ಕುಂದಾಪ್ರ ಡಾಟ್ ಕಾಂ.ಬೈಂದೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಬೈಂದೂರು ಪ್ಯಾಲೇಸ್’ ಅಪಾರ್ಟ್ಮೆಂಟ್ ಭಾನುವಾರ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಕ್ಷೇತ್ರದ ಮಾಜೀ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ ಶುಭಾಶಂಸನೆಗೈದರು. ಕ್ರೆಡೈ ಉಡುಪಿ ಗೌರವ ಅಧ್ಯಕ್ಷ ಮನೋಹರ್ ಎಸ್.ಶೆಟ್ಟಿ, ಕುಂದಾಪುರ: ಶ್ರೀರಾಮ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ನಾಗರಾಜ್ ಕಾಮಧೇನು ಉಪಸ್ಥಿತರಿದ್ಧರು. ಇದೇ ಸಂದರ್ಭ ಸಂಸ್ಥೆಯ ಪಾಲುದಾರ, ಆರ್.ಎಸ್. ವೆಂಚರ್ಸ್ನ ರಾಜೀವ್, ಸಾಜು ಹಾಗೂ ಮಹಿಮಾರನ್ನು ಗೌರವಿಸಲಾಯಿತು. ಈ ವೇಳೆ ರಾಜೀವ ಅವರು ಬರೆದ “ಮಾರ್ಕೆಟಿಂಗ್ ಪುಶ್ ದ ಕಸ್ಟಮರ್ಸ್ ಟು ಪುಲ್ ದ ಬ್ರ್ಯಾಂಡ್” ಪುಸ್ತಕ ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ಪ್ರವರ್ತಕ ಕೆ. ವೆಂಕಟೇಶ್ ಕಿಣಿ ಸ್ವಾಗತಿಸಿದರು. ಉದಯ್ ಆಚಾರ್ ಪ್ರಾರ್ಥಿಸಿದರು. ಅರುಣ್ ಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಆಕರ್ಷಕ ವಿನ್ಯಾಸ, ಅತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕೋಟೇಶ್ವರ ಮತ್ತು ವಲಯ 2ರ ಎಲ್ಲಾ ರೋಟರಿ ಕ್ಲಬ್ಗಳ ಸಹಭಾಗಿತ್ವದಲ್ಲಿ ಭಾನುವಾರ ಕುಂದಾಪುರದಲ್ಲಿ ನಡೆದ ರೋಟರಿ ಜಿಲ್ಲೆ 3182ರ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಕಲಾವೈಭವ ‘ಗೀತವಲ್ಲರಿ’ ಸ್ಪರ್ಧೆಯಲ್ಲಿ ಬೈಂದೂರು ರೋಟರಿ ಕ್ಲಬ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೈಂದೂರು ರೋಟರಿ ಕ್ಲಬ್ ಸದಸ್ಯರು ಭಾಗವಹಿಸಿದ 3 ಸ್ಪರ್ಧೆಗಳಲ್ಲಿಯೂ ಪ್ರಥಮ ಸ್ಥಾನಿಯಾಗುವ ಮೂಲಕ ಜಿಲ್ಲಾ ಮಟ್ಟದ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡಿದ್ದಾರೆ. ಭಾವಗೀತೆ ಸ್ಪರ್ಧೆಯಲ್ಲಿ ಪೂರ್ಣಿಮಾ ಪೈ, ಡುಯೆಟ್ ಸಾಂಗ್ ವಿಭಾಗದಲ್ಲಿ ರಾಘವೇಂದ್ರ ಉಡುಪ – ಪೂರ್ಣಿಮಾ ಪೈ ಹಾಗೂ ಗುಂಪು ನೃತ್ಯ ವಿಭಾಗದಲ್ಲಿ ನಾಗೇಂದ್ರ ಬಂಕೇಶ್ವರ ನೇತೃತ್ವದ ತಂಡ ಭಾಗವಹಿಸಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಸಾಹಿತಿ ಜಯಪ್ರಕಾಶ್ ಮಾವಿನಕುಳಿ ಅವರು ಸಮಗ್ರ ಪ್ರಶಸ್ತಿ ಪ್ರದಾನ ಮಾಡಿದರು. ಬೈಂದೂರು ರೋಟರಿ ಕ್ಲಬ್ ಪರವಾಗಿ ಅಧ್ಯಕ್ಷ ಪ್ರಸಾದ್ ಪ್ರಭು ಶಿರೂರು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ಉಪ್ಪುಂದ, ನಿಕಟಪೂರ್ವ ವಲಯ ಸೇನಾನಿ ಪ್ರವೀಣ್ ಕುಮಾರ್ ಶೆಟ್ಟಿ, ಸುಧಾಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬರ ಆತಂಕದ ನಡುವೆಯೂ ರೈತರು ಬೆಳೆದ ಎಂ.ಓ.4 ಭತ್ತದ ಕ್ವಿಂಟಲ್ಗೆ ಮೂರು ಸಾವಿರ ಬೆಂಬಲ ಬೆಲೆ ಘೋಷಿಸಿ, ಸರಕಾರವೇ ಕೂಡಲೇ ಖರೀದಿಯನ್ನು ಪ್ರಾರಂಭಿಸಬೇಕು ಎಂದು ಉಡುಪಿ ಜಿಲ್ಲಾ ರೈತ ಸಂಘದ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಈ ಭಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆದರೆ ಕೆಲವೇ ತಾಲೂಕನ್ನು ಬರ ಪೀಡಿತ ತಾಲೂಕು ಪಟ್ಟಿಯಲ್ಲಿ ಸರ್ಕಾರ ಸೇರಿಸಿದೆ. ಇದರಿಂದ ನಮ್ಮ ಜಿಲ್ಲೆಯ ಹೆಚ್ಚಿನ ರೈತರು ಬರ ಪೀಡಿತ ತಾಲ್ಲೂಕುಗಳಿಗೆ ಸರ್ಕಾರ ನೀಡುವ ವಿಶೇಷ ಪ್ಯಾಕೇಜ್ ಗಳಿಂದ ವಂಚಿತರಾಗಿದ್ದಾರೆ. ಆದರೆ ಇಂತಹ ಕಠಿಣ ಪರಿಸ್ಥಿತಿಯಲ್ಲೂ ರೈತರು ಇಲ್ಲಿಯ ಪ್ರಮುಖ ಭತ್ತದ ತಳಿಯಾದ ಎಂ ಓ 4 ಭತ್ತವನ್ನು ಬೆಳೆದು ಉತ್ತಮ ಫಸಲನ್ನು ಪಡೆದಿದ್ದಾರೆ. ಈಗ ಕಟಾವು ಪ್ರಾರಂಭವಾಗಿದ್ದು ರೈತರಿಗೆ ಫಸಲನ್ನು ಶೇಖರಿಸಿಡಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೊಲದಿಂದಲೇ ಖಾಸಗಿಯವರಿಗೆ ಕಡಿಮೆ ಬೆಲೆಗೆ ನೇರ ಮಾರಾಟ ಮಾಡುತ್ತಿದ್ದಾರೆ. ಆದುದರಿಂದ ಸರ್ಕಾರ ಕೂಡಲೇ ಎಂ ಓ 4…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ನ. 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು. ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದರು. ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಜೊತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಬಾಲವಿಕಾಸ ಅಕಾಡೆಮಿಯ ವತಿಯಿಂದ ರಾಜ್ಯ, ರಾಷ್ಟç ಮತ್ತು ಅಂತರ್ ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ” ಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯ ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ನವೆಂಬರ್ 18 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ಇಲ್ಲಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://balavikasaacademy.karnataka.gov.in/ ಹಾಗೂ ದೂ.ಸಂ:0836-2461666 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ, ಕ್ರೈಸ್ತ್ ಶಾಲೆಗಳು ಹಾಗೂ ಆಶ್ರಮ ಶಾಲೆಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅವರು ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳ ಕೊಠಡಿ, ಅಡುಗೆ ಮನೆ, ಆಹಾರ ವಸ್ತುಗಳ ದಾಸ್ತಾನು ಕೇಂದ್ರ, ಸ್ನಾನಗೃಹ, ಶೌಚಾಲಯ, ವಿದ್ಯಾರ್ಥಿಗಳು ತಂಗುವ ಕೊಠಡಿ ಸೇರಿದಂತೆ ಅಲ್ಲಿನ ಸುತ್ತಮುತ್ತ ಪರಿಸರವನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಸತಿ ಗೃಹಗಳಲ್ಲಿ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಪೂರಕ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಹಾಸ್ಟೆಲ್ನ ಸಿಬ್ಬಂದಿ ಕೊರತೆ, ಸ್ವಚ್ಛತಾಗಾರರಿಗೆ ನೀಡುತ್ತಿರುವ ಸೇವಾ ಹಣವು ಮಾಸಿಕ 1,000 ಹಾಗೂ ಮಕ್ಕಳಿಗೆ ಸಂಜೆಯ ವೇಳೆಯಲ್ಲಿ ಟ್ಯೂಷನ್ ನೀಡುತ್ತಿರುವ ಅಂಶಕಾಲಿಕ ಬೋಧಕರಿಗೆ ನೀಡುತ್ತಿರುವ ಗೌರವ ಧನವು 1000 ರೂ. ಇರುವ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾನು ಕುಂದಾಪುರಕ್ಕೆ ಬಂದ ಮೊದಲಲ್ಲಿ ಹಿಂದಿ ಭಾಷೆ ಕಲಿಯಬೇಕೆಂದು ಬಯಸಿದ್ದೆ. ಆದರೆ ಇಲ್ಲಿ ಹಿಂದಿಗಿಂತ ಕನ್ನಡದ ಅಗತ್ಯತೆ ಹೆಚ್ಚಿದ್ದ ಕಾರಣ ಕನ್ನಡವನ್ನು ಕಲಿಯಲು ಮನಸ್ಸು ಮಾಡಿದೆ. ಅರ್ಥವಾಗದ ಮತ್ತು ಕಷ್ಟದ ಪದಗಳನ್ನು ಬರೆದಿಟ್ಟುಕೊಂಡು ಅದರ ಬಗ್ಗೆ ತಿಳಿದುಕೊಳ್ಳುತ್ತಿದ್ದೆ. ವ್ಯಾಕರಣಬದ್ದವಾಗಿ ಮಾತನಾಡಲು ಆಗದಿದ್ದರೂ ಇನ್ನೊಬ್ಬರಿಗೆ ಅರ್ಥವಾಗುವಷ್ಟರ ಮಟ್ಟಿಗೆ ಮಾತನಾಡಲು ಕಲಿತಿದ್ದೇನೆ ಎಂಬ ಹೆಮ್ಮೆ ನನಗಿದೆ ಎಂದು ನೆದರ್ಲ್ಯಾಂಡಿನಿಂದ ಬಂದು ಕಳೆದ 15 ವರ್ಷಗಳಿಂದ ಮಾನಸಜ್ಯೋತಿ ವಿಶೇಷ ಚೇತನ ಶಾಲೆಯಲ್ಲಿ ಸೇವೆಸಲ್ಲಿಸುತ್ತಿರುವ ಮಾರ್ಜೆ ವ್ಯಾನ್ ಡೆನ್ ಬ್ರಾಂಡ್ ಹೇಳಿದರು. ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ಹಮ್ಮಿಕೊಂಡಿರುವ ಕನ್ನಡ ರಾಜೋತ್ಸವ ಸಂಭ್ರಮದ ಕಾರ್ಯಕ್ರಮದಲ್ಲಿ ತನ್ನನ್ನು ಸನ್ಮಾನಿಸಿದ ಬಳಿಕ ಅವರು ಮಾತನಾಡಿ ಇದೊಂದು ಸುಂದರವಾದ ಮತ್ತು ಸುಲಭವಾದ ಭಾಷೆ ಆದ ಕಾರಣ ಕಲಿಯಲು ನನಗೇನು ಕಷ್ಟವೆನಿಸಲಿಲ್ಲ ಎಂದರು. ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ರವರು ಮಾರ್ಜೆಯವರು ಕನ್ನಡ ಕಲಿತದ್ದು ಅವರಿಗಷ್ಟೇ ಹೆಮ್ಮೆಯಲ್ಲ ನಮಗೂ ಕೂಡ ಹೆಮ್ಮೆ ತರುವಂತದ್ದು. ಇದೊಂದು ಅರ್ಥಪೂರ್ಣವಾದ ಕನ್ನಡದ ಕಾರ್ಯಕ್ರಮ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕದ ಸಾಂಸ್ಕೃತಿಕ ಭೂಪಟದಲ್ಲಿ ಐವತ್ತು ವರ್ಷಗಳ ಹಿಂದೆ ಕಾಣಿಸಿಕೊಂಡ ಸಮುದಾಯ ಸಾಂಸ್ಕೃತಿಕ ಸಂಘಟನೆಯು ತನ್ನ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯ ಭಾಗವಾಗಿ ಪ್ರತಿ ಮೂರು ವರ್ಷಗಳಿಗೊಮ್ಮೆ ರಾಜ್ಯ ಸಮ್ಮೇಳನವನ್ನು ನಡೆಸಲಾಗುತ್ತದೆ. ಈ ಬಾರಿಯ ೮ನೇ ರಾಜ್ಯ ಸಮ್ಮೇಳನವನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಡಿಸೆಂಬರ್ 16 ಮತ್ತು 17ರಂದು ವಡೇರಹೋಬಳಿಯಲ್ಲಿರುವ ’ಆಶೀರ್ವಾದ’ ಸಭಾಂಗಣದಲ್ಲಿ ನಡೆಸಲು ಉದ್ದೇಶಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ರಾಜಾರಾಂ ತಲ್ಲೂರು ಹೇಳಿದರು. ಅವರು ಕುಂದಾಪುರ ಪ್ರೆಸ್ಕ್ಲಬ್ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಈ ಬಾರಿಯ ರಾಜ್ಯ ಸಮ್ಮೇಳನದ ಕೇಂದ್ರ ಆಶಯವು ಸಮ್ಮೇಳನದ ಘನತೆಯ ಬದುಕು: ಸಾಂಸ್ಕೃತಿಕ ಮಧ್ಯಪ್ರವೇಶ ಎಂಬುದಾಗಿದೆ. ಮೊದಲ ದಿನವಾದ ಡಿಸೆಂಬರ್ 16 ರಂದು ಸಮ್ಮೇಳನದ ಉದ್ಘಾಟನಾ ಅಧಿವೇಶನವು ಜವಾಹರಲಾಲ ನೆಹರು ವಿಶ್ವವಿದ್ಯಾಲಯ, ದೆಹಲಿ ಇಲ್ಲಿನ ಕನ್ನಡ ಅಧ್ಯಯನ ಪೀಠದ ನಿವೃತ್ತ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಪ್ರೊ ಪುರುಷೋತ್ತಮ ಬಿಳಿಮಲೆ ಯವರ ನೇತೃತ್ವದ ತಾಳಮದ್ದಳೆಯ ಮೂಲಕ ಆರಂಭವಾಗಲಿದೆ. ಖ್ಯಾತ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೋಮತ್ತು ಉದಯೋನ್ಮುಖ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಜಿಲ್ಲೆ 3182 ವಲಯ 1ರ ಝೋನಲ್ ಕಲ್ಚರಲ್ ಮೀಟ್ ಕೋಟೇಶ್ವರದ ಸಹನಾ ಕನ್ವೆನ್ಶನ್ ಸೆಂಟರಿನಲ್ಲಿ ನಡೆಯಿತು. ವಿವಿಧ ಸಾಂಸ್ಕೃತಿಕ ಸ್ವರ್ಧೆಗಳಲ್ಲಿ ಗೆಲುವು ಸಾಧಿಸಿರುವುದಕ್ಕಾಗಿ ಬೈಂದೂರು ಕ್ಲಬ್ ಕಲ್ಚರಲ್ – ರನ್ನರ್ ಪ್ರಶಸ್ತಿಗೆ ಭಾಜನವಾಯಿತು. ವಲಯದ 8 ಕ್ಲಬ್’ಗಳು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಗುಂಪು ನೃತ್ಯ ವಿಭಾಗದಲ್ಲಿ ಪ್ರಥಮ, ಡ್ಯೂಯೆಟ್ ಸಾಂಗ್ನಲ್ಲಿ ಪ್ರಥಮ, ಭಾವಗೀತೆಯಲ್ಲಿ ಪೂರ್ಣಿಮಾ ಪೈ ಪ್ರಥಮ ಸ್ಥಾನಗಳನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು. ಏಕಪಾತ್ರಾಭಿನಯದಲ್ಲಿ ನಾಗೇಂದ್ರ ಬಂಕೇಶ್ವರ ಹಾಗೂ ಸೋಲೊ ಡಾನ್ಸ್ ನಲ್ಲಿ ನಿಧಿ ದ್ವಿತೀಯ ಸ್ಥಾನ ಪಡೆದರು. ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ವಿಜೇತರಿಗೆ ಪ್ರಶಸ್ತಿ ವಿತರಿಸಿದರು. ವೇದಿಕೆಯಲ್ಲಿ ವಲಯ 1ರ ಸಹಾಯಕ ಗವರ್ನರ್ ಡಾ.ಸಂದೀಪ್ ಶೆಟ್ಟಿ, ಜಿಲ್ಲಾ ಕಲ್ಚರಲ್ ಚೇರ್ಮನ್ ಗಣೇಶ್ ಶೆಟ್ಟಿ ಝೋನಲ್ ಕಲ್ಚರಲ್ ಕೊ- ಆರ್ಡಿನೇಟರ್ ಮಹೇಂದ್ರ ಶೆಟ್ಟಿ, ಖ್ಯಾತ ನಟಿಯರಾದ ನಿರೀಕ್ಷಾ ಶೆಟ್ಟಿ, ರಚನಾ ರೈ, ಝೋನಲ್ ಲೆಫ್ಟಿನೆಂಟ್ ಗಳಾದ ರಂಜಿತ್ ಕುಮಾರ್ ಶೆಟ್ಟಿ, ಡಾ.ಉತ್ತಮ್ ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ 48ನೇ ರಾಜ್ಯೋತ್ಸವ ತಾಳಮದ್ದಳೆ ಹಾಗೂ ಡಾ.ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಡಾ. ಪ್ರದೀಪ ವಿ ಸಾಮಗ ಅವರಿಗೆ 2023-24ನೇ ಸಾಲಿನ ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಪುರಸ್ಕಾರವನ್ನು ಸ್ವೀಕರಿಸಿದ ಡಾ. ಪ್ರದೀಪ ವಿ ಸಾಮಗ ಮಾತನಾಡಿ ಭಂಡಾರ್ಕಾರ್ಸ್ ಕಾಲೇಜು ನನಗೆ ಜೀವನವನ್ನು ಕಲಿಸಿದೆ. ಭಂಡಾರ್ಕಾರ್ಸ್ ಕಾಲೇಜು ನನ್ನನ್ನು ಯಕ್ಷಗಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಹೆಚ್ ಶಾಂತಾರಾಮ್ ವಹಿಸಿದ್ದರು. ಸಾಲಿಗ್ರಾಮ ಮೇಳದ ಯಜಮಾನರಾದ ಕಿಶನ್ ಹೆಗ್ಡೆ ಪಳ್ಳಿ ಅವರು ಅಭಿನಂದನಾ ಭಾಷಣ ಮಾಡಿದರು. ವೇದಿಕೆಯಲ್ಲಿ ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ಶಾಂತಾರಾಮ್ ಪ್ರಭು, ಕೆ.ದೇವದಾಸ್ ಕಾಮತ್ , ರಾಜೇಂದ್ರ ತೋಳಾರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ…
