Author: ನ್ಯೂಸ್ ಬ್ಯೂರೋ

18ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಕೋ. ಶಿವಾನಂದ ಕಾರಂತ ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಾವು ಕನ್ನಡಿಗರಾಗಿ ಎಂದಿಗೂ ಕನ್ನಡ ದುರ್ಬಲವಾಗಲು ಬಿಡಬಾರದು. ಯಾವ ಮಾಧ್ಯಮದಲ್ಲಿ ಮಕ್ಕಳು ಕಲಿತರೂ ಯಾವ ರಾಜ್ಯ, ದೇಶದಲ್ಲಿ ವಾಸಿಸುತ್ತಿದ್ದರೂ ಮಾತೃಭಾಷೆ ಮರೆಯಬಾರದು. ಅದರಲ್ಲೂ ನಮ್ಮ ಕುಂದ ಕನ್ನಡ ಭಾಷೆ ಅಪೂರ್ವವಾದುದು. ಕುಂದಾಪುರ ಕನ್ನಡ ಬೆಳವಣಿಗೆಯಲ್ಲಿ ಯುವ ಜನರು ಆಸಕ್ತಿ ವಹಿಸುತ್ತಿರುವುದು ಸಂತಸದ ವಿಷಯ ಎಂದು ಸಾಹಿತಿ, ಅಂಕಣಕಾರ ಕೋ.ಶಿವಾನಂದ ಕಾರಂತ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಚ್.ವಿಠಲ ಶೆಣೈ ಸಭಾಂಗಣದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ವೇದಿಕೆಯಲ್ಲಿ ಭಾನುವಾರ ಜರಗಿದ ಕುಂದಾಪುರ ತಾಲೂಕು ೧೮ನೇ ಕನ್ನಡ ಸಾಹಿತ್ಯ ಸಮ್ಮೇಳನ-೨೦೨೩ ‘ಗಂಗಾವಳಿ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಪಾರ ಸಾಹಿತ್ಯಿಕ, ಸಾಂಸ್ಕೃತಿಕ ಸಂಪತ್ತು ಹೊಂದಿರುವ ೩೦೦ಕ್ಕೂ ಹೆಚ್ಚು ಗ್ರಾಮ, ೨೫ ಲಕ್ಷಕ್ಕೂ ಹೆಚ್ಚು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಸಂಭ್ರಮದಿಂದ ನಡೆಯಿತು. ಮಹಾಶಿವರಾತ್ರಿ ಉತ್ಸವದ ಪ್ರಯುಕ್ತ ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್ ಇವರ ನೇತೃತ್ವದಲ್ಲಿ ದೇವರಿಗೆ ಬಿಲ್ವಾರ್ಚನೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ರಾತ್ರಿ ವಿಶೇಷವಾಗಿ ಲಕ್ಷ ಬಿಲ್ವಾರ್ಚನೆ ಸೇವೆ ನಡೆಯಿತು . ಉತ್ಸವದ ಪ್ರಯುಕ್ತ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳು ಆಗಮಿಸಿದ್ದು, ರಥಬೀದಿಯ ಉದ್ದಗಲಕ್ಕೂ ಹಬ್ಬದ ವಾತಾವರಣ ನಿರ್ಮಾಣವಾಯಿತು. ದೇವಸ್ಥಾನ ಹಾಗೂ ರಥಬೀದಿಯಲ್ಲಿ ವಿಶೇಷವಾದ ವಿದ್ಯುತ್ ಅಲಂಕಾರ, ಹೂವಿನ ಅಲಂಕಾರ, ಮಧ್ಯಾಹ್ನ ಮತ್ತು ಸಂಜೆ ಎರಡು ಹೊತ್ತು ಫಲಹಾರದ ವ್ಯವಸ್ಥೆ ಮಾಡಲಾಗಿತ್ತು. ಸಾಗರೋಪಾದಿಯಾಗಿ ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವರ ಪ್ರಸಾದವನ್ನು ಸ್ವೀಕರಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ ಐತಾಳ್ ಮಹಾಶಿವರಾತ್ರೋತ್ಸವು ಅದ್ದೂರಿಯಾಗಿ ನಡೆಯಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ತಿಳಿಸಿದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಯ್ ಪೂಜಾರಿ ಕೊಡೇರಿ, ಮಂಜುನಾಥ ಪಿ. ಗಂಗೇಬೈಲು, ಲಕ್ಷ್ಮಣ್ ದೇವಾಡಿಗ ಆಕಳಬೈಲು, ಮಂಜುನಾಥ ಬೈಪಾಸ್, ಗ್ರಾಪಂ ಸದಸ್ಯರಾದ ರಮೇಶ್ ಖಾರ್ವಿ, ಮಹೇಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೋವಿಡ್ ಸಂಕಷ್ಟದ ಕಾಲದಲ್ಲಿ, ಪ್ರಾಕೃತಿಕ ಅವಘಡ ನಡೆದಾಗ ಕರ್ನಾಟಕ ಜನತೆಯ ನೆರವಿಗೆ ಬಾರದ ಬಿಜೆಪಿ ಕೇಂದ್ರ ನಾಯಕರು ಚುನಾವಣೆ ಬಂದಾಗ ದಂಡಿಯಾಗಿ ಬರುತ್ತಿದ್ದಾರೆ. ಬಡವರ ಮನೆಯ ಮಕ್ಕಳನ್ನು ಧರ್ಮ ಸಂಘರ್ಷಕ್ಕೆ ನೂಕಿ ಆಟವಾಡುತ್ತಿದ್ದಾರೆ. ಕಮಿಷನ್ ವ್ಯವಹಾರದಲ್ಲಿ ಮುಳುಗಿರುವುದೇ ಕಳೆದ ನಾಲ್ಕು ವರ್ಷದ ಬಿಜೆಪಿ ಸರಕಾರದ ಸಾಧನೆಯೇ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಕುಟುಕಿದರು. ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಭಾನುವಾರ ಯಡ್ತರೆಯಲ್ಲಿ ಆಯೋಜಿಸಲಾದ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸೂತ್ರದ ಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಕರ ನೇಮಕಾತಿ, ಅಭಿವೃದ್ಧಿ ಕಾಮಗಾರಿಯಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ ಯಥೇಚ್ಛವಾಗಿ ನಡೆದಿದೆ. ವಿಜಯಸಂಕಲ್ಪ ಯಾತ್ರೆ ಮಾಡಿರುವುದು ಭ್ರಷ್ಟಾಚಾರದಲ್ಲಿ ಸಾಧನೆ ಮಾಡಿದ್ದಕ್ಕಾಗಿಯೇ? ಎಂದು ಪ್ರಶ್ನಿಸಿದರು. ಜನರ ಸಮಸ್ಯೆಗಳ ಬಗ್ಗೆ ಮಾತನಾಡುವ ಬದಲಿಗೆ ಲವ್ ಜಿಹಾದ್, ಧರ್ಮ ಸಂಘರ್ಷದ ಬಗ್ಗೆ ಮಾತನಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಇನ್ನರ್ ವೀಲ್ ಕ್ಲಬ್ ನ 25ನೇ ವರ್ಷದ ವಾರ್ಷಿಕೋತ್ಸವ ಹಾಗೂ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ ಇತ್ತೀಚಿಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜರುಗಿತು. ಬೈಂದೂರು ಇನ್ನರ್ ವೀಲ್ ಕ್ಲಬ್ ಗೆ ಭೇಟಿ ನೀಡಿದ ಇನ್ನರ್ ವೀಲ್ ಕ್ಲಬ್ 318 ಇದರ ಜಿಲ್ಲಾ ಚೇರ್ಮನ್ ಕವಿತಾ ನಿಯಾತ್ ಕ್ಲಬ್ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೈಂದೂರು ಇನ್ನರ್ವೀಲ್ ಕ್ಲಬ್ ಚಾರ್ಟರ್ ಸ್ಥಾಪಕ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ ಹಾಗೂ ಕ್ಲಬ್ಬಿನ ಅಧ್ಯಕ್ಷೆ ಭಾನುಮತಿ ಜಯಾನಂದ್ ಬಿ. ಕೆ. ಕಾರ್ಯದರ್ಶಿ ಪಿಂಕಿ ಮೋಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೈಂದೂರು ಇನ್ನರ್ ವೀಲ್ ಕ್ಲಬ್ ನ ಮಾತೃ ಸಂಸ್ಥೆ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಎಚ್. ಉದಯ ಆಚಾರ್ ಶುಭಹಾರೈಸಿದರು. ಡಿಸ್ಟಿಕ್ ಚೇರ್ಮೆನ್ ಕವಿತಾನಿಯತ್ ಬೈಂದೂರಿನ ಜನತಾ ಹೈಸ್ಕೂಲ್ನಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ನೀಡಿದ ಸ್ಯಾನಿಟರಿ ತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆ ಮಾಡಲಾಯಿತು. ಬೈಂದೂರಿನ ಜೂನಿಯರ್ ಕಾಲೇಜಿಗೆ ವೀಲ್ ಚೇರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬಹ್ಮಾವರ: ತಾಲ್ಲೂಕಿನ ಕೆಂಜೂರು ಗ್ರಾಮದ ಕಲ್ಲುಗುಡ್ಡೆಯ ದಿನಕರ ಕೆಂಜೂರು ಅವರ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗೂ ಕುಲಪತಿಗಳು ಪ್ರೊ. ಪಿ.ಎಸ್. ಯಡಪಡಿತ್ತಾಯ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಾಲೇಜ್ ಮ್ಯಾನೇಜ್ಮೆಂಟ್ ಪಾಲಿಸೀಸ್ ಎಂಡ್ ಪ್ರಾಕ್ಟಿಸಸ್: ಎ ಸ್ಟಡಿ ವಿದ್ ರೆಪರೆನ್ಸ್ ಟು ಕಂಪ್ಯೂಟರ್ ಸ್ವಾಪ್ಟವೇರ್ ಎಂಡ್ ಸರ್ವಿಸಸ್ ಕಂಪೆನೀಸ್ ಇನ್ ಕರ್ನಾಟಕ” ಎಂಬ ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಡಾ. ದಿನಕರ ಕೆಂಜೂರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕರ್ನಾಟಕ ರಾಜ್ಯದ ಅಂಚೀಕೃತ ಬುಡಕಟ್ಟು ಸಮುದಾಯವಾದ ಕೊರಗ ಸಮುದಾಯದಲ್ಲಿ ಡಾಕ್ಟರೇಟ್ ಪಡೆದ ಮೂರನೇಯವರಾಗಿದ್ದು ವಿಕಲಚೇತನ ವ್ಯಕ್ತಿಯಾಗಿರುತ್ತಾರೆ. ಅವರು ಸುಕ್ರ ಕೊರಗ ಕೆಂಜೂರು ಮತ್ತು ದಿ. ಶಾಂತ ಕೆಂಜೂರು ರವರ ಪುತ್ರರಾಗಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ನಡೆಯಿತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, ಶಿವನಾಮ ಪಾರಾಯಣದಿಂದ ಪುನಿತರಾದರು. ಶಿವರಾತ್ರಿ ಉಪವಾಸವನ್ನು ಕೈಗೊಂಡು ಕೃತಾರ್ಥರಾದರು. ಕುಂದಾಪುರ ತಾಲೂಕಿನ ಪಂಚ ಶಂಕರನಾರಾಯಣ ಕ್ಷೇತ್ರಗಳಾದ ಕ್ರೋಢ ಶ್ರೀ ಶಂಕರನಾರಾಯಣ, ಸಿದ್ದಾಪುರ ಸಮೀಪದ ಹೊಳೆ ಶಂಕರನಾರಾಯ, ಅಮಾಸೆಬೈಲು ಸಮೀಪದ ಮಾಂಡವಿ ಶಂಕರನಾರಾಯಣ, ಬೆಳ್ವೆ ಗ್ರಾಮದ ಬೆಳ್ವೆ ಶಂಕರನಾರಾಯಣ, ಅವರ್ಸೆ ಗ್ರಾಮದ ಆವರ್ಸೆ ಶಂಕರನಾರಾಯಣ. ಕೋಟೇಶ್ವರ ಕೋಟಿಲಿಂಗೇಶ್ವರ ದೇಗುಲ, ಕುಂದಾಪುರ ಕುಂದೇಶ್ವರ ದೇವಸ್ಥಾನ, ಕೆದೂರು ಮಹಾಲಿಂಗೇಶ್ವರ ದೇವಸ್ಥಾನ, ಬೇಳೂರು ದೇಲಟ್ಟು ಮಹಾಲಿಂಗೇಶ್ವರ ದೇವಸ್ಥಾನ, ಬೇಳೂರು ಮಹಾಲಿಂಗೇಶ್ವರ ದೇವಸ್ಥಾನ, ಕುಂದಾಪುರ ಮೈಲಾರೇಶ್ವರ ದೇವಸ್ಥಾನ, ಮರಾತೂರು ಮಹಾಲಿಂಗೇಶ್ವರ ದೇವಸ್ಥಾನ, ಯಡಾಡಿ ಮಹಾಲಿಂಗೇಶ್ವರ ದೇವಸ್ಥಾನ, ಶಾನಾಡಿ ಬೆಳಗೋಡು ಮಹಾಲಿಂಗೇಶ್ವರ ದೇವಸ್ಥಾನ, ಉಳ್ತೂರುಮಹಾಲಿಂಗೇಶ್ವರ ದೇವಸ್ಥಾನ, ಕುಂಭಾಸಿ ಮಹಾಲಿಂಗೇಶ್ವರ ದೇಗುಲ, ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನ, ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಮೂಡುಗಲ್ಲು ಶ್ರೀ ಕೇಶವನಾಥ ದೇವಾಲಯ, ಹಿಲ್ಕೋಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಫೆ.20ರ ಮಧ್ಯಾಹ್ನ 2:30ಕ್ಕೆ ಮುಳ್ಳಿಕಟ್ಟೆಯ ನಗುಸಿಟಿಯಲ್ಲಿ ಜರುಗಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಬೈಂದೂರಿನಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ ಮಹತ್ವಪೂರ್ಣವಾಗಿದೆ. ಅವರು ಚುನಾವಣೆಗೆ ಮಾರ್ಗದರ್ಶನ ಹಾಗೂ ಹೊಸ ದಿಕ್ಸೂಚಿ ನೀಡಲಿದ್ದಾರೆ ಎಂದರು. ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತರ ಸಮಾವೇಶಕ್ಕೆ ಇಪ್ಪತ್ತು ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಅದಕ್ಕಾಗಿ 200 ಬಸ್ ವ್ಯವಸ್ಥೆ ಸೇರಿದಂತೆ ಇನ್ನಿತರ ತಯಾರಿ ಮಾಡಲಾಗುತ್ತಿದೆ. ರಾಷ್ಟ್ರೀಯ ಅಧ್ಯಕ್ಷರು ಉಡುಪಿಯಲ್ಲಿ ಬೆಳಿಗ್ಗೆ ಬಿಜೆಪಿ ಬೂತ್ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಕೊಡಪಾಡಿಗೆ ಆಗಮಿಸಲಿದ್ದಾರೆ. ಅಲ್ಲಿಂದ ಮುಳ್ಳಿಕಟ್ಟೆಗೆ ರಸ್ತೆ ಮಾರ್ಗದಲ್ಲಿ ಬರಲಿದ್ದಾರೆ. ಪೂರ್ವಭಾವಿಯಾಗಿ ವಿವಿಧ ಶಕ್ತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ನಾಲ್ಕು ಕಡೆಗಳಲ್ಲಿ ಫೆ.19ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾವಹಿಸುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಂಡ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಫೆ.19ರ ಬೆಳಿಗ್ಗೆ 9:30ಕ್ಕೆ ಬೈಂದೂರು ಯಡ್ತರೆ ಬೈಪಾಸ್ ಬಳಿ, 11:30ಕ್ಕೆ ನಾಗೂರು ರಾಷ್ಟ್ರೀಯ ಹೆದ್ದಾರಿ ಬಳಿ, ಮಧ್ಯಾಹ್ನ 3ಕ್ಕೆ ವಂಡ್ಸೆಯಲ್ಲಿ ಹಾಗೂ ಸಂಜೆ 5 ಗಂಟೆಗೆ ಸಿದ್ಧಾಪುರ ಪೇಟೆಯಲ್ಲಿ ಪ್ರತ್ಯೇಕ ಕಾರ್ಯಕ್ರಮಕ್ಕೆ ತಯಾರಿ ನಡೆಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡರಾದ ಆರ್.ವಿ. ದೇಶಪಾಂಡೆ, ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಪಕ್ಷದ ವೀಕ್ಷಕರು, ಕೆಪಿಸಿಸಿ ಪ್ರಮುಖರು, ಪಕ್ಷಕದ ವಿವಿಧ ನಾಯಕರು ಕಾರ್ಯಕ್ರಮದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದಾನಿಗಳಾದ ಉದ್ಯಮಿ ಸುನಿಲ್ ಆರ್. ಶೆಟ್ಟಿ ಬೆಂಗಳೂರು ಇವರು ಕೊಡುಗೆಯಾಗಿ ನೀಡಿರುವ ನೂತನ ಬ್ರಹ್ಮರಥವು ಬುಧವಾರ ರಾತ್ರಿ ಪುರಪ್ರವೇಶಗೊಂಡಿತು. ನಂತರ ದೇವಳದ ಹೊರಪ್ರಾಂಗಣದಲ್ಲಿ ತಂತ್ರಿ ಹಾಗೂ ಪ್ರಧಾನ ಅರ್ಚಕ ಡಾ. ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ವಾಸ್ತು ರಾಕ್ಷೋಘ್ನಹೋಮ ಹಾಗೂ ಸುದರ್ಶನ ಯಾಗ ನೆರವೇರಿಸಲಾಯಿತು. ಗುರುವಾರ ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಆರಂಬಿಸಲಾದ ಧಾರ್ಮಿಕ ಕಾರ್ಯಗಳು ಕ್ರಮವಾಗಿ ರಜ್ಜು ಬಂಧನ, ಹಳೆ ರಥದ ಕಲೆಯನ್ನಿಳಿಸಿ ಹೊಸ ರಥಕ್ಕೆ ಕಲಾ ಸಂಕೋಚ ನೀಡಲಾಯಿತು. ಪಂಚಕಲಾಸಂಕೋಚ ಹೋಮ, ನಂತರ ಅಭಿಷೇಕ, ನೂತನ ರಥದ ಪೀಠಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 12-15ಕ್ಕೆ ದಾನಿಗಳು ನೂತನ ರಥವನ್ನು ದೇವಳಕ್ಕೆ ಹಸ್ತಾಂತರಿಸಿ ಲೋಕಾರ್ಪಣೆ ಮಾಡಿದರು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಹಾಗೂ ಕೊಲ್ಲೂರು ದೇವಳದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ವೀಣಾ ಬಿ. ಎಂ., ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಜಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೀರೆತ್ತುವಾಗ ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಶುಕ್ರವಾರ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಡೆದಿದೆ. ಉಳ್ತೂರು ನಿವಾಸಿ ರತ್ನಾವತಿ ಶೆಟ್ಟಿ (52) ಎಂಬುವವರು ಬೆಳಿಗ್ಗೆ ಬಾವಿಯಿಂದ ನೀರೆತ್ತುವಾಗ ಆಕಸ್ಮಿಕ ಕಾಲು ಜಾರಿ 20 ಅಡಿ ಆಳದ ಬಾವಿಗೆ ಬಿದ್ದರು. ತಕ್ಷಣ ಮನೆಯವರು ಅಗ್ನಿ ಶಾಮಕ ದಳದವರಿಗೆ ತಿಳಿಸಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಅವರು ಬಾವಿಗೆ ಇಳಿದು ಮಹಿಳೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಬಾವಿಯಲ್ಲಿ ಸಾಕಷ್ಟು ನೀರಿದ್ದುದರಿಂದ ಮಹಿಳೆಗೆ ಪೆಟ್ಟಾಗಿಲ್ಲ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

Read More