Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತರಾದ ಡಾ. ಪಿ.ಜಿ.ಆರ್ ಸಿಂಧ್ಯಾ ಅವರು ಭೇಟಿ ನೀಡಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ದಳ ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಪ್ರಭಾಕರ ಭಟ್, ಜಿಲ್ಲಾ ಆಯುಕ್ತರಾದ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ, ಎ.ಎಸ್.ಓ.ಸಿ ಸುಮನ್ ಶೇಖರ್ , ಹಿರಿಯ ಸ್ಕೌಟ್ಸ್ ಶಿಕ್ಷಕ ಸುಬ್ರಮಣ್ಯ ಅವರು, ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿದರು. ಬುಲ್ ಬುಲ್ ಶಿಕ್ಷಕಿ ಪದ್ಮಾವತಿ ಕಾರ್ಯಕ್ರಮವನ್ನು ನಿರೂಪಿಸಿ, ಗೈಡ್ಸ್ ಶಿಕ್ಷಕಿ ರಮಣಿ ಅವರು ವಂದನಾರ್ಪಣೆ ಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದ ಭವ್ಯಶ್ರೀ ಅವರ ನಿರೀಕ್ಷೆಗೆ ಆಳ್ವಾಸ್ ಪ್ರಗತಿ–2026 ಹೊಸ ತಿರುವು ನೀಡಿದೆ. ದೈಹಿಕ ವಿಶೇಷಚೇತನರಾಗಿರುವ ಅವರು, ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಆಗಮಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಭಾಗ್ಯಶ್ರೀ ಕುಲಾಲ್ ಒಂದು ವರ್ಷದ ಹಿಂದೆ ಎಂ.ಕಾಂ ಪದವಿ ಪಡೆದಿದ್ದರು. ಪದವಿ ಪಡೆದ ಬಳಿಕ ಉದ್ಯೋಗಕ್ಕಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ, ಕಳೆದ ಒಂದು ವರ್ಷದಿಂದ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದರು. ಉದ್ಯೋಗದ ನಿರೀಕ್ಷೆಯೊಂದಿಗೆ ಆಳ್ವಾಸ್ ಪ್ರಗತಿಗೆ ಆಗಮಿಸಿದ ಭವ್ಯಶ್ರೀ ಅವರಿಗೆ, ದೈಹಿಕ ಸವಾಲು ಯಾವುದೂ ತಮ್ಮ ಕನಸಿಗೆ ಅಡ್ಡಿಯಾಗಲಿಲ್ಲ. ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಮೇಳಕ್ಕೆ ಆಗಮಿಸಿ, ಸಂದರ್ಶನ ಎದುರಿಸಿ, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಅಂತಿಮವಾಗಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗುವ ಮೂಲಕ ತಮ್ಮ ಬಹುದಿನಗಳ ಉದ್ಯೋಗದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಉದ್ಯೋಗ ಸಿಕ್ಕಿರುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಸಿ.ಎಸ್.ಐ. ಲೊಂಬಾರ್ಡ್ ಮಿಷನ್ ಆಸ್ಪತ್ರೆ ಹಾಗೂ ರುಡ್‌ಸೆಟ್ ಆಸರೆ ಸಂಘಟನೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ರುಡ್‌ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಮೋದ್ ಮಧ್ವರಾಜ್, ಮಾಜಿ ಸಚಿವರು, ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರುಡ್‌ಸೆಟ್ ಸಂಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತರಬೇತಿ ಪಡೆಯುತ್ತಿರುವುದನ್ನು ಗಮನಿಸಿ ಸಂತಸ ವ್ಯಕ್ತಪಡಿಸಿದರು. ಹಿಂದಿನ ಕಾಲದಲ್ಲಿ ಮಹಿಳೆಯರು ಕೆಲವು ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಸೀಮಿತರಾಗಿದ್ದರು. ಆದರೆ ಇಂದು ಮಹಿಳೆಯರು ಮುಂದೆ ಬಂದು ವಿವಿಧ ಕೌಶಲ್ಯಗಳನ್ನು ಪಡೆದುಕೊಂಡು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು. ವ್ಯವಹಾರದಲ್ಲಿ ಕೇವಲ ಲಾಭಗಳಿಸುವುದಷ್ಟೇ ಮುಖ್ಯವಲ್ಲ;…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವುದರ ಜೊತೆಗೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿಯೇ ನೀಡಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಫರೀದ್ ಹೇಳಿದರು. ಅವರು ಶುಕ್ರವಾರ ಕಾಪು ತಾಲೂಕು ಕಚೇರಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಪ್ರಾಣಹಾನಿ, ಮನೆಹಾನಿ ಸೇರಿದಂತೆ ಮತ್ತಿತರ ಹಾನಿಗಳು ಉಂಟಾದಲ್ಲಿ ಕೆಳಮಟ್ಟದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅವರುಗಳಿಗೆ ಅಗತ್ಯ ನೆರವುಗಳನ್ನು ಒದಗಿಸಬೇಕು. ಮಳೆಯ ನೀರಿನಿಂದ ಪರಿಕರ, ಹೊದಿಕೆ, ಆಹಾರ ದಾಸ್ತಾನುಗಳು ಹಾಳಾದಲ್ಲಿ ತುರ್ತಾಗಿ ಅಧಿಕಾರಿಗಳು ತತ್‌ಕ್ಷಣ 5,500 ರೂ. ಪರಿಹಾರ ಧನ ವಿತರಿಸುವುದರೊಂದಿಗೆ ಸ್ವಾಭಿಮಾನದಿಂದ ಅವರುಗಳು ಜೀವಿಸಲು ಅವಕಾಶ ಮಾಡಿಕೊಡಬೇಕು., ಪರಿಹಾರದ ಹಣವನ್ನು ನೀಡುವಾಗ ಅಧಿಕಾರಿಗಳು ಹೃದಯವಂತಿಕೆ, ಪ್ರಜ್ಞಾವಂತಿಕೆ ಹಾಗೂ ಬುದ್ಧಿವಂತಿಕೆಯಿಂದ ನಿರ್ಧಾರ ತೆಗೆದುಕೊಂಡು ಜನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಾದ ನಿಮಗೂ ಅವಕಾಶ ಇದೆ, ನಿಮಗೂ ಸ್ಫೂರ್ತಿ ಆಗಬೇಕು, ತಗೆದುಕೊಂಡವರಿಗೂ ಖುಷಿ ಆಗಬೇಕು, ಕೊಟ್ಟವರಿಗೂ ಆತ್ಮ ತೃಪ್ತಿ ಇರಬೇಕು, ಮುಂದಿನ ದಿನಗಳಲ್ಲಿ ನೀವು ಉಳಿದ ಮಕ್ಕಳಿಗೆ ಕೊಡಬೇಕು ಈ ಉದ್ದೇಶದಿಂದ ಕೊಡುತ್ತಿರುವ ನಗದು ಪುರಸ್ಕಾರ ಮತಷ್ಟ್ಟು ಮಕ್ಕಳಿಗೆ ಉತೇಜನ ಸಿಗಲಿ ಎಂಬ ಆಶಯದೊಂದಿಗೆ ಈ ಕಾರ್ಯ ಕಳೆದ 14 ವರ್ಷಗಳಿಂದ ನಡೆಸುಕೊಂಡು ಬರುತ್ತಿರುವ ಸ್ನೇಹ ಸಂಗಮದ ಸದಸ್ಯರ ಔದ್ಯೋಗಿಕ ಜೀವನದಲ್ಲಿ ಯಶಸ್ಸು ಸಿಗಲಿ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇದರ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಚೇತನಾ ಸಭಾಭವನದಲ್ಲಿ ಶುಕ್ರವಾರ ಜರುಗಿದ 2002-04ನೇ ಸಾಲಿನ ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ಶಿಕ್ಷಕಿ ಜಯಶ್ರೀ, ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ ಅಧಕ್ಷ ಗೀರಿಶ್ ಪೂಜಾರಿ, ಸದಸ್ಯರಾದ ರವಿ ದೇವಾಡಿಗ, ಯೋಗೀಶ್ ದೇವಾಡಿಗ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಯುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು, ವೃತ್ತಿಪರ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು ಹಾಗೂ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವೊಂದೇ ಇಂದಿನ ವೇಗವಾಗಿ ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಕಾಗುವುದಿಲ್ಲ. ಶಿಕ್ಷಣದ ಜೊತೆಗೆ ಕೌಶಲ್ಯವೂ ಅತ್ಯಗತ್ಯವಾಗಿದ್ದು, ಉದ್ಯೋಗ ಕ್ಷೇತ್ರದಲ್ಲಿ ಪ್ರಸ್ತುತವಾಗಿರಲು ಕೌಶಲ್ಯಗಳನ್ನು ನಿರಂತರವಾಗಿ ಉನ್ನತೀಕರಿಸಿಕೊಳ್ಳಬೇಕು. “ಶಿಕ್ಷಣ ಪಾಸ್‌ಪೋರ್ಟ್ನಂತಿದ್ದರೆ, ಕೌಶಲ್ಯ ವೀಸಾದಂತೆ” ಎಂದು ರೂಪಕದ ಮೂಲಕ ವಿವರಿಸಿದ ಅವರು, ಯುವಜನರು ಪ್ರಾಯೋಗಿಕ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಬಳಸದೆ, ತಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಸಂಭ್ರಮ – ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಸಚಿವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಮತ್ತಿತರ ತಂಡಗಳಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಿನದಿಂದ ದಿನಕ್ಕೆ ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಿನ ಯುವಜನತೆ ಮೊಬೈಲ್ ಚಟಕ್ಕೆ ಬಿದ್ದು ತಮ್ಮ ಬದುಕಿನ ಅಮೂಲ್ಯ ಕ್ಷಣಗಳನ್ನು ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿ. ಸೋಶಿಯಲ್ ಮೀಡಿಯಾಗಳ ಹುಸಿ ಆಕರ್ಷಣೆಗೆ ಒಳಗಾಗಿ ಬಲಿಬೀಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಜಗತ್ತಿನ ಅಪಾಯಗಳ ಬಗ್ಗೆ ಸದಾ ಎಚ್ಚರದಿಂದಿರಬೇಕು ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್‌ ಕಾನ್‌ ಸ್ಟೇಬಲ್ ಪವನ್‌ ಕುಮಾರ್ ಎಂ. ಹೇಳಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆ ಇವುಗಳ ಜಂಟಿ ಸಹಯೋಗದೊಂದಿಗೆ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಇತ್ತೀಚಿನ ಸೈಬರ್‌ ಅಪರಾಧಗಳ ಪ್ರವೃತ್ತಿಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳು”ಎಂಬ ಸೈಬರ್ ಜಾಗೃತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು. ಸೈಬರ್ ಅಪರಾಧಗಳ ಜಾಲ ಮತ್ತು ಅದರಿಂದ ಪಾರಾಗುವ ಮಾರ್ಗಗಳ ಕುರಿತು ವಿದ್ಯಾರ್ಥಿಗಳಿಗೆ ಕೂಲಂಕುಷ ಮಾಹಿತಿ ನೀಡಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICMAI)  ನಡೆಸಿದ ಸಿಎಂಎ ಇಂಟರ್‌ಮೀಡಿಯಟ್ ಜೂನ್–2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ದಾಖಲಿಸಿ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಎತ್ತಿ ಹಿಡಿದಿದ್ದಾರೆ.  2024-25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಕಾಂ. ಪದವಿಯಲ್ಲಿ  ಎರಡನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದುಕೊಟ್ಟ ಮುದೂರಿನ ಶೀನ ಪೂಜಾರಿ ಅವರ ಪುತ್ರಿ ಶ್ರೇಯಾ ಅವರು ಸಿಎಂಎ ಇಂಟರ್ಮಿಡಿಯೇಟ್ ಗ್ರೂಪ್–1 ಹಾಗೂ ಗ್ರೂಪ್ -2  ಎರಡೂ ಪರೀಕ್ಷೆಗಳಲ್ಲಿ ಮೊದಲ ಪ್ರಯತ್ನದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಲ್ಲದೆ ಅಖಿಲ ಭಾರತ ಮಟ್ಟದಲ್ಲಿ 28ನೇ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ರಾಷ್ಟçಮಟ್ಟದ ಹೆಮ್ಮೆ ತಂದುಕೊಟ್ಟಿದ್ದಾರೆ. ಪ್ರಾಕ್ತನ ವಿದ್ಯಾರ್ಥಿಗಳಾದ ಸಾಗರದ ಪಾಂಡುರಂಗ ಪೈಯವರ ಪುತ್ರಿ ಪವಿತ್ರ ಪೈ ಹಾಗೂ ಸಾಗರದ ದಿ. ಮಂಜುನಾಥ ಕೆ.ವಿ. ಅವರ ಪುತ್ರ ಮದನ್ ಎಂ.ವಿ., ಈರ್ವರು ಸಿಎಂಎ ಇಂಟರ್ಮೀಡಿಯಟ್ ಗ್ರೂಪ್ –…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕುಂದಾಪುರದ ವಿ. ಕೆ. ಆರ್. ಮೆಮೋರಿಯಲ್ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಕುಂದಾಪುರದಲ್ಲಿ ನಡೆದ ಕುಂದಾಪುರ ಬ್ಲಾಕ್ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಶಾಲೆಯ ಆರ್ಯನ್ ವಿ.ಕೆ., ಆರ್ಯನ್ ಎಸ್. ಹಾಗೂ ವೃಷಭ್ ಶೆಣೈ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅಭಿಷೇಕ್ ಶೆಣೈ, ಹವ್ಯಾಸ್ ಹಾಗೂ ಸನ್ನಿತ್ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅನನ್ಯಾ ಪೂಜಾರಿ, ಶ್ರಾವ್ಯಾ ಖಾರ್ವಿ ಹಾಗೂ ಶ್ರೀಯಾ ಆಚಾರ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಅನನ್ಯಾ ಪೂಜಾರಿ ಹಾಗೂ ಶ್ರಾವ್ಯಾ ಖಾರ್ವಿ ಜಿಲ್ಲಾ…

Read More