ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ವಿಶಿಷ್ಟ ರೀತಿಯಲ್ಲಿ ಸಂಪ್ರದಾಯಬದ್ಧವಾಗಿ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕಾಶೀನಾಥ ಪಿ. ಪೈ ಮತ್ತು ಸಂಚಾಲಕ ಎನ್. ಸದಾಶಿವ ನಾಯಕ್ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾದ ಪಠ್ಯಪುಸ್ತಕ ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ನೀಡಲಾದ ಸಮವಸ್ತ್ರ, ಬೆಲ್ಟ್‌ಗಳನ್ನು ವಿತರಿಸಿ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಜಿ.ಅಜಿತ್ ಭಟ್, ಶಾಲೆಯ ಶಿಕ್ಷಕರಾದ ಮಹಾಬಲ ಆಚಾರ್ಯ, ದೇವು, ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ಮಮತಾ ಖಾರ್ವಿ, ಭೂದೇವಿ, ಅಕ್ಷತಾ ವಿನಯ್, ಅಂಗನವಾಡಿ ಕಾರ್ಯಕರ್ತೆ ಕಮಲಾ ಮೊದಲಾದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 10 ರ‍್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 21ನೇ ರ‍್ಯಾಂಕ್, ಬಿ.ಎನ್.ವೈ.ಎಸ್. ವಿಭಾಗದಲ್ಲಿ 24ನೇ ರ‍್ಯಾಂಕ್, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 33 ನೇ ರ‍್ಯಾಂಕ್, ಪಶು ವೈದ್ಯಕೀಯ ವಿಭಾಗದಲ್ಲಿ 33ನೇ ರ‍್ಯಾಂಕ್, B-ಫಾರ್ಮ್ ಮತ್ತು D-ಫಾರ್ಮ್ ವಿಭಾಗಗಳಲ್ಲಿ 49 ನೇ ರ‍್ಯಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿ ಶರತ್ ಹೆಚ್. ಪಿ. ಪಶು ವೈದ್ಯಕೀಯ ವಿಭಾಗದಲ್ಲಿ 26 ನೇ ರ‍್ಯಾಂಕ್, ಕೃಷಿ ವಿಜ್ಞಾನ ವಿಭಾಗದಲ್ಲಿ 37 ನೇ ರ‍್ಯಾಂಕ್ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 2024-25ನೇ ಶೈಕ್ಷಣಿಕ ಸಾಲಿನ ಎಲ್ ಕೆ ಜಿ ಯಿಂದ ಪಿ ಯು ಸಿ ವರೆಗಿನ ದಾಖಲಾತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಗುಣಮಟ್ಟದ ಶಿಕ್ಷಣ ಹೊಂದಿರುವ ಸಂಸ್ಥೆಯತ್ತ ಪೋಷಕರು ಒಲವು ತೋರಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಸಿದ್ದಾಪುರ ಊರಿನ ಮಕ್ಕಳಿಗಾಗಿ ಬೇರೆ ವಾಹನ ವ್ಯವಸ್ಥೆ ಮಾಡಲಾಗಿದೆ. ಕಂಡ್ಲೂರು, ಗುಂಹೊಲ, ಬೇಳೂರು ಹಾಗೂ ಕೋಟೇಶ್ವರ ಈ ಮಾರ್ಗಗಳಿಗೆ ಹೊಸದಾಗಿ ವಾಹನ ಸೌಲಭ್ಯ ಒದಗಿಸಲು ಆಡಳಿತ ಮಂಡಳಿ 4 ಹೊಸ ಬಸ್ಸುಗಳನ್ನು ಖರೀದಿಸಿದೆ. ಮಂಗಳೂರಿನ ಅಮರಜ್ಯೋತಿ ಆಟೋಮೊಬೈಲ್ಸ್ ಜನರಲ್ ಮ್ಯಾನೇಜರ್ ರಾನ್ಸನ್ ಮಚಾಡೊ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ನ ಆಡಳಿತ ಅಧಿಕಾರಿಗಳಾದ ರೆನಿಟಾ ಲೋಬೊ ಮತ್ತು ಶಮಿತಾ ರಾವ್ ಇವರಿಗೆ ಕೀ ಮತ್ತು ಹೂಗುಚ್ಚ ನೀಡಿ ವಾಹನ ಹಸ್ತಾಂತರಿಸಿದರು.
ಕುಂದಾಪ್ರ ಡಾಟ್ ಕಾಂ ಮಾಹಿತಿ.ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ಜೂನ್ 03 ರಂದು ಬೆಳಗ್ಗೆ 08 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಮತಯಂತ್ರಗಳನ್ನು ಬಳಕೆ ಮಾಡುವುದಿಲ್ಲ. ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಗೆದ್ದ ಅಭ್ಯರ್ಥಿಯನ್ನು ಘೋಷಣೆ ಮಾಡುವುದರಿಂದ ಸರಿಯಾಗಿ ಮತದಾನ ಮಾಡಬೇಕು. ಇಲ್ಲವಾದಲ್ಲಿ ಮತ ಅಸಿಂಧುವಾಗುತ್ತದೆ. ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಅರ್ಹ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲಿದ್ದಾರೆ. ಮತದಾರರ ಮತಗಟ್ಟೆಯ ಭಾಗ ಮತ್ತು ಕ್ರಮ ಸಂಖ್ಯೆ, ಹೆಸರು ಮತ್ತು ಮತದಾನ ಕೇಂದ್ರದ ಸ್ಥಳದ ಬಗ್ಗೆ ಮಾಹಿತಿ ಹೊಂದಿರುವ ಮತದಾರರ ಚೀಟಿಯನ್ನು ಒದಗಿಸಲಾಗಿದೆ. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ (ಎಪಿಕ್) ಅಥವಾ ಆಧಾರ್‍ಕಾರ್ಡ್, ಚಾಲನಾ ಪರವಾನಗಿ, ಪಾನ್ ಕಾರ್ಡ್, ರಾಜ್ಯ ಮತ್ತು ಕೇಂದ್ರ ಸರ್ಕಾರ, ಸಾರ್ವಜನಿಕ ವಲಯದ ಉದ್ಯಮಗಳು, ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕೆಗಳಿಂದ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಚೀಟಿ, ಎಂಪಿ, ಎಂಎಲ್‍ಎ, ಎಂಎಲ್ಸಿಗಳಿಗೆ ನೀಡಲಾದ ಅಧಿಕೃತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ. ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಆರು ಕ್ಷೇತ್ರಗಳಿಗೆ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೋಜೇಗೌಡ ಮೊದಲ ಪ್ರಾಶಸ್ತ್ಯದ ಮತದಲ್ಲೇ ಗೆಲ್ಲುತ್ತಾರೆಂಬ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ತಾಲೂಕಿನ ಕುಂಭಾಶಿಯ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಶ್ವರಪ್ಪ, ಧನಂಜಯ ಸರ್ಜಿ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಚರ್ಚೆ ಮಾಡಿದ್ದಾರೆ. ನಾನು ದೇವಸ್ಥಾನದ ಮುಂದೆ ನಿಂತು ಹೇಳುತ್ತಿದ್ದೇನೆ. ಅಭ್ಯರ್ಥಿ ಯಾರು ಎಂದು ಚರ್ಚೆ ಆದಾಗ ಈಶ್ವರಪ್ಪನವರೇ ಡಾ. ಸರ್ಜಿ ಅವರನ್ನು ಸೂಚಿಸಿದ್ದು ಡಾ. ಧನಂಜಯ ಸರ್ಜಿ ಸಜ್ಜನರಾಗಿದ್ದು ಅವರಿಗೆ ಅವಕಾಶ ಕೊಡಬೇಕು ಎಂದು ಅಭಿಪ್ರಾಯ ಹೇಳಿದ್ದ ಈಶ್ವರಪ್ಪ ಹಿಂದೆ ಹೇಳಿದ್ದನ್ನು ಮರೆತಿದ್ದಾರೆ ಎಂದು ಭಾವಿಸುತ್ತೇನೆ ಎಂದರು. ಬಿಜೆಪಿ ಒಟ್ಟಾಗಿ ಶ್ರಮ ಹಾಕುತ್ತಿದೆ. ಯಾವುದೇ ಗೊಂದಲ ಇಲ್ಲದೆ ನಮ್ಮ ಶಾಸಕರು, ನಾಯಕರು ಕೆಲಸ ಮಾಡುತ್ತಿದ್ದಾರೆ. ಅಭ್ಯರ್ಥಿಗಳನ್ನ ಗೆಲ್ಲಿಸುತ್ತದೆ ಎಂದ ವಿಜಯೇಂದ್ರ, ಜೂನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾಲಕನ ಮೇಲೆ ದೂರದ ಸಂಬಂಧಿಗಳಾದ ನಾಲ್ವರು ಹಲ್ಲೆ ನಡೆಸಿದ ಘಟನೆಯ ವೀಡಿಯೊ ವೈರಲ್ ಆಗಿದ್ದು ಮೇ.28ರಂದು ರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಣಕಾಸು ವಿಚಾರದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು ಪ್ರಕರಣದ ಹಿನ್ನೆಲೆಯಲ್ಲಿ ಸಿನಾನ್, ರಿಝ್ವಾನ್, ಅಬಾನ್, ತೌಹೀದ್ ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ಬೆನ್ನಲ್ಲೇ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ 29ರಂದು ಎಫ್‌ಐಆರ್ ದಾಖಲಾಗಿತ್ತು. ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತ ಅಪ್ರಾಪ್ತ ವಯಸ್ಸಿನವನಾಗಿರುವುದರಿಂದ, ವೀಡಿಯೊವನ್ನು ಪ್ರಸಾರ ಮಾಡುವುದು ಅಪರಾಧವೇ ಅಥವಾ ಇಲ್ಲವೇ ಎಂದು ಕಾನೂನು ಅಭಿಪ್ರಾಯವನ್ನು ಪಡೆದು ವೀಡಿಯೊವನ್ನು ಪ್ರಸಾರ ಮಾಡುವವರ ಮೇಲೆ ಮುಂದಿನ ಕ್ರಮವನ್ನು ನಿರ್ಧರಿಸಲಾಗುತ್ತದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಯೊಬ್ಬ ನಾಗರಿಕನೂ ಅಪರಾಧಗಳನ್ನು ಎಸಗದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಾಲ್ಯದಲ್ಯೇ ಮೌಲ್ಯ ಶಿಕ್ಷಣವನ್ನು ಅಳವಡಿಸಿಕೊಳ್ಳಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಸವರಾಜ್ ಕನಕಶೆಟ್ಟಿ ಹೇಳಿಕೆ ಕೊಟ್ಟರು. ರೋಟರಿ ಕ್ಲಬ್ ಗಂಗೊಳ್ಳಿ, ನಮ್ಮ ಭೂಮಿ ಸಂಸ್ಥೆ ಹಾಗೂ ಗಂಗೊಳ್ಳಿ ಪೊಲೀಸ್ ಠಾಣೆ ಇವರ ಜಂಟಿ ಆಶ್ರಯ ಮೌಲ್ಯಾಧಾರಿತ ಶಿಕ್ಷಣ ಅಡಿಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ “ತೆರೆದ ಮನೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೊಲೀಸ್ ಠಾಣೆಯಲ್ಲಿ ಇರುವ ಆಯುಧಗಳು ಮತ್ತು ಅದನ್ನು ಯಾವಾಗ ಬಳಸಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ನೀಡಿದ ಅವರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಈ ಸಂದರ್ಭದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ. ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಮ್ಮ ಭೂಮಿ ಸಂಸ್ಥೆಯ ಸದಸ್ಯರಾದ ಕೃಪಾ ಭಟ್, ಶ್ರೀನಿವಾಸ ಗಾಣಿಗ, ರೋಟರಿ ಕ್ಲಬ್‌ನ ಸದಸ್ಯರಾದ ವಾಸುದೇವ್ ಶೇರುಗಾರ್, ಜನಾರ್ದನ ಪೂಜಾರಿ, ದಿನಕರ್ ಶಾನಭಾಗ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತೀಕ್ಷಾ ಶೆಟ್ಟಿ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ.ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ವತಿಯಿಂದ ದತ್ತು ಸ್ವೀಕಾರ ಪಡೆದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಅವರು ವಾಹನ ಹಸ್ತಾಂತರಿಸಿ ಮಾತನಾಡಿ, ಸರಕಾರಿ ಉಳಿವಿಗೆ ಹಳೆ ವಿದ್ಯಾರ್ಥಿಗಳ ಹಾಗೂ ಊರಿನ ನಾಗರಿಕರ ಸಹಕಾರ ಅಗತ್ಯವಿದೆ. ನಮ್ಮೂರಿನ ಶಾಲೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲು ಯೋಜನೆ ರೂಪಿಸಿಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು. ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಇಂಗ್ಲೀಷ್ ಮಾಧ್ಯಮದ ಪಠ್ಯ ಪುಸ್ತಕಗಳನ್ನು ನೀಡಲಾಗುವುದು. ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡಲಾಗಿದ್ದು ಉತ್ತಮ ನುರಿತ ಶಿಕ್ಷಕರನ್ನು ನೇಮಿಸಲಾಗಿದೆ ಇದರ ಸದುಪಯೋಗಪಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶಾರದಾ ದೇವಾಡಿಗ, ಬಿಜೂರು ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ವಿ. ದೇವಾಡಿಗ, ಗ್ರಾ.ಪಂ…
