ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರದ ರಸ್ತೆಯಲ್ಲಿ ಸಾಗುತ್ತಿದ್ದ ಬೊಲೆನೋ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ದ್ವಿಚಕ್ರ ವಾಹನ ಸವಾರ, ಕಾಳವಾರದ ನಿವಾಸಿ ನರಸಿಂಹ ಶೆಟ್ಟಿ (75) ಮೃತ ದುರ್ದೈವಿ. ಭಾನುವಾರ ಸಂಜೆ ವೇಳೆಗೆ ಕೋಟೇಶ್ವರ ಕಡೆಯಿಂದ ಹಾಲಾಡಿ ಮಾರ್ಗವಾಗಿ ತೆರಳುತ್ತಿದ್ದ ಬೊಲೆನೋ ಕಾರಿಗೆ ಶಾಲೆ ಸಮೀಪದ ಅಡ್ಡ ರಸ್ತೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಠಾತ್ತನೇ ಬ್ರೇಕ್ ಹಾಕಿದ್ದರಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲು ಕಂಬವನ್ನು ತುಂಡರಿಸಿ ಮುಂದೆ ಸಾಗಿ ದೇವಸ್ಥಾನದ ಕಂಬವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ನರಸಿಂಹ ಶೆಟ್ಟಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಜಡ್ಕಲ್ ಗ್ರಾಮದ ಮೆಕ್ಕೆ ಕೊಳಕೆಹೊಳೆ ಎಂಬಲ್ಲಿ ಜು.23ರಂದು ಮನೆಯಿಂದ ನಾಪತ್ತೆಯಾಗಿದ್ದ ಸುರೇಶ (28) ಎಂಬುವವರ ಮೃತದೇಹ ಶನಿವಾರ ಸಂಜೆ ಹೊಳೆಯಲ್ಲಿ ಪತ್ತೆಯಾಗಿದೆ. ಸುರೇಶ್ ಅವರು ಮನೆಯಿಂದ ಬಹಿರ್ದಸೆಗೆ ಹೋದ ಸಂದರ್ಭ ಕಳೆದ ವಾರ ವಿಪರೀತ ಮಳೆಯಿದ್ದರಿಂದ ತುಂಬಿ ಹರಿಯುವ ಹೊಳೆಗೆ ಬಿದ್ದು ಕೊಚ್ಚಿಹೋಗಿ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಕಾನ್ಕಿ ಹಾಸ್ಕಲ್ ಪಾರೆಯ ಮೆಕ್ಕೆ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲ್ಲೂರು ಠಾಣೆ ಪಿಎಸ್ಐಗಳಾದ ಜಯಶ್ರೀ, ಸುಧಾರಾಣಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ► ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ – https://kundapraa.com/?p=68085 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್ ಕುಮಾರನ [23] ಮೃತದೇಹ ಜಲಪಾತದ ಸುಮಾರು 100 ರಿಂದ 70ಮೀ ದೂರದಲ್ಲಿ ಪತ್ತೆಯಾಗಿದೆ. ಶರತ್ ಹಾಗೂ ಸ್ನೇಹಿತ ಗುರುರಾಜ ಜೊತೆಗೂಡಿ ಜು.23ರ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದರು. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ವೀಡೀಯೋ ಮಾಡಲು ಹೇಳಿ ಬಂಡೆಯ ಮೇಲೆ ನಿಂತಿದ್ದ ಶರತ್, ಕಾಲು ಜಾರಿ ಸೌಪರ್ಣಿಕ ನದಿಗೆ ಬಿದ್ದಿದ್ದು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದನು. ಈ ಘಟನೆ ಸ್ನೇಹಿತನ ಮೊಬೈಲಿನಲ್ಲಿಯೂ ಸೆರೆಯಾಗಿತ್ತು. ಘಟನೆಯ ಮಾಹಿತಿ ದೊರೆತ ಬಳಿಕ, ಪ್ರಕರಣ ದಾಖಲಿಸಿಕೊಂಡು ಕಳೆದೊಂದು ವಾರದಿಂದ ಕೊಲ್ಲೂರು ಠಾಣೆಯ ಪೊಲೀಸ್ ತಂಡ, ಅರಣ್ಯ ಇಲಾಖೆ ಸಿಬ್ಬಂದಿಗಳು, ಉಡುಪಿಯ ಎಸ್ಡಿಆರ್ಎಫ್ ತಂಡ, ಕುಂದಾಪುರ ಹಾಗೂ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಇವರಿಗೆ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ಸದಸ್ಯರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಬೈಲ್ ಟೆಲಿಗ್ರಾಮ್ ಆ್ಯಪ್ ಮೂಲಕ ಆನ್ಲೈನ್ ಬುಕ್ಕಿಂಗ್ ಬ್ಯುಸಿನೆಸ್ ಹೆಸರಿನಲ್ಲಿ ವಂಚನೆ ಎಸಗಿದ ಪ್ರಕರಣವೊಂದು ಕೋಟ ವ್ಯಾಪ್ತಿಯಲ್ಲಿ ನಡೆದಿದೆ. ಶ್ರುತಿ ರಾಘವೇಂದ್ರ ಎಂಬ ಟೆಲಿಗ್ರಾಂ ಖಾತೆಯಿಂದ ಮೇಕ್ ಮೈ ಟ್ರಿಪ್ ಸಂದೇಶದಡಿ ಆನ್ಲೈನ್ ಬುಕ್ಕಿಂಗ್ ಬ್ಯುಸಿನೆಸ್ ಎಂದು ನಂಬಿ ಸೇರಿದ್ದ ಕಾರ್ಕಡ ನಿವಾಸಿ ಎಂ.ಎನ್.ರಾಜು (44) ಒಟ್ಟು 23 ಲಕ್ಷ ರೂ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೇಕ್ ಮೈ ಟ್ರಿಪ್ ಪ್ರೊಫೈಲ್ ಪೇಜ್ ಮೂಲಕ ಕಸ್ಟಮರ್ ಆನ್ ಲೈನ್ ಆಓರ್ಡರ್ ಮಾಡಿದ್ದನ್ನು ಬುಕ್ಕಿಂಗ್ ಮಾಡಿ ಅದರ ಮೊತ್ತವನ್ನು ಪಾವತಿಸಿದರೆ ಒಟ್ಟು ಹಣ ಹಾಗೂ ಕಮಿಷನ್ ಸಂದಾಯವಾಗುವ ವ್ಯವಹಾರ ಎಂದು ನಂಬಿಸಲಾಗಿದೆ. ಹಂತ ಹಂತವಾಗಿ ಅದಕ್ಕಾಗಿ ಹಣ ಪಾವತಿಸಿದ್ದು, 30ನೇ ಟಾಸ್ಕ್ ಪೂರ್ಣಗೊಂಡ ಬಳಿಕ ಹಣ ಹಿಂದಿರುಗಿಸುವಂತೆ ಸಂಬಂಧಿತರಿಗೆ ಸಂದೇಶ ಕಳಹಿಸಿದಾಗ, ಅವರು ಸರಕಾರದ ನಿಯಮಾನುಸಾರ ಈಗಾಗಲೆ ಪಾವತಿಸಿದ ಹಣದ ಅರ್ಧದಷ್ಟು 16,05,231 ರೂ. ಮೊತ್ತ ಪಾವತಿ ಮಾಡಬೇಕು. ಇಲ್ಲದಿದ್ದಲ್ಲಿ ಹೂಡಿಕೆ ಮಾಡಿದ ಹಣ ಲ್ಯಾಪ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಆಶ್ರಯದಲ್ಲಿ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಯೋಧ ಟಿ.ದಿನಕರ ಶೆಣೈ ಅವರು ಕಾರ್ಗಿಲ್ ಕದನದ ಬಗ್ಗೆ ಹಾಗೂ ಕಾರ್ಗಿಲ್ ಪರಿಸ್ಥಿತಿ ಬಗ್ಗೆ ಮಾತನಾಡಿದರು. ಇದೇ ಸಂದರ್ಭ ನಿವೃತ್ತ ಯೋಧರಾದ ರತ್ನಾಕರ ಬೈಂದೂರು ಮತ್ತು ಟಿ.ದಿನಕರ ಶೆಣೈ ಅವರನ್ನು ಗೌರವಿಸಲಾಯಿತು. ಕಾರ್ಗಿಲ್ನಲ್ಲಿ ಹುತಾತ್ಮರಾದ ಯೋಧರಿಗಾಗಿ ದೀಪ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ಗಂಗೊಳ್ಳಿ ರೋಟರ್ಯಾಕ್ಟ್ ಕ್ಲಬ್ ಕಾರ್ಯದರ್ಶಿ ಕ್ಷಮಾ, ರೋಟರಿ ಮತ್ತು ರೋಟರ್ಯಾಕ್ಟ್ ಸದಸ್ಯರು ಉಪಸ್ಥಿತರಿದ್ದರು. ಎಂ. ನಾಗೇಂದ್ರ ಪೈ ಸ್ವಾಗತಿಸಿದರು. ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಕಾರ್ಯದರ್ಶಿ ಕೃಷ್ಣ ಪೂಜಾರಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕ ಅಧಿವೇಶನವೆಂದರೆ ಅದು ಬಜೆಟ್ ಅಧಿವೇಶನ. ಆದರೆ ಈ ಭಾರಿಯ ಬಜೆಟ್ ಅಧಿವೇಶನದಲ್ಲಿ ಉಡುಪಿ ಜಿಲ್ಲೆಯ ಶಾಸಕರುಗಳ ಸಾಧನೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ವಿರೋಧ ಪಕ್ಷದ ಶಾಸಕರಾದರೂ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸರ್ಕಾರಕ್ಕೆ ತಮ್ಮ ಕ್ಷೇತ್ರದ ಹಾಗೂ ಜಿಲ್ಲೆಯ ಅತೀ ಅವಶ್ಯಕತೆಗಳ ಬಗ್ಗೆ ಗಮನಕ್ಕೆ ತಂದು ಅದನ್ನು ಮುಖ್ಯಮಂತ್ರಿಗಳ ಬಜೆಟ್ ಮೇಲಿನ ವಂದನಾ ಭಾಷಣದಲ್ಲಿ ಸೇರಿಸುವಲ್ಲಿ ಶ್ರಮವಹಿಸುವುದು ಹಿಂದಿನಿಂದ ನಡೆದು ಬಂದ ಕ್ರಮ. ಆದರೆ ಜಿಲ್ಲೆಯ ಶಾಸಕರು ಬಜೆಟ್ ಅಧಿವೇಶನವನ್ನು ಕೇವಲ ಪ್ರಚಾರ ಹಾಗೂ ರಾಜಕಾರಣಕ್ಕೆ ಬಳಸಿಕೊಂಡದ್ದು ಅವರ ಕ್ಷೇತ್ರ ಹಾಗೂ ಜಿಲ್ಲೆಗೆ ಮಾಡಿದ ಅನ್ಯಾಯ. ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಸಕ್ರಿಯ ಭಾಗವಹಿಸುವುದರ ಮೂಲಕ ಸದನದ ನೀತಿ, ನಿಯಮಗಳನ್ನು ಕಲಿಯ ಬೇಕಾದ ನೂತನ ಶಾಸಕರುಗಳು ಅದನ್ನು ಮಾಡದೆ ಕಾಗದ ಪತ್ರಗಳನ್ನು ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ಪೀಠದ ಮೇಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ (Freshers day) ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಕುಂದಾಪುರದ ಮೊಗವೀರ ಭವನದಲ್ಲಿ ಆಯೋಜಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ.ಡಾ|ಆದರ್ಶ ಹೆಬ್ಬಾರ್ ಅವರು ಮಾತನಾಡಿ ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಬೇಕೆಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಬ್ರಹ್ಮಣ್ಯರವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರೀಕರಾಗಿ ಹೊರಹೊಮ್ಮಿ ಎಂದು ಶುಭ ಹಾರೈಸಿದರು. ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಛೇರಿಯಿಂದ ಮೂಲಕ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿ ತನಕ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದರು. ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿ ಬಳಿಯಿಂದ ಬನ್ನಂಜೆಯ ಎಸ್ಪಿ ಕಚೇರಿಯವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಯಿತು. ಇದೇ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಪ್ರಕರಣದಲ್ಲಿ ಪಿಎಫ್ಐ ನಂಟು ಇದೆ. ಪಿಎಫ್ಐ ನಿಷೇಧದ ನಂತರ ಪಿಎಫ್ಐ ಮಹಿಳಾ ಘಟಕ ಸಕ್ರಿಯವಾಗಿರುವ ಬಗ್ಗೆ ಅನುಮಾನವಿದೆ. ಈ ವಿದ್ಯಾರ್ಥಿನಿಯರು ಈ ಕಾರ್ಯಾಚರಣೆಯ ಭಾಗವಾಗಿರಬಹುದು. ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆಯ ಮೇಲೆ ನನಗೆ ವಿಶ್ವಾಸವಿಲ್ಲ. ಪ್ರಕರಣವನ್ನು ಕೇಂದ್ರ ಸರ್ಕಾರಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸಂಸ್ಕಾರ, ಸಂಸ್ಕೃತಿ ಪಸರಿಸುವ ವಿಶಿಷ್ಟ ಕಲೆ ಯಕ್ಷಗಾನ, ಸರಿ ತಪ್ಪುಗಳ ತರ್ಕಿಸುವ ಶಕ್ತಿ, ಪದಭಂಡಾರ ನಮಗೆ ಶಾಲಾ ಪಠ್ಯದಿಂದ ದೊರೆತದ್ದಲ್ಲ. ಅದೆಲ್ಲವೂ ಯಕ್ಷಗಾನದಿಂದಲೇ ಪಡೆದದ್ದು ಎಂದು ಹಿರಿಯ ಅರ್ಥವಾದಿ ಜಬ್ಬಾರ್ ಸಮೋ ಹೇಳಿದರು. ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪೂರ್ಣರಾತ್ರಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಯಕ್ಷ ಸಂಕ್ರಾಂತಿ ವತಿಯಿಂದ ‘ಗುರು ಸಮ್ಮಾನ ಸ್ವೀಕರಿಸಿ ಅವರು ಮಾತಾನಾಡಿದರು. ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುಗಾಜ ಗಂಟಿಹೊಳೆ ಅವರನ್ನು ಸನ್ಮಾನಿಸಲಾಯಿತು. ರಂಗಕರ್ಮಿ ಸೇತುರಾಂ ಎಸ್ಎನ್, ಜಬ್ಬಾರ್ ಸಮೋ, ಟಿ. ಶಿವಾನಂದ ಶೆಟ್ಟಿ, ದೀಪಕ್ ಶೆಟ್ಟಿ ಬಾರ್ಕೂರು, ಗೋವಿಂದ ಬಾಬು ಪೂಜಾರಿ, ರಘುರಾಮ ಶೆಟ್ಟಿ ಎಳ್ಮುಡಿ, ಪ್ರವೀಣ್ ಕುಮಾರ್ ಶೆಟ್ಟಿ, ಅಶ್ವಥ್ ಹೆಗ್ಡೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ‘ಕೃಷ್ಣ ಸಂಧಾನ’ ಹಾಗೂ ಕರ್ಣಾರ್ಜುನ ಎಂಬ ಅಖ್ಯಾನಗಳ ಯಕ್ಷಗಾನ ತಾಳಮದ್ದಳೆ ಜರುಗಿತು. ತಾಳಮದ್ದಳೆಗಾಗಿ ಬೆಂಗಳೂರಿನಲ್ಲಿ ಸಭಾಂಗಣ ತುಂಬಿದ್ದು ವಿಶೇಷವಾಗಿತ್ತು. ಸಂಘಟಕ ನಾಗರಾಜ್ ಶೆಟ್ಟಿ ನೈಕಂಬ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರೇಶ ನಂದ್ರೊಳ್ಳಿ ವಂದಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾಲೇಜಿನಲ್ಲಿ ಖಾಸಗಿ ವೀಡಿಯೋ ಸೆರೆಯಾಗಿರುವ ಪ್ರಕರಣಕ್ಕೆ ಸಂಭಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಉಡುಪಿಯ ಖಾಸಗಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದು, ಈಗಲೇ ಏನನ್ನು ಹೇಳಲು ಸಾಧ್ಯವಿಲ್ಲ ಅಥವಾ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಯಾವುದೇ ವದಂತಿಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ ಎಂದರು. ಮಾಧ್ಯಮದವರಿಗೂ ಚಾಟಿ ಬೀಸಿದ ಖುಷ್ಬೂಅವರು, ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ. ಇನ್ನು ನಮಗೆ ನಮ್ಮ ಕೆಲಸ ಮಾಡಲು ಬಿಡಿ. ಎನ್ ಸಿಡಬ್ಲ್ಯೂ ಪರವಾಗಿ ನಾನು ಬಂದಿದ್ದೇನೆ. ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಎಲ್ಲವನ್ನೂಮೊದಲೇ…
