Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ಎಚ್.ಎ.ಎಲ್ ಸಮೀಪ ಕುಂದನಹಳ್ಳಿ ಗೇಟ್ ಬಳಿ ಬ್ರಹ್ಮಲಿಂಗೇಶ್ವರ ಬೇಕರಿ ನಡೆಸುತ್ತಿರುವ ಬೈಂದೂರು ಮದ್ದೋಡಿಯ ಯುವಕರಿಗೆ ಹಲ್ಲೆ ನಡೆಸಿ ಹಣ ಎಗರಿಸಿದ್ದ ಮೂವರು ಆರೋಪಿಗಳನ್ನು ಹೆಚ್.ಎ.ಎಲ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿರುವ ಕಾರ್ತಿಕ್ (20), ಅಲ್ಯೂಮಿನಿಯಂ ಕೆಲಸಗಾರ ಸಲ್ಮಾನ್ (20), ಖಾಸಗಿ ಹೋಟೆಲ್ ಮ್ಯಾನೇಜರ್ ಕಾರ್ತಿಕ್ (23) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ವೈಟ್ ಫಿಲ್ಡ್ ಡಿಸಿಪಿ ಗಿರೀಶ್ ಅವರು ಘಟನೆಯ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತಂಡ ರಚಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು. ಬೇಕರಿಯಲ್ಲಿ ವ್ಯವಹಾರ ನಡೆಸಿ ಹಣ ಕೇಳಿದಾಗ ಖ್ಯಾತೆ ತೆಗೆದ ರೌಡಿಗಳು ಅಂಗಡಿಯೊಳ್ಳಕ್ಕೆ ನುಗ್ಗಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ನಾಲ್ಕೈದು ಮಂದಿ ಅಂಗಡಿಯೊಳ್ಳಕ್ಕೆ ನುಗ್ಗಿ ಹಲ್ಲೆ ಇಬ್ಬರಿಗೂ ಹಲ್ಲೆ ನಡೆಸಿದ್ದು, ಪ್ರಶ್ನಿಸಲು ಬಂದವರಿಗೂ ಹಲ್ಲೆ ನಡೆಸಲಾಗಿದೆ. ಈ ದೃಶ್ಯ ಅಂಗಡಿಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಘಟನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿ ಜೀವನದಲ್ಲಿ ವಿವಿಧ ಆಯಮಗಳನ್ನು ಅನ್ವೇಷಿಸಿ ವೈಯಕ್ತಿಕವಾಗಿ ಯಾವುದರಲ್ಲಿ ಉತ್ತಮರಾಗಿದ್ದೀರಿ ಎಂಬುದನ್ನು ಪ್ರತ್ಯೇಕವಾಗಿ ಗಮನಿಸಿಬೇಕು ಎಂದು ಆದ್ಯ ಕಮ್ಯುನಿಕೇಶನ್ನ ಸಂಸ್ಥಾಪಕ ಚೆಂಗಪ್ಪ ಎ. ಡಿ ತಿಳಿಸಿದರು ಆಳ್ವಾಸ್ ಕಾಲೇಜಿನ ಪದವಿ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಪಬ್ಲಿಕ್ ರಿಲೇಶನ್ ಎಂಬ ವಿ?ಯದ ಕುರಿತು ನಡೆದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಸಂವಹನ ಎಂದು ನಿಂತ ನೀರಲ್ಲ ಅದು ಸಮುದ್ರದಂತೆ ವಿಶಾಲವಾದದ್ದು ಎಲ್ಲರ ಜೀವನದಲ್ಲಿ ಸಂವಹನ ಅತಿ ಅವಶ್ಯಕ. ಇಂದಿನ ಯುವ ಜನತೆ ಸಂಹವನಕ್ಕೆ ಮಹತ್ವ ನೀಡದ ಕಾರಣ ಅದರ ಮಹತ್ವವು ಕುಂಠಿತಗೊಳ್ಳುತ್ತಿದೆ. ತಂತ್ರಜ್ಞಾನದ ಬೆಳವಣಿಗೆಯಿಂದ ಜನರು ಪರಸ್ಪರ ಸಂವಹನವನ್ನು ಮರೆಯುತ್ತಿದ್ದಾರೆ. ವಿದ್ಯಾರ್ಥಿಗಳು ಭಾಷಾ ಸ್ಪಷ್ಟತೆಯ ಕಡೆ ಹೆಚ್ಚಿನ ಗಮನ ನೀಡಬೇಕು ಎಂದರು ಕಾರ್ಯಕ್ರಮದಲ್ಲಿ ಪದವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ರೇಷ್ಮಾ ಉದಯ್ ಕುಮಾರ್, ಉಪನ್ಯಾಸಕಿ ರಕ್ಷಿತಾ ಕುಮಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಖದಿಜಾ ನುಹ ಸ್ವಾಗತಿಸಿ, ವಿದ್ಯಾರ್ಥಿ ರಿತಿಕಾ ವಂದಿಸಿ, ವಿದ್ಯಾರ್ಥಿನಿ ಹನನ್ ಫಾತಿಮಾ ನಿರೂಪಿಸಿದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ಎಚ್.ಎ.ಎಲ್ ಸಮೀಪ ಕುಂದನಹಳ್ಳಿ ಗೇಟ್ ಎಂಬಲ್ಲಿ ಬೇಕರಿ ವ್ಯವಹಾರ ನಡೆಸುತ್ತಿದ್ದ ಬೈಂದೂರು ಮದ್ದೋಡಿಯ ಯುವಕರಿಗೆ ವಿನಾಕಾರಣದ ರೌಡಿಗಳು ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೈಂದೂರು ಮದ್ದೋಡಿಯ ನವೀನ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ ಹಾಗೂ ನಿತೀಶ್ ಶೆಟ್ಟಿ ಕೆಲ ಸಮಯದಿಂದ ಶ್ರೀ ಬ್ರಹ್ಮಲಿಂಗೇಶ್ವರ ಬೇಕರಿ ಉದ್ಯಮ ನಡೆಸುತ್ತಿದ್ದು, ಗುರುವಾರ ರಾತ್ರಿ ನವೀನ್ ಶೆಟ್ಟಿ ಹಾಗೂ ಪ್ರಜ್ವಲ್ ಶೆಟ್ಟಿ ಬೇಕರಿಯಲ್ಲಿ ವ್ಯಾಪರ ನಡೆಸುತ್ತಿದ್ದ ಸಂದರ್ಭ ಈ ದರ್ಘಟನೆ ನಡೆದಿದೆ. ಬೇಕರಿಯಲ್ಲಿ ವ್ಯವಹಾರ ನಡೆಸಿ ಹಣ ಕೇಳಿದಾಗ ಖ್ಯಾತೆ ತೆಗೆದ ರೌಡಿಗಳು ಅಂಗಡಿಯೊಳ್ಳಕ್ಕೆ ನುಗ್ಗಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ನಾಲ್ಕೈದು ಮಂದಿ ಅಂಗಡಿಯೊಳ್ಳಕ್ಕೆ ನುಗ್ಗಿ ಹಲ್ಲೆ ಇಬ್ಬರಿಗೂ ಹಲ್ಲೆ ನಡೆಸಿದ್ದು, ಪ್ರಶ್ನಿಸಲು ಬಂದವರಿಗೂ ಹಲ್ಲೆ ನಡೆಸಲಾಗಿದೆ. ಅಂಗಡಿ ಖಾಲಿ ಮಾಡುವಂತೆ ಧಮ್ಕಿ ಹಾಕಿದ್ದಾರೆ. ಈ ದೃಶ್ಯ ಅಂಗಡಿಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಕರಾವಳಿಯ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಸಂಜೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಶುಕ್ರವಾರ ಸಂಭ್ರಮ, ಸಡಗರದಿಂದ ಜರುಗಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಚಂಡ ಮದ್ದಳೆಗಳ ನಾದ, ನಾಸಿಕ್ ಬ್ಯಾಂಡ್, ಕೀಲು ಕುದುರೆ, ತಟ್ಟಿರಾಯ ರಥೋತ್ಸವದ ಮೆರಗು ಹೆಚ್ಚಿಸಿದ್ದವು. ರಥಬೀದಿಯಲ್ಲಿ ವ್ಯಾಪಾರ ಜೋರಾಗಿಯೇ ನಡೆಯುತ್ತಿದೆ. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕರಾದ ಕೆ. ಗೋಪಾಲ…

Read More

ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಯಶಸ್ವಿ ವಾಲಿಬಾಲ್ ಪಂದ್ಯಾಟ ಆಯೋಜನೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.8: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಪ.ಪೂ. ಶಿಕ್ಷಣ ಇಲಾಖೆ, ಸುಣ್ಣಾರಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಡಿ.8 ರಿಂದ ಡಿ.10ರ ತನಕ ನಡೆಯಲಿರುವ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಗುರುವಾರ ಸಂಜೆ ಉದ್ಘಾಟನೆಗೊಂಡಿತು. ಉಡುಪಿಯ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಗುರುವಾರ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಆಶೀರ್ವಚನ ನೀಡಿ, ವಾಲಿಬಾಲ್ ಕ್ರೀಡೆಯು ಆಟದ ಜತೆ ಬದುಕಿನ ಪಾಠವನ್ನು ಕಲಿಸುತ್ತದೆ. ಬದುಕಿನಲ್ಲಿ ಬರುವ ಹೊಡೆತಗಳಿಗೆ ಕುಗ್ಗದೆ, ಮುಂದುವರೆಯುವುದರಿಂದ ಜೀವನೋತ್ಸಾಹವದ ಜತೆ ಯಶಸ್ಸು ದೊರಕುತ್ತದೆ ಎಂದು ಹೇಳಿದರು. ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ ಶಿಕ್ಷಣದಲ್ಲಿ ಪಠ್ಯದ ಜತೆಗೆ ಕ್ರೀಡೆಯೂ ಅಗತ್ಯ. ಕ್ರೀಡಾಪಟುಗಳಿಗೆ ನೀಡುವಂತಹ ಪ್ರೋತ್ಸಾಹ ಧನ ಸಹಿತ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ಸರಕಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫಾಕ್ಚರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ‘ಸ್ಟೆಲಿಯಂ ಇಂಕ್’ ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿನೂತನ ತಂತ್ರಜ್ಞಾನ ಆಧಾರಿತ ‘ಸ್ಟೆಲಿಯಂ ಟೆಕ್ನಾಲಜಿ ಆಂಡ್ ಇನೋವೇಶನ್ ಸೆಂಟರ್’ (ಎಸ್ಟಿಐಸಿ) ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಘಾಟಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ರಿಬ್ಬನ್ ಕತ್ತರಿಸುವ ಮೂಲಕ ನೂತನ ಲ್ಯಾಬ್ಗೆ ಚಾಲನೆ ನೀಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸ್ಟೆಲಿಯಂ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಣ್ದೀಪ್ ನಂಬಿಯಾರ್, ಆಳ್ವಾಸ್ನಲ್ಲಿ ಆರಂಭಗೊಂಡಿರುವ ಸ್ಟೆಲಿಯಂ ಟೆಕ್ನಾಲಜಿ ಆಂಡ್ ಇನೋವೇಶನ್ ಸೆಂಟರ್ ಭಾರತೀಯ ಉದ್ಯಮ ಕ್ಷೇತ್ರದಲ್ಲಿ ಅಪರೂಪದ ಮೈಲುಗಲ್ಲು. ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು ಹೊಸ ಆವಿಷ್ಕಾರಗಳಿಗೆ ಅಳವಡಿಸಲು ಈ ಲ್ಯಾಬ್ ಒಂದು ಉತ್ತಮ ವೇದಿಕೆಯಾಗಲಿದ್ದು, ಏಷ್ಯಾ ಖಂಡವು ಸೇರಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವಹಿಸಲಿದೆ. ತಮ್ಮ ಸಂಸ್ಥೆಗೆ ಇದೊಂದು ಹೊಸ ಆರಂಭವಾಗಿದ್ದು, ವೇಗವಾಗಿ ಬೆಳೆಯುವುದರೊಂದಿಗೆ ಪ್ರಪಂಚದಾತ್ಯಂತ ಮಾರುಕಟ್ಟೆಗಳಲ್ಲಿ ಕಂಪೆನಿಯನ್ನು ವಿಸ್ತರಿಸುವ ಯೋಜನೆ ಇದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಕಾಂತಾರ’ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಕುಂದಾಪುರ ವಕೀಲರ ಸಂಘದ ವತಿಯಿಂದ ದಿನಾಂಕ ಬುಧವಾರ ವಕೀಲರ ಸಂಘದ ವತಿಯಿಂದ ಸಂಘದ ಹಾಲಿನಲಲಿ ಸನ್ಮಾನಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕಾಂತಾರ ನಟ ರಿಶಬ್ ಶೆಟ್ಟಿ ಅವರು, ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಕುಂದಾಪುರ ವಕೀಲರ ಸಂಘದವರು ನೀಡಿದ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ ಎಂದರು. ಕುಂದಾಪುರದ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್, ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ರಾಜು, ಪ್ರಧಾನ ಸಿವಿಲ್ ನ್ಯಾಯಾಧೀಶ ಧನೇಶ್ ಮುಗಳಿ, ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ರೋಹಿಣಿ ಡಿ, ಎರಡನೇ ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ವಿದ್ಯಾ ಎ.ಎಸ್ ಉಪಸ್ಥಿತರಿದ್ದರು. ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಾರ್ ಅಸೋಸೀಯೇಶನ್ ಪ್ರಧಾನ ಕಾರ್ಯದರ್ಶಿ ಜೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಓರ್ವ ಕ್ಷಯ ರೋಗಿಯನ್ನು ದತ್ತು ತೆಗೆದುಕೊಳ್ಳಲಾಯಿತು. ರೋಗಿಗೆ ಆರು ತಿಂಗಳ ವರೆಗೆ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿಗಳನ್ನು ಒದಗಿಸುವುದಕ್ಕೆ ಒಪ್ಪಿಗೆ ಸೂಚಿಸಿದ್ದು ಗುರುವಾರ ಸಂಸ್ಥೆಯ ಅಧ್ಯಕ್ಷರಾದ ರಾಜು ಪೂಜಾರಿ ಇವರ ನೇತೃತ್ವದಲ್ಲಿ ಮೊದಲ ತಿಂಗಳ ಆಹಾರಸಮಾಗ್ರಿಯ ಕಿಟ್ಟನ್ನು ವಿತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಊರಿನಲ್ಲಿ ದೇವಸ್ಥಾನ ಅಭಿವೃದ್ಧಿಯಾದರೆ ಆ ಊರು ಕೂಡ ಅಭಿವೃದ್ಧಿಯನ್ನು ಕಾಣುತ್ತದೆ. ದೇವಸ್ಥಾನದಲ್ಲಿ ಜೀವಕಳೆ ಇದ್ದಾಗಲೇ ಊರಿಗೂ, ಭಕ್ತರಿಗೂ ಶ್ರೇಯಸ್ಸು ಎಂದು ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು. ಅವರು ಬುಧವಾರ ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ – ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ, ದೇವಳದ ಸುತ್ತುಪೌಳಿ ಶಂಕುಸ್ಥಾಪನೆ ಮಾಡಿ ಬಳಿಕ ಮಾತನಾಡಿ ಯಡ್ತರೆ ಮನೆಯವರು, ಊರಿನವರು ತೊಡಗಿಸಿಕೊಳ್ಳುವುದರ ಜೊತೆಗೆ ದಾನಿಗಳ ನೆರವಿನಿಂದ ಸುಂದರವಾದ ಪರಿಸರದಲ್ಲಿ ದೇವಸ್ಥಾನ ಪುನರ್ ನಿರ್ಮಾಣವಾಗುತ್ತಿದೆ. ದೇವತಾ ಕಾರ್ಯಗಳು ನಿರ್ವಿಘ್ನವಾಗಿ ನಡೆಯಲಿ ಎಂದು ಆಶೀರ್ವದಿಸಿದರು. ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ದೇವಸ್ಥಾನಗಳ ಜೀರ್ಣೋದ್ಧಾರದ ಮೂಲಕ ಸನಾತನ ಸಂಸ್ಕೃತಿಯ ಪುನರುತ್ಥಾನವಾಗಲಿದೆ. ಹಿಂದು ಧರ್ಮ ಶ್ರೇಷ್ಠ ಧರ್ಮವಾಗಿದ್ದು, ಅದರ ಆಚರಣೆ ಹಾಗೂ ಅಳವಡಿಕೆಯಲ್ಲಿ ನೆಮ್ಮದಿಯ ಬದುಕನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆತಿಥ್ಯದಲ್ಲಿ ರೋಟರಿ ವಲಯ 1ರ ಕ್ರೀಡಾ ಸ್ಪರ್ಧೆಗಳು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು. ಭಾರತದ ವಿಶೇಷ ಚೇತನ ಕ್ರಿಕೆಟ್ ತಂಡದ ಪ್ರಮುಖ ಎಸೆತಗಾರ ಪ್ರಥ್ವಿರಾಜ್ ಶೆಟ್ಟಿ ಕ್ರೀಡಾಕೂಟದ ಉದ್ಘಾಟನೆ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ ನಾವುಂದ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಾಂಸ್ಕೃತಿಕ ಸಭಾಪತಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಜಿಲ್ಲಾ ಮೆಂಬರ್ಸಿಪ್ ಚೇರ್ಮನ್ ಕೆ.ಕೆ.ಕಾಂಚನ್, ವಲಯ 1ರ ಅಸಿಸ್ಟೆಂಟ್ ಗವರ್ನರ್ ಡಾ. ಉಮೇಶ್ ಪುತ್ರನ್, ವಲಯ ಟ್ರೈನರ್ ರವಿರಾಜ್ ಶೆಟ್ಟಿ, ವಲಯ ಲೆಪ್ಟಿನೆಂಟ್ ಡಾ. ಪೂರ್ಣೀಮ ಭವಾನಿ ಶಂಕರ್, ಡಾ. ಸಂದೀಪ್ ಕುಮಾರ್ ಶೆಟ್ಟಿ, ವಲಯ ಕ್ರೀಡಾ ಸಂಯೋಜಕ ಪ್ರದೀಪ್ ವಾಜ್ ಹಾಗೂ ಕುಂದಾಪುರ ರೋಟರಿ ಕ್ಲಬ್ ಕ್ರೀಡಾ ಸಭಾಪತಿ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕುಂದಾಪುರ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಸದಸ್ಯರು ಭಾಗವಹಿಸಿ ಕ್ರೀಡಾ ಸ್ಪರ್ಧೆಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ರೋಟರಿ ಕುಂದಾಪುರದ…

Read More