ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಮನುಷ್ಯನನ್ನು ಮನುಷ್ಯನಾಗಿ ಬದುಕಲು ಕಲಿಸದ ಧರ್ಮ ಯಾಕೆ? ಎಂಬುದು ’ಘಾಂದ್ರುಕ್’ ಕೃತಿಯ ಒಳನೋಟವೂ ಹೌದು’ ಎಂದು ಕಾದಂಬರಿಕಾರ ಸತೀಶ್ ಚಪ್ಪರಿಕೆ ಹೇಳಿದರು. ಅವರು ಮುಂದುವರಿದ ಮಾತನಾಡಿ ಧರ್ಮ ಇಂದು ವ್ಯಾಪಾರಿ ಸರಕಾಗುತ್ತಿದೆ. ಮನುಕುಲದ ಉದ್ಧಾರಕ್ಕಾಗಿ ಬಳಕೆಯಾಗುತ್ತಿಲ್ಲ. ಒಕ್ಕಲೆಬ್ಬಿಸುವುದೂ ಹಿಂಸೆ. ಜಾಗತಿಕ ಮಟ್ಟದಲ್ಲಿ ಏನಾಗುತ್ತಿದೆ ಎಂದು ತಿಳಿದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಕನ್ನಡ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ತಮ್ಮ ’ಘಾಂದ್ರುಕ್’ ಕಾದಂಬರಿ ಅವಲೋಕನ – ಸಂವಾದ ಕಾರ್ಯಕ್ರಮದಲ್ಲಿ ಅವರು ಪ್ರತಿಕ್ರಿಯಿಸಿದರು. ಕೃತಿಕಾರನ ಬದುಕು ಆತನ ಬರಹದಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬಿಂಬಿತವಾಗಿರುತ್ತದೆ. ’ಇಲ್ಲ’ ಎನ್ನುವುದಾದದರೆ, ಆತ ಸುಳ್ಳು ಹೇಳುತ್ತಿರಬಹುದು ಅಥವಾ ಬರಹ ಕದ್ದಿರಬಹುದು ಎಂದರು. ಪುಸ್ತಕದ? ದೊಡ್ಡ ಆಸ್ತಿ ಬೇರೆ ಇಲ್ಲ. ಪುಸ್ತಕ ಓದಿ. ಬರಹ ತೃಪ್ತಿ ನೀಡುತ್ತದೆ. ಬರೆಯಿರಿ, ಓದಿ. ನಿಮ್ಮ ಪರಿಸರ ನಿಮ್ಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಒಡನಾಡಿ ಯು. ಬಿ. ಶೆಟ್ಟಿ ಅವರ ಶ್ರಮ ವಿಶೇಷವಾದದ್ದು. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದ ಪಕ್ಷ ಸಂಘಟನೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯು.ಬಿ. ಶೆಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಮೂಲಕ ಆಗ್ರಹಿಸಿದ್ದಾರೆ. ಹಲವಾರು ವರ್ಷಗಳಿಂದ ಯಾವುದೇ ಫಲಾಪೇಕ್ಷೆ ಇಲ್ಲದೆ ತೆರೆಮರೆಯಲ್ಲೇ ಪಕ್ಷ ಸಂಘಟನೆ ಮಾಡುತ್ತಿರುವ ಯು.ಬಿ ಶೆಟ್ಟಿ ಅವರು, ಸಾಮಾಜಿಕ ಕಾರ್ಯಗಳಲ್ಲಿಯೂ ಅವಿರತವಾಗಿ ತೊಡಗಿಸಿಕೊಂಡವರು. ತನ್ನ ದುಡಿಮೆಯ ಒಂದು ಭಾಗವನ್ನು ಶಿಕ್ಷಣ, ಆರೋಗ್ಯ, ವಸತಿ, ಧಾರ್ಮಿಕ ಇನ್ನಿತರ ಸಮಾಜಮುಖಿ ಕಾರ್ಯಗಳಿಗೆ ಯಾವುದೇ ಪ್ರಚಾರ ಬಯಸದೆ ನೀಡುತ್ತಿದ್ದಾರೆ. ಪ್ರಸಕ್ತ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಯಾವುದೇ ವಿಧಾನ ಪರಿಷತ್ ಸದಸ್ಯರುಗಳು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲದ ಕಾರಣ ಸರ್ಕಾರ ಮಟ್ಟದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ವಾಷಿಂಗ್ಟನ್ ಡಿಸಿ: ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ವಾಷಿಂಗ್ಟನ್ನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸೆನೆಟರ್ ಡಾ||ದೆರೀಕ್ ಟ್ರಸ್ಫರ್ಡ್ ಮಾತನಾಡಿ, ರಿಷಬ್ ಶೆಟ್ಟಿ ಅವರ “ಕಾಂತಾರ” ಸಿನಿಮಾವನ್ನು ಯುನಿವರ್ಸಲ್ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಅಮೇರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೇರಿಕಾದ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು. ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ. ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದರೆ. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಜೊತೆಗಿದ್ದ ಸ್ನೇಹಿತನೇ ಕಳ್ಳತನ ಮಾಡಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಅತ್ತಾವರ ನಿವಾಸಿ, ಮೂಲತಃ ರಾಜಸ್ಥಾನದವರಾದ ರಮೇಶ್ ಕುಮಾರ್ (26) ಹಾಜಿ ಗೋಲ್ಡ್ ಎಂಡ್ ಡೈಮಂಡ್ಸ್ ಜುವೆಲ್ಲರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಜೂ.10 ರಂದು 421.380 ಮಿಲಿ ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಜಿ ಗೋಲ್ಡ್ ಎಂಡ್ ಡೈಮೆಂಡ್ ಶಾಪ್ನಿಂದ ಮಾರಾಟ ಮಾಡಲು ಹೊರಟಿದ್ದರು. ಈ ವೇಳೆ ಮಧ್ಯಾಹ್ನ 12:00 ಗಂಟೆಗೆ ತನ್ನ ಸ್ನೇಹಿತರಾದ ರಾಜಸ್ಥಾನದ ಪಾಲಿ ಜಿಲ್ಲೆಯ ರಾಮ್ ಎಂಬಾತ ಮಂಗಳೂರಿನ ಪಂಪ್ವೇಲ್ ಬಳಿ ಸಿಕ್ಕಿದ್ದು ಇಬ್ಬರೂ ಕೂಡ ಜೊತೆಯಲ್ಲಿ ಬಸ್ಸಿನಲ್ಲಿ ಹೊರಟು ಸಂಜೆ 04-30 ಗಂಟೆಗೆ ಉಪ್ಪುಂದದ ಅಶೋಕ್ ಜ್ಯುವೆಲ್ಲರಿಗೆ ಹೋಗಿ 14 ಗ್ರಾಂ ಚಿನ್ನಾಭರಣ ಮಾರಾಟ ಮಾಡಿ ಅಲ್ಲಿಂದ 14 ಗ್ರಾಂ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ವಾಪಸು ಮಂಗಳೂರಿಗೆ ಹೊರಟಿದ್ದರು. ಕುಂದಾಪುರ ತಲುಪುವಾಗ ಸಂಜೆ 07-00 ಗಂಟೆ ಆದ್ದರಿಂದ ರಮೇಶ್ ಕುಮಾರ್ ಹಾಗೂ ಅವರ ಸ್ನೇಹಿತ ರಾಮ್ ಕುಂದಾಪುರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಡಿ ಸತತ 84ನೇ ತಿಂಗಳ ಕಾರ್ಯಕ್ರಮವು ಇತ್ತೀಚೆಗೆ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷ , ನಿವೃತ್ತ ಪ್ರಾಂಶುಪಾಲರಾದ ಎಮ್. ರತ್ನಾಕರ ಪೈ ರವರು ಭಜನೆಯ ಮಹತ್ವವನ್ನು ವಿವರಿಸಿದರು. ಮಹಾಮಾಯಾ ಭಜನಾ ಮಂಡಳಿ, ಈಶ್ವರ ನಗರ, ಮಣಿಪಾಲದ ಮಾಯಾ ಕಾಮತ್ ರವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ 2022-23 ನೇ ಸಾಲಿನ ಪರೀಕ್ಷೆಯಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ (604/625) ಪಡೆದ ಮಹಿಮಾ ಅವರನ್ನೂ ಗೌರವಿಸಲಾಯಿತು. ವೇದಿಕೆಯಲ್ಲಿ ಸುಗುಣಾ ಶೆಟ್ಟಿ, ವಸಂತಿ ಆರ್. ಪಂಡಿತ್, ರಮ್ಯಾ ಮಲ್ಯ ಹಾಗೂ ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಕೊನೆಯಲ್ಲಿ ಮಹಾಮಾಯಾ ಭಜನಾ ಮಂಡಳಿ, ಮಣಿಪಾಲದ ಸದಸ್ಯರು ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿ ಕೊಟ್ಟರು. ನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸಂತಮೆರಿ ಪದವಿ ಪೂರ್ವ ಕಾಲೇಜಿನಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ಖ್ಯಾತ ಮನೋರೋಗ ವೈದ್ಯರಾದ ಪ್ರಕಾಶ್ ತೋಳಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಈ ಮಾದಕ ಸೇವನೆ ತಕ್ಷಣಕ್ಕೆ ಮಾನಸಿಕ ನೆಮ್ಮದಿಯನ್ನು ನೀಡುವುದಾಗಿದ್ದರೂ ನಮ್ಮನ್ನು ಸಮಸ್ಯೆಯ ಸುಳಿಯಲ್ಲಿ ಸಿಲುಕಿಸುತ್ತದೆ ಎನ್ನುತ್ತಾ, ಮಾದಕ ಸೇವನೆಯಿಂದ ನಮ್ಮ ಅಂಗಾಂಗಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೇಷ್ಮಾ ಫೆರ್ನಾಂಡಿಸ್ ರವರು ಅಧ್ಯಕ್ಷ ಸ್ಥಾನ ವಹಿಸಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿ, ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ತಿಳಿಸಿದರು. ಉಪ ಪ್ರಾಂಶುಪಾಲರಾದ ಮಂಜುಳಾ ನಾಯರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ ಮಾಡಿಸಲಾಯಿತು. ಪ್ರಾರ್ಥನೆಯಿಂದ ಪ್ರಾರಂಭವಾಗಿ, ವಿದ್ಯಾರ್ಥಿಗಳಾದ ಅಮೃತಾ ಹಾಗೂ ಪ್ರಗತಿ ಕ್ರಮವಾಗಿ ಸ್ವಾಗತಿಸಿ, ವಂದಿಸಿದರು. ನಂದಿತಾ ಹಾಗೂ ಕುಮಾರಿ ಕೀರ್ತನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಮೆರಿಕಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಮೂರು ದಿನಗಳ ಊಟೋಪಚಾರದ ಆತಿಥ್ಯ ನಿರ್ವಹಿಸಿದ ಆಲೂರು ಮೂಲದ ಅನಿವಾಸಿ ಭಾರತೀಯ, ವುಡ್ಲ್ಯಾಂಡ್ಸ್ ಹೋಟೆಲ್ ಮಾಲೀಕ ಆನಂದ ಪೂಜಾರಿ, ಅತಿಥ್ಯೋದ್ಯಮದಲ್ಲಿ ಸೈ ಎನಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಂಡಾಗಲೆಲ್ಲಾ ಆನಂದ ಪೂಜಾರಿ ಅವರಿಗೆ ಆತಿಥ್ಯದ ಜವಾಬ್ದಾರಿ ದೊರೆತಿದೆ. ವಾಷಿಂಗ್ಟನ್ ಡಿಸಿಯಲ್ಲಿ ಅವರು 3ನೇ ಬಾರಿಗೆ ಮೋದಿಯವರಿಗೆ ಆತಿಥ್ಯ ನೀಡಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿಯೇ ವುಡ್ಲ್ಯಾಂಡ್ಸ್ ಪ್ಯೂರ್ ವೆಜಿಟೇರಿಯನ್ ಇಂಡಿಯನ್ ಕ್ಯೂಸಿನ್ ನಡೆಸುತ್ತಿರುವ ಅವರು, ಜ್ಯುವಲ್ಸ್ ಆಫ್ ಇಂಡಿಯಾ ಎಂಬ ರೆಸ್ಟೋರೆಂಟ್ ಕೂಡ ಹೊಂದಿದ್ದು, ಇವರ ಹೋಟೆಲ್ಗಳಲ್ಲಿ ತಯಾರಾಗುವ ಭಾರತೀಯ ಖಾದ್ಯಗಳು ಅಮೆರಿಕನ್ನರಿಗೂ ಅಚ್ಚುಮೆಚ್ಚು. ಇದನ್ನೂ ಓದಿ: ಕುಂದಾಪ್ರ ಡಾಟ್ ಕಾಂ ಪ್ರಸ್ತುತಿಯ ’ವಿಷನ್ ಬೈಂದೂರು 2033’ ಕಾರ್ಯಕ್ರಮ ಉದ್ಘಾಟನೆ – https://kundapraa.com/?p=67337 . ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿಮನೆ ನಿವಾಸಿ ಬಡಿಯ ಪೂಜಾರಿ ಮತ್ತು ಗಿರಿಜಾ ಪೂಜಾರಿ ದಂಪತಿ ಪುತ್ರರಾದ ಆನಂದ ಅವರು, ವಾಷಿಂಗ್ಟನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಭಾರತದ ಸಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮದ ಭಾಗವಾಗಿ ಜೆಸಿಐ ಉಪ್ಪುಂದ ವತಿಯಿಂದ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸತತ ಒಂಬತ್ತು ವರ್ಷಗಳಿಂದ ಮಯ್ಯಾಡಿ ಗ್ರಾಮದಲ್ಲಿ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಶಾರದಾ ಅವರನ್ನು ಸನ್ಮಾನಿಸಲಾಯಿತು. ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಸಭಾಧ್ಯಕ್ಷತೆ ವಹಿಸಿದ್ದರು. ವಲಯ ನಿರ್ದೇಶಕ ನಾಗರಾಜ್ ಪೂಜಾರಿ ಉಜ್ಜೇರಿ, ಪೂರ್ವಾಧ್ಯಕ್ಷ ಪ್ರಕಾಶ್ ಭಟ್, ಹಿರಿಯ ಸದಸ್ಯರಾದ ಮಂಜುನಾಥ್ ದೇವಾಡಿಗ, ಪೂರ್ವ ಅಧ್ಯಕ್ಷರಾದ ಮಂಗೇಶ್ ಶಾನುಭೋಗ್, ಜೆಸಿರೇಟ್ ಅಧ್ಯಕ್ಷ ರೇಖಾ ಜೂನಿಯರ್ ಜೆಸಿ ಅಧ್ಯಕ್ಷೆ ಜೆಜೆಸಿ ನಿಶಾ ಸಂತೋಷ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು. ಪೂರ್ವ ಅಧ್ಯಕ್ಷರಾದ ಸುಬ್ರಮಣ್ಯ ಜಿ. ಸ್ವಾಗತಿಸಿದರು. ಜೆಸಿ ರಮಣಿ ಪರಿಚಯ ವಾಚಿಸಿದರು. ಕಾರ್ಯದರ್ಶಿ ಪುರಂದರ ಧನ್ಯವಾದ ಸಮರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದೇ ಅಭಿವೃದ್ಧಿ ಎಂಬ ಕಲ್ಪನೆ ನಮ್ಮಲ್ಲಿದೆ. ಆದರೆ ಶಿಕ್ಷಣ, ಆರೋಗ್ಯ ಮತ್ತು ತಲಾ ಆದಾಯದ ಅಂಶಗಳನ್ನು ಒಟ್ಟು ಸೇರಿಸಿ ಮಾಡಲಾಗುವ ಅಪೇಕ್ಷಿತ ಮಾರ್ಪಾಡುಗಳು ನೈಜ ಅಭಿವೃದ್ಧಿ ಎಂದೆನಿಸಿಕೊಳ್ಳುತ್ತದೆ ಎಂದು ರಾಜ್ಯ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಉಪ್ಪುಂದ ದೇವಕಿ ಬಿ.ಆರ್. ಸಭಾಂಗಣದಲ್ಲಿ ಕುಂದಾಪ್ರ ಡಾಟ್ ಕಾಂ ನ್ಯೂಸ್ ಪೋರ್ಟೆಲ್ ವತಿಯಿಂದ ಆಯೋಜಿಸಲಾದ ‘ವಿಷನ್ ಬೈಂದೂರು 2033’ ಕಾರ್ಯಕ್ರಮ ಉದ್ಘಾಟಿಸಿ, ಅಭಿವೃದ್ಧಿಯ ಪರಿಕಲ್ಪನೆ ವಿಷಯದ ಬಗ್ಗೆ ವಿಚಾರ ಮಂಡನೆ ಮಾಡಿದರು. ಯುನೈಟೆಟ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಜಾಗತಿಕವಾಗಿ ಮಾತ್ರವಲ್ಲದೇ ಪ್ರತಿ ದೇಶದ ಮಾನವ ಅಭಿವೃದ್ಧಿಯ ಸೂಚ್ಯಂಕವನ್ನು ಜನರ ಮುಂದಿಡುತ್ತದೆ. ಸದ್ಯ ಜಾಗತಿಕವಾಗಿ ಮಾನವ ಅಭಿವೃದ್ಧಿಯ ಅಂತಿಮ ಹಂತ ‘ಸುಖೀ ಜೀವನ’ ಎಂದು ಕಂಡುಕೊಳ್ಳಲಾಗಿದೆ. ಇದರಲ್ಲಿ ಶಿಕ್ಷಣ, ಆರೋಗ್ಯ, ತಲಾ ಆದಾಯ ಹೆಚ್ಚಳ ಸೇರಿದಂತೆ ಹಲವು ಅಂಶಗಳೂ ಸೇರಿಕೊಂಡಿದೆ. ಪ್ರಸ್ತುತ ಹಲವು ದೇಶಗಳಲ್ಲಿ ಹ್ಯಾಪಿನೆಸ್ ಇಂಡೆಕ್ಸ್ ಅಳೆಯಲಾಗುತದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳವಾರದ ಕೆರೆಯಲ್ಲಿ ಭಾನುವಾರ ರಾತ್ರಿ ವೇಳೆ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸತತ ಹುಡುಕಾಟದ ಬಳಿಕ ಸೋಮವಾರ ಪತ್ತೆಯಾಗಿದೆ. ನರಿಕೊಡ್ಲು ಮನೆ ನಿವಾಸಿ ಹರೀಶ್ ಪೂಜಾರಿ (37) ಮೃತ ದುರ್ದೈವಿ. ಭಾನುವಾರ ರಾತ್ರಿ ಕಾಳಾವಾರ ದೇವಸ್ಥಾನದ ಸಮೀಪವಿರುವ ಕೆರೆಗೆ ಮೂವರು ಸ್ನೇಹಿತರು ಒಟ್ಟಾಗಿ ಮೀನು ಹಿಡಿಯಲು ತೆರಳಿದ್ದಾರೆ. ಮೂವರ ಪೈಕಿ ಹರೀಶ್ ನೀರಿಗಿಳಿದು ಈಜುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಮುಳುಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರು ಘಟನಾ ಸ್ಥಳದಲ್ಲಿ ಮಧ್ಯರಾತ್ರಿವರೆಗೂ ಹುಡುಕಾಟ ನಡೆಸಿದ್ದರು. ಆದರೆ ಮೃತದೇಹ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಮುಳುಗು ತಜ್ಞ ಈಶ್ವರ ಮಲ್ಪೆ, ಶಬ್ಬೀರ್ ಮಲ್ಪೆ ಅವರ ತಂಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಳಾವರ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸುಧೀರ್ ಜಿ., ರಾಜಶೇಖರ್, ಪ್ರಕಾಶ್ ಆಚಾರ್ ಹಾಗೂ ಅಗ್ನಿ ಶಾಮಕ ದಳದವರು…
