರ್ಮೋನಿಯಮ್ ಕಲಾವಿದ ಶ್ರೀಧರ್ ಭಟ್ ಕೋಟೇಶ್ವರ,…

Read More