ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟçಕವಿ ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುವೆಂಪು ಒಬ್ಬ ಶ್ರೇಷ್ಠ ಕವಿ. ಅವರು ತಮ್ಮ ಆಲೋಚನೆಗಳನ್ನು ಸಾಹಿತ್ಯ ಹಾಗೂ ಕೃತಿಗಳ ಮೂಲಕ ಸಮಾಜಕ್ಕೆ ನೀಡಿದ್ದು, ಅವರ ಈ ಬರಹಗಳು ಹಲವಾರು ಸಾಮಾಜಿಕ ಸುಧಾರಣೆ ತಂದಿದೆ ದುಂದು ವೆಚ್ಚ ಮಾಡದೇ ಮದುವೆ ನಡೆಸುವ ಸಲುವಾಗಿ ಪ್ರಪಂಚಕ್ಕೆ ಮಂತ್ರಮಾಂಗಲ್ಯ ಪರಿಚಯಿಸಿದ್ದಾರೆ. ಕುವೆಂಪು ಅವರು ರಚಿಸಿದ ನಾಡಗೀತೆಯನ್ನು ದಿನನಿತ್ಯ ಹಾಡುವ ಮೂಲಕ ಪ್ರತಿದಿನ ಅವರನ್ನು ನಾವು ನೆನೆಯುತ್ತಿದ್ದೇವೆ. ಸಾಹಿತ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಬದುಕಿನ ಯಶಸ್ಸು ಪಂಚ ’ವ’ ಕಾರಗಳಲ್ಲಿ ಅಡಗಿದೆ’ ಎಂದು ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೊಸ ವಿದ್ಯಾರ್ಥಿಗಳ ಸ್ವಾಗತ ’ಪರಿಚಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ’ವಪು (ದೇಹ), ವಸ್ತ್ರ, ವಿದ್ಯೆ, ವಿನಯ, ವಾಕ್ (ಮಾತುಗಾರಿಕೆ) ಎಂಬ ಐದು ವಕಾರಗಳು ಪಂಚಸೂತ್ರಗಳಾಗಿವೆ’ ಎಂದು ವಿವರಿಸಿದ ಅವರು, ’ಪತ್ರಿಕೋದ್ಯಮ ವಿದ್ಯಾರ್ಥಿಗಳೂ ಪತ್ರಿಕಾ ಧiವನ್ನು ಪಾಲಿಸಬೇಕು. ಉತ್ತಮ ಪತ್ರಕರ್ತರಾಗಲು ಪ್ರಯತ್ನಿಸಬೇಕು’ ಎಂದರು. ’ಪ್ರತಿ ವ್ಯಕ್ತಿಯ ಜೀವನದಲ್ಲಿ ತಾಯಿ, ತಾಯಿನಾಡು, ತಾಯಿಭಾಷೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಗುರು ಬಹುಮುಖ್ಯ. ಇವುಗಳ ಅರಿವು ಬದುಕಿನ ಉನ್ನತಿಗೆ ಕಾರಣವಾಗುತ್ತವೆ’ ಎಂದರು. ’ಯಾವಾಗಲೂ ಆಂತರ್ಯದಲ್ಲಿ ವಿನಯವನ್ನು ಹೊಂದಿದ ವ್ಯಕ್ತಿಯೇ ಸಮಾಜದಲ್ಲಿ ಜಯಿಸುತ್ತಾನೆ. ಅಹಂ ಹೊಂದಿದ ವ್ಯಕ್ತಿಯು ವಿನಯವಂತಿಕೆಯನ್ನು ನಟಿಸಿದರೂ ಪ್ರಯೋಜನ ಆಗದು. ಅದು ಮನಸ್ಸಿನ ಅಂತರಾಳದಿಂದ ಬರಬೇಕು’ ಎಂದರು. ’ಎಲ್ಲರನ್ನೂ ಪ್ರೀತಿ- ಸಮಾನತೆಯಿಂದ ಕಾಣುವ, ಗೌರವಿಸುವ ವ್ಯಕ್ತಿತ್ವ ರೂಢಿಸಿಕೊಳ್ಳಿ. ನಿಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ರಿಕೆಟ್, ಕಬ್ಬಡಿ ಮೊದಲಾದ ಕ್ರೀಡೆಗಳತ್ತ ಕ್ರೀಡಾಪಟುಗಳು ಒಲವು ತೋರುತ್ತಿದ್ದಾರೆ. ವಾಲಿಬಾಲ್ ಮತ್ತಿತರ ಪಂದ್ಯಗಳನ್ನು ಆಡಲು ಕ್ರೀಡಾಪಟುಗಳು ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. ಯುವ ಜನರು ವಾಲಿಬಾಲ್ ಪಂದ್ಯಾಟಗಳಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು. ಈ ಮೂಲಕ ಈ ಕ್ರೀಡೆಯನ್ನು ಉಳಿಸುವ ಪ್ರಯತ್ನ ನಡೆಸಬೇಕು ಎಂದು ಹಿರಿಯ ವಾಲಿಬಾಲ್ ಆಟಗಾರ ರಾಜೇಶ ಕಾವೇರಿ ಕುಂದಾಪುರ ಹೇಳಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ೪೮ನೇ ವಾರ್ಷಿಕೋತ್ಸವದ ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಆಯೋಜಿಸಲಾಗಿದ್ದ 18 ವರ್ಷ ವಯೋಮಿತಿಯ ಮುಕ್ತ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿ, ಕೆಲಸ ಮಾಡುತ್ತಿದ್ದು, ಯುವ ಕ್ರೀಡಾಪಟುಗಳನ್ನು ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ 48 ವರ್ಷಗಳಿಂದ ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಉಪಯೋಗವಾಗುವಂತಹ ಉತ್ತೇಜಿಸುವ ದೃಷ್ಟಿಯಿಂದ 18 ವರ್ಷ ವಯೋಮಿತಿಯ ವಾಲಿಬಾಲ್ ಪಂದ್ಯಾಟ ಆಯೋಜಿಸುವುದು ಸ್ತುತ್ಯಾರ್ಹವಾದುದು ಎಂದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸೊಸೈಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ದೇಶದ ಮೇಲೆ ಅದೆಷ್ಟೋ ಆಕ್ರಮಣಗಳು ನಡೆದಿದ್ದರೂ ನಮ್ಮ ದೇಶದ ಸಂಸ್ಕೃತಿ ಪರಂಪರೆ ಗಟ್ಟಿಯಾಗಿ ಉಳಿದಿದೆ. ಧರ್ಮ ಮತ್ತು ಸಂಸ್ಕೃತಿಯ ಭದ್ರ ತಳಹದಿಯ ಮೇಲೆ ನಮ್ಮ ದೇಶ ಸದೃಢವಾಗಿ ನಿಂತಿದ್ದು, ಜಗತ್ತಿನ ಎಲ್ಲಾ ರಾಷ್ಟ್ರಗಳು ನಮ್ಮ ಭಾರತ ದೇಶವನ್ನು ಎದುರು ನೋಡುತ್ತಿದೆ. ಮಾತೆಯನ್ನು ಪೂಜಿಸಿ ಗೌರವಿಸುವ ನಮ್ಮ ನಾಡು ಅತ್ಯಂತ ಶ್ರೇಷ್ಠವಾಗಿದ್ದು, ಪುಟ್ಟ ಮಕ್ಕಳಲ್ಲಿ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವ ದೃಷ್ಟಿಯಿಂದ ಅಜಿತ್ ಕುಮಾರರು ಶಿಶು ಮಂದಿರವನ್ನು ಪ್ರಾರಂಭಿಸಿದ್ದರು. ಇದರ ಫಲವಾಗಿ ಇಂದು ಸಹಸ್ರಾರು ಮಕ್ಕಳು ಸಂಸ್ಕಾರವಂತರಾಗಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸುವಲ್ಲಿ ಸಹಕಾರಿಯಾಗಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ನ ವಿಶ್ವಸ್ಥ ಪ್ರಮೋದ ಮಂದಾರ್ತಿ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಮತ್ತು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಹಾಗೂ ಇಂದುಶ್ರೀ ಮಹಿಳಾ ಮಂಡಲ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂ.ಐ.ಇ.ಎಫ್ ವತಿಯಿಂದ ರ್ಯಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕೋಡಿ ಇಲ್ಲಿ ಎಸ್. ಎಸ್ . ಎಲ್.ಸಿ ವಿದ್ಯಾರ್ಥಿಗಳ ತರಬೇತಿ ಕಾರ್ಯಾಗಾರ ಶಾಲಾ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಹಿರಿಯ ಉಪನ್ಯಾಸಕರಾದ ಡಯಟ್ ಉಡುಪಿ, ಡಾ. ಅಶೋಕ್ ಕಾಮತ್ ಅವರು ಉದ್ಘಾಟಿಸಿ ಬಳಿಕ ಮಾತನಾಡಿ, “ಮಾಡುವ ಕೆಲಸವನ್ನು ಮೊದಲ ಬಾರಿಗೆ ಚೆನ್ನಾಗಿ ಮಾಡು “ಎನ್ನುವ ವಿಶಿಷ್ಟ ಆಲೋಚನೆಯನ್ನು ವಿದ್ಯಾರ್ಥಿಗಳ ಮನಸ್ಸಿಗೆ ಮುಟ್ಟುವಂತೆ ಪರೀಕ್ಷೆಯ ಸಿದ್ಧತೆಯ ಕುರಿತಾದ ಕಿವಿ ಮಾತನ್ನು ಹೇಳಿದರು. ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಝೋನಿನ ಕುಂದಾಪುರ ವಲಯದ (ರಾಮ್ಸನ್ ಸ್ಕೂಲ್ ಕಂಡ್ಲೂರ್, ಸೈಂಟ್ ಜೋಸೆಫ್ ಹೈ ಸ್ಕೂಲ್ ಕುಂದಾಪುರ, ಸೈಂಟ್ ಮೇರೀಸ್ ಸ್ಕೂಲ್ ಕುಂದಾಪುರ, ಸರಕಾರಿ ಪ್ರೌಢ ಶಾಲೆ ಬಸ್ರೂರು, ಎಸ್.ಎಲ್.ಬಿ.ಎಂ.ಆರ್. ಕೆ. ಎಚ್. ಸರಕಾರಿ ಪ್ರೌಢ ಶಾಲೆ ಬೀಜಾಡಿ, ಹಾಜಿ ಕೆ. ಮೊಹಿದ್ದೀನ್ ಸ್ಮಾರಕ ಅನುದಾನಿತ ಪ್ರೌಢ ಶಾಲೆ ಕೋಡಿ, ಝಿಯಾ ಪಬ್ಲಿಕ್ ಸ್ಕೂಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಸ್ವಿಗ್ಗಿ, ಜ್ಹೊಮ್ಯಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೇಜಾನ್, ಬಿಗ್ ಬಾಸ್ಕೆಟ್, ಪ್ಲಿಪ್ ಕಾರ್ಟ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಡೆಲಿವರಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರುಗಳು ಸರಕು ಸೇವೆಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ವಾಹನಗಳಲ್ಲಿ ವಿತರಿಸುವ ಸಂದರ್ಭದಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಇದ್ದು, ಅಪಘಾತದಿಂದ ಮರಣ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಅವರು ಹಾಗೂ ಅವರ ಅವಲಂಬಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಇಂತಹ ಸಂದರ್ಭದಲ್ಲಿ ಗಿಗ್ ಕಾರ್ಮಿಕರುಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಠಿಯಿಂದ ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ನೊಂದಾಯಿಸಿದ ಫಲಾನುಭವಿಗಳು ಅಪಘಾತದಿಂದ ಉಂಟಾಗುವ ಮರಣ, ಸಂಪೂರ್ಣ ಶಾಶ್ವತ/ ಭಾಗಶಃ ದುರ್ಬಲತೆಗೆ ಹಾಗೂ ತಾತ್ಕಾಲಿಕ ದುರ್ಬಲತೆಗೆ ಕಾನೂನು ಬದ್ಧ ವಾರಸುದಾರರಿಗೆ ಅಥವಾ ಫಲಾನುಭವಿಗೆ ವಿಮಾ ಮೊತ್ತ ದೊರೆಯಲಿದೆ. ಜಿಲ್ಲೆಯ 18 ರಿಂದ 60 ವರ್ಷದೊಳಗಿನ ಎಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಹಿಳೆಯರ ಹಾಗೂ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಹಾಗೂ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ 102 ಕ್ರೀಡಾಪಟುಗಳಿಗೆ ಆಳ್ವಾಸ್ ಕಾಲೇಜಿನಲ್ಲಿ ಜರ್ಸಿ ವಿತರಿಸಲಾಯಿತು. ಅಥ್ಲೆಟಿಕ್ಸ್ 72ರ ಪೈಕಿ 59 ಹಾಗೂ ಖೋ ಖೋ 30ರ ಪೈಕಿ 23 ಸೇರಿದಂತೆ 82 ಕ್ರೀಡಾಪಟುಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ತಮಿಳುನಾಡಿನಲ್ಲಿ ನಡೆಯಲಿರುವ ಪುರುಷರ ರಾಷ್ಟಿçÃಯ ಮಟ್ಟದ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ 39 ಸ್ಪರ್ಧಿಗಳು ಪಾಲ್ಗೊಳ್ಳಲಿದ್ದು, ಈ ಪೈಕಿ 33 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಒಡಿಶಾದಲ್ಲಿ ನಡೆಯಲಿರುವ ಮಹಿಳೆಯರ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ 33 ವಿದ್ಯಾರ್ಥಿನಿಯರು ಪಾಲ್ಗೊಳ್ಳಲಿದ್ದು, 26 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು. ಪುರುಷರ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್ಶಿಪ್ ಕೇರಳದ ಕಲ್ಲಿಕೋಟೆಯಲ್ಲಿ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾಲಯ ತಂಡದ 15…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಡಿ ಸತತ 90 ನೇ ತಿಂಗಳ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಗೋವಿಂದ ಗಾಣಿಗ, ಬೀಜಮಕ್ಕಿ ಅವರನ್ನು ಸನ್ಮಾನಿಸಿ ಆರ್ಥಿಕ ಸಹಾಯ ನೀಡಲಾಯಿತು. ಫಣಿಗಿರಿ ಪ್ರತಿಷ್ಠಾನ ಶಿರೂರು ಇದರ ಅಧ್ಯಕ್ಷ ಉಮೇಶ್ ಶಿರೂರು, ವಾಸುದೇವ ಶ್ಯಾನುಭಾಗ್, ನಾಗೇಶ್ ಶೆಣೈ , ಗಿರೀಶ್ ನಾಗೇಶ್ ಪ್ರಭು, ನಾಗೇಶ್ ಶ್ಯಾನುಭಾಗ್, ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಹಾಗೂ ಯಕ್ಷಗಾನ ಕಲಾವಿದ ನಾಗೇಂದ್ರ ಗಾಣಿಗ ಬೀಜಮಕ್ಕಿ ಯವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತಧಿಕಾರಿಯಾಗಿ ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್. ಆರ್. ಯವರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಈ ವೇಳ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಆಡಳಿತಾಧಿಕಾರಿಯವರನ್ನು ದೇವಳದ ಪರವಾಗಿ ಸನ್ಮಾನಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣೀ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಅರ್ಹ 2023 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದದೇ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈ ಯೋಜನೆಯನ್ನು ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ, ರಾಜ್ಯದಲ್ಲಿ ವಾಸವಾಗಿರುವವರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ಪ್ರತೀ ತಿಂಗಳು 3000 ರೂ., ಡಿಪ್ಲೋಮಾ…
